ಮುಖಪುಟ › ದೈನಂದಿನ ಬೈಬಲ್ ವಾಚನಗಳು › ಆಗಸ್ಟ್ 2027 › 22 ಆಗಸ್ಟ್
ಕ್ಯಾಥೊಲಿಕ್ ಪಂಚಾಂಗ
ದೈನಂದಿನ ಬೈಬಲ್ ವಾಚನಗಳು (ಕಥೋಲಿಕ) — 22 ಆಗಸ್ಟ್ 2027
ಭಾನುವಾರ · ಸಾಮಾನ್ಯ ಕಾಲದ 21ನೇ ವಾರ
ಹಬ್ಬಗಳು ಮತ್ತು ಸಂತರು
ಸಾಮಾನ್ಯ ಕಾಲದ 21ನೇ ಭಾನುವಾರ
ಭಾನುವಾರ · ಆರಾಧನಾ ಬಣ್ಣ: ಹಸಿರು
ದಿನದ ವಾಚನಗಳು
ಮೊದಲನೆಯ ವಾಚನ
1ತರುವಾಯ ಯೆಹೋಶುವನು ಇಸ್ರಾಯೇಲ್ಯರ ಎಲ್ಲಾ ಕುಲದವರನ್ನು ಶೆಕೆಮಿನಲ್ಲಿ ಸಭೆ ಸೇರಿಸಿದನು. ಹಿರಿಯರು, ಪ್ರಧಾನರು, ನ್ಯಾಯಾಧಿಪತಿಗಳು, ಅಧಿಕಾರಿಗಳು ಬಂದು ದೇವರ ಸನ್ನಿಧಿಯಲ್ಲಿ ಕಾಣಿಸಿಕೊಂಡರು. 2ಯೆಹೋಶುವನು ಅವರಿಗೆ, “ನಿಮ್ಮ ದೇವರಾದ ಯೆಹೋವನು ಹೇಳುವುದೇನೆಂದರೆ, ಅಬ್ರಹಾಮ, ನಾಹೋರ ಎಂಬುವವರ ತಂದೆಯಾದ ತೆರಹ, ಮೊದಲಾದ ನಿಮ್ಮ ಮೂಲ ಪುರುಷರು ಪೂರ್ವದಲ್ಲಿ ಯೂಫ್ರೆಟಿಸ್ ನದಿಯ ಆಚೆಯಲ್ಲಿದ್ದ ಅನ್ಯದೇವತೆಗಳನ್ನು ಪೂಜಿಸುತ್ತಿದ್ದರು. 15ಯೆಹೋವನನ್ನು ಆರಾಧಿಸುವುದು ನಿಮಗೆ ಸರಿಕಾಣದಿದ್ದರೆ ಯಾರನ್ನು ಸೇವಿಸಬೇಕೆಂದಿದ್ದೀರೆಂಬುದನ್ನು? ಈ ಹೊತ್ತೇ ಆರಿಸಿಕೊಳ್ಳಿರಿ: ನಿಮ್ಮ ಪೂರ್ವಿಕರು ಯೂಫ್ರೆಟಿಸ್ ನದಿಯ ಆಚೆಯಲ್ಲಿ ಸೇವಿಸುತ್ತಿದ್ದ ದೇವತೆಗಳೋ ಈ ದೇಶದ ಮೂಲ ನಿವಾಸಿಗಳಾದ ಅಮೋರಿಯರ ದೇವತೆಗಳೋ ಹೇಳಿರಿ. ನಾನೂ, ನನ್ನ ಮನೆಯವರೂ ಯೆಹೋವನನ್ನೇ ಸೇವಿಸುವೆವು” ಎಂದನು. 16ಅದಕ್ಕೆ ಜನರು, “ಯೆಹೋವನ ಸೇವೆಯನ್ನು ಬಿಟ್ಟು ಅನ್ಯದೇವತೆಗಳನ್ನು ಸೇವಿಸುವುದು ನಮಗೆ ದೂರವಾಗಿರಲಿ. 17ನಾವು ದಾಸತ್ವದಲ್ಲಿದ್ದ ಐಗುಪ್ತದಿಂದ ನಮ್ಮನ್ನು ನಮ್ಮ ಪೂರ್ವಿಕರನ್ನೂ ಹೊರತಂದು ನಮ್ಮೆದುರಿನಲ್ಲಿಯೇ ಮಹತ್ಕಾರ್ಯಗಳನ್ನು ನಡಿಸಿ ನಮ್ಮ ಎಲ್ಲಾ ಪ್ರಯಾಣಗಳಲ್ಲಿಯೂ, ನಾವೂ ದಾಟಿ ಬಂದ ಅನ್ಯಜನಾಂಗಗಳ ಮಧ್ಯದಲ್ಲಿಯೂ ನಮ್ಮನ್ನು ಕಾಪಾಡಿದವನು ನಮ್ಮ ದೇವರಾದ ಯೆಹೋವನಲ್ಲವೇ. 18ಈ ದೇಶದ ನಿವಾಸಿಗಳಾಗಿದ್ದ ಅಮೋರಿಯರು ಮೊದಲಾದ ಸರ್ವ ಜನಾಂಗಗಳನ್ನು ನಮ್ಮ ಎದುರಿನಿಂದ ಹೊರಡಿಸಿ ಬಿಟ್ಟವನು ಆತನೇ. ಆದುದರಿಂದ ನಾವು ಯೆಹೋವನನ್ನೇ ಸೇವಿಸುವೆವು. ಆತನೇ ನಮ್ಮ ದೇವರು” ಎಂದು ಉತ್ತರ ಕೊಟ್ಟರು.
ಪ್ರತಿವಚನ ಕೀರ್ತನೆ
1ದಾವೀದನು ಅಬೀಮೆಲೆಕನ ಎದುರಿನಲ್ಲಿ ಹುಚ್ಚನಂತೆ ತೋರ್ಪಡಿಸಿಕೊಂಡು ಅವನ ಬಳಿಯಿಂದ ಹೊರಟಾಗ ರಚಿಸಿದ ಕೀರ್ತನೆ. ನಾನು ಯೆಹೋವನನ್ನು ಎಡೆಬಿಡದೆ ಕೊಂಡಾಡುವೆನು; ಆತನ ಸ್ತೋತ್ರವು ಯಾವಾಗಲೂ ನನ್ನ ಬಾಯಲ್ಲಿ ಇರುವುದು. 2ನನ್ನ ಮನಸ್ಸು ಯೆಹೋವನಲ್ಲಿ ಹಿಗ್ಗುತ್ತಿರುವುದು; ಇದನ್ನು ದೀನರು ಕೇಳಿ ಸಂತೋಷಿಸುವರು. 15ಯೆಹೋವನು ನೀತಿವಂತರನ್ನು ಕಟಾಕ್ಷಿಸುತ್ತಾನೆ; ಅವರು ಮೊರೆಯಿಡುವಾಗ ಕಿವಿಗೊಡುತ್ತಾನೆ. 16ಕೆಡುಕರಿಗೋ ಯೆಹೋವನು ಕೋಪದ ಮುಖವುಳ್ಳವನಾಗಿರುವನು; ಲೋಕದಲ್ಲಿ ಅವರ ನೆನಪೇ ಉಳಿಯದಂತೆ ತೆಗೆದುಹಾಕುವನು. 17ಯೆಹೋವನು ನೀತಿವಂತರ ಕೂಗನ್ನು ಕೇಳಿ, ಎಲ್ಲಾ ಕಷ್ಟಗಳಿಂದ ಅವರನ್ನು ಬಿಡಿಸುತ್ತಾನೆ. 18ಮುರಿದ ಮನಸ್ಸುಳ್ಳವರಿಗೆ ಯೆಹೋವನು ನೆರವಾಗುತ್ತಾನೆ; ಕುಗ್ಗಿಹೋದವರನ್ನು ಉದ್ಧಾರಮಾಡುತ್ತಾನೆ. 19ನೀತಿವಂತನಿಗೆ ಸಂಭವಿಸುವ ಕಷ್ಟಗಳು ಅನೇಕವಿದ್ದರೂ, ಯೆಹೋವನು ಅವೆಲ್ಲವುಗಳಿಂದ ಅವನನ್ನು ಬಿಡಿಸುತ್ತಾನೆ. 20ಆತನು ಅವನ ಎಲುಬುಗಳನ್ನೆಲ್ಲಾ ಕಾಪಾಡುತ್ತಾನೆ; ಅವುಗಳಲ್ಲಿ ಒಂದಾದರೂ ಮುರಿದುಹೋಗುವುದಿಲ್ಲ. 21ದುಷ್ಟನ ಕೆಡುಕು ಅವನನ್ನೇ ಕೊಲ್ಲುವುದು; ನೀತಿವಂತನನ್ನು ದ್ವೇಷಿಸುವವರು ಅಪರಾಧಿಗಳೆಂದು ಎಣಿಸಲ್ಪಡುವರು. 22ಯೆಹೋವನು ತನ್ನ ಸೇವಕರ ಪ್ರಾಣವನ್ನು ವಿಮೋಚಿಸುತ್ತಾನೆ. ಆತನ ಆಶ್ರಿತರಲ್ಲಿ ಒಬ್ಬರಾದರೂ ಅಪರಾಧಿಯೆಂದು ಎಣಿಸಲ್ಪಡುವುದಿಲ್ಲ.
ಎರಡನೆಯ ವಾಚನ
21ಕ್ರಿಸ್ತನಿಗೆ ಭಯಪಡುವವರಾಗಿದ್ದು, ಒಬ್ಬರಿಗೊಬ್ಬರು ವಿನಯವುಳ್ಳವರಾಗಿ ನಡೆದುಕೊಳ್ಳಿರಿ. 22ಸತಿಯರೇ, ನೀವು ಕರ್ತನಿಗೆ ಹೇಗೋ ಹಾಗೆಯೇ ನಿಮ್ಮ ಗಂಡಂದಿರಿಗೆ ಅಧೀನರಾಗಿರಿ. 23ಕ್ರಿಸ್ತನು ಸಭೆಗೆ ತಲೆಯಾಗಿರುವ ಪ್ರಕಾರವೇ ಗಂಡನು ಹೆಂಡತಿಗೆ ತಲೆಯಾಗಿದ್ದಾನೆ. ಕ್ರಿಸ್ತನು ತಾನೇ ಸಭೆಯೆಂಬ ದೇಹಕ್ಕೆ ರಕ್ಷಕನಾಗಿದ್ದಾನೆ. 24ಸಭೆಯು ಕ್ರಿಸ್ತನಿಗೆ ಹೇಗೆ ಅಧೀನವಾಗಿದೆಯೋ ಹಾಗೆಯೇ ಸ್ತ್ರೀಯರು ತಮ್ಮ ಗಂಡಂದಿರಿಗೆ ಎಲ್ಲಾ ವಿಷಯಗಳಲ್ಲಿ ಅಧೀನರಾಗಿರಬೇಕು. 25ಪತಿಯರೇ, ಕ್ರಿಸ್ತನು ಸಭೆಯನ್ನು ಪ್ರೀತಿಸಿದ ಪ್ರಕಾರವೇ ನಿಮ್ಮ ಹೆಂಡತಿಯರನ್ನು ಪ್ರೀತಿಸಿರಿ. 26ಆತನು ಅದನ್ನು ಪಾವನಗೊಳಿಸುವುದಕ್ಕಾಗಿ ತನ್ನನ್ನು ತಾನೇ ಒಪ್ಪಿಸಿಕೊಟ್ಟನು. 27ಅದನ್ನು ಕಳಂಕ ಸುಕ್ಕು ಮುಂತಾದದ್ದೊಂದೂ ಇಲ್ಲದಂತೆ ಪರಿಶುದ್ಧವೂ, ನಿರ್ದೋಷವೂ, ಮಹಿಮೆಯುಳ್ಳದ್ದೂ ಆಗಿರುವ ಸಭೆಯನ್ನಾಗಿ ತನ್ನೆದುರಿನಲ್ಲಿ ನಿಲ್ಲಿಸಿಕೊಳ್ಳಬೇಕೆಂದು ವಾಕ್ಯೋಪದೇಶ ಸಹಿತವಾದ ಜಲಸ್ನಾನವನ್ನು ಮಾಡಿಸಿ ಶುದ್ಧಿಮಾಡಿದನು. 28ಹಾಗೆಯೇ ಗಂಡದಿರು ಸಹ ತಮ್ಮ ಸ್ವಂತ ಶರೀರವನ್ನು ಪ್ರೀತಿಸಿಕೊಳ್ಳುವ ಪ್ರಕಾರವೇ ತಮ್ಮ ಹೆಂಡತಿಯರನ್ನು ಪ್ರೀತಿಸುವ ಹಂಗಿನವರಾಗಿದ್ದಾರೆ. ತನ್ನ ಹೆಂಡತಿಯನ್ನು ಪ್ರೀತಿಸುವವನು ತನ್ನನ್ನೇ ಪ್ರೀತಿಸಿಕೊಳ್ಳುವವನಾಗಿದ್ದಾನೆ. 29ಯಾರೂ ಎಂದೂ ಸ್ವಂತ ಶರೀರವನ್ನು ಹಗೆಮಾಡಿದ್ದಿಲ್ಲವಲ್ಲ, ಎಲ್ಲರೂ ತಮ್ಮ ಶರೀರಗಳನ್ನು ಪೋಷಿಸಿ ಪಾಲನೆ ಮಾಡುತ್ತಾರಷ್ಟೇ. 30ಸಭೆಯೆಂಬ ದೇಹಕ್ಕೆ ನಾವು ಅಂಗಗಳಾಗಿದ್ದೇವೆ ಸಭೆಯೆಂಬ ಈ ದೇಹವನ್ನು ಕ್ರಿಸ್ತನು ಹಾಗೆಯೇ ಪೋಷಿಸಿ ಪಾಲನೆ ಮಾಡುತ್ತಾ ಬಂದಿದ್ದಾನೆ. 31“ಈ ಕಾರಣದಿಂದ ಪುರುಷನು ತಂದೆತಾಯಿಗಳನ್ನು ಬಿಟ್ಟು ತನ್ನ ಹೆಂಡತಿಯನ್ನು ಸೇರಿಕೊಳ್ಳುವನು, ಅವರಿಬ್ಬರೂ ಒಂದೇ ಶರೀರವಾಗಿರುವರು.” ಎಂದು ಬರೆದದೆಯಲ್ಲಾ. 32ನಾನು ಕ್ರಿಸ್ತನಿಗೂ ಸಭೆಗೂ ಇರುವ ಸಂಬಂಧವನ್ನು ಕುರಿತು ಮಾತನಾಡುತ್ತಿದ್ದೇನೆ, ಇದುವರೆಗೆ ಗುಪ್ತವಾಗಿದ್ದ ಈ ಮರ್ಮವು ಬಹು ಗಂಭೀರವಾದದ್ದು.
ಸುವಾರ್ತೆ
60ಯೇಸುವಿನ ಶಿಷ್ಯರಲ್ಲಿ ಅನೇಕರು ಇದನ್ನು ಕೇಳಿ “ಇದು ಕಠಿಣವಾದ ಮಾತು, ಇದನ್ನು ಪಾಲಿಸುವವರು ಯಾರು?” ಎಂದು ಮಾತನಾಡಿಕೊಂಡರು. 61ತನ್ನ ಶಿಷ್ಯರು ಇದಕ್ಕೆ ಗೊಣಗುಟ್ಟುತ್ತಾರೆಂದು ಯೇಸು ತನ್ನಲ್ಲಿ ತಿಳಿದುಕೊಂಡು ಅವರಿಗೆ “ಈ ಮಾತಿನಿಂದ ನಿಮಗೆ ಬೇಸರವಾಯಿತೋ? 62ಹಾಗಾದರೆ ಮನುಷ್ಯಕುಮಾರನು ತಾನು ಮೊದಲು ಇದ್ದಲ್ಲಿಗೆ ಏರಿ ಹೋಗುವುದನ್ನು ನೀವು ನೋಡುವುದಾದರೆ ಏನನ್ನುವಿರಿ? 63ಜೀವ ಕೊಡುವುದು ಆತ್ಮವೇ. ದೇಹವು ಯಾವುದಕ್ಕೂ ಪ್ರಯೋಜನವಾಗುವುದಿಲ್ಲ. ನಾನು ನಿಮಗೆ ಹೇಳಿರುವ ಮಾತುಗಳೇ ಆತ್ಮವಾಗಿಯೂ, ಜೀವವಾಗಿಯೂ ಇವೆ. 64ಆದರೆ ನಂಬದ ಕೆಲವರು ನಿಮ್ಮಲ್ಲಿ ಇದ್ದಾರೆ” ನಂಬದವರು ಯಾರೆಂದೂ ಹಾಗೂ ತನ್ನನ್ನು ಹಿಡಿದುಕೊಡುವವನು ಯಾರೆಂದೂ ಯೇಸುವಿಗೆ ಮೊದಲಿನಿಂದಲೂ ತಿಳಿದಿತ್ತು. 65ಆತನು “ತಂದೆಯು ಅನುಗ್ರಹಿಸದ ಹೊರತು ಯಾರೂ ನನ್ನ ಬಳಿಗೆ ಬರಲಾರರು ಎಂದು ನಾನು ನಿಮಗೆ ಹೇಳಿದ್ದು ಇದಕ್ಕಾಗಿಯೇ,” ಎಂದನು. 66ಅಂದಿನಿಂದ ಆತನ ಶಿಷ್ಯರಲ್ಲಿ ಅನೇಕರು ಆತನನ್ನು ಬಿಟ್ಟು ಹೊರಟುಹೋದರು ಮತ್ತು ಆತನ ಜೊತೆಯಲ್ಲಿ ಸಂಚಾರ ಮಾಡುವುದನ್ನು ಬಿಟ್ಟರು. 67ಆದಕಾರಣ ಯೇಸು ಇದನ್ನು ನೋಡಿ, ತನ್ನ ಹನ್ನೆರಡು ಮಂದಿ ಶಿಷ್ಯಂದಿರಿಗೆ “ನೀವು ಸಹ ಹೋಗಬೇಕೆಂದು ಇದ್ದೀರಾ?” ಎಂದು ಕೇಳಿದ್ದಕ್ಕೆ, 68ಸೀಮೋನ್ ಪೇತ್ರನು ಆತನಿಗೆ “ಕರ್ತನೇ, ನಾವು ಯಾರ ಬಳಿಗೆ ಹೋಗೋಣ? ನಿನ್ನಲ್ಲಿ ನಿತ್ಯಜೀವದ ವಾಕ್ಯಗಳಿವೆಯಲ್ಲಾ. 69ನೀನು ದೇವರಿಂದ ಬಂದ ಅತಿಪರಿಶುದ್ಧನೆಂದು ನಾವು ನಂಬಿದ್ದೇವೆ ಮತ್ತು ತಿಳಿದಿದ್ದೇವೆ” ಎಂದನು.
ಸಾಮಾನ್ಯ ರೋಮನ್ ಪಂಚಾಂಗ; ಬಿಷಪರ ಸಮ್ಮೇಳನವು ಕೆಲವು ಹಬ್ಬಗಳನ್ನು (ಪ್ರಭುವಿನ ಪ್ರಕಟನೆ, ಸ್ವರ್ಗಾರೋಹಣ, ಕ್ರಿಸ್ತನ ದೇಹ ಮತ್ತು ರಕ್ತ) ಭಾನುವಾರಕ್ಕೆ ಸರಿಸಬಹುದು ಅಥವಾ ತನ್ನದೇ ಹಬ್ಬಗಳನ್ನು ಸೇರಿಸಬಹುದು. ವಾಚನ ಸಂಗ್ರಹ: ಭಾನುವಾರದ ಚಕ್ರ B, ವಾರದ ದಿನಗಳ ವರ್ಷ I.
ಮೂಲಗಳು: ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ · © 2017, 2019 Bridge Connectivity Solutions, CC BY-SA 4.0; changed: footnotes, headings and the letters over Psalm 119 left out, verses in the app's numbering. · ಮೂಲಗಳು ಮತ್ತು ಹಕ್ಕುಗಳು