Bible Explorer ಆ್ಯಪ್ ಪಡೆಯಿರಿ

ಮುಖಪುಟ › ದೈನಂದಿನ ಬೈಬಲ್ ವಾಚನಗಳು › ಆಗಸ್ಟ್ 2027 › 21 ಆಗಸ್ಟ್

ಕ್ಯಾಥೊಲಿಕ್ ಪಂಚಾಂಗ

ದೈನಂದಿನ ಬೈಬಲ್ ವಾಚನಗಳು (ಕಥೋಲಿಕ) — 21 ಆಗಸ್ಟ್ 2027

ಶನಿವಾರ · ಸಾಮಾನ್ಯ ಕಾಲದ 20ನೇ ವಾರ

ಹಬ್ಬಗಳು ಮತ್ತು ಸಂತರು

ಸಾಮಾನ್ಯ ಕಾಲದ 20ನೇ ವಾರದ ಶನಿವಾರ

ಸ್ಮರಣೆ · ಆರಾಧನಾ ಬಣ್ಣ: ಬಿಳಿ

ಸಂತ ಪಯಸ್ X, ಪೋಪ್ · ಸ್ಮರಣೆ

ದಿನದ ವಾಚನಗಳು

ಮೊದಲನೆಯ ವಾಚನ

ರೂತ 2:1–3, 8–11; 4:13–17

1ನವೊಮಿಯ ಗಂಡನಾದ ಎಲೀಮೆಲೆಕನ ಗೋತ್ರದಲ್ಲಿ ಬೋವಜನೆಂಬ ಬಹು ಧನವಂತನಾದ ಒಬ್ಬ ಸಂಬಂಧಿಕನಿದ್ದನು. 2ಮೋವಾಬ್ಯಳಾದ ರೂತಳು ನವೊಮಿಗೆ, “ನಾನು ಹೋಗಿ, ಹಕ್ಕಲ ತೆನೆಗಳನ್ನು ಆಯ್ದುಕೊಳ್ಳಲು ಅವಕಾಶ ಮಾಡಿಕೊಡುವವರ ಹೊಲದಿಂದ ತೆನೆಗಳನ್ನು ಸಂಗ್ರಹಿಸಿಕೊಂಡು ಬರುತ್ತೇನೆ” ಅಂದಳು. ಅದಕ್ಕೆ ನವೊಮಿ “ಹೋಗಿ ಬಾ ಮಗಳೆ” ಅಂದಳು. 3ಆಕೆಯು ದೈವಯೋಗದಿಂದ ಎಲೀಮೆಲೆಕನ ಗೋತ್ರದವನಾದ ಬೋವಜನ ಸ್ವತ್ತಾಗಿದ್ದ ಹೊಲಕ್ಕೆ ಹೋಗಿ ತೆನೆ ಕೊಯ್ಯುವವರ ಹಿಂದಿನಿಂದ ಹಕ್ಕಲಾಯುತ್ತಾ ಇದ್ದಳು. 8ಆಗ ಬೋವಜನು ರೂತಳಿಗೆ, “ನನ್ನ ಮಗಳೇ, ಕೇಳು; ನನ್ನ ಹೊಲವನ್ನು ಬಿಟ್ಟು ಬೇರೆಯವರ ಹೊಲಕ್ಕೆ ಹೋಗಬೇಡ; ನನ್ನ ಹೆಣ್ಣಾಳುಗಳ ಜೊತೆಯಲ್ಲೇ ಇರು. 9ನನ್ನ ಆಳುಗಳು ತೆನೆ ಕೊಯ್ಯುವುದಕ್ಕೋಸ್ಕರ ಯಾವ ಹೊಲಕ್ಕೆ ಹೋಗುತ್ತಾರೋ ಆ ಹೊಲಕ್ಕೆ ನೀನೂ ಹೋಗು. ನಿನ್ನನ್ನು ಯಾರೂ ಮುಟ್ಟಬಾರದೆಂದು ನನ್ನ ಸೇವಕರಿಗೆ ಅಪ್ಪಣೆಕೊಟ್ಟಿದ್ದೇನೆ. ನಿನಗೆ ಬಾಯಾರಿಕೆಯಾದರೆ ಹೋಗಿ ನನ್ನ ಸೇವಕರೇ ತುಂಬಿಸಿದ ನೀರಿನ ಪಾತ್ರೆಗಳಿಂದ ನೀರು ಕುಡಿಯಬಹುದು” ಎಂದು ಹೇಳಿದನು. 10ರೂತಳು ಅವನಿಗೆ ಸಾಷ್ಟಾಂಗನಮಸ್ಕಾರ ಮಾಡಿ “ಪರದೇಶಿಯಾದ ನನ್ನ ಮೇಲೆ ಇಷ್ಟು ಕಟಾಕ್ಷವಿಟ್ಟು ದಯೆ ತೋರಿಸಲು ಕಾರಣವೇನು?” ಎಂದು ಕೇಳಿದಳು. 11ಅದಕ್ಕೆ ಬೋವಜನು, “ನಿನ್ನ ಗಂಡನು ಮರಣ ಹೊಂದಿದ ದಿನದಿಂದ ನಿನ್ನ ಅತ್ತೆಗಾಗಿ ನೀನು ಮಾಡಿದ್ದೆಲ್ಲವೂ, ನನಗೆ ತಿಳಿದಿದೆ. ಹಾಗೂ ನಿನ್ನ ತಂದೆತಾಯಿಗಳನ್ನೂ, ಸ್ವದೇಶವನ್ನೂ ಬಿಟ್ಟು, ನಿನಗೆ ಅರಿಯದ ಜನರ ಬಳಿಗೆ ಬಂದಿರುವಿಯೆಂಬುದು ನನಗೆ ಚೆನ್ನಾಗಿ ಗೊತ್ತಿದೆ. 4:13ಬೋವಜನು ರೂತಳನ್ನು ಹೆಂಡತಿಯನ್ನಾಗಿ ಪರಿಗ್ರಹಿಸಿದ್ದರಿಂದ ಆಕೆಯು ಯೆಹೋವನ ಅನುಗ್ರಹದಿಂದ ಗರ್ಭಿಣಿಯಾಗಿ ಮಗನನ್ನು ಹೆತ್ತಳು. 14ಆಗ ಹೆಂಗಸರು ನವೊಮಿಗೆ “ಈ ಹೊತ್ತು ನಿನಗೆ ಬಾಧ್ಯಸ್ಥನನ್ನು ದಯಪಾಲಿಸಿದ ಯೆಹೋವನಿಗೆ ಸ್ತೋತ್ರವಾಗಲಿ. ಈ ಮಗನು ಇಸ್ರಾಯೇಲ್ಯರಲ್ಲಿ ಪ್ರಖಾತ್ಯನಾಗಲಿ. 15ಇವನು ನಿನಗೆ ನವಚೈತನ್ಯ ನೀಡಿ ಪುನರ್ಜನ್ಮ ಹೊಂದುವಂತೆ ಮಾಡುವನು, ವೃದ್ಧಾಪ್ಯದಲ್ಲಿ ನಿನಗೆ ಸಂರಕ್ಷಕನಾಗಿರುವನು. ನಿನ್ನನ್ನು ಬಹಳವಾಗಿ ಪ್ರೀತಿಸುತ್ತಾ ಏಳು ಮಂದಿ ಮಕ್ಕಳಿಗಿಂತ ಹೆಚ್ಚಾಗಿ ನಿನ್ನನ್ನು ಪ್ರೀತಿಸಿ ಗೌರವಿಸುವ ನಿನ್ನ ಸೊಸೆಯು ಇವನನ್ನು ಹೆತ್ತಳಲ್ಲಾ” ಎಂದು ಹೇಳಿದರು. 16ನವೊಮಿಯೇ ಆ ಮಗುವನ್ನು ಮಡಿಲಲ್ಲಿಟ್ಟುಕೊಂಡು ಸಾಕುತ್ತಿದ್ದಳು. 17ನೆರೆಹೊರೆಯ ಹೆಂಗಸರು ನವೊಮಿಗೆ “ಒಬ್ಬ ಮಗನು ಹುಟ್ಟಿದ್ದಾನೆಂದು” ಹೇಳಿ ಅವನಿಗೆ ಓಬೇದನೆಂದು ಹೆಸರಿಟ್ಟರು. ಇವನೇ ಇಷಯನಿಗೆ ತಂದೆಯೂ, ದಾವೀದನಿಗೆ ಅಜ್ಜನೂ ಆದನು.

ಪ್ರತಿವಚನ ಕೀರ್ತನೆ

ಕೀರ್ತ 128:1–5

1ಯಾತ್ರಾಗೀತೆ. ಯೆಹೋವನಲ್ಲಿ ಭಯಭಕ್ತಿಯುಳ್ಳವನಾಗಿ, ಆತನ ಮಾರ್ಗಗಳಲ್ಲಿ ನಡೆಯುವವನು ಧನ್ಯನು. 2ನಿನ್ನ ಕಷ್ಟಾರ್ಜಿತವನ್ನು ನೀನೇ ಅನುಭವಿಸುವಿ, ನೀನು ಧನ್ಯನು, ನಿನಗೆ ಶುಭವಿರುವುದು. 3ಅಂತಃಪುರದಲ್ಲಿರುವ ನಿನ್ನ ಹೆಂಡತಿಯು, ಫಲಭರಿತವಾದ ದ್ರಾಕ್ಷಾಲತೆಯಂತೆ ಇರುವಳು; ನಿನ್ನ ಸಂಗಡ ಊಟದ ಮಣೆಯ ಸುತ್ತಲೂ ಕುಳಿತುಕೊಳ್ಳುವ ನಿನ್ನ ಮಕ್ಕಳು, ಎಣ್ಣೇಮರದ ಸಸಿಗಳ ಹಾಗೆ ಇರುವರು. 4ಇಗೋ, ಯೆಹೋವನಲ್ಲಿ ಭಯಭಕ್ತಿಯುಳ್ಳ ಪುರುಷನು, ಈ ರೀತಿಯಾಗಿ ಆಶೀರ್ವಾದ ಹೊಂದುವನು. 5ಚೀಯೋನಿನಲ್ಲಿರುವ ಯೆಹೋವನು ನಿನ್ನನ್ನು ಆಶೀರ್ವದಿಸಲಿ; ಜೀವಮಾನವೆಲ್ಲಾ ಯೆರೂಸಲೇಮಿನ ಸೌಭಾಗ್ಯವನ್ನು ನೋಡುವವನಾಗು.

ಸುವಾರ್ತೆ

ಮತ್ತಾ 23:1–12

1ತರುವಾಯ ಯೇಸು ಜನರ ಗುಂಪಿಗೂ ಹಾಗು ತನ್ನ ಶಿಷ್ಯರಿಗೂ ಹೇಳಿದ್ದೇನೆಂದರೆ, 2“ಶಾಸ್ತ್ರಿಗಳೂ ಫರಿಸಾಯರೂ ಮೋಶೆಯ ಸ್ಥಾನದಲ್ಲಿ ಕುಳಿತುಕೊಂಡಿದ್ದಾರೆ; 3ಆದುದರಿಂದ ಅವರು ನಿಮಗೆ ಏನೆಲ್ಲಾ ಆಜ್ಞಾಪಿಸುತ್ತಾರೋ ಅದನ್ನೆಲ್ಲಾ ಕೈಕೊಂಡು ನಡೆಯಿರಿ; ಆದರೆ ಅವರ ಕ್ರಿಯೆಗಳ ಪ್ರಕಾರ ನಡೆಯಬೇಡಿರಿ; ಅವರು ಹೇಳುತ್ತಾರೆಯೇ ಹೊರತು ಅದರಂತೆ ನಡೆಯುವುದಿಲ್ಲ. 4ಅವರು ಭಾರವಾದ ಹೊರೆಗಳನ್ನು ಕಟ್ಟಿ ಜನರ ಹೆಗಲಿನ ಮೇಲೆ ಹೊರಿಸುತ್ತಾರೆ; ಆದರೆ ತಾವಾದರೋ ಬೆರಳಿನಿಂದಲಾದರೂ ಅವುಗಳನ್ನು ಮುಟ್ಟಲೊಲ್ಲರು. 5ಅವರು ತಮ್ಮ ಕೆಲಸಗಳನ್ನೆಲ್ಲಾ ಜನರು ನೋಡಬೇಕೆಂದು ಮಾಡುತ್ತಾರೆ. ತಾವು ಕಟ್ಟಿಕೊಳ್ಳುವ ಜ್ಞಾಪಕಪಟ್ಟಿಗಳನ್ನು ಅಗಲಮಾಡುತ್ತಾರೆ. ತಮ್ಮ ವಸ್ತ್ರಗಳ ಗೊಂಡೆಗಳನ್ನು ಉದ್ದಮಾಡಿಕೊಳ್ಳುತ್ತಾರೆ. 6ಇದಲ್ಲದೆ ಔತಣ ಉತ್ಸವಗಳಲ್ಲಿ ಪ್ರಥಮಸ್ಥಾನ, ಸಭಾಮಂದಿರಗಳಲ್ಲಿ ಮುಖ್ಯ ಪೀಠಗಳು; 7ಅಂಗಡಿ ಬೀದಿಗಳಲ್ಲಿ ನಮಸ್ಕಾರಗಳು, ಜನರಿಂದ ‘ಗುರುಗಳೆನ್ನಿಸಿಕೊಳ್ಳುವುದು,’ ಇವುಗಳೇ ಅವರಿಗೆ ಇಷ್ಟ. 8ಆದರೆ ನೀವು ‘ಬೋಧಕರೆನ್ನಿಸಿಕೊಳ್ಳಬೇಡಿರಿ;’ ಏಕೆಂದರೆ ಕ್ರಿಸ್ತನೊಬ್ಬನೇ ನಿಮಗಿರುವ ಬೋಧಕನು ಮತ್ತು ನೀವೆಲ್ಲರೂ ಸಹೋದರರು. 9ಇದಲ್ಲದೆ ಭೂಲೋಕದಲ್ಲಿ ಯಾರನ್ನೂ ನಿಮ್ಮ ತಂದೆ ಎಂದು ಕರೆಯಬೇಡಿರಿ; ಏಕೆಂದರೆ ಪರಲೋಕದಲ್ಲಿರುವಾತನೊಬ್ಬನೇ ನಿಮ್ಮ ತಂದೆ 10ಮತ್ತು ‘ಗುರುವೆಂದು’ ಅನ್ನಿಸಿಕೊಳ್ಳಬೇಡಿರಿ; ಏಕೆಂದರೆ, ಕ್ರಿಸ್ತನೊಬ್ಬನೇ ನಿಮಗಿರುವ ಗುರುವು 11ಆದರೆ ನಿಮ್ಮಲ್ಲಿ ಹೆಚ್ಚಿನವನು ನಿಮ್ಮ ಸೇವಕನಾಗಿರಬೇಕು. 12ತನ್ನನ್ನು ಹೆಚ್ಚಿಸಿಕೊಳ್ಳುವವನು ತಗ್ಗಿಸಲ್ಪಡುವನು, ತನ್ನನ್ನು ತಗ್ಗಿಸಿಕೊಳ್ಳುವವನು ಹೆಚ್ಚಿಸಲ್ಪಡುವನು.

ಇಂದಿನ ಸಂತರು

ಸಾಮಾನ್ಯ ರೋಮನ್ ಪಂಚಾಂಗ; ಬಿಷಪರ ಸಮ್ಮೇಳನವು ಕೆಲವು ಹಬ್ಬಗಳನ್ನು (ಪ್ರಭುವಿನ ಪ್ರಕಟನೆ, ಸ್ವರ್ಗಾರೋಹಣ, ಕ್ರಿಸ್ತನ ದೇಹ ಮತ್ತು ರಕ್ತ) ಭಾನುವಾರಕ್ಕೆ ಸರಿಸಬಹುದು ಅಥವಾ ತನ್ನದೇ ಹಬ್ಬಗಳನ್ನು ಸೇರಿಸಬಹುದು. ವಾಚನ ಸಂಗ್ರಹ: ಭಾನುವಾರದ ಚಕ್ರ B, ವಾರದ ದಿನಗಳ ವರ್ಷ I.

ಮೂಲಗಳು: ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ · © 2017, 2019 Bridge Connectivity Solutions, CC BY-SA 4.0; changed: footnotes, headings and the letters over Psalm 119 left out, verses in the app's numbering. · ಮೂಲಗಳು ಮತ್ತು ಹಕ್ಕುಗಳು