Bible Explorer ಆ್ಯಪ್ ಪಡೆಯಿರಿ

ಮುಖಪುಟ › ದೈನಂದಿನ ಬೈಬಲ್ ವಾಚನಗಳು › ಆಗಸ್ಟ್ 2027 › 19 ಆಗಸ್ಟ್

ಆರ್ಥೊಡಾಕ್ಸ್ ಪಂಚಾಂಗ · ಆಗಸ್ಟ್ 6 (ಹಳೆಯ ಪದ್ಧತಿ)

ಆರ್ಥೊಡಾಕ್ಸ್ ದೈನಂದಿನ ವಾಚನಗಳು — 19 ಆಗಸ್ಟ್ 2027

ಗುರುವಾರ · ಪಂಚಾಶತ್ತಮದ ನಂತರದ 9ನೇ ವಾರ · ಸ್ವರ 7

ಹಬ್ಬಗಳು ಮತ್ತು ಸಂತರು

The Holy Transfiguration of Our Lord God and Saviour Jesus Christ

ದೇವಮಾತೆಯ ನಿದ್ರಾಗಮನದ ಉಪವಾಸ

ಮೀನಿಗೆ ಅನುಮತಿ

ಇದು ಮಠದ ನಿಯಮವನ್ನು ಅನುಸರಿಸುತ್ತದೆ. ಸಭೆಯಲ್ಲಿ ಉಪವಾಸದ ಪ್ರಮಾಣವನ್ನು ಆರೋಗ್ಯ, ವಯಸ್ಸು ಮತ್ತು ಸಂದರ್ಭಗಳಿಗೆ ಅನುಗುಣವಾಗಿ ಪಾಪನಿವೇದನೆಯ ಗುರುವಿನೊಂದಿಗೆ ಸೇರಿ ನಿರ್ಧರಿಸಲಾಗುತ್ತದೆ.

ದಿನದ ವಾಚನಗಳು

ಸಂಧ್ಯಾ ಪ್ರಾರ್ಥನೆ: ವಾಚನ

ವಿಮೋ 24:12–18

12ಯೆಹೋವನು ಮೋಶೆಗೆ, “ನೀನು ಬೆಟ್ಟವನ್ನು ಹತ್ತಿ ಬಂದು ನನ್ನ ಹತ್ತಿರದಲ್ಲೇ ಇರು. ನೀನು ಆ ಧರ್ಮಶಾಸ್ತ್ರವನ್ನೂ ಮತ್ತು ಆಜ್ಞೆಗಳನ್ನೂ ಜನರಿಗೆ ಬೋಧಿಸುವಂತೆ ನಾನು ಅವುಗಳನ್ನು ಬರೆದಿರುವ ಶಿಲಾಶಾಸನಗಳನ್ನು ನಿನಗೆ ಕೊಡುತ್ತೇನೆ” ಎಂದು ಹೇಳಿದನು. 13ಮೋಶೆಯು ತನ್ನ ಶಿಷ್ಯನಾದ ಯೆಹೋಶುವನೊಂದಿಗೆ ಎದ್ದು ದೇವರ ಬೆಟ್ಟದ ಮೇಲಕ್ಕೆ ಹೋದನು. 14ಇದಕ್ಕೆ ಮೊದಲು ಅವನು ಹಿರಿಯರಿಗೆ, “ನಾವು ತಿರುಗಿ ನಿಮ್ಮ ಬಳಿಗೆ ಬರುವ ತನಕ ನೀವು ಇಲ್ಲೇ ಕಾದುಕೊಂಡಿರಿ. ಆರೋನನು ಮತ್ತು ಹೂರನು ನಿಮ್ಮ ಬಳಿಯಲ್ಲಿರುವರು. ಯಾರಿಗಾದರೂ ವ್ಯಾಜ್ಯವಿದ್ದ ಪಕ್ಷಕ್ಕೆ ಅವರ ಹತ್ತಿರಕ್ಕೆ ಹೋಗಲಿ” ಎಂದು ಹೇಳಿದನು. 15ಮೋಶೆಯು ಬೆಟ್ಟವನ್ನು ಹತ್ತಿದನು ಮತ್ತು ಮೇಘವು ಬೆಟ್ಟವನ್ನು ಆವರಿಸಿಕೊಂಡಿತು. 16ಯೆಹೋವನ ತೇಜಸ್ಸು ಸೀನಾಯಿಬೆಟ್ಟದ ಮೇಲೆ ನೆಲೆಗೊಂಡಿತ್ತು ಮತ್ತು ಆ ಮೇಘವು ಆರು ದಿನಗಳ ವರೆಗೂ ಬೆಟ್ಟವನ್ನು ಆವರಿಸಿಕೊಂಡಿತ್ತು. ಏಳನೆಯ ದಿನದಲ್ಲಿ ಯೆಹೋವನು ಮೇಘದೊಳಗಿನಿಂದ ಮೋಶೆಯನ್ನು ಕೂಗಿ ಕರೆದನು. 17ಯೆಹೋವನ ತೇಜಸ್ಸು ಬೆಟ್ಟದ ತುದಿಯಲ್ಲಿ ದಹಿಸುವ ಬೆಂಕಿಯಂತೆ ಇಸ್ರಾಯೇಲರಿಗೆ ಕಾಣಿಸಿತು. 18ಮೋಶೆಯು ಆ ಮೇಘದೊಳಗೆ ಪ್ರವೇಶಿಸಿ ಬೆಟ್ಟವನ್ನೇರಿದನು. ಅವನು ಆ ಬೆಟ್ಟದಲ್ಲಿ ನಲ್ವತ್ತು ದಿನ ಹಗಲಿರುಳು ಆ ಬೆಟ್ಟದಲ್ಲಿಯೇ ಇದ್ದನು.

ಸಂಧ್ಯಾ ಪ್ರಾರ್ಥನೆ: ವಾಚನ

ವಿಮೋ 33:11–23; 34:4–6, 8

11ಮನುಷ್ಯರೊಳಗೆ ಒಬ್ಬನೂ ತನ್ನ ಸ್ನೇಹಿತನೊಡನೆ ಹೇಗೆ ಮಾತನಾಡುವನೋ ಹಾಗೆಯೇ ಯೆಹೋವನು ಮೋಶೆಯ ಸಂಗಡ ಮುಖಾಮುಖಿಯಾಗಿ ಮಾತನಾಡುತ್ತಿದ್ದನು. ಆನಂತರ ಮೋಶೆಯು ಪಾಳೆಯಕ್ಕೆ ಹಿಂತಿರುಗಿ ಬರುವನು. ಆದರೆ ನೂನನ ಮಗನಾದ ಯೆಹೋಶುವನೆಂಬ ಯೌವನಸ್ಥನಾದ ಅವನ ಶಿಷ್ಯನು ಆ ಗುಡಾರದಲ್ಲಿಯೇ ಇರುತ್ತಿದ್ದನು, ಅದರ ಬಳಿಯಿಂದ ದೂರ ಸರಿಯುತ್ತಿರಲಿಲ್ಲ. 12ಮೋಶೆಯು ಯೆಹೋವನಿಗೆ ಹೇಳಿದ್ದೇನೆಂದರೆ, “‘ಈ ಜನರನ್ನು ಆ ಸೀಮೆಗೆ ನಡೆಸಿಕೊಂಡು ಹೋಗಬೇಕೆಂದು’ ನೀನು ನನಗೆ ಆಜ್ಞಾಪಿಸಿದಿಯಷ್ಟೇ. ನನ್ನ ಸಂಗಡ ಯಾರನ್ನು ಕಳುಹಿಸಿ ಕೊಡುವೆಯೆಂಬುದನ್ನು ನನಗೆ ತಿಳಿಸಲಿಲ್ಲವಲ್ಲಾ. ‘ಆದರೆ ನಾನು ನಿನ್ನನ್ನು ಚೆನ್ನಾಗಿ ಬಲ್ಲೆನು. ನಿನಗೆ ನನ್ನ ದಯೆ ದೊರಕಿತೆಂದೂ’ ನೀನು ನನಗೆ ಹೇಳಿರುವೆಯಲ್ಲಾ. 13ನನ್ನ ಮೇಲೆ ದಯೆಯಿರುವುದಾದರೆ ನಿನ್ನ ಮಾರ್ಗವನ್ನು ನನಗೆ ತೋರಿಸು ನಾನು ನಿನ್ನನ್ನು ಅರಿತುಕೊಳ್ಳುವಂತೆ ನಿನ್ನ ಕೃಪೆಯನ್ನು ನನಗೆ ದಯಪಾಲಿಸು ಆಗ ನಿನ್ನ ದಯೆ ನನಗೆ ದೊರೆಯಿತೆಂದು ನನಗೆ ತಿಳಿಯುವುದು. ಈ ಜನಾಂಗವು ನಿನ್ನ ಪ್ರಜೆಯೆಂಬುದನ್ನು ನೆನಪುಮಾಡಿಕೋ” ಎಂದು ಅರಿಕೆಮಾಡಿದನು. 14ಅದಕ್ಕೆ ಯೆಹೋವನು, “ನನ್ನ ಪ್ರಸನ್ನತೆಯು ನಿನ್ನ ಜೊತೆಯಲ್ಲಿ ಬರುವುದು, ನಾನು ನಿಮಗೆ ವಿಶ್ರಾಂತಿಯನ್ನು ನೀಡುವೆನು” ಅಂದನು. 15ಮೋಶೆಯು ಆತನಿಗೆ, “ನಿನ್ನ ಪ್ರಸನ್ನತೆಯು ನಮ್ಮ ಸಂಗಡ ಬಾರದೇ ಹೋದರೆ ನಮ್ಮನ್ನು ಇಲ್ಲಿಂದ ಹೋಗಗೊಡಿಸಬೇಡ. 16ನನಗೂ ನಿನ್ನ ಪ್ರಜೆಗಳಾದ ಇವರಿಗೂ ನಿನ್ನ ದಯೆಯು ದೊರಕಿತೆಂಬುದು ನೀನು ನಮ್ಮ ಸಂಗಡ ಬರುವುದರಿಂದಲೇ ಹೊರತು ಬೇರೆ ಯಾವುದರಿಂದ ತಿಳಿದುಬರುವುದು? ಇದರಿಂದ ನಾನೂ ಮತ್ತು ನಿನ್ನ ಪ್ರಜೆಗಳಾದ ಇವರೂ ಭೂಮಿಯಲ್ಲಿರುವ ಬೇರೆ ಎಲ್ಲಾ ಜನಗಳಿಗಿಂತಲೂ ವಿಶೇಷತೆಯುಳ್ಳವರೆಂಬುದು ಗೊತ್ತಾಗುವುದು” ಅಂದನು. 17ಯೆಹೋವನು ಮೋಶೆಗೆ, “ನಿನಗೆ ನನ್ನ ದಯೆಯು ದೊರಕಿರುವುದರಿಂದಲೂ, ನಾನು ನಿನ್ನ ಹೆಸರನ್ನು ಬಲ್ಲವನಾಗಿರುವುದರಿಂದಲೂ ನಿನಗೋಸ್ಕರ ಈ ಕಾರ್ಯವನ್ನು ಮಾಡುವೆನು” ಎಂದು ಹೇಳಿದನು. 18ಅದಕ್ಕೆ ಮೋಶೆಯು, “ನಿನ್ನ ಮಹಿಮೆಯನ್ನು ದಯಮಾಡಿ ನನಗೆ ತೋರಿಸು” ಎಂದು ಕೇಳಿದನು. 19ಸರ್ವೋತ್ತಮತ್ವವನ್ನು ಅದಕ್ಕೆ ಆತನು, “ನಾನು ನನ್ನ ಮಹಿಮೆಯನ್ನು ಪೂರ್ಣವಾಗಿ ನಿನ್ನೆದುರಿಗೆ ಬರುವಂತೆ ಮಾಡುವೆನು. ಯೆಹೋವನೆಂಬ ನನ್ನ ನಾಮದ ಪೂರ್ಣ ಮಹತ್ವವನ್ನು ನಿನ್ನೆದುರಾಗಿ ಪ್ರಕಟಿಸುವೆನು. ನಾನು ಯಾರ ಮೇಲೆ ದಯೆತೋರಿಸಬೇಕೆಂದಿರುವೆನೋ ಅವನ ಮೇಲೆ ದಯೆ ತೋರಿಸುವೆನು, ಯಾರನ್ನು ಕರುಣಿಸಬೇಕೆಂದಿರುವೆನೋ ಅವನನ್ನು ಕರುಣಿಸುವೆನು” ಅಂದನು. 20ಆದರೆ ಆತನು ಅವನಿಗೆ, “ನೀನು ನನ್ನ ಮುಖವನ್ನು ನೋಡುವುದಕ್ಕೆ ಸಾಧ್ಯವಿಲ್ಲ. ಏಕೆಂದರೆ ಮನುಷ್ಯರಲ್ಲಿ ಯಾರೂ ನನ್ನನ್ನು ನೋಡಿ ಬದುಕಿರಲಾರನು” ಎಂದು ಹೇಳಿದನು. 21ಮತ್ತು ಯೆಹೋವನು ಅವನಿಗೆ, “ನೋಡು, ಇಲ್ಲಿ ನನ್ನ ಸಮೀಪದಲ್ಲೇ ಒಂದು ಸ್ಥಳವಿದೆ. ನೀನು ಈ ಬಂಡೆಯ ಮೇಲೆಯೇ ನಿಂತುಕೊಂಡಿರು. 22ನನ್ನ ಮಹಿಮೆಯು ನಿನ್ನೆದುರಿಗೆ ದಾಟಿಹೋಗುವಾಗ ನಾನು ಈ ಬಂಡೆಯ ಸಂದಿನಲ್ಲಿ ನಿನ್ನನ್ನು ಇರಿಸಿ ನನ್ನ ಮುಂದೆ ದಾಟಿ ಹೋಗುವ ತನಕ ನಿನ್ನನ್ನು ಕೈಯಿಂದ ಮರೆಮಾಡುವೆನು. 23ತರುವಾಯ ನಾನು ನನ್ನ ಕೈಯನ್ನು ತೆಗೆದಾಗ ನೀನು ನನ್ನ ಹಿಂಭಾಗವನ್ನು ನೋಡುವಿಯೇ ಹೊರತು ನನ್ನ ಮುಖವು ನಿನಗೆ ಕಾಣಿಸುವುದಿಲ್ಲ” ಎಂದು ಯೆಹೋವನು ಆಜ್ಞಾಪಿಸಿದನು. 34:4ಆದಕಾರಣ ಮೋಶೆಯು ಮೊದಲಿದ್ದ ಹಲಗೆಗಳಂತೆ ಎರಡು ಕಲ್ಲಿನ ಹಲಗೆಗಳನ್ನು ಕೆತ್ತಿಸಿಕೊಂಡು, ಯೆಹೋವನ ಅಪ್ಪಣೆಯ ಮೇರೆಗೆ ಬೆಳಗ್ಗೆ ಎದ್ದು ಆ ಎರಡು ಕಲ್ಲಿನ ಹಲಗೆಗಳನ್ನು ಕೈಯಲ್ಲಿ ತೆಗೆದುಕೊಂಡು ಸೀನಾಯಿಬೆಟ್ಟವನ್ನು ಹತ್ತಿದನು. 5ಆಗ ಯೆಹೋವನು ಮೇಘದಲ್ಲಿ ಇಳಿದು ಬಂದು ಅಲ್ಲಿ ಅವನ ಹತ್ತಿರ ನಿಂತು ಯೆಹೋವನೆಂಬ ತನ್ನ ನಾಮವನ್ನು ಪ್ರಕಟಿಸಿದನು. 6ಯೆಹೋವನು ಮೋಶೆಗೆ ಎದುರಾಗಿ ಹೋಗುತ್ತಾ ಪ್ರಕಟಿಸಿ ಹೇಳಿದ್ದೇನೆಂದರೆ; “ಯೆಹೋವನೆಂಬ ದೇವರು ಕರುಣಾಳುವು, ಕೃಪಾಳುವು, ದೀರ್ಘಶಾಂತವುಳ್ಳವನು, ಪ್ರೀತಿಯುಳ್ಳವನು ಹಾಗು ನಂಬಿಗಸ್ತನಾದ ದೇವರು ಆಗಿದ್ದೇನೆ; 8ಮೋಶೆ ತ್ವರೆಪಟ್ಟು ನೆಲಕ್ಕೆ ಬಾಗಿ ನಮಸ್ಕರಿಸಿ,

ಸಂಧ್ಯಾ ಪ್ರಾರ್ಥನೆ: ವಾಚನ

1 ಅರಸು 19:3–9, 11–13, 15–16

3ಅವನು ಇದನ್ನು ಕೇಳಿದೊಡನೆ ತನ್ನ ಪ್ರಾಣ ರಕ್ಷಣೆಗಾಗಿ ಅಲ್ಲಿಂದ ಹೊರಟು ಯೆಹೂದದ ಬೇರ್ಷೆಬಕ್ಕೆ ಬಂದು ಅಲ್ಲಿ ತನ್ನ ಸೇವಕನನ್ನು ಬಿಟ್ಟನು. 4ತರುವಾಯ ತಾನೊಬ್ಬನೇ ಅರಣ್ಯದೊಳಗೆ ಒಂದು ದಿನದ ಪ್ರಯಾಣದಷ್ಟು ದೂರ ಹೋಗಿ ಒಂದು ಜಾಲೀ ಗಿಡದ ಕೆಳಗೆ ಕುಳಿತುಕೊಂಡು ಮರಣವನ್ನು ಅಪೇಕ್ಷಿಸಿದನು. ಅವನು, “ಯೆಹೋವನೇ ನನಗೆ ಸಾಕಾಯಿತು, ನನ್ನ ಪ್ರಾಣವನ್ನು ತೆಗೆದುಬಿಡು. ನಾನು ನನ್ನ ಪೂರ್ವಿಕರಿಗಿಂತ ಉತ್ತಮನಲ್ಲ” ಎಂದು ದೇವರನ್ನು ಪ್ರಾರ್ಥಿಸಿ ಅದೇ ಗಿಡದ ಕೆಳಗೆ ಮಲಗಿಕೊಂಡು ನಿದ್ರೆ ಮಾಡಿದನು. 5ಪಕ್ಕನೆ ಒಬ್ಬ ದೇವದೂತನು ಅವನನ್ನು ತಟ್ಟಿ, “ಎದ್ದು ಊಟ ಮಾಡು” ಎಂದು ಹೇಳಿದನು. 6ಎಲೀಯನು ಎದ್ದು ನೋಡಲಾಗಿ ಕೆಂಡದ ಮೇಲೆ ಸುಟ್ಟ ರೊಟ್ಟಿಯೂ ಒಂದು ತಂಬಿಗೆ ನೀರು ತನ್ನ ತಲೆಯ ಹತ್ತಿರ ಇರುವುದನ್ನು ಕಂಡು ಅವುಗಳನ್ನು ತೆಗೆದುಕೊಂಡು ತಿಂದು, ಕುಡಿದು ತಿರುಗಿ ಮಲಗಿದನು. 7ಯೆಹೋವನ ದೂತನು ಎರಡನೆಯ ಸಾರಿ ಬಂದು ಅವನನ್ನು ತಟ್ಟಿ ಅವನಿಗೆ, “ಎದ್ದು ಊಟ ಮಾಡು, ನೀನು ನಿನ್ನ ಶಕ್ತಿ ಮೀರುವಷ್ಟು ಪ್ರಯಾಣಮಾಡಬೇಕಾಗಿದೆ” ಎಂದನು. 8ಅವನು ಎದ್ದು ತಿಂದು, ಕುಡಿದು ಅದರ ಬಲದಿಂದ ನಲ್ವತ್ತು ದಿನ ಹಗಲಿರುಳು ಪ್ರಯಾಣ ಮಾಡಿ ದೇವಗಿರಿಯಾದ 9ಹೋರೇಬಿಗೆ ತಲುಪಿ, ಅಲ್ಲಿನ ಒಂದು ಗವಿಯಲ್ಲಿ ಇಳಿದುಕೊಂಡನು. ಆಗ ಅವನಿಗೆ ಯೆಹೋವನಿಂದ, “ಎಲೀಯನೇ ನೀನು ಇಲ್ಲೇನು ಮಾಡುತ್ತೀ?” ಎಂಬ ವಾಣಿಯು ಕೇಳಿಸಿತು. 11ಆಗ ಪುನಃ, “ನೀನು ಹೊರಗೆ ಬಂದು ಬೆಟ್ಟದ ಮೇಲೆ ಯೆಹೋವನ ಮುಂದೆ ನಿಲ್ಲು” ಎಂಬ ವಾಣಿಯಾಯಿತು. ಆಹಾ ಯೆಹೋವನು ಅಲ್ಲಿ ಹಾದು ಹೋದನು. ಆತನ ಮುಂದೆ ಪರ್ವತಗಳು ಭೇದಿಸಿ ಬಂಡೆಗಳನ್ನು ಪುಡಿ ಪುಡಿಮಾಡುವಂಥ ದೊಡ್ಡ ಬಿರುಗಾಳಿಯು ಬೀಸಿತು. ಯೆಹೋವನು ಅದರಲ್ಲಿ ಇರಲಿಲ್ಲ. ತರುವಾಯ ಭೂಕಂಪವಾಯಿತು, ಅದರಲ್ಲಿಯೂ ಆತನಿರಲಿಲ್ಲ. 12ಭೂಕಂಪವಾದ ನಂತರ ಸಿಡಿಲುಂಟಾಯಿತು, ಅದರಲ್ಲಿಯೂ ಯೆಹೋವನಿರಲಿಲ್ಲ. ಕಡೆಗೆ ನಯವಾದ ಮೃದು ಸ್ವರವೊಂದು ಕೇಳಿಸಿತು, 13ಅದನ್ನು ಕೇಳಿದ ಕೂಡಲೆ ಎಲೀಯನು ತನ್ನ ಕಂಬಳಿಯಿಂದ ಮೋರೆಯನ್ನು ಮುಚ್ಚಿಕೊಂಡು ಹೋಗಿ ಗವಿಯ ದ್ವಾರದಲ್ಲಿ ನಿಂತನು. ಆಗ, “ಎಲೀಯನೇ ನೀನು ಇಲ್ಲೇನು ಮಾಡುತ್ತೀ?” ಎಂಬ ವಾಣಿಯು ಕೇಳಿಸಿತು. 15ಆಗ ಯೆಹೋವನು ಅವನಿಗೆ, “ನೀನು ಬಂದ ದಾರಿಯಿಂದ ಹಿಂದಿರುಗಿ ದಮಸ್ಕದ ಅರಣ್ಯಕ್ಕೆ ಹೋಗು, ಅಲ್ಲಿಂದ ಪಟ್ಟಣದೊಳಗೆ ಪ್ರವೇಶಿಸಿ ಹಜಾಯೇಲನನ್ನು ಅರಾಮ್ಯರ ಅರಸನನ್ನಾಗಿ ಅಭಿಷೇಕಿಸು. 16ನಿಂಷಿಯ ಮಗನಾದ ಯೇಹುವನ್ನು ಇಸ್ರಾಯೇಲರ ಅರಸನನ್ನಾಗಿಯೂ, ಆಬೇಲ್ ಮೆಹೋಲದವನೂ ಶಾಫಾಟನ ಮಗನೂ ಆದ ಎಲೀಷನನ್ನು ನಿನಗೆ ಬದಲಾಗಿ ಪ್ರವಾದಿಯನ್ನಾಗಿಯೂ ಅಭಿಷೇಕಿಸು.

ಉದಯಕಾಲದ ಪ್ರಾರ್ಥನೆ: ಸುವಾರ್ತೆ

ಲೂಕ 9:28–36

28ಯೇಸು ಈ ಮಾತುಗಳನ್ನು ಹೇಳಿ ಸುಮಾರು ಎಂಟು ದಿನಗಳಾದ ಮೇಲೆ ಪೇತ್ರ ಯೋಹಾನ ಯಾಕೋಬರನ್ನು ಕರೆದುಕೊಂಡು ಪ್ರಾರ್ಥನೆಮಾಡುವುದಕ್ಕೆ ಬೆಟ್ಟವನ್ನು ಹತ್ತಿದನು. 29ಆತನು ಪ್ರಾರ್ಥನೆಮಾಡುತ್ತಿರಲಾಗಿ ಆತನ ಮುಖಭಾವವು ಬದಲಾಯಿತು. ಆತನ ಉಡುಪು ಬೆಳ್ಳಗಾಗಿ ಮಿಂಚುತ್ತಾ ಬಂದಿತು. 30ಇದಲ್ಲದೆ ಇಬ್ಬರು ಪುರುಷರು ಆತನ ಸಂಗಡ ಮಾತನಾಡುತ್ತಿದ್ದರು. ಅವರು ಯಾರೆಂದರೆ ಮೋಶೆಯೂ ಎಲೀಯನೂ. 31ಅವರು ವೈಭವದೊಡನೆ ಕಾಣಿಸಿಕೊಂಡು ಯೆರೂಸಲೇಮಿನಲ್ಲಿ ಆತನು ಹೊಂದಬೇಕಾಗಿದ್ದ ಮರಣದ ವಿಷಯವಾಗಿ ಮಾತನಾಡುತ್ತಿದ್ದರು. 32ಇಷ್ಟರಲ್ಲಿ ಪೇತ್ರನಿಗೂ ಅವನ ಸಂಗಡ ಇದ್ದವರಿಗೂ ನಿದ್ರೆಯಿಂದ ಮೈಭಾರವಾಗಿತ್ತು. ಆದರೆ ಎಚ್ಚರವಾದ ಮೇಲೆ ಅವರು ಆತನ ಮಹಿಮೆಯನ್ನೂ ಆತನ ಸಂಗಡ ನಿಂತಿದ್ದ ಆ ಇಬ್ಬರು ಪುರುಷರನ್ನೂ ಕಂಡರು. 33ಅವರು ಯೇಸುವನ್ನು ಬಿಟ್ಟುಹೋಗುತ್ತಿರುವಾಗ ಪೇತ್ರನು ಯೇಸುವಿಗೆ, “ಗುರುವೇ ನಾವು ಇಲ್ಲೇ ಇರುವುದು ಒಳ್ಳೆಯದು, ಮೂರು ಗುಡಾರಗಳನ್ನು ಕಟ್ಟುವೆವು; ನಿನಗೊಂದು ಎಲೀಯನಿಗೊಂದು ಹಾಗೂ ಮೋಶೆಗೊಂದು” ಎಂದು ಹೇಳಿದನು. ತಾನು ಏನು ಹೇಳುತ್ತಿದ್ದೇನೆಂದು ತನಗೇ ಗೊತ್ತಾಗಲಿಲ್ಲ. 34ಅವನು ಇದನ್ನು ಹೇಳುತ್ತಿರುವಲ್ಲಿ ಮೋಡವು ಬಂದು ಅವರ ಮೇಲೆ ಕವಿಯಿತು. ಮೋಡವು ಅವರನ್ನು ಆವರಿಸಿಕೊಂಡಾಗ ಅವರು ಹೆದರಿದರು. 35ಆಗ ಆ ಮೋಡದೊಳಗಿಂದ, “ಈತನು ನನ್ನ ಮಗನು. ನಾನು ಆರಿಸಿಕೊಂಡವನು, ಈತನ ಮಾತನ್ನು ಕೇಳಿರಿ” ಎಂಬ ವಾಣಿ ಆಯಿತು. 36ಆ ವಾಣಿ ಆದ ಮೇಲೆ ಯೇಸುವನ್ನು ಮಾತ್ರ ಕಂಡರು. ತಾವು ಕಂಡ ಈ ಸಂಗತಿಗಳಲ್ಲಿ ಒಂದನ್ನಾದರೂ ಆ ದಿನಗಳಲ್ಲಿ ಯಾರಿಗೂ ತಿಳಿಸದೆ ಸುಮ್ಮನಿದ್ದರು.

ಪತ್ರಿಕೆ (ಕರ್ತನ ರೂಪಾಂತರ)

2 ಪೇತ್ರ 1:10–19

10ಆದ್ದರಿಂದ ಸಹೋದರರೇ, ದೇವರಲ್ಲಿ ನಿಮ್ಮ ಕರೆಯುವಿಕೆಯನ್ನೂ, ಆಯ್ಕೆಯನ್ನೂ ದೃಢಪಡಿಸಿಕೊಳ್ಳುವುದಕ್ಕೆ ಮತ್ತಷ್ಟು ಪ್ರಯಾಸಪಡಿರಿ. ಏಕೆಂದರೆ ನೀವು ಹೀಗೆ ಮಾಡುವುದಾದರೆ ಎಂದಿಗೂ ಎಡುವುದಿಲ್ಲ. 11ಹೀಗಿರುವುದರಿಂದ ನಮ್ಮ ಕರ್ತನೂ, ರಕ್ಷಕನೂ ಆಗಿರುವ ಯೇಸುಕ್ರಿಸ್ತನ ನಿತ್ಯ ರಾಜ್ಯದಲ್ಲಿ ನಿಮಗೆ ಧಾರಾಳವಾಗಿ ಪ್ರವೇಶವು ದೊರೆಯುವುದು. 12ಆದ್ದರಿಂದ ನೀವು ಈ ಸಂಗತಿಗಳನ್ನು ತಿಳಿದವರಾಗಿ ನಿಮಗೆ ದೊರೆತಿರುವ ಸತ್ಯದಲ್ಲಿ ಸ್ಥಿರವಾಗಿದ್ದರೂ ಅವುಗಳನ್ನು ನಿಮಗೆ ನೆನಪಿಸಿಕೊಡುವುದಕ್ಕೆ ನಾನು ಯಾವಾಗಲೂ ಸಿದ್ಧವಾಗಿರುವೆನು. 13ನಾನು ನನ್ನ ದೇಹವೆಂಬ ಗುಡಾರದಲ್ಲಿರುವ ತನಕ ನಿಮ್ಮನ್ನು ನೆನಪುಮಾಡಿಸಿ ಪ್ರೇರೇಪಿಸುವುದು ಯುಕ್ತವೆಂದೆಣಿಸಿದ್ದೇನೆ. 14ಏಕೆಂದರೆ ನಮ್ಮ ಕರ್ತನಾದ ಯೇಸು ಕ್ರಿಸ್ತನು ನನಗೆ ತಿಳಿಸಿದ ಪ್ರಕಾರ ನಾನು ಈ ಗುಡಾರವನ್ನು ಬಿಟ್ಟುಹೋಗುವ ಕಾಲವು ಸಮೀಪವಾಗಿದೆಯೆಂದು ಬಲ್ಲೆನು. 15ನೀವು ನನ್ನ ಮರಣಾನಂತರ ಇವುಗಳನ್ನು ಯಾವಾಗಲೂ ಜ್ಞಾಪಕ ಮಾಡಿಕೊಳ್ಳುವುದಕ್ಕಾಗಿ ನಾನು ಆಸಕ್ತಿವಹಿಸುವೆನು. 16ನಮ್ಮ ಕರ್ತನಾದ ಯೇಸುಕ್ರಿಸ್ತನ ಶಕ್ತಿಯನ್ನೂ, ಪ್ರತ್ಯಕ್ಷತೆಯನ್ನೂ ನಿಮಗೆ ತಿಳಿಯಪಡಿಸಿದ್ದರಲ್ಲಿ ಚಮತ್ಕಾರದಿಂದ ಕಲ್ಪಿಸಿದ ಕಟ್ಟುಕಥೆಗಳನ್ನು ನಾವು ಅನುಸರಿಸಲಿಲ್ಲ. ಆತನ ಮಹತ್ತನ್ನು ಕಣ್ಣಾರೆ ಕಂಡವರಾಗಿಯೇ ಅದನ್ನು ತಿಳಿಯಪಡಿಸಿದೆವು. 17ಏಕೆಂದರೆ, “ಈತನು ಪ್ರಿಯನಾಗಿರುವ ನನ್ನ ಮಗನು, ಈತನನ್ನು ನಾನು ಮೆಚ್ಚಿದ್ದೇನೆ” ಎಂಬ ವಾಣಿಯು ಮಹೋನ್ನತವಾದ ಮಹಿಮೆಯಿಂದ ಆತನಿಗೆ ಉಂಟಾದದ್ದರಲ್ಲಿ ಆತನು ತಂದೆಯಾದ ದೇವರಿಂದ ಗೌರವವನ್ನೂ, ಮಹಿಮೆಯನ್ನೂ ಹೊಂದಿದನಲ್ಲವೇ. 18ನಾವು ಪರಿಶುದ್ಧ ಪರ್ವತದ ಮೇಲೆ ಆತನ ಸಂಗಡ ಇದ್ದಾಗ ಪರಲೋಕದಿಂದ ಬಂದ ಆ ವಾಣಿಯನ್ನು ನಾವು ಕೇಳಿಸಿಕೊಂಡೆವು. 19ಇದಲ್ಲದೆ ಪ್ರವಾದನವಾಕ್ಯವು ನಮಗೆ ಬಹುದೃಢವಾಗಿ ದೊರೆತಿದೆ. ಆ ದಿನವು ಅರುಣೋದಯವಾಗುವರೆಗೆ ಮತ್ತು ಉದಯ ನಕ್ಷತ್ರವು ನಿಮ್ಮ ಹೃದಯಗಳಲ್ಲಿ ಮೂಡುವತನಕ ಅದನ್ನು ಕತ್ತಲೆಯಾದ ಸ್ಥಳದಲ್ಲಿ ಪ್ರಕಾಶಿಸುವ ದೀಪವೆಂದೆಣಿಸಿ ಅದಕ್ಕೆ ಲಕ್ಷ್ಯಕೊಟ್ಟರೆ ಒಳ್ಳೆಯದು.

ಸುವಾರ್ತೆ (ಕರ್ತನ ರೂಪಾಂತರ)

ಮತ್ತಾ 17:1–9

1ಆರು ದಿನಗಳಾದ ಮೇಲೆ ಯೇಸು ಪೇತ್ರನನ್ನೂ ಯಾಕೋಬನನ್ನೂ ಅವನ ತಮ್ಮ ಯೋಹಾನನನ್ನೂ ಮಾತ್ರ ಏಕಾಂತವಾಗಿ ಕರೆದುಕೊಂಡು ಎತ್ತರವಾದ ಬೆಟ್ಟಕ್ಕೆ ಹೋದನು. 2ಅಲ್ಲಿ ಆತನು ಅವರ ಮುಂದೆ ರೂಪಾಂತರಗೊಂಡನು. ಆತನ ಮುಖವು ಸೂರ್ಯನ ಹಾಗೆ ಪ್ರಕಾಶಿಸಿತು. ಆತನ ವಸ್ತ್ರಗಳು ಬೆಳಕಿನಂತೆ ಬೆಳ್ಳಗಾದವು. 3ಇಗೋ, ಮೋಶೆಯೂ ಎಲೀಯನೂ ಆತನ ಸಂಗಡ ಮಾತನಾಡುತ್ತಾ ಅವರಿಗೆ ಕಾಣಿಸಿಕೊಂಡರು. 4ಆಗ ಪೇತ್ರನು ಯೇಸುವಿಗೆ, “ಕರ್ತನೇ, ನಾವು ಇಲ್ಲೇ ಇರುವುದು ಒಳ್ಳೆಯದು. ನೀನು ಬಯಸುವುದಾದರೆ, ಇಲ್ಲಿ ಮೂರು ಗುಡಾರಗಳನ್ನು ಕಟ್ಟುವೆನು. ನಿನಗೊಂದು, ಮೋಶೆಗೊಂದು, ಎಲೀಯನಿಗೊಂದು” ಎಂದು ಹೇಳಿದನು. 5ಆತನು ಇನ್ನೂ ಮಾತನಾಡುತ್ತಿರುವಾಗಲೇ ಪ್ರಕಾಶಮಾನವಾದ ಮೋಡವು ಬಂದು ಅವರ ಮೇಲೆ ಕವಿಯಿತು. ಇದಲ್ಲದೆ ಆ ಮೋಡದೊಳಗಿನಿಂದ “ಈತನು ಪ್ರಿಯನಾಗಿರುವ ನನ್ನ ಮಗನು ಈತನನ್ನು ನಾನು ಮೆಚ್ಚಿದ್ದೇನೆ ಈತನಿಗೆ ಕಿವಿಗೊಡಿರಿ” ಎಂದು ಹೇಳುವ ವಾಣಿವುಂಟಾಯಿತು. 6ಶಿಷ್ಯರು ಇದನ್ನು ಕೇಳಿ ಬಹಳವಾಗಿ ಹೆದರಿ ಬೋರಲು ಬಿದ್ದರು. 7ಆದರೆ ಯೇಸು ಹತ್ತಿರಕ್ಕೆ ಬಂದು ಅವರನ್ನು ಮುಟ್ಟಿ, “ಏಳಿರಿ ಹೆದರಬೇಡಿರಿ” ಅಂದನು. 8ಅವರು ಕಣ್ಣೆತ್ತಿ ಮೇಲೆ ನೋಡಿದಾಗ ಯೇಸುವನ್ನೇ ಹೊರತು ಮತ್ತಾರನ್ನೂ ಕಾಣಲಿಲ್ಲ. 9ಅವರು ಆ ಬೆಟ್ಟದಿಂದ ಇಳಿದು ಬರುತ್ತಿರುವಾಗ ಯೇಸು ಅವರಿಗೆ, “ಈ ದರ್ಶನದ ಬಗ್ಗೆ ಮನುಷ್ಯಕುಮಾರನು ಸತ್ತು ಜೀವಿತನಾಗಿ ಎಬ್ಬಿಸಲ್ಪಡುವ ತನಕ ಯಾರಿಗೂ ಹೇಳಬಾರದು” ಎಂದು ಆಜ್ಞಾಪಿಸಿದನು.

ದಿನಾಂಕಗಳು ರಷ್ಯನ್ ಸಭೆಯ ಜೂಲಿಯನ್ ಪಂಚಾಂಗದ ಪ್ರಕಾರ ಇವೆ (ಸರ್ಬಿಯನ್ ಮತ್ತು ಜಾರ್ಜಿಯನ್ ಸಭೆಗಳು ಮತ್ತು ಅಥೋಸ್ ಪರ್ವತದಂತೆ): ಸಭೆಯ ಪಂಚಾಂಗದ 6 ಆಗಸ್ಟ್ ಎಂದರೆ ನಾಗರಿಕ ಪಂಚಾಂಗದ 19 ಆಗಸ್ಟ್. ಹೊಸ ಪಂಚಾಂಗದ ಸಭೆಗಳು (ಗ್ರೀಸ್, ರೊಮೇನಿಯಾ, ಬಲ್ಗೇರಿಯಾ, ಉಕ್ರೇನ್…) ನಿಗದಿತ ದಿನಾಂಕದ ಹಬ್ಬಗಳನ್ನೂ ಸಂತರನ್ನೂ ಅದೇ ನಾಗರಿಕ ದಿನಾಂಕದಂದು, 13 ದಿನಗಳ ಮುಂಚೆ, ಆಚರಿಸುತ್ತವೆ, ಮತ್ತು ಅವುಗಳ ಕೆಲವು ವಾಚನಗಳು ಬೇರೆಯಾಗಿವೆ; ಈಸ್ಟರ್ ಮತ್ತು ಅದನ್ನು ಅವಲಂಬಿಸಿರುವ ದಿನಗಳು ಒಂದೇ ಆಗಿವೆ.

ಮೂಲಗಳು: ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ · © 2017, 2019 Bridge Connectivity Solutions, CC BY-SA 4.0; changed: footnotes, headings and the letters over Psalm 119 left out, verses in the app's numbering. · ಮೂಲಗಳು ಮತ್ತು ಹಕ್ಕುಗಳು