ಮುಖಪುಟ › ದೈನಂದಿನ ಬೈಬಲ್ ವಾಚನಗಳು › ಆಗಸ್ಟ್ 2027 › 22 ಆಗಸ್ಟ್
ಆರ್ಥೊಡಾಕ್ಸ್ ಪಂಚಾಂಗ · ಆಗಸ್ಟ್ 9 (ಹಳೆಯ ಪದ್ಧತಿ)
ಆರ್ಥೊಡಾಕ್ಸ್ ದೈನಂದಿನ ವಾಚನಗಳು — 22 ಆಗಸ್ಟ್ 2027
ಭಾನುವಾರ · ಸ್ವರ 8
ಹಬ್ಬಗಳು ಮತ್ತು ಸಂತರು
ಪಂಚಾಶತ್ತಮದ ನಂತರದ 9ನೇ ಭಾನುವಾರ
ದೇವಮಾತೆಯ ನಿದ್ರಾಗಮನದ ಉಪವಾಸ
ಉಪವಾಸ: ಎಣ್ಣೆಯೊಂದಿಗೆ
ಇದು ಮಠದ ನಿಯಮವನ್ನು ಅನುಸರಿಸುತ್ತದೆ. ಸಭೆಯಲ್ಲಿ ಉಪವಾಸದ ಪ್ರಮಾಣವನ್ನು ಆರೋಗ್ಯ, ವಯಸ್ಸು ಮತ್ತು ಸಂದರ್ಭಗಳಿಗೆ ಅನುಗುಣವಾಗಿ ಪಾಪನಿವೇದನೆಯ ಗುರುವಿನೊಂದಿಗೆ ಸೇರಿ ನಿರ್ಧರಿಸಲಾಗುತ್ತದೆ.
ದಿನದ ವಾಚನಗಳು
ಉದಯಕಾಲದ 9ನೇ ಸುವಾರ್ತೆ
19ಅದೇ ದಿನ ಎಂದರೆ ವಾರದ ಮೊದಲನೆಯ ದಿನದ ಸಂಜೆಯಲ್ಲಿ ಶಿಷ್ಯರು ಯೆಹೂದ್ಯರ ಭಯದಿಂದ ತಾವು ಇದ್ದ ಮನೆಯ ಬಾಗಿಲುಗಳನ್ನು ಮುಚ್ಚಿಕೊಂಡಿರಲು, ಆಗ ಯೇಸು ಬಂದು ಅವರ ನಡುವೆ ನಿಂತು, “ನಿಮಗೆ ಸಮಾಧಾನವಾಗಲಿ” ಎಂದನು. 20ಇದನ್ನು ಹೇಳಿದ ಮೇಲೆ ಅವರಿಗೆ ತನ್ನ ಕೈಗಳನ್ನೂ ಪಕ್ಕೆಯನ್ನೂ ತೋರಿಸಿದನು. ಆಗ ಶಿಷ್ಯರು ಕರ್ತನನ್ನು ನೋಡಿ ಸಂತೋಷಪಟ್ಟರು. 21ಯೇಸು ಅವರಿಗೆ, “ನಿಮಗೆ ಸಮಾಧಾನವಾಗಲಿ” ಎಂದು ಪುನಃ ಹೇಳಿ, “ತಂದೆಯು ನನ್ನನ್ನು ಕಳುಹಿಸಿಕೊಟ್ಟ ಹಾಗೆಯೇ ನಾನೂ ನಿಮ್ಮನ್ನು ಕಳುಹಿಸಿಕೊಡುತ್ತೇನೆ” ಎಂದನು. 22ಆತನು ಇದನ್ನು ಹೇಳಿ ಅವರ ಮೇಲೆ ಉಸಿರೂದಿ ಅವರಿಗೆ, “ನೀವು ಪವಿತ್ರಾತ್ಮನನ್ನು ಪಡೆದುಕೊಳ್ಳಿರಿ. 23ನೀವು ಯಾರ ಪಾಪಗಳನ್ನು ಕ್ಷಮಿಸಿಬಿಡುತ್ತೀರೋ, ಅವರಿಗೆ ಅವುಗಳು ಕ್ಷಮಾಪಣೆಯಾಗುತ್ತದೆ; ಯಾರ ಪಾಪಗಳನ್ನು ನೀವು ಕ್ಷಮಿಸದೇ ಉಳಿಸುತ್ತೀರೋ, ಅವರಿಗೆ ಅವುಗಳು ಉಳಿಯುತ್ತವೆ” ಎಂದು ಹೇಳಿದನು. 24ಯೇಸು ಬಂದಾಗ ಹನ್ನೆರಡು ಮಂದಿ ಶಿಷ್ಯರಲ್ಲಿ ಒಬ್ಬನಾದ ದಿದುಮನೆನಿಸಿಕೊಳ್ಳುವ ತೋಮನು ಅವರ ಜೊತೆ ಇರಲಿಲ್ಲ. 25ಉಳಿದ ಶಿಷ್ಯರು ಅವನಿಗೆ, “ನಾವು ಕರ್ತನನ್ನು ನೋಡಿದ್ದೇವೆ” ಎಂದು ಹೇಳಿದರು. ಅದಕ್ಕೆ ಅವನು, “ನಾನು ಆತನ ಕೈಗಳಲ್ಲಿ ಮೊಳೆಗಳಿಂದಾದ ಗಾಯವನ್ನು ನೋಡಿ, ಆ ಮೊಳೆಯ ಗಾಯದಲ್ಲಿ ನನ್ನ ಬೆರಳನ್ನು ಇಟ್ಟು ಆತನ ಪಕ್ಕೆಯಲ್ಲಿ ನನ್ನ ಕೈಯನ್ನು ಹಾಕದ ಹೊರತು ನಿಮ್ಮ ಮಾತನ್ನು ನಂಬುವುದೇ ಇಲ್ಲ” ಎಂದನು. 26ಎಂಟು ದಿನಗಳಾದ ಮೇಲೆ ಆತನ ಶಿಷ್ಯರು ಪುನಃ ಒಳಗಿದ್ದಾಗ ತೋಮನೂ ಅವರ ಜೊತೆ ಇದ್ದನು. ಬಾಗಿಲುಗಳು ಮುಚ್ಚಿದ್ದವು ಆಗ ಯೇಸು ಬಂದು ನಡುವೆ ನಿಂತು ನಿಮಗೆ “ಸಮಾಧಾನವಾಗಲಿ ಎಂದನು” 27ಆ ಮೇಲೆ ತೋಮನಿಗೆ, “ನಿನ್ನ ಬೆರಳನ್ನು ಈ ಕಡೆ ಚಾಚಿ ನನ್ನ ಕೈಗಳನ್ನು ಮುಟ್ಟಿ ನೋಡು, ನಿನ್ನ ಕೈ ಚಾಚಿ ನನ್ನ ಪಕ್ಕೆಯಲ್ಲಿ ಹಾಕು. ಅಪನಂಬಿಕೆಯಳ್ಳವನಾಗಿರಬೇಡ, ನಂಬುವವನಾಗು” ಎಂದು ಹೇಳಿದನು. 28ತೋಮನು ಆತನಿಗೆ, “ನನ್ನ ಕರ್ತನೇ, ನನ್ನ ದೇವರೇ” ಎಂದು ಹೇಳಿದನು. 29ಯೇಸು ಆತನಿಗೆ, “ನೀನು ನನ್ನನ್ನು ನೋಡಿದ್ದರಿಂದ ನಂಬಿದ್ದೀ, ನೋಡದೆ ನಂಬಿದವರು ಧನ್ಯರು” ಎಂದು ಹೇಳಿದನು. 30ಯೇಸು ಇನ್ನು ಬೇರೆ ಎಷ್ಟೋ ಸೂಚಕಕಾರ್ಯಗಳನ್ನು ತನ್ನ ಶಿಷ್ಯರ ಮುಂದೆ ಮಾಡಿದನು. ಅವುಗಳನ್ನೆಲ್ಲಾ ಈ ಗ್ರಂಥದಲ್ಲಿ ಬರೆದಿರುವುದಿಲ್ಲಾ. 31ಆದರೆ ಯೇಸುವೇ ದೇವಕುಮಾರನಾದ ಕ್ರಿಸ್ತನೆಂದು ನೀವು ನಂಬುವಂತೆಯೂ, ನಂಬಿ ಆತನ ಹೆಸರಿನಲ್ಲಿ ನಿತ್ಯ ಜೀವವನ್ನು ಪಡೆದುಕೊಳ್ಳುವಂತೆಯೂ ಇಷ್ಟೆಲ್ಲಾ ಬರೆದಿದೆ.
ಪತ್ರಿಕೆ
9ನಾವು ದೇವರ ಜೊತೆಕೆಲಸದವರು. ನೀವು ದೇವರ ಹೊಲವೂ. ದೇವರ ಮಂದಿರವೂ ಆಗಿದ್ದೀರಿ. 10ದೇವರು ನನಗೆ ಕೊಟ್ಟ ಕೃಪೆಯ ಪ್ರಕಾರ ನಾನು ಜಾಣ್ಮೆಯುಳ್ಳ ಪ್ರವೀಣನಾದ ಶಿಲ್ಪಿಯಂತೆ ಅಸ್ತಿವಾರ ಹಾಕಿದೆನು. ಮತ್ತೊಬ್ಬನು ಅದರ ಮೇಲೆ ಕಟ್ಟುತ್ತಾನೆ. ಆದರೆ ತಾನು ಅದರ ಮೇಲೆ ಹೇಗೆ ಕಟ್ಟುತ್ತಿದ್ದೇನೆಂದು ಪ್ರತಿಯೊಬ್ಬನು ಎಚ್ಚರಿಕೆಯಿಂದಿರಬೇಕು. 11ಯೇಸು ಕ್ರಿಸ್ತನೆಂಬ ಅಸ್ತಿವಾರವನ್ನಲ್ಲದೆ ಮತ್ತೊಂದು ಅಸ್ತಿವಾರವನ್ನು ಯಾರೂ ಹಾಕಲಾರರಷ್ಟೆ. 12ಆ ಅಸ್ತಿವಾರದ ಮೇಲೆ ಚಿನ್ನ, ಬೆಳ್ಳಿ, ರತ್ನಗಳು, ಕಟ್ಟಿಗೆ, ಹುಲ್ಲು, ಆಪು ಮುಂತಾದವುಗಳಲ್ಲಿ ಯಾವುದರಿಂದ ಕಟ್ಟಿದರೂ, 13ಅವನವನ ಕೆಲಸವು ಪ್ರಕಟವಾಗುವುದು. ಕ್ರಿಸ್ತನು ಬರುವ ದಿನವು ಬೆಂಕಿಯೊಡನೆ ಉದಯವಾಗಿ ಆ ಕೆಲಸವನ್ನು ಸ್ಪಷ್ಟವಾಗಿ ತೋರಿಸುವುದು. ಅವನವನ ಕೆಲಸವೆಂಥದೆಂಬುದನ್ನು ಆ ಬೆಂಕಿ ಶೋಧಿಸುವುದು. 14ಒಬ್ಬನು ಆ ಅಸ್ತಿವಾರದ ಮೇಲೆ ಕಟ್ಟಿದ್ದು ಉಳಿದರೆ ಅವನಿಗೆ ಪ್ರತಿಫಲ ಸಿಕ್ಕುವುದು. 15ಒಬ್ಬನು ಕಟ್ಟಿದ್ದು ಸುಟ್ಟು ಹೋದರೆ ಅವನಿಗೆ ನಷ್ಟವಾಗುವುದು. ತಾನಾದರೋ ರಕ್ಷಣೆ ಹೊಂದುವನು. ಆದರೆ ಬೆಂಕಿಯೊಳಗಿಂದ ತಪ್ಪಿಸಿಕೊಂಡವನ ಹಾಗಿರುವನು. 16ನೀವು ದೇವರ ಆಲಯವಾಗಿದ್ದೀರೆಂದೂ ದೇವರ ಆತ್ಮನು ನಿಮ್ಮಲ್ಲಿ ವಾಸಮಾಡುತ್ತಾನೆಂದೂ ನಿಮಗೆ ಗೊತ್ತಿಲ್ಲವೋ? 17ಯಾವನಾದರೂ ದೇವರ ಆಲಯವನ್ನು ನಾಶಪಡಿಸಿದರೆ ದೇವರು ಅವನನ್ನು ನಾಶಪಡಿಸುವನು. ಯಾಕೆಂದರೆ ದೇವರ ಆಲಯವು ಪವಿತ್ರವಾದದ್ದು ಆ ಆಲಯವು ನೀವೇ ಆಗಿದ್ದೀರಿ.
ಸುವಾರ್ತೆ
22ಇದಾದ ಕೂಡಲೆ ಆತನು ತನ್ನ ಶಿಷ್ಯರಿಗೆ ನಾನು ಈ ಜನರ ಗುಂಪುಗಳನ್ನು ಕಳುಹಿಸಿಬಿಡುವಷ್ಟರೊಳಗೆ ನೀವು ದೋಣಿಯನ್ನು ಹತ್ತಿ ನನಗೆ ಮುಂದಾಗಿ ಆಚೇದಡಕ್ಕೆ ಹೋಗಿರಿ ಎಂದು ಒತ್ತಾಯ ಮಾಡಿದನು. 23ಆತನು ಜನರ ಗುಂಪುಗಳನ್ನು ಕಳುಹಿಸಿಬಿಟ್ಟ ಮೇಲೆ ಪ್ರಾರ್ಥನೆ ಮಾಡುವುದಕ್ಕಾಗಿ ಏಕಾಂಗಿಯಾಗಿ ಬೆಟ್ಟವನ್ನು ಹತ್ತಿದನು. ಮತ್ತು ಸಂಜೆಯಾದಾಗ ಆತನೊಬ್ಬನೇ ಅಲ್ಲಿ ಇದ್ದನು. 24ಆದರೆ ದೋಣಿಯು ಸಮುದ್ರದ ನಡುವೆಯಿತ್ತು, ಎದುರು ಗಾಳಿ ಬೀಸುತ್ತಿದ್ದುದರಿಂದ ಅಲೆಗಳ ಬಡಿತಕ್ಕೆ ಸಿಕ್ಕಿ ಹೊಯ್ದಾಡುತ್ತಿತ್ತು. 25ರಾತ್ರಿಯ ನಾಲ್ಕನೆಯ ಜಾವದಲ್ಲಿ ಯೇಸು ಸಮುದ್ರದ ಮೇಲೆ ನಡೆಯುತ್ತಾ ಅವರ ಕಡೆಗೆ ಬಂದನು. 26ಸಮುದ್ರದ ಮೇಲೆ ನಡೆಯುವ ಆತನನ್ನು ನೋಡಿದ ಶಿಷ್ಯರು “ಭೂತವೆಂದು” ದಿಗಿಲುಬಿದ್ದು ಭಯದಿಂದ ಕೂಗಿದರು. 27ಕೂಡಲೆ ಯೇಸು ಮಾತನಾಡಿ ಅವರಿಗೆ, “ಧೈರ್ಯವಾಗಿರಿ ನಾನೇ ಭಯಪಡಬೇಡಿರಿ” ಎಂದು ಹೇಳಿದನು. 28ಅದಕ್ಕೆ ಪೇತ್ರನು, “ಕರ್ತನೇ ನೀನೇ ಆದರೆ ನಾನು ನೀರಿನ ಮೇಲೆ ನಡೆದು ನಿನ್ನ ಬಳಿಗೆ ಬರುವುದಕ್ಕೆ ಅಪ್ಪಣೆ ಕೊಡು” ಅನ್ನಲು, 29ಆತನು, “ಬಾ” ಅಂದನು. ಆಗ ಪೇತ್ರನು ಯೇಸುವಿನ ಬಳಿಗೆ ಹೋಗುವುದಕ್ಕೆ ದೋಣಿಯಿಂದ ಇಳಿದು ನೀರಿನ ಮೇಲೆ ನಡೆದನು. 30ಆದರೆ ಅವನು ಗಾಳಿಯನ್ನು ನೋಡಿದಾಗ ಭಯಪಟ್ಟು ಮುಳುಗಲಾರಂಭಿಸಿದಾಗ, “ಕರ್ತನೇ, ನನ್ನನ್ನು ಕಾಪಾಡು” ಎಂದು ಕೂಗಿಕೊಂಡನು. 31ತಕ್ಷಣವೇ ಯೇಸು ಕೈಚಾಚಿ ಅವನನ್ನು ಹಿಡಿದು, “ಅಲ್ಪ ವಿಶ್ವಾಸಿಯೇ ಏಕೆ ಸಂದೇಹ ಪಟ್ಟೆ” ಎಂದು ಹೇಳಿದನು. 32ತರುವಾಯ ಅವರು ದೋಣಿಯನ್ನು ಹತ್ತಿದ ಮೇಲೆ ಗಾಳಿ ನಿಂತು ಹೋಯಿತು. 33ಆಗ ದೋಣಿಯಲ್ಲಿದ್ದ ಶಿಷ್ಯರು “ನಿಜವಾಗಿ ನೀನು ದೇವಕುಮಾರನು” ಎಂದು ಹೇಳಿ ಆತನನ್ನು ಆರಾಧಿಸಿದರು. 34ಅವರು ಸಮುದ್ರವನ್ನು ದಾಟಿ ಗೆನೆಜರೇತ್ ಪಟ್ಟಣದ ದಡಕ್ಕೆ ಬಂದರು.
ದಿನಾಂಕಗಳು ರಷ್ಯನ್ ಸಭೆಯ ಜೂಲಿಯನ್ ಪಂಚಾಂಗದ ಪ್ರಕಾರ ಇವೆ (ಸರ್ಬಿಯನ್ ಮತ್ತು ಜಾರ್ಜಿಯನ್ ಸಭೆಗಳು ಮತ್ತು ಅಥೋಸ್ ಪರ್ವತದಂತೆ): ಸಭೆಯ ಪಂಚಾಂಗದ 9 ಆಗಸ್ಟ್ ಎಂದರೆ ನಾಗರಿಕ ಪಂಚಾಂಗದ 22 ಆಗಸ್ಟ್. ಹೊಸ ಪಂಚಾಂಗದ ಸಭೆಗಳು (ಗ್ರೀಸ್, ರೊಮೇನಿಯಾ, ಬಲ್ಗೇರಿಯಾ, ಉಕ್ರೇನ್…) ನಿಗದಿತ ದಿನಾಂಕದ ಹಬ್ಬಗಳನ್ನೂ ಸಂತರನ್ನೂ ಅದೇ ನಾಗರಿಕ ದಿನಾಂಕದಂದು, 13 ದಿನಗಳ ಮುಂಚೆ, ಆಚರಿಸುತ್ತವೆ, ಮತ್ತು ಅವುಗಳ ಕೆಲವು ವಾಚನಗಳು ಬೇರೆಯಾಗಿವೆ; ಈಸ್ಟರ್ ಮತ್ತು ಅದನ್ನು ಅವಲಂಬಿಸಿರುವ ದಿನಗಳು ಒಂದೇ ಆಗಿವೆ.
ಮೂಲಗಳು: ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ · © 2017, 2019 Bridge Connectivity Solutions, CC BY-SA 4.0; changed: footnotes, headings and the letters over Psalm 119 left out, verses in the app's numbering. · ಮೂಲಗಳು ಮತ್ತು ಹಕ್ಕುಗಳು