Bible Explorer ಆ್ಯಪ್ ಪಡೆಯಿರಿ

ಮುಖಪುಟ › ದೈನಂದಿನ ಬೈಬಲ್ ವಾಚನಗಳು › ಆಗಸ್ಟ್ 2027 › 20 ಆಗಸ್ಟ್

ಕ್ಯಾಥೊಲಿಕ್ ಪಂಚಾಂಗ

ದೈನಂದಿನ ಬೈಬಲ್ ವಾಚನಗಳು (ಕಥೋಲಿಕ) — 20 ಆಗಸ್ಟ್ 2027

ಶುಕ್ರವಾರ · ಸಾಮಾನ್ಯ ಕಾಲದ 20ನೇ ವಾರ

ಹಬ್ಬಗಳು ಮತ್ತು ಸಂತರು

ಸಾಮಾನ್ಯ ಕಾಲದ 20ನೇ ವಾರದ ಶುಕ್ರವಾರ

ಸ್ಮರಣೆ · ಆರಾಧನಾ ಬಣ್ಣ: ಬಿಳಿ

ಕ್ಲೇರ್‌ವೊದ ಸಂತ ಬರ್ನಾರ್ಡ್, ಮಠಾಧಿಪತಿ ಮತ್ತು ಧರ್ಮಸಭೆಯ ಪಂಡಿತ · ಸ್ಮರಣೆ

ಉಪವಾಸ ಮತ್ತು ಪ್ರಾಯಶ್ಚಿತ್ತ

ಪ್ರಾಯಶ್ಚಿತ್ತದ ದಿನ

ಪ್ರತಿ ಶುಕ್ರವಾರವೂ ಪ್ರಾಯಶ್ಚಿತ್ತದ ದಿನ; ಅದನ್ನು ಹೇಗೆ ಆಚರಿಸಬೇಕು ಎಂಬುದನ್ನು ಪ್ರತಿಯೊಂದು ಬಿಷಪರ ಸಮ್ಮೇಳನ ನಿರ್ಧರಿಸುತ್ತದೆ: ಮಾಂಸ ವರ್ಜನೆ ಅಥವಾ ಬೇರೊಂದು ಪ್ರಾಯಶ್ಚಿತ್ತ ಕಾರ್ಯ. ಉಪವಾಸ 18 ರಿಂದ 59 ವರ್ಷದವರಿಗೆ, ಮಾಂಸ ವರ್ಜನೆ 14 ವರ್ಷದಿಂದ ಕಡ್ಡಾಯ.

ದಿನದ ವಾಚನಗಳು

ಮೊದಲನೆಯ ವಾಚನ

ರೂತ 1:1, 3–6, 14–16, 22

1ನ್ಯಾಯಸ್ಥಾಪಕರು ಆಳುತ್ತಿದ್ದ ಕಾಲದಲ್ಲಿ ಒಮ್ಮೆ ದೇಶದಲ್ಲಿ ಬರ ಬಂದಿದ್ದರಿಂದ ಯೆಹೂದ ಪ್ರಾಂತ್ಯದ ಬೇತ್ಲೆಹೇಮಿನವನೊಬ್ಬನು ತನ್ನ ಹೆಂಡತಿ, ಇಬ್ಬರು ಪುತ್ರರ ಸಹಿತವಾಗಿ ಮೋವಾಬ್‍ ದೇಶದಲ್ಲಿ ವಾಸಮಾಡುವುದಕ್ಕಾಗಿ ಹೊರಟುಹೋದನು. 3ನವೊಮಿಯ ಗಂಡನಾದ ಎಲೀಮೆಲೆಕನು ಮರಣ ಹೊಂದಿದನು. ಆಕೆಯು ಇಬ್ಬರು ಮಕ್ಕಳೊಡನೆ ಅಲ್ಲಿಯೇ ಉಳಿದಳು. 4ಈ ಮಕ್ಕಳು ಒರ್ಫಾ, ರೂತ್ ಎಂಬ ಹೆಸರಿನ ಮೋವಾಬ್ ಸ್ತ್ರೀಯರನ್ನು ಮದುವೆಮಾಡಿಕೊಂಡು ಸುಮಾರು ಹತ್ತು ವರ್ಷಗಳ ಕಾಲ ಅಲ್ಲಿ ವಾಸವಾಗಿದ್ದರು. 5ಅವರು ಅಲ್ಲಿದ್ದಾಗ ನವೊಮಿಯ ಮಕ್ಕಳಾದ ಮಹ್ಲೋನ್ ಮತ್ತು ಕಿಲ್ಯೋನ್ ಇಬ್ಬರೂ ತೀರಿಹೋದರು. ಹೀಗೆ ನವೊಮಿ ಗಂಡನನ್ನೂ, ಇಬ್ಬರು ಮಕ್ಕಳನ್ನೂ ಕಳೆದುಕೊಂಡು ಸೊಸೆಯರೊಂದಿಗೆ ಅಲ್ಲೇ ಉಳಿದಳು. 6ಯೆಹೋವನು ತನ್ನ ಜನರನ್ನು ಸಂದರ್ಶಿಸಿ ಅವರಿಗೆ ಆಹಾರವನ್ನು ಅನುಗ್ರಹಿಸಿದ್ದಾನೆಂಬ ವರ್ತಮಾನವನ್ನು ಕೇಳಿದ ನವೊಮಿಯು ತನ್ನ ಸೊಸೆಯರೊಡನೆ ಮೋವಾಬ್ ದೇಶದಿಂದ ಯೆಹೂದ ದೇಶಕ್ಕೆ ಹೋಗಬೇಕೆಂದು ನಿರ್ಧರಿಸಿದಳು. 14ಆಗ ಅವರು ಬಹಳವಾಗಿ ದುಃಖಿಸಿ ಗಟ್ಟಿಯಾಗಿ ಅತ್ತರು. ಒರ್ಫಳು ಅತ್ತೆಯನ್ನು ಮುದ್ದಿಟ್ಟು ಹೊರಟು ತನ್ನ ತವರಿಗೆ ಹೋದಳು; ರೂತಳಾದರೋ ಅತ್ತೆಯನ್ನು ತೊರೆದುಹೋಗದೆ ಅವಳೊಂದಿಗೆ ಇದ್ದಳು. 15ನವೊಮಿಯು ರೂತಳಿಗೆ, ಇಗೋ, ನಿನ್ನ ಓರಗಿತ್ತಿಯು ತಿರುಗಿ ತನ್ನ ಜನರ ಬಳಿಗೂ, ತನ್ನ ಕುಲ ದೇವರುಗಳ ಬಳಿಗೂ ಹೋಗಿದ್ದಾಳೆ. ನೀನೂ ಆಕೆಯಂತೆ ನಿನ್ನ ಜನರ ಬಳಿಗೆ ಹೋಗು ಅಂದಾಗ, 16ಆಕೆಯು, “ನಿನ್ನನ್ನು ಬಿಟ್ಟು ಹಿಂದಿರುಗಿ ಹೋಗಬೇಕೆಂದು ನನ್ನನ್ನು ಒತ್ತಾಯಪಡಿಸಬೇಡ. ನೀನು ಎಲ್ಲಿಗೆ ಹೋದರೂ ನಾನೂ ಅಲ್ಲಿಗೆ ಬರುವೆನು; ನೀನು ವಾಸಿಸುವಲ್ಲೇ ನಾನೂ ವಾಸಿಸುವೆನು; ನಿನ್ನ ಜನರೇ ನನ್ನ ಜನರು; ನಿನ್ನ ದೇವರೇ ನನ್ನ ದೇವರು. 22ಹೀಗೆ, ನವೊಮಿಯು ಮೋವಾಬ್ಯಳಾದ ತನ್ನ ಸೊಸೆ ರೂತಳೊಡನೆ ಬೇತ್ಲೆಹೇಮಿಗೆ ಬಂದಳು. ಆಗ ಜವೆಗೋದಿಯ ಸುಗ್ಗಿಯು ಪ್ರಾರಂಭವಾಗಿತ್ತು.

ಪ್ರತಿವಚನ ಕೀರ್ತನೆ

ಕೀರ್ತ 146:5–10

5ಯಾರಿಗೆ ಯಾಕೋಬನ ದೇವರು ಸಹಾಯಕನೋ, ಯಾರು ತನ್ನ ದೇವರಾದ ಯೆಹೋವನನ್ನು ನಂಬಿರುತ್ತಾನೋ, ಅವನೇ ಧನ್ಯನು. 6ಭೂಮಿ, ಆಕಾಶ, ಸಾಗರ, ಜಲಚರ ಇವುಗಳನ್ನು ನಿರ್ಮಿಸಿದವನೂ, ವಾಗ್ದಾನವನ್ನು ಯಾವಾಗಲೂ ನೆರವೇರಿಸುವವನೂ, 7ಹಿಂಸೆಗೆ ಗುರಿಯಾದವರ ನ್ಯಾಯವನ್ನು ಸ್ಥಾಪಿಸುವವನೂ, ಹಸಿದವರಿಗೆ ಆಹಾರ ಕೊಡುವವನೂ ಆತನೇ. ಯೆಹೋವನು ಸೆರೆಯಲ್ಲಿರುವವರನ್ನು ಬಿಡಿಸುತ್ತಾನೆ. 8ಯೆಹೋವನು ಕುರುಡರಿಗೆ ಕಣ್ಣು ಕೊಡುತ್ತಾನೆ. ಯೆಹೋವನು ಕುಗ್ಗಿದವರನ್ನು ಉದ್ಧರಿಸುತ್ತಾನೆ. ಯೆಹೋವನು ನೀತಿವಂತರನ್ನು ಪ್ರೀತಿಸುತ್ತಾನೆ. 9ಯೆಹೋವನು ಪರದೇಶದವರನ್ನು ಕಾಪಾಡುತ್ತಾನೆ. ಆತನು ಅನಾಥರಿಗೂ, ವಿಧವೆಯರಿಗೂ ಆಧಾರವಾಗಿದ್ದಾನೆ. ಆದರೆ ದುಷ್ಟರ ಮಾರ್ಗವನ್ನು ಡೊಂಕು ಮಾಡುತ್ತಾನೆ. 10ಯೆಹೋವನು ಸದಾಕಾಲವೂ ಅರಸನಾಗಿರುವನು, ಚೀಯೋನೇ, ನಿನ್ನ ದೇವರು ತಲತಲಾಂತರಕ್ಕೂ ಆಳುವನು, ಯೆಹೋವನಿಗೆ ಸ್ತೋತ್ರ!

ಸುವಾರ್ತೆ

ಮತ್ತಾ 22:34–40

34ಯೇಸು ಸದ್ದುಕಾಯರನ್ನು ಸದ್ದಿಲ್ಲದವರನ್ನಾಗಿ ಮಾಡಿದ್ದಾನೆಂದು ಫರಿಸಾಯರು ಕೇಳಿ ಅಲ್ಲಿಗೆ ಸೇರಿ ಬಂದರು. 35ಅವರಲ್ಲಿದ್ದ ಒಬ್ಬ ಧರ್ಮೋಪದೇಶಕನು ಆತನನ್ನು ಪರೀಕ್ಷೆ ಮಾಡಬೇಕೆಂದು, 36“ಗುರುವೇ, ಧರ್ಮಶಾಸ್ತ್ರದಲ್ಲಿ ಯಾವ ಆಜ್ಞೆ ಮುಖ್ಯವಾದದ್ದು” ಎಂದು ಆತನನ್ನು ಕೇಳಿದ್ದಕ್ಕೆ 37ಯೇಸು ಅವನಿಗೆ, “‘ನಿನ್ನ ದೇವರಾಗಿರುವ ಕರ್ತನನ್ನು ನಿನ್ನ ಪೂರ್ಣಹೃದಯದಿಂದಲೂ ನಿನ್ನ ಪೂರ್ಣಪ್ರಾಣದಿಂದಲೂ ನಿನ್ನ ಪೂರ್ಣಮನಸ್ಸಿನಿಂದಲೂ ಪ್ರೀತಿಸಬೇಕು’ 38ಎಂಬ ಆಜ್ಞೆಯೇ ಮುಖ್ಯವಾದದ್ದು ಮತ್ತು ಮೊದಲನೆಯದು. 39ಇದಕ್ಕೆ ಸಮಾನವಾದ ಎರಡನೆಯ ಆಜ್ಞೆ ಯಾವುದೆಂದರೆ, ‘ನಿನ್ನ ನೆರೆಯವನನ್ನು ನಿನ್ನಂತೆಯೇ ಪ್ರೀತಿಸಬೇಕು’ ಎಂಬುದೇ. 40ಈ ಎರಡು ಆಜ್ಞೆಗಳಲ್ಲಿ ಎಲ್ಲಾ ಧರ್ಮನಿಯಮವೂ ಪ್ರವಾದನಾಗ್ರಂಥಗಳೂ ಆಧಾರವಾಗಿವೆ” ಎಂದು ಹೇಳಿದನು.

ಇಂದಿನ ಸಂತರು

ಸಾಮಾನ್ಯ ರೋಮನ್ ಪಂಚಾಂಗ; ಬಿಷಪರ ಸಮ್ಮೇಳನವು ಕೆಲವು ಹಬ್ಬಗಳನ್ನು (ಪ್ರಭುವಿನ ಪ್ರಕಟನೆ, ಸ್ವರ್ಗಾರೋಹಣ, ಕ್ರಿಸ್ತನ ದೇಹ ಮತ್ತು ರಕ್ತ) ಭಾನುವಾರಕ್ಕೆ ಸರಿಸಬಹುದು ಅಥವಾ ತನ್ನದೇ ಹಬ್ಬಗಳನ್ನು ಸೇರಿಸಬಹುದು. ವಾಚನ ಸಂಗ್ರಹ: ಭಾನುವಾರದ ಚಕ್ರ B, ವಾರದ ದಿನಗಳ ವರ್ಷ I.

ಮೂಲಗಳು: ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ · © 2017, 2019 Bridge Connectivity Solutions, CC BY-SA 4.0; changed: footnotes, headings and the letters over Psalm 119 left out, verses in the app's numbering. · ಮೂಲಗಳು ಮತ್ತು ಹಕ್ಕುಗಳು