Bible Explorer ಆ್ಯಪ್ ಪಡೆಯಿರಿ

ಮುಖಪುಟ › ದೈನಂದಿನ ಬೈಬಲ್ ವಾಚನಗಳು › ಆಗಸ್ಟ್ 2027 › 23 ಆಗಸ್ಟ್

ಕ್ಯಾಥೊಲಿಕ್ ಪಂಚಾಂಗ

ದೈನಂದಿನ ಬೈಬಲ್ ವಾಚನಗಳು (ಕಥೋಲಿಕ) — 23 ಆಗಸ್ಟ್ 2027

ಸೋಮವಾರ · ಸಾಮಾನ್ಯ ಕಾಲದ 21ನೇ ವಾರ

ಹಬ್ಬಗಳು ಮತ್ತು ಸಂತರು

ಸಾಮಾನ್ಯ ಕಾಲದ 21ನೇ ವಾರದ ಸೋಮವಾರ

ಐಚ್ಛಿಕ ಸ್ಮರಣೆ · ಆರಾಧನಾ ಬಣ್ಣ: ಹಸಿರು

ಲಿಮಾದ ಸಂತ ರೋಸ್, ಕನ್ಯೆ · ಐಚ್ಛಿಕ ಸ್ಮರಣೆ

ದಿನದ ವಾಚನಗಳು

ಮೊದಲನೆಯ ವಾಚನ

1 ಥೆಸ 1:1–5, 8–10

1ತಂದೆಯಾದ ದೇವರಲ್ಲಿಯೂ ಕರ್ತನಾದ ಯೇಸು ಕ್ರಿಸ್ತನಲ್ಲಿಯೂ ಇರುವ ಥೆಸಲೋನಿಕದ ಸಭೆಗೆ ಪೌಲ ಸಿಲ್ವಾನ, ತಿಮೊಥೆಯ ಎಂಬ ನಾವು ಬರೆಯುವುದೇನಂದರೆ, ನಿಮಗೆ ಕೃಪೆಯೂ ಶಾಂತಿಯೂ ಉಂಟಾಗಲಿ. 2ನಾವು ನಂಬಿಕೆಯ ಫಲವಾದ ನಿಮ್ಮ ಕಾರ್ಯವನ್ನೂ, ಪ್ರೀತಿಪೂರ್ವಕವಾದ ನಿಮ್ಮ ಪ್ರಯಾಸವನ್ನೂ ಮತ್ತು ನಮ್ಮ ಕರ್ತನಾದ ಯೇಸು ಕ್ರಿಸ್ತನ ಮೇಲಿನ ನೀವಿಟ್ಟಿರುವ ಅಚಲವಾದ ನಿರೀಕ್ಷೆಯನ್ನೂ ನಮ್ಮ ತಂದೆಯಾದ ದೇವರ ಮುಂದೆ ಎಡೆಬಿಡದೆ ಜ್ಞಾಪಕ ಮಾಡಿಕೊಂಡು, ನಾವು ಪ್ರಾರ್ಥಿಸುವಾಗಲೆಲ್ಲಾ ನಿಮ್ಮನ್ನು ಸ್ಮರಿಸುತ್ತಾ, ನಿಮ್ಮೆಲ್ಲರಿಗಾಗಿ ದೇವರಿಗೆ ಯಾವಾಗಲೂ ಕೃತಜ್ಞತಾಸ್ತುತಿ ಮಾಡುತ್ತೇವೆ. 4ದೇವರಿಂದ ಪ್ರೀತಿಸಲ್ಪಟ್ಟಿರುವ ಸಹೋದರರೇ, ಆತನು ನಿಮ್ಮನ್ನು ಆರಿಸಿಕೊಂಡನೆಂಬದನ್ನೂ ಬಲ್ಲೆವು. 5ಯಾಕೆಂದರೆ ನಾವು ನಿಮ್ಮಲ್ಲಿ ಸಾರಿದ ಸುವಾರ್ತೆಯು ಬರೀ ಮಾತಾಗಿ ಬಾರದೆ ಶಕ್ತಿಯೊಡನೆಯೂ ಪವಿತ್ರಾತ್ಮದೊಡನೆಯೂ ಮತ್ತು ಬಹು ನಿಶ್ಚಯದೊಡನೆಯೂ ಬಂತೆಂಬುದನ್ನು ನೀವೂ ಬಲ್ಲಿರಿ. ಯಾಕೆಂದರೆ ನಾವು ನಿಮ್ಮಲ್ಲಿದ್ದುಕೊಂಡು ನಿಮಗೋಸ್ಕರ ಹೇಗೆ ವರ್ತಿಸಿದ್ದೇವೆಂಬುದನ್ನು ನೀವು ಗಮನಿಸಿದ್ದೀರಿ. 8ಕರ್ತನ ವಾಕ್ಯವು ನಿಮ್ಮಿಂದಲೇ ಮಕೆದೋನ್ಯದಲ್ಲಿಯೂ ಅಖಾಯದಲ್ಲಿಯೂ ಘೋಷಿತವಾದದಲ್ಲದೆ, ದೇವರ ಮೇಲೆ ನೀವು ಇಟ್ಟಿರುವ ನಂಬಿಕೆಯು ಎಲ್ಲಾ ಸ್ಥಳಗಳಲ್ಲಿಯೂ ಪ್ರಸಿದ್ಧವಾಯಿತು. ಆದುದರಿಂದ ಆ ವಿಷಯದಲ್ಲಿ ನಾವು ಏನನ್ನೂ ಹೇಳಬೇಕಾಗಿಲ್ಲ. 9ನಾವು ನಿಮ್ಮಲ್ಲಿಗೆ ಬಂದಾಗ ನೀವು ನಮ್ಮನ್ನು ಹೇಗೆ ಸ್ವಾಗತಿಸಿದಿರಿ; ನೀವು ವಿಗ್ರಹಗಳನ್ನು ತೊರೆದು ದೇವರ ಕಡೆಗೆ ತಿರುಗಿಕೊಂಡು ಜೀವಸ್ವರೂಪನಾದ ಸತ್ಯ ದೇವರನ್ನು ಸೇವಿಸುವವರಾಗಿದ್ದೀರಿ 10ಮತ್ತು ಆತನು ಸತ್ತವರೊಳಗಿಂದ ಎಬ್ಬಿಸಿದ, ಆಕಾಶದೊಳಗಿಂದ ಬರಲಿಕ್ಕಿರುವಂಥ ಆತನ ಕುಮಾರನನ್ನು ಕಾದುಕುಳಿತಿರುವಿರೆಂತಲೂ ಆ ಜನರೇ ಹೇಳುತ್ತಾರೆ. ಈ ಯೇಸು ಮುಂದೆ ಬರುವ ದೈವಕೋಪದಿಂದ ನಮ್ಮನ್ನು ತಪ್ಪಿಸುವಾತನು.

ಪ್ರತಿವಚನ ಕೀರ್ತನೆ

ಕೀರ್ತ 149:1–6, 9

1ಯೆಹೋವನಿಗೆ ಸ್ತೋತ್ರ! ಯೆಹೋವನಿಗೆ ನೂತನ ಕೀರ್ತನೆಯನ್ನು ಹಾಡಿರಿ; ಭಕ್ತರ ಸಭೆಯಲ್ಲಿ ಆತನನ್ನು ಸ್ತುತಿಸಿರಿ. 2ಇಸ್ರಾಯೇಲರು ತಮ್ಮ ಸೃಷ್ಟಿಕರ್ತನಲ್ಲಿ ಹೆಮ್ಮೆಪಡಲಿ; ಚೀಯೋನಿನವರು ತಮ್ಮ ರಾಜನಲ್ಲಿ ಹರ್ಷಿಸಲಿ. 3ಕುಣಿಯುತ್ತಾ ಆತನ ನಾಮವನ್ನು ಕೀರ್ತಿಸಲಿ; ದಮ್ಮಡಿ, ಕಿನ್ನರಿಗಳಿಂದ ಆತನನ್ನು ಭಜಿಸಲಿ. 4ಯೆಹೋವನು ತನ್ನ ಪ್ರಜೆಗೆ ಪ್ರಸನ್ನನಾದನು; ದೀನರನ್ನು ರಕ್ಷಣೆಯಿಂದ ಭೂಷಿಸುತ್ತಾನೆ. 5ಭಕ್ತರು ತಮಗುಂಟಾದ ಮಹಿಮೆಯಲ್ಲಿ ಹಿಗ್ಗಲಿ; ಹಾಸಿಗೆಯ ಮೇಲಿರುವಾಗಲೂ ಉತ್ಸಾಹಧ್ವನಿ ಮಾಡಲಿ. 6ಅವರ ಬಾಯಲ್ಲಿ ಯೆಹೋವನ ಸ್ತೋತ್ರವೂ, ಕೈಯಲ್ಲಿ ಇಬ್ಬಾಯಿಕತ್ತಿಯೂ ಇರಲಿ. 9ಲಿಖಿತದಂತೆ ಅವರಿಗೆ ಶಿಕ್ಷೆಯನ್ನು ವಿಧಿಸುವರು; ಇದು ಆತನ ಭಕ್ತರೆಲ್ಲರಿಗೆ ಗೌರವವಾಗಿರುವುದು. ಯೆಹೋವನಿಗೆ ಸ್ತೋತ್ರ.

ಸುವಾರ್ತೆ

ಮತ್ತಾ 23:13–22

13“ಅಯ್ಯೋ, ಕಪಟಿಗಳಾದ ಶಾಸ್ತ್ರಿಗಳೇ, ಫರಿಸಾಯರೇ, ಪರಲೋಕ ರಾಜ್ಯದ ಬಾಗಿಲನ್ನು ಮನುಷ್ಯರ ಎದುರಿಗೆ ಮುಚ್ಚಿಬಿಡುತ್ತೀರಿ. ನೀವಂತೂ ಒಳಕ್ಕೆ ಪ್ರವೇಶಿಸುವುದಿಲ್ಲ, ಒಳಕ್ಕೆ ಪ್ರವೇಶಿಸಬೇಕೆಂದಿರುವವರನ್ನೂ ಪ್ರವೇಶಿಸಗೊಡಿಸುವುದೂ ಇಲ್ಲ. 14ಅಯ್ಯೋ, ಕಪಟಿಗಳಾದ ಶಾಸ್ತ್ರಿಗಳೇ, ಫರಿಸಾಯರೇ ಜನರು ನೋಡಬೇಕೆಂದು ಉದ್ದವಾದ ಪ್ರಾರ್ಥನೆಗಳನ್ನು ಮಾಡುತ್ತೀರೀ. ನೀವು ವಿಧವೆಯರ ಮನೆಗಳನ್ನು ನುಂಗಿ ನಟನೆಮಾಡುತ್ತೀರಿ. ಆದುದರಿಂದ ನೀವು ಹೆಚ್ಚಿನ ದಂಡನೆಯನ್ನು ಹೊಂದುವಿರಿ. 15“ಅಯ್ಯೋ, ಕಪಟಿಗಳಾದ ಶಾಸ್ತ್ರಿಗಳೇ, ಫರಿಸಾಯರೇ, ನೀವು ಒಬ್ಬ ಮನುಷ್ಯನನ್ನು ಮತಾಂತರಗೊಳ್ಳಿಸುವುದಕ್ಕಾಗಿ ಭೂಮಿಯನ್ನೂ ಸಮುದ್ರವನ್ನೂ ಸುತ್ತಾಡಿಕೊಂಡು ಬರುತ್ತೀರಿ; ಅವನು ನಿಮ್ಮ ಮತಕ್ಕೆ ಸೇರಿದ ಮೇಲೆ ಅವನನ್ನು ನಿಮಗಿಂತ ಎರಡರಷ್ಟು ನರಕಕ್ಕೆ ಪಾತ್ರನಾಗಮಾಡುತ್ತೀರಿ. 16“ಅಯ್ಯೋ, ಕುರುಡು ಮಾರ್ಗದರ್ಶಿಗಳೇ, ‘ಒಬ್ಬನು ದೇವಾಲಯದ ಮೇಲೆ ಆಣೆಯಿಟ್ಟುಕೊಂಡರೆ ಅದೇನು ಆಣೆಯಲ್ಲ ಅನ್ನುತ್ತೀರಿ. ಆದರೆ ಒಬ್ಬನು ದೇವಾಲಯದ ಚಿನ್ನದ ಮೇಲೆ ಆಣೆಯಿಟ್ಟುಕೊಂಡರೆ ಅದನ್ನು ನಡಿಸಲೇಬೇಕು’ ಎಂದು ಹೇಳುತ್ತೀರಿ. 17ಕುರುಡರೇ, ಮೂರ್ಖರೇ, ಯಾವುದು ಹೆಚ್ಚಿನದು? ಚಿನ್ನವೋ, ಚಿನ್ನವನ್ನು ಪ್ರತಿಷ್ಠೆ ಮಾಡುವ ದೇವಾಲಯವೋ? 18ಮತ್ತು ‘ಒಬ್ಬನು ಯಜ್ಞವೇದಿಯ ಮೇಲೆ ಆಣೆಯಿಟ್ಟುಕೊಂಡರೆ ಅದೇನು ಆಣೆಯಲ್ಲ ಅನ್ನುತ್ತೀರಿ, ಆದರೆ ಅದರಲ್ಲಿರುವ ಕಾಣಿಕೆಯ ಮೇಲೆ ಆಣೆಯಿಟ್ಟುಕೊಂಡರೆ ಅದನ್ನು ನಡಿಸಲೇಬೇಕು’ ಎಂದು ಹೇಳುತ್ತೀರಿ. 19ಕುರುಡರೇ, ಮೂರ್ಖರೇ, ಯಾವುದು ಹೆಚ್ಚಿನದು? ಕಾಣಿಕೆಯೋ, ಆ ಕಾಣಿಕೆಯನ್ನು ಪ್ರತಿಷ್ಠೆ ಮಾಡುವ ಯಜ್ಞವೇದಿಯೋ? 20ಹೀಗಿರುವುದರಿಂದ ಯಾವನಾದರೂ ಯಜ್ಞವೇದಿಯ ಮೇಲೆ ಆಣೆಯಿಟ್ಟುಕೊಂಡರೆ ಅದರ ಮೇಲೆಯೂ, ಅದರಲ್ಲಿರುವ ಎಲ್ಲದರ ಮೇಲೆಯೂ ಆಣೆಯಿಟ್ಟುಕೊಂಡ ಹಾಗಾಯಿತು. 21ಮತ್ತು ಯಾವನಾದರೂ ದೇವಾಲಯದ ಮೇಲೆ ಆಣೆಯಿಟ್ಟುಕೊಂಡರೆ ಅದರ ಮೇಲೆಯೂ, ಅದರಲ್ಲಿ ವಾಸಮಾಡುವಾತನ ಮೇಲೆಯೂ ಆಣೆಯಿಟ್ಟುಕೊಂಡ ಹಾಗಾಯಿತು. 22ಮತ್ತು ಪರಲೋಕದ ಮೇಲೆ ಆಣೆಯಿಟ್ಟುಕೊಂಡರೆ ದೇವರ ಸಿಂಹಾಸನದ ಮೇಲೆಯೂ ಅದರಲ್ಲಿ ಕುಳಿತಿರುವಾತನ ಮೇಲೆಯೂ ಆಣೆಯಿಟ್ಟುಕೊಂಡ ಹಾಗಾಯಿತು.

ಇಂದಿನ ಸಂತರು

ಸಾಮಾನ್ಯ ರೋಮನ್ ಪಂಚಾಂಗ; ಬಿಷಪರ ಸಮ್ಮೇಳನವು ಕೆಲವು ಹಬ್ಬಗಳನ್ನು (ಪ್ರಭುವಿನ ಪ್ರಕಟನೆ, ಸ್ವರ್ಗಾರೋಹಣ, ಕ್ರಿಸ್ತನ ದೇಹ ಮತ್ತು ರಕ್ತ) ಭಾನುವಾರಕ್ಕೆ ಸರಿಸಬಹುದು ಅಥವಾ ತನ್ನದೇ ಹಬ್ಬಗಳನ್ನು ಸೇರಿಸಬಹುದು. ವಾಚನ ಸಂಗ್ರಹ: ಭಾನುವಾರದ ಚಕ್ರ B, ವಾರದ ದಿನಗಳ ವರ್ಷ I.

ಮೂಲಗಳು: ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ · © 2017, 2019 Bridge Connectivity Solutions, CC BY-SA 4.0; changed: footnotes, headings and the letters over Psalm 119 left out, verses in the app's numbering. · ಮೂಲಗಳು ಮತ್ತು ಹಕ್ಕುಗಳು