ಮುಖಪುಟ › ದೈನಂದಿನ ಬೈಬಲ್ ವಾಚನಗಳು › ಆಗಸ್ಟ್ 2027 › 16 ಆಗಸ್ಟ್
ಆರ್ಥೊಡಾಕ್ಸ್ ಪಂಚಾಂಗ · ಆಗಸ್ಟ್ 3 (ಹಳೆಯ ಪದ್ಧತಿ)
ಆರ್ಥೊಡಾಕ್ಸ್ ದೈನಂದಿನ ವಾಚನಗಳು — 16 ಆಗಸ್ಟ್ 2027
ಸೋಮವಾರ · ಪಂಚಾಶತ್ತಮದ ನಂತರದ 9ನೇ ವಾರ · ಸ್ವರ 7
ಹಬ್ಬಗಳು ಮತ್ತು ಸಂತರು
Venerable Isaac, Dalmatius and Faustus, Ascetics of the Dalmatian Monastery in Constantinople (4th-5th C)
ದೇವಮಾತೆಯ ನಿದ್ರಾಗಮನದ ಉಪವಾಸ
ಕಟ್ಟುನಿಟ್ಟಿನ ಉಪವಾಸ (ಒಣ ಆಹಾರ: ರೊಟ್ಟಿ, ತರಕಾರಿ, ಹಣ್ಣು)
ಇದು ಮಠದ ನಿಯಮವನ್ನು ಅನುಸರಿಸುತ್ತದೆ. ಸಭೆಯಲ್ಲಿ ಉಪವಾಸದ ಪ್ರಮಾಣವನ್ನು ಆರೋಗ್ಯ, ವಯಸ್ಸು ಮತ್ತು ಸಂದರ್ಭಗಳಿಗೆ ಅನುಗುಣವಾಗಿ ಪಾಪನಿವೇದನೆಯ ಗುರುವಿನೊಂದಿಗೆ ಸೇರಿ ನಿರ್ಧರಿಸಲಾಗುತ್ತದೆ.
ದಿನದ ವಾಚನಗಳು
ಪತ್ರಿಕೆ
31ನಮ್ಮನ್ನು ನಾವೇ ಪರೀಕ್ಷಿಸಿಕೊಂಡರೆ ನ್ಯಾಯ ವಿಚಾರಣೆಗೊಳಗಾಗುವುದಿಲ್ಲ. 32ಆದರೆ ನಾವು ಕರ್ತನಿಂದ ನ್ಯಾಯವಿಚಾರಣೆಗೆ ಒಳಗಾಗಿರಲಾಗಿ ಆತನು, ನಮಗೆ ಲೋಕದವರ ಸಂಗಡ ಅಪರಾಧಿಗಳೆಂಬ ನಿರ್ಣಯವಾಗಬಾರದೆಂದು ನಮ್ಮನ್ನು ದಂಡನೆಗೆ ಗುರಿಪಡಿಸುತ್ತಾನೆ. 33ಆದಕಾರಣ ನನ್ನ ಸಹೋದರರೇ, ಈ ಭೋಜನವನ್ನು ಮಾಡುವುದಕ್ಕೆ ಸೇರಿಬರುವಾಗ ಒಬ್ಬರು ಇನ್ನೊಬ್ಬರಿಗಾಗಿ ಕಾಯಿರಿ. 34ಒಬ್ಬನು ಹಸಿದರೆ ಅವನು ಮನೆಯಲ್ಲೇ ಊಟಮಾಡಲಿ ನೀವು ಸೇರಿಬಂದದ್ದು ನ್ಯಾಯ ತೀರ್ಪಿಗೊಳಗಾಗುವುದಕ್ಕೆ ಕಾರಣವಾಗಬಾರದು. ಇನ್ನುಳಿದಿರುವ ಸಂಗತಿಗಳನ್ನು ನಾನು ಬಂದ ನಂತರ ಆದೇಶಿಸುತ್ತೇನೆ. 12:1ಸಹೋದರರೇ ಪವಿತ್ರಾತ್ಮನಿಂದುಂಟಾಗುವ ವರಗಳನ್ನು ಕುರಿತು ನಿಮಗೆ ತಿಳಿವಳಿಕೆಯಿರಬೇಕೆಂದು ನಾನು ಅಪೇಕ್ಷಿಸುತ್ತೇನೆ. 2ನೀವು ಅನ್ಯಜನರಾಗಿದ್ದಾಗ ಮೂಕ ವಿಗ್ರಹಗಳು ನಿಮ್ಮನ್ನು ನಡೆಸಿದ ಹಾಗೆ ನೀವು ಅವುಗಳ ಬಳಿಗೆ ಹೋಗುತ್ತಿದ್ದಿರೆಂದು ಬಲ್ಲಿರಿ. 3ಹೀಗಿರುವುದರಿಂದ ನಾನು ನಿಮಗೆ ತಿಳಿಸುವುದನ್ನು ಕೇಳಿರಿ. ದೇವರಾತ್ಮನ ಪ್ರೇರಣೆಯಿಂದ ಮಾತನಾಡುವ ಯಾವ ಮನುಷ್ಯನಾದರೂ “ಯೇಸುವನ್ನು ಶಾಪಗ್ರಸ್ತನೆಂದು” ಹೇಳುವುದಿಲ್ಲ. ಮತ್ತು ಪವಿತ್ರಾತ್ಮನ ಪ್ರೇರಣೆಯಿಂದಲೇ ಹೊರತು ಯಾವ ಮನುಷ್ಯನಾದರೂ “ಯೇಸುವನ್ನು ಕರ್ತನೆಂದು” ಹೇಳಲಾರನು. 4ವರಗಳಲ್ಲಿ ಬೇರೆ ಬೇರೆ ವಿಧಗಳುಂಟು. ಆದರೆ ದೇವರಾತ್ಮನು ಒಬ್ಬನೇ. 5ಸೇವೆಗಳಲ್ಲಿ ಬೇರೆ ಬೇರೆ ವಿಧಗಳುಂಟು ಆದರೆ ಕರ್ತನು ಒಬ್ಬನೇ. 6ಕಾರ್ಯಗಳಲ್ಲಿ ಬೇರೆ ಬೇರೆ ವಿಧಗಳುಂಟು ಆದರೆ ಸರ್ವರಲ್ಲಿಯೂ ಸರ್ವ ಕಾರ್ಯಗಳನ್ನು ಸಾಧಿಸುವ ದೇವರು ಒಬ್ಬನೇ.
ಸುವಾರ್ತೆ
1ಆದೇ ವೇಳೆಯಲ್ಲಿ ಶಿಷ್ಯರು ಯೇಸುವಿನ ಬಳಿ ಬಂದು, “ಪರಲೋಕ ರಾಜ್ಯದಲ್ಲಿ ಯಾವನು ದೊಡ್ಡವನು?” ಎಂದು ಕೇಳಿದರು. 2ಆತನು ಚಿಕ್ಕ ಮಗುವನ್ನು ಹತ್ತಿರಕ್ಕೆ ಕರೆದು ಅವರ ನಡುವೆ ನಿಲ್ಲಿಸಿ, 3ಅವರಿಗೆ, “ನಿಮ್ಮ ಮನಸ್ಸು ಪರಿವರ್ತನೆಕೊಂಡು ಚಿಕ್ಕ ಮಕ್ಕಳಂತೆ ಆಗದೇ ಹೋದರೆ ನೀವು ಪರಲೋಕ ರಾಜ್ಯದಲ್ಲಿ ಪ್ರವೇಶಿಸುವುದೇ ಇಲ್ಲವೆಂದು ನಿಮಗೆ ಸತ್ಯವಾಗಿ ಹೇಳುತ್ತೇನೆ. 4ಹೀಗಿರುವುದರಿಂದ ಯಾವನು ಈ ಚಿಕ್ಕ ಮಗುವಿನಂತೆ ತನ್ನನ್ನು ತಾನೇ ತಗ್ಗಿಸಿಕೊಳ್ಳುತ್ತಾನೋ ಅವನೇ ಪರಲೋಕ ರಾಜ್ಯದಲ್ಲಿ ದೊಡ್ಡವನು. 5ಇದಲ್ಲದೆ ಯಾವನಾದರೂ ನನ್ನ ಹೆಸರಿನಲ್ಲಿ ಇಂಥ ಒಂದು ಚಿಕ್ಕ ಮಗುವನ್ನು ಸ್ವೀಕರಿಸುವನೋ ನನ್ನನ್ನೇ ಸ್ವೀಕರಿಸುವವನಾಗಿದ್ದಾನೆ. 6ಆದರೆ ನನ್ನಲ್ಲಿ ನಂಬಿಕೆಯಿಡುವ ಈ ಚಿಕ್ಕವರಲ್ಲಿ ಒಬ್ಬನಿಗೆ ಯಾವನಾದರೂ ಅಡ್ಡಿಯನ್ನುಂಟುಮಾಡಿದರೆ ಅಂಥವನ ಕೊರಳಿಗೆ ದೊಡ್ಡ ಬೀಸುವ ಕಲ್ಲನ್ನು ಕಟ್ಟಿ ಅವನನ್ನು ಆಳವಾದ ಸಮುದ್ರದಲ್ಲಿ ಮುಳುಗಿಸಿಬಿಡುವುದು ಅವನಿಗೆ ಉತ್ತಮ. 7“ತೊಡಕುಗಳ ನಿಮಿತ್ತ ಲೋಕಕ್ಕೆ ಅಯ್ಯೋ, ತೊಡಕುಗಳು ಬರುವುದು ಅನಿವಾರ್ಯ, ಆದಾಗ್ಯೂ ಯಾವ ಮನುಷ್ಯನಿಂದ ತೊಡಕು ಬರುತ್ತದೋ ಅವನಿಗೆ ಅಯ್ಯೋ. 8ನಿನ್ನ ಕೈಯಾಗಲಿ, ನಿನ್ನ ಕಾಲಾಗಲಿ ನಿನ್ನನ್ನು ಪಾಪದಲ್ಲಿ ಸಿಕ್ಕಿಸುವುದಾದರೆ ಅದನ್ನು ಕಡಿದು ಬಿಸಾಡಿಬಿಡು, ಎರಡು ಕೈ, ಎರಡು ಕಾಲು ಉಳ್ಳವನಾಗಿ ನಿತ್ಯ ಬೆಂಕಿಯಲ್ಲಿ ಹಾಕಲ್ಪಡುವುದಕ್ಕಿಂತ ಅಂಗಹೀನನಾಗಿ ಅಥವಾ ಕುಂಟನಾಗಿ ಜೀವದಲ್ಲಿ ಸೇರುವುದು ನಿನಗೆ ಉತ್ತಮ. 9ನಿನ್ನ ಕಣ್ಣು ನಿನ್ನನ್ನು ಪಾಪದಲ್ಲಿ ಸಿಕ್ಕಿಸುವುದಾದರೆ ಅದನ್ನು ಕಿತ್ತು ಬಿಸಾಡಿಬಿಡು, ಎರಡು ಕಣ್ಣುಳ್ಳವನಾಗಿ ಅಗ್ನಿನರಕದಲ್ಲಿ ಹಾಕಿಸಿಕೊಳ್ಳುವುದಕ್ಕಿಂತ ಒಂದೇ ಕಣ್ಣುಳ್ಳವನಾಗಿ ಜೀವದಲ್ಲಿ ಸೇರುವುದು ನಿನಗೆ ಉತ್ತಮ. 10ಈ ಚಿಕ್ಕವರಲ್ಲಿ ಒಬ್ಬನನ್ನಾದರೂ ತಾತ್ಸಾರಮಾಡದಂತೆ ನೋಡಿಕೊಳ್ಳಿರಿ. ಏಕೆಂದರೆ ಪರಲೋಕದಲ್ಲಿ ಇವರ ದೂತರು ನನ್ನ ಸ್ವರ್ಗೀಯ ತಂದೆಯ ಮುಖವನ್ನು ಯಾವಾಗಲೂ ನೋಡುತ್ತಿರುತ್ತಾರೆ ಎಂದು ನಿಮಗೆ ಹೇಳುತ್ತೇನೆ. 11ಮನುಷ್ಯಕುಮಾರನು ಕೆಟ್ಟು ಹೋಗಿರುವುದನ್ನು ಹುಡುಕಿ ರಕ್ಷಿಸುವುದಕ್ಕೆ ಬಂದನು.
ದಿನಾಂಕಗಳು ರಷ್ಯನ್ ಸಭೆಯ ಜೂಲಿಯನ್ ಪಂಚಾಂಗದ ಪ್ರಕಾರ ಇವೆ (ಸರ್ಬಿಯನ್ ಮತ್ತು ಜಾರ್ಜಿಯನ್ ಸಭೆಗಳು ಮತ್ತು ಅಥೋಸ್ ಪರ್ವತದಂತೆ): ಸಭೆಯ ಪಂಚಾಂಗದ 3 ಆಗಸ್ಟ್ ಎಂದರೆ ನಾಗರಿಕ ಪಂಚಾಂಗದ 16 ಆಗಸ್ಟ್. ಹೊಸ ಪಂಚಾಂಗದ ಸಭೆಗಳು (ಗ್ರೀಸ್, ರೊಮೇನಿಯಾ, ಬಲ್ಗೇರಿಯಾ, ಉಕ್ರೇನ್…) ನಿಗದಿತ ದಿನಾಂಕದ ಹಬ್ಬಗಳನ್ನೂ ಸಂತರನ್ನೂ ಅದೇ ನಾಗರಿಕ ದಿನಾಂಕದಂದು, 13 ದಿನಗಳ ಮುಂಚೆ, ಆಚರಿಸುತ್ತವೆ, ಮತ್ತು ಅವುಗಳ ಕೆಲವು ವಾಚನಗಳು ಬೇರೆಯಾಗಿವೆ; ಈಸ್ಟರ್ ಮತ್ತು ಅದನ್ನು ಅವಲಂಬಿಸಿರುವ ದಿನಗಳು ಒಂದೇ ಆಗಿವೆ.
ಮೂಲಗಳು: ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ · © 2017, 2019 Bridge Connectivity Solutions, CC BY-SA 4.0; changed: footnotes, headings and the letters over Psalm 119 left out, verses in the app's numbering. · ಮೂಲಗಳು ಮತ್ತು ಹಕ್ಕುಗಳು