ಮುಖಪುಟ › ದೈನಂದಿನ ಬೈಬಲ್ ವಾಚನಗಳು › ಆಗಸ್ಟ್ 2027 › 20 ಆಗಸ್ಟ್
ಆರ್ಥೊಡಾಕ್ಸ್ ಪಂಚಾಂಗ · ಆಗಸ್ಟ್ 7 (ಹಳೆಯ ಪದ್ಧತಿ)
ಆರ್ಥೊಡಾಕ್ಸ್ ದೈನಂದಿನ ವಾಚನಗಳು — 20 ಆಗಸ್ಟ್ 2027
ಶುಕ್ರವಾರ · ಪಂಚಾಶತ್ತಮದ ನಂತರದ 9ನೇ ವಾರ · ಸ್ವರ 7
ಹಬ್ಬಗಳು ಮತ್ತು ಸಂತರು
Afterfeast of the Transfiguration of the Lord
ದೇವಮಾತೆಯ ನಿದ್ರಾಗಮನದ ಉಪವಾಸ
ಕಟ್ಟುನಿಟ್ಟಿನ ಉಪವಾಸ (ಒಣ ಆಹಾರ: ರೊಟ್ಟಿ, ತರಕಾರಿ, ಹಣ್ಣು)
ಇದು ಮಠದ ನಿಯಮವನ್ನು ಅನುಸರಿಸುತ್ತದೆ. ಸಭೆಯಲ್ಲಿ ಉಪವಾಸದ ಪ್ರಮಾಣವನ್ನು ಆರೋಗ್ಯ, ವಯಸ್ಸು ಮತ್ತು ಸಂದರ್ಭಗಳಿಗೆ ಅನುಗುಣವಾಗಿ ಪಾಪನಿವೇದನೆಯ ಗುರುವಿನೊಂದಿಗೆ ಸೇರಿ ನಿರ್ಧರಿಸಲಾಗುತ್ತದೆ.
ದಿನದ ವಾಚನಗಳು
ಪತ್ರಿಕೆ
26ಹಾಗಾದರೇನು, ಸಹೋದರರೇ? ನೀವು ಸಭೆಯಲ್ಲಿ ಸೇರಿಬರುವಾಗ ಒಬ್ಬನು ಹಾಡುವುದೂ, ಒಬ್ಬನು ಉಪದೇಶಮಾಡುವುದೂ, ಒಬ್ಬನು ತನಗೆ ಪ್ರಕಟವಾದದ್ದನ್ನು ತಿಳಿಸುವುದೂ, ಇನ್ನೂ ಒಬ್ಬನು ಅನ್ಯಭಾಷೆಯನ್ನಾಡುವುದೂ, ಒಬ್ಬನು ಅದರ ಅರ್ಥವನ್ನು ಹೇಳುವುದುಂಟು. ನೀವು ಏನು ಮಾಡಿದರೂ ಸಭೆಯ ಭಕ್ತಿವೃದ್ಧಿಗಾಗಿಯೇ ಮಾಡಿರಿ. 27ಅನ್ಯಭಾಷೆಗಳನ್ನಾಡುವುದಾದರೆ ಇಬ್ಬರು ಅಥವಾ ಅವಶ್ಯವಿದ್ದರೆ ಮೂವರಿಗಿಂತ ಹೆಚ್ಚಿಲ್ಲದೆ ಒಬ್ಬೊಬ್ಬರಾಗಿ ಮಾತನಾಡಬೇಕು; 28ಮತ್ತು ಒಬ್ಬನು ಅದರ ಅರ್ಥವನ್ನು ಹೇಳಬೇಕು. ಅರ್ಥವನ್ನು ಹೇಳುವವನಿಲ್ಲದಿದ್ದರೆ ಅನ್ಯಭಾಷೆಗಳನ್ನಾಡುವವನು ಸಭೆಯಲ್ಲಿ ಸುಮ್ಮನಿರಲಿ; ತನ್ನೊಂದಿಗೂ ಮತ್ತು ದೇವರೊಂದಿಗೂ ಮಾತನಾಡಿಕೊಳ್ಳಲಿ. 29ಇಬ್ಬರು ಮೂವರು ಪ್ರವಾದಿಗಳು ಮಾತನಾಡಲಿ, ಮಿಕ್ಕಾದವರು ವಿವೇಚನೆಯಿಂದ ಕೇಳಲಿ. 30ಕುಳಿತಿರುವ ಮತ್ತೊಬ್ಬನಿಗೆ ಪ್ರಕಟನೆ ಉಂಟಾದರೆ ಮೊದಲಿನವನು ಸುಮ್ಮನಾಗಲಿ 31ನೀವೆಲ್ಲರೂ ಒಬ್ಬೊಬ್ಬರಾಗಿ ಪ್ರವಾದಿಸಿದರೆ ಎಲ್ಲರೂ ಕಲಿತುಕೊಳ್ಳುವರು, ಎಲ್ಲರೂ ಪ್ರೋತ್ಸಾಹ ಹೊಂದುವರು. 32ಪ್ರವಾದಿಗಳ ಆತ್ಮಗಳು ಪ್ರವಾದಿಗಳ ಸ್ವಾಧೀನದಲ್ಲಿರುತ್ತವೆ. 33ದೇವರು ಸಮಾಧಾನಕ್ಕೆ ಕಾರಣನೇ ಹೊರತು ಗಲಿಬಿಲಿಗೆ ಕಾರಣನಲ್ಲ. 34ದೇವಜನರ ಎಲ್ಲಾ ಸಭೆಗಳಲ್ಲಿರುವ ಪ್ರಕಾರ ಸ್ತ್ರೀಯರು ಸಭೆಯ ಕೂಟಗಳಲ್ಲಿ ಮೌನವಾಗಿರಬೇಕು; ಮಾತನಾಡಲು ಅವರಿಗೆ ಅವಕಾಶವಿಲ್ಲ; ಅವರು ಅಧೀನರಾಗಿರಬೇಕು; ಧರ್ಮಶಾಸ್ತ್ರದಲ್ಲಿಯೂ ಹೀಗೆ ಹೇಳಿದೆಯಲ್ಲಾ. 35ಅವರು ಏನಾದರೂ ತಿಳಿದು ಕೊಳ್ಳುವುದಕ್ಕೆ ಅಪೇಕ್ಷಿಸಿದರೆ ಮನೆಯಲ್ಲಿ ತಮ್ಮ ಗಂಡಂದಿರನ್ನು ಕೇಳಿಕೊಳ್ಳಲಿ. ಸ್ತ್ರೀಯರು ಸಭೆಯಲ್ಲಿ ಮಾತನಾಡುವುದು ಅಪಮಾನಕರವಾದದ್ದು. 36ದೇವರ ವಾಕ್ಯವು ನಿಮ್ಮಿಂದಲೇ ಹೊರಟಿತೋ? ನಿಮಗೆ ಮಾತ್ರವೇ ಬಂದಿತೋ? 37ಯಾವನಾದರೂ ತನ್ನನ್ನು ಪ್ರವಾದಿಯೆಂದಾಗಲಿ ಆತ್ಮೀಕನೆಂದಾಗಲಿ ಭಾವಿಸಿಕೊಂಡರೆ ನಾನು ನಿಮಗೆ ಬರೆದಿರುವುದೆಲ್ಲಾ ಕರ್ತನ ಆಜ್ಞೆ ಎಂದು ಚೆನ್ನಾಗಿ ತಿಳಿದುಕೊಳ್ಳಲಿ. 38ಯಾವನಾದರೂ ತನಗೆ ಇದು ಗೊತ್ತಿಲ್ಲವೆಂದರೆ ಅವನು ಗುರುತಿಲ್ಲದವನಂತೆ ಇರಲಿ. 39ಆದಕಾರಣ ನನ್ನ ಸಹೋದರರೇ, ಪ್ರವಾದನಾವರವನ್ನು ಆಸಕ್ತಿಯಿಂದ ಅಪೇಕ್ಷಿಸಿರಿ, ಮತ್ತು ಅನ್ಯಭಾಷೆಗಳನ್ನಾಡುವವರಿಗೆ ಅಡ್ಡಿಮಾಡಬೇಡಿರಿ. 40ಆದರೆ ಎಲ್ಲವೂ ಯೋಗ್ಯವಾಗಿಯೂ ಹಾಗೂ ಕ್ರಮದಿಂದಲೂ ನಡೆಯಲಿ.
ಸುವಾರ್ತೆ
12ಬಳಿಕ ಯೇಸು ದೇವಾಲಯದೊಳಗೆ ಹೋಗಿ ಅದರಲ್ಲಿ ಮಾರುವ ಕೊಳ್ಳುವ ಎಲ್ಲರನ್ನೂ ಹೊರಡಿಸಿಬಿಟ್ಟು ಹಣ ವಿನಿಮಯದಾರರ ಮೇಜುಗಳನ್ನೂ ಪಾರಿವಾಳ ಮಾರುವವರ ಕಾಲ್ಮಣೆಗಳನ್ನೂ ಕೆಡವಿಹಾಕಿದನು. 13ಆತನು ಅವರಿಗೆ, “‘ನನ್ನ ಮನೆಯು ಪ್ರಾರ್ಥನಾಲಯವಾಗಿದೆ’ ಎಂದು ಬರೆದಿದೆ; ಆದರೆ ನೀವು ಅದನ್ನು ಕಳ್ಳರ ಗವಿ ಮಾಡುತ್ತಿದ್ದೀರಿ” ಎಂದು ಹೇಳಿದನು. 14ಆಗ ಅಲ್ಲಿದ್ದ ಕುರುಡರೂ ಕುಂಟರೂ ದೇವಾಲಯದಲ್ಲಿ ಆತನ ಬಳಿಗೆ ಬರಲು ಆತನು ಅವರನ್ನು ಸ್ವಸ್ಥಮಾಡಿದನು. 17ಬಳಿಕ ಅವರನ್ನು ಬಿಟ್ಟು ಪಟ್ಟಣದಿಂದ ಹೊರಟು ಬೇಥಾನ್ಯಕ್ಕೆ ಬಂದು ಅಲ್ಲಿ ರಾತ್ರಿ ಮಲಗಿದನು. 18ಬೆಳಗ್ಗೆ ಯೇಸು ಪಟ್ಟಣಕ್ಕೆ ಹಿಂತಿರುಗಿ ಬರುತ್ತಿರುವಾಗ ಹಸಿದಿದ್ದನು. 19ದಾರಿಯಲ್ಲಿ ಒಂದು ಅಂಜೂರದ ಮರವನ್ನು ಕಂಡು ಅದರ ಹತ್ತಿರಕ್ಕೆ ಹೋಗಿ ಅದರಲ್ಲಿ ಬರೀ ಎಲೆಗಳು ಮಾತ್ರ ಇರುವುದನ್ನು ಕಂಡು ಅದಕ್ಕೆ, “ಇನ್ನು ಮೇಲೆ ನಿನ್ನಲ್ಲಿ ಎಂದೆಂದಿಗೂ ಫಲವು ಫಲಿಸದೆ ಹೋಗಲಿ” ಎಂದು ಹೇಳಿದನು. ಆ ಕ್ಷಣವೇ ಆ ಅಂಜೂರದ ಮರವು ಒಣಗಿಹೋಯಿತು. 20ಶಿಷ್ಯರು ಅದನ್ನು ನೋಡಿ ಬೆರಗಾಗಿ, “ಈ ಅಂಜೂರದ ಮರವು ಒಂದು ಕ್ಷಣದಲ್ಲೇ ಒಣಗಿಹೋಯಿತಲ್ಲಾ” ಎಂದು ಆಶ್ಚರ್ಯಗೊಂಡರು.
ದಿನಾಂಕಗಳು ರಷ್ಯನ್ ಸಭೆಯ ಜೂಲಿಯನ್ ಪಂಚಾಂಗದ ಪ್ರಕಾರ ಇವೆ (ಸರ್ಬಿಯನ್ ಮತ್ತು ಜಾರ್ಜಿಯನ್ ಸಭೆಗಳು ಮತ್ತು ಅಥೋಸ್ ಪರ್ವತದಂತೆ): ಸಭೆಯ ಪಂಚಾಂಗದ 7 ಆಗಸ್ಟ್ ಎಂದರೆ ನಾಗರಿಕ ಪಂಚಾಂಗದ 20 ಆಗಸ್ಟ್. ಹೊಸ ಪಂಚಾಂಗದ ಸಭೆಗಳು (ಗ್ರೀಸ್, ರೊಮೇನಿಯಾ, ಬಲ್ಗೇರಿಯಾ, ಉಕ್ರೇನ್…) ನಿಗದಿತ ದಿನಾಂಕದ ಹಬ್ಬಗಳನ್ನೂ ಸಂತರನ್ನೂ ಅದೇ ನಾಗರಿಕ ದಿನಾಂಕದಂದು, 13 ದಿನಗಳ ಮುಂಚೆ, ಆಚರಿಸುತ್ತವೆ, ಮತ್ತು ಅವುಗಳ ಕೆಲವು ವಾಚನಗಳು ಬೇರೆಯಾಗಿವೆ; ಈಸ್ಟರ್ ಮತ್ತು ಅದನ್ನು ಅವಲಂಬಿಸಿರುವ ದಿನಗಳು ಒಂದೇ ಆಗಿವೆ.
ಮೂಲಗಳು: ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ · © 2017, 2019 Bridge Connectivity Solutions, CC BY-SA 4.0; changed: footnotes, headings and the letters over Psalm 119 left out, verses in the app's numbering. · ಮೂಲಗಳು ಮತ್ತು ಹಕ್ಕುಗಳು