ಮುಖಪುಟ › ದೈನಂದಿನ ಬೈಬಲ್ ವಾಚನಗಳು › ಆಗಸ್ಟ್ 2027 › 21 ಆಗಸ್ಟ್
ಆರ್ಥೊಡಾಕ್ಸ್ ಪಂಚಾಂಗ · ಆಗಸ್ಟ್ 8 (ಹಳೆಯ ಪದ್ಧತಿ)
ಆರ್ಥೊಡಾಕ್ಸ್ ದೈನಂದಿನ ವಾಚನಗಳು — 21 ಆಗಸ್ಟ್ 2027
ಶನಿವಾರ · ಪಂಚಾಶತ್ತಮದ ನಂತರದ 9ನೇ ವಾರ · ಸ್ವರ 7
ಹಬ್ಬಗಳು ಮತ್ತು ಸಂತರು
Afterfeast of the Transfiguration of the Lord
ದೇವಮಾತೆಯ ನಿದ್ರಾಗಮನದ ಉಪವಾಸ
ಉಪವಾಸ: ಎಣ್ಣೆಯೊಂದಿಗೆ
ಇದು ಮಠದ ನಿಯಮವನ್ನು ಅನುಸರಿಸುತ್ತದೆ. ಸಭೆಯಲ್ಲಿ ಉಪವಾಸದ ಪ್ರಮಾಣವನ್ನು ಆರೋಗ್ಯ, ವಯಸ್ಸು ಮತ್ತು ಸಂದರ್ಭಗಳಿಗೆ ಅನುಗುಣವಾಗಿ ಪಾಪನಿವೇದನೆಯ ಗುರುವಿನೊಂದಿಗೆ ಸೇರಿ ನಿರ್ಧರಿಸಲಾಗುತ್ತದೆ.
ದಿನದ ವಾಚನಗಳು
ಪತ್ರಿಕೆ
6ದಿನವನ್ನು ಆಚರಿಸುವವನು ಕರ್ತನಿಗಾಗಿ ಅದನ್ನು ಆಚರಿಸುತ್ತಾನೆ. ತಿನ್ನುವವನು ಕರ್ತನಿಗಾಗಿ ತಿನ್ನುತ್ತಾನೆ; ಅವನು ದೇವರನ್ನು ಸ್ತುತಿಸುತ್ತಾನಲ್ಲಾ. ತಿನ್ನದವನು ಸಹ ಕರ್ತನಿಗಾಗಿಯೇ ತಿನ್ನದೆ ದೇವರನ್ನು ಸ್ತುತಿಸುತ್ತಾನೆ. 7ನಮ್ಮಲ್ಲಿ ಯಾರು ತನಗಾಗಿ ಬದುಕುವುದು ಇಲ್ಲ. ತನಗಾಗಿ ಸಾಯುವುದೂ ಇಲ್ಲ, 8ನಾವು ಬದುಕಿದರೆ ಕರ್ತನಿಗಾಗಿ ಬದುಕುತ್ತೇವೆ; ಸತ್ತರೆ ಕರ್ತನಿಗಾಗಿ ಸಾಯುತ್ತೇವೆ; ಬದುಕಿದರೂ ಸತ್ತರೂ ನಾವು ಕರ್ತನವರೇ. 9ಯಾಕೆಂದರೆ ಸತ್ತವರಿಗೂ, ಜೀವಿಸುವವರಿಗೂ ಒಡೆಯನಾಗಬೇಕಂತಲೇ ಕ್ರಿಸ್ತನು ಸತ್ತು ಜೀವಿತನಾದನು.
ಸುವಾರ್ತೆ
32ಆಗ ಯೇಸು ತನ್ನ ಶಿಷ್ಯರನ್ನು ಹತ್ತಿರಕ್ಕೆ ಕರೆದು ಅವರಿಗೆ, “ನಾನು ಈ ಜನರನ್ನು ನೋಡಿ ಕನಿಕರಪಡುತ್ತೇನೆ. ಏಕೆಂದರೆ ಅವರು ಮೂರು ದಿನಗಳಿಂದಲೂ ನನ್ನ ಜೊತೆಯಲ್ಲಿದ್ದಾರೆ. ಅವರಿಗೆ ತಿನ್ನುವುದಕ್ಕೆ ಏನೂ ಇಲ್ಲ. ಅವರನ್ನು ಹಸಿವಿನಿಂದ ಕಳುಹಿಸಿಬಿಡುವುದಕ್ಕೆ ನನಗೆ ಇಷ್ಟವಿಲ್ಲ. ಅವರು ದಾರಿಯಲ್ಲಿ ಬಳಲಿ ಹೋದಾರು” ಎಂದು ಹೇಳಿದನು. 33ಶಿಷ್ಯರು ಆತನಿಗೆ, “ಇಷ್ಟು ದೊಡ್ಡ ಜನರ ಗುಂಪನ್ನು ತೃಪ್ತಿಪಡಿಸಲಾಗುವಷ್ಟು ರೊಟ್ಟಿಯು ಈ ಅಡವಿಯಲ್ಲಿ ನಮಗೆ ಎಲ್ಲಿಂದ ಸಿಕ್ಕೀತು?” ಎಂದು ಹೇಳಿದರು. 34ಅದಕ್ಕೆ ಯೇಸು, “ನಿಮ್ಮಲ್ಲಿ ಎಷ್ಟು ರೊಟ್ಟಿಗಳಿವೆ?” ಎಂದು ಕೇಳಿದ್ದಕ್ಕೆ ಅವರು, “ಏಳು ರೊಟ್ಟಿಗಳಿವೆ ಮತ್ತು ಕೆಲವು ಸಣ್ಣ ಮೀನುಗಳು ಅವೆ” ಅಂದರು. 35ಆಗ ಆತನು ಜನರ ಗುಂಪಿಗೆ, ನೆಲದ ಮೇಲೆ ಕುಳಿತುಕೊಳ್ಳಿರಿ ಎಂದು ಅಪ್ಪಣೆ ಕೊಟ್ಟನು. 36ಆತನು ಆ ಏಳು ರೊಟ್ಟಿಗಳನ್ನೂ ಆ ಮೀನುಗಳನ್ನೂ ತೆಗೆದುಕೊಂಡು ದೇವರಿಗೆ ಸ್ತೋತ್ರ ಮಾಡಿ ಅವುಗಳನ್ನು ಮುರಿದು ಶಿಷ್ಯರಿಗೆ ಕೊಟ್ಟನು. ಶಿಷ್ಯರು ಜನರಿಗೆ ಹಂಚಿಕೊಟ್ಟರು. 37ಆ ಜನರೆಲ್ಲರೂ ಊಟಮಾಡಿ ತೃಪ್ತರಾದರು. ಉಳಿದ ತುಂಡುಗಳನ್ನು ಕೂಡಿಸಲಾಗಿ ಏಳು ಪುಟ್ಟಿಗಳು ತುಂಬಿದವು. 38ಊಟಮಾಡಿದವರು ಹೆಂಗಸರು ಮಕ್ಕಳು ಅಲ್ಲದೆ ಗಂಡಸರೇ ನಾಲ್ಕು ಸಾವಿರವಿದ್ದರು. 39ತರುವಾಯ ಆತನು ಆ ಜನರ ಗುಂಪುಗಳನ್ನು ಕಳುಹಿಸಿ ಬಿಟ್ಟು ದೋಣಿಯನ್ನು ಹತ್ತಿ ಮಗದಾನ್ ಸೀಮೆಗೆ ಹೋದನು.
ದಿನಾಂಕಗಳು ರಷ್ಯನ್ ಸಭೆಯ ಜೂಲಿಯನ್ ಪಂಚಾಂಗದ ಪ್ರಕಾರ ಇವೆ (ಸರ್ಬಿಯನ್ ಮತ್ತು ಜಾರ್ಜಿಯನ್ ಸಭೆಗಳು ಮತ್ತು ಅಥೋಸ್ ಪರ್ವತದಂತೆ): ಸಭೆಯ ಪಂಚಾಂಗದ 8 ಆಗಸ್ಟ್ ಎಂದರೆ ನಾಗರಿಕ ಪಂಚಾಂಗದ 21 ಆಗಸ್ಟ್. ಹೊಸ ಪಂಚಾಂಗದ ಸಭೆಗಳು (ಗ್ರೀಸ್, ರೊಮೇನಿಯಾ, ಬಲ್ಗೇರಿಯಾ, ಉಕ್ರೇನ್…) ನಿಗದಿತ ದಿನಾಂಕದ ಹಬ್ಬಗಳನ್ನೂ ಸಂತರನ್ನೂ ಅದೇ ನಾಗರಿಕ ದಿನಾಂಕದಂದು, 13 ದಿನಗಳ ಮುಂಚೆ, ಆಚರಿಸುತ್ತವೆ, ಮತ್ತು ಅವುಗಳ ಕೆಲವು ವಾಚನಗಳು ಬೇರೆಯಾಗಿವೆ; ಈಸ್ಟರ್ ಮತ್ತು ಅದನ್ನು ಅವಲಂಬಿಸಿರುವ ದಿನಗಳು ಒಂದೇ ಆಗಿವೆ.
ಮೂಲಗಳು: ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ · © 2017, 2019 Bridge Connectivity Solutions, CC BY-SA 4.0; changed: footnotes, headings and the letters over Psalm 119 left out, verses in the app's numbering. · ಮೂಲಗಳು ಮತ್ತು ಹಕ್ಕುಗಳು