Bible Explorer ಆ್ಯಪ್ ಪಡೆಯಿರಿ

ಮುಖಪುಟ › ದೈನಂದಿನ ಬೈಬಲ್ ವಾಚನಗಳು › ಆಗಸ್ಟ್ 2027 › 17 ಆಗಸ್ಟ್

ಆರ್ಥೊಡಾಕ್ಸ್ ಪಂಚಾಂಗ · ಆಗಸ್ಟ್ 4 (ಹಳೆಯ ಪದ್ಧತಿ)

ಆರ್ಥೊಡಾಕ್ಸ್ ದೈನಂದಿನ ವಾಚನಗಳು — 17 ಆಗಸ್ಟ್ 2027

ಮಂಗಳವಾರ · ಪಂಚಾಶತ್ತಮದ ನಂತರದ 9ನೇ ವಾರ · ಸ್ವರ 7

ಹಬ್ಬಗಳು ಮತ್ತು ಸಂತರು

Holy Seven Youths of Ephesus (Seven Sleepers): Maximilian, Jamblichus, Martinian, John, Dionysius, Exacustodianus (Constantine) and Antoninus († c. 250 and 408-450)

ದೇವಮಾತೆಯ ನಿದ್ರಾಗಮನದ ಉಪವಾಸ

ಉಪವಾಸ: ಎಣ್ಣೆಯಿಲ್ಲದ ಬೇಯಿಸಿದ ಆಹಾರ

ಇದು ಮಠದ ನಿಯಮವನ್ನು ಅನುಸರಿಸುತ್ತದೆ. ಸಭೆಯಲ್ಲಿ ಉಪವಾಸದ ಪ್ರಮಾಣವನ್ನು ಆರೋಗ್ಯ, ವಯಸ್ಸು ಮತ್ತು ಸಂದರ್ಭಗಳಿಗೆ ಅನುಗುಣವಾಗಿ ಪಾಪನಿವೇದನೆಯ ಗುರುವಿನೊಂದಿಗೆ ಸೇರಿ ನಿರ್ಧರಿಸಲಾಗುತ್ತದೆ.

ದಿನದ ವಾಚನಗಳು

ಪತ್ರಿಕೆ

1 ಕೊರಿ 12:12–26

12ಹೇಗೆ ದೇಹವು ಒಂದಾಗಿದ್ದರೂ ಅದಕ್ಕಿರುವ ಅಂಗಗಳು ಅನೇಕವಾಗಿವೆಯೋ, ಹೇಗೆ ದೇಹದ ಅಂಗಗಳೆಲ್ಲವೂ ಅನೇಕವಾಗಿದ್ದು ಒಂದೇ ದೇಹವಾಗಿದೆಯೋ, ಹಾಗೆಯೇ ಕ್ರಿಸ್ತನು ಇದ್ದಾನೆ. 13ಯೆಹೂದ್ಯರಾಗಲಿ, ಗ್ರೀಕರಾಗಲಿ, ದಾಸರಾಗಲಿ, ಸ್ವತಂತ್ರರಾಗಲಿ ನಾವೆಲ್ಲರೂ ಒಂದೇ ದೇಹವಾಗುವುದಕ್ಕಾಗಿ ಒಂದೇ ಆತ್ಮನಲ್ಲಿ ದೀಕ್ಷಾಸ್ನಾನಮಾಡಿಸಿಕೊಂಡೆವು. ಒಂದೇ ಆತ್ಮವು ನಮ್ಮೆಲ್ಲರಿಗೆ ಪಾನವಾಗಿ ಕೊಡಲ್ಪಟ್ಟಿತು. 14ದೇಹವು ಒಂದೇ ಅಂಗವಲ್ಲ. ಅನೇಕ ಅಂಗಗಳುಳ್ಳದ್ದಾಗಿದೆ. 15ಕಾಲು “ನಾನು ಕೈಯಲ್ಲದ ಕಾರಣ ದೇಹಕ್ಕೆ ಸೇರಿಲ್ಲವೆಂದು” ಹೇಳಿದರೂ ಅದು ದೇಹಕ್ಕೆ ಸೇರದೆ ಇರುವುದೋ? 16ಕಿವಿ “ನಾನು ಕಣ್ಣಲ್ಲದ ಕಾರಣ ನಾನು ದೇಹಕ್ಕೆ ಸೇರಿಲ್ಲವೆಂದು” ಹೇಳಿದರೂ ಅದು ದೇಹಕ್ಕೆ ಸೇರದೆ ಇರುವುದೋ? 17ದೇಹವೆಲ್ಲಾ ಕಣ್ಣಾದರೆ ನೀವು ಏನೂ ಕೇಳಲಾಗುತ್ತಿರಲಿಲ್ಲ. ದೇಹವೆಲ್ಲಾ ಕಿವಿಯಾದರೆ ನೀವು ಯಾವ ವಾಸನೆಯನ್ನು ಮೂಸಲಾಗುತ್ತಿರಲಿಲ್ಲ. 18ಆದರೆ ದೇವರು ಆ ಅಂಗಗಳಲ್ಲಿ ಪ್ರತಿಯೊಂದನ್ನು ತನಗೆ ಸರಿಯಾಗಿ ತೋಚಿದ ಪ್ರಕಾರ ದೇಹದೊಳಗೆ ಇಟ್ಟಿದ್ದಾನೆ. 19ಅವೆಲ್ಲವೂ ಒಂದೇ ಅಂಗವಾಗಿದ್ದರೆ ದೇಹವೆಲ್ಲಿರುವುದು? 20ಆದರೆ ಅಂಗಗಳು ಅನೇಕವಾಗಿದೆ ಆದರೆ ದೇಹವು ಒಂದೇ. 21ಕಣ್ಣು ಕೈಗೆ, “ನೀನು ನನಗೆ ಅವಶ್ಯವಿಲ್ಲವೆಂದೂ,” ತಲೆಯು “ಪಾದಗಳಿಗೆ ನೀವು ನನಗೆ ಅವಶ್ಯವಿಲ್ಲವೆಂದೂ” ಹೇಳುವುದಕ್ಕಾಗುವುದಿಲ್ಲ. 22ದೇಹದಲ್ಲಿ ಅಲ್ಪಮಾನವುಳ್ಳವುಗಳು ಎಂದೆಣಿಸಿ ಕಾಣುವ ಅಂಗಗಳನ್ನು ಅತ್ಯವಶ್ಯವೆಂದು ತಿಳಿಯಬೇಕಲ್ಲವೋ? 23ಮತ್ತು ನಾವು ದೇಹದಲ್ಲಿ ಅಲ್ಪಮಾನವುಳ್ಳವುಗಳು ಎಂದೆಣಿಸುವ ಭಾಗಗಳಿಗೆ ಉಡಿಗೆಯಿಂದ ಹೆಚ್ಚಾದ ಮಾನವನ್ನು ಕೊಡುವುದುಂಟಲ್ಲಾ. ಹೀಗೆ ಮಾನವಿಲ್ಲದ ಅಂಗಗಳಿಗೆ ಹೆಚ್ಚಾದ ಮಾನವುಂಟಾಗುತ್ತದೆ. 24ಮಾನವುಳ್ಳ ಅಂಗಗಳಿಗೆ ಏನೂ ಅವಶ್ಯವಿಲ್ಲ. ದೇಹದಲ್ಲಿ ಭೇದವೇನೂ ಇರದೇ ಅಂಗಗಳು ಒಂದಕ್ಕೊಂದರ ಹಿತವನ್ನು ಚಿಂತಿಸುವ ಹಾಗೆ ದೇವರು ಕೊರತೆಯುಳ್ಳದ್ದಕ್ಕೆ ಹೆಚ್ಚಾದ ಮಾನವನ್ನು ಕೊಟ್ಟು ದೇಹವನ್ನು ಹದವಾಗಿ ಜೋಡಿಸಿದ್ದಾನೆ. 26ಒಂದು ಅಂಗಕ್ಕೆ ನೋವಾದರೆ ಎಲ್ಲಾ ಅಂಗಗಳಿಗೂ ನೋವಾಗುತ್ತದೆ. ಒಂದು ಅಂಗ ಗೌರವಿಸಲ್ಪಟ್ಟರೆ ಎಲ್ಲಾ ಅಂಗಗಳಿಗೂ ಸಂತೋಷವಾಗುತ್ತದೆ.

ಸುವಾರ್ತೆ

ಮತ್ತಾ 18:18–22; 19:1–2, 13–15

18“ಭೂಲೋಕದಲ್ಲಿ ನೀವು ಏನೇನು ಕಟ್ಟುತ್ತೀರೋ ಅದು ಪರಲೋಕದಲ್ಲಿಯೂ ಕಟ್ಟಲ್ಪಡುವುದು. ಮತ್ತು ಭೂಲೋಕದಲ್ಲಿ ಏನೇನು ಬಿಚ್ಚುತ್ತೀರೋ ಅದು ಪರಲೋಕದಲ್ಲಿಯೂ ಬಿಚ್ಚಲ್ಪಡುವುದು ಎಂದು ನಿಮಗೆ ಸತ್ಯವಾಗಿ ಹೇಳುತ್ತೇನೆ. 19ಇದಲ್ಲದೆ ನಿಮ್ಮಲ್ಲಿ ಇಬ್ಬರು ಬೇಡಿಕೊಳ್ಳತಕ್ಕ ಯಾವುದಾದರು ಒಂದು ವಿಷಯವಾಗಿ ಭೂಲೋಕದಲ್ಲಿ ಒಂದೇ ಮನಸ್ಸುಳ್ಳವರಾಗಿದ್ದರೆ ಅದು ಪರಲೋಕದಲ್ಲಿರುವ ನನ್ನ ತಂದೆಯಿಂದ ಅವರಿಗೆ ಆಗುವುದೆಂದು ನಿಮಗೆ ಹೇಳುತ್ತೇನೆ. 20ಏಕೆಂದರೆ ಇಬ್ಬರಾಗಲೀ ಮೂವರಾಗಲೀ ನನ್ನ ಹೆಸರಿನಲ್ಲಿ ಎಲ್ಲಿ ಕೂಡಿ ಬರುತ್ತಾರೋ ಅಲ್ಲಿ ಅವರ ಮಧ್ಯದಲ್ಲಿ ನಾನು ಇದ್ದೇನೆ” ಅಂದನು. 21ಆಗ ಪೇತ್ರನು ಆತನ ಬಳಿಗೆ ಬಂದು, “ಕರ್ತನೇ ನನ್ನ ಸಹೋದರನು ನನ್ನ ವಿರುದ್ಧ ಪಾಪ ಮಾಡಿದರೆ ನಾನು ಎಷ್ಟು ಸಾರಿ ಅವನನ್ನು ಕ್ಷಮಿಸಬೇಕು? ಏಳು ಸಾರಿಯೋ?” ಎಂದು ಕೇಳಿದನು. 22ಯೇಸು ಅವನಿಗೆ, “ಏಳು ಸಾರಿ ಎಂದಲ್ಲ ಏಳೆಪ್ಪತ್ತು ಸಾರಿ ಎಂದು ನಿನಗೆ ಹೇಳುತ್ತೇನೆ. 19:1ಹೀಗಿರುವಾಗ ಯೇಸು ಈ ಮಾತುಗಳನ್ನು ಮುಗಿಸಿದ ಮೇಲೆ ಗಲಿಲಾಯವನ್ನು ಬಿಟ್ಟು ಯೊರ್ದನ್ ಹೊಳೆಯ ಆಚೆಯಿರುವ ಯೂದಾಯ ಪ್ರಾಂತ್ಯಗಳಿಗೆ ಹೋದನು. 2ಜನರ ದೊಡ್ಡ ಗುಂಪುಗಳು ಆತನನ್ನು ಹಿಂಬಾಲಿಸಿದವು, ಆತನು ಅವರನ್ನು ಅಲ್ಲಿಯೇ ಸ್ವಸ್ಥಮಾಡಿದನು. 13ಕೆಲವರು ತಮ್ಮ ಚಿಕ್ಕ ಮಕ್ಕಳನ್ನು ಯೇಸುವಿನ ಬಳಿಗೆ ಕರೆತಂದು, ಅವರ ಮೇಲೆ ಆತನು ಕೈಗಳನ್ನಿಟ್ಟು ಪ್ರಾರ್ಥಿಸುವಂತೆ ಕೇಳಿದರು. ಆದರೆ ಶಿಷ್ಯರು ಅವರನ್ನು ಗದರಿಸಿದರು. 14ಆದರೆ ಯೇಸು, “ಮಕ್ಕಳನ್ನು ಬಿಡಿರಿ. ನನ್ನ ಹತ್ತಿರ ಬರುವುದಕ್ಕೆ ಅವರಿಗೆ ಅಡ್ಡಿಮಾಡಬೇಡಿರಿ. ಏಕೆಂದರೆ ಪರಲೋಕ ರಾಜ್ಯವು ಇಂಥವರದೇ” ಎಂದು ಹೇಳಿದನು. 15ಮತ್ತು ಅವರ ಮೇಲೆ ಕೈಯಿಟ್ಟು ಅನಂತರ ಅಲ್ಲಿಂದ ಹೊರಟು ಹೋದನು.

ದಿನಾಂಕಗಳು ರಷ್ಯನ್ ಸಭೆಯ ಜೂಲಿಯನ್ ಪಂಚಾಂಗದ ಪ್ರಕಾರ ಇವೆ (ಸರ್ಬಿಯನ್ ಮತ್ತು ಜಾರ್ಜಿಯನ್ ಸಭೆಗಳು ಮತ್ತು ಅಥೋಸ್ ಪರ್ವತದಂತೆ): ಸಭೆಯ ಪಂಚಾಂಗದ 4 ಆಗಸ್ಟ್ ಎಂದರೆ ನಾಗರಿಕ ಪಂಚಾಂಗದ 17 ಆಗಸ್ಟ್. ಹೊಸ ಪಂಚಾಂಗದ ಸಭೆಗಳು (ಗ್ರೀಸ್, ರೊಮೇನಿಯಾ, ಬಲ್ಗೇರಿಯಾ, ಉಕ್ರೇನ್…) ನಿಗದಿತ ದಿನಾಂಕದ ಹಬ್ಬಗಳನ್ನೂ ಸಂತರನ್ನೂ ಅದೇ ನಾಗರಿಕ ದಿನಾಂಕದಂದು, 13 ದಿನಗಳ ಮುಂಚೆ, ಆಚರಿಸುತ್ತವೆ, ಮತ್ತು ಅವುಗಳ ಕೆಲವು ವಾಚನಗಳು ಬೇರೆಯಾಗಿವೆ; ಈಸ್ಟರ್ ಮತ್ತು ಅದನ್ನು ಅವಲಂಬಿಸಿರುವ ದಿನಗಳು ಒಂದೇ ಆಗಿವೆ.

ಮೂಲಗಳು: ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ · © 2017, 2019 Bridge Connectivity Solutions, CC BY-SA 4.0; changed: footnotes, headings and the letters over Psalm 119 left out, verses in the app's numbering. · ಮೂಲಗಳು ಮತ್ತು ಹಕ್ಕುಗಳು