Bible Explorer ಆ್ಯಪ್ ಪಡೆಯಿರಿ

ಮುಖಪುಟ › ದೈನಂದಿನ ಬೈಬಲ್ ವಾಚನಗಳು › ಆಗಸ್ಟ್ 2027 › 23 ಆಗಸ್ಟ್

ಆರ್ಥೊಡಾಕ್ಸ್ ಪಂಚಾಂಗ · ಆಗಸ್ಟ್ 10 (ಹಳೆಯ ಪದ್ಧತಿ)

ಆರ್ಥೊಡಾಕ್ಸ್ ದೈನಂದಿನ ವಾಚನಗಳು — 23 ಆಗಸ್ಟ್ 2027

ಸೋಮವಾರ · ಪಂಚಾಶತ್ತಮದ ನಂತರದ 10ನೇ ವಾರ · ಸ್ವರ 8

ಹಬ್ಬಗಳು ಮತ್ತು ಸಂತರು

Afterfeast of the Transfiguration of the Lord

ದೇವಮಾತೆಯ ನಿದ್ರಾಗಮನದ ಉಪವಾಸ

ಕಟ್ಟುನಿಟ್ಟಿನ ಉಪವಾಸ (ಒಣ ಆಹಾರ: ರೊಟ್ಟಿ, ತರಕಾರಿ, ಹಣ್ಣು)

ಇದು ಮಠದ ನಿಯಮವನ್ನು ಅನುಸರಿಸುತ್ತದೆ. ಸಭೆಯಲ್ಲಿ ಉಪವಾಸದ ಪ್ರಮಾಣವನ್ನು ಆರೋಗ್ಯ, ವಯಸ್ಸು ಮತ್ತು ಸಂದರ್ಭಗಳಿಗೆ ಅನುಗುಣವಾಗಿ ಪಾಪನಿವೇದನೆಯ ಗುರುವಿನೊಂದಿಗೆ ಸೇರಿ ನಿರ್ಧರಿಸಲಾಗುತ್ತದೆ.

ದಿನದ ವಾಚನಗಳು

ಪತ್ರಿಕೆ

1 ಕೊರಿ 15:12–19

12ಕ್ರಿಸ್ತನು ಸತ್ತವರೊಳಗಿಂದ ಎಬ್ಬಿಸಲ್ಪಟ್ಟನೆಂದು ಸಾರುತ್ತಿರುವಲ್ಲಿ, ನಿಮ್ಮೊಳಗೆ ಕೆಲವರು ಸತ್ತವರಿಗೆ ಪುನರುತ್ಥಾನವೇ ಇಲ್ಲವೆಂದು ಹೇಳುವುದಾದರೂ ಹೇಗೆ? 13ಸತ್ತವರಿಗೆ ಪುನರುತ್ಥಾನವಿಲ್ಲವೆಂಬುದು ನಿಜವಾಗಿದ್ದರೆ ಕ್ರಿಸ್ತನು ಸಹ ಎದ್ದುಬರಲಿಲ್ಲ. 14ಕ್ರಿಸ್ತನೂ ಎದ್ದುಬರಲಿಲ್ಲವಾದರೆ ನಮ್ಮ ಬೋಧನೆಯು ವ್ಯರ್ಥ ಮತ್ತು ನಿಮ್ಮ ನಂಬಿಕೆಯು ಸಹ ವ್ಯರ್ಥವಾದದ್ದು. 15ಇದಲ್ಲದೆ ಸತ್ತವರು ಎದ್ದುಬರುವುದಿಲ್ಲವೆಂಬುದು ನಿಜವಾಗಿದ್ದ ಪಕ್ಷದಲ್ಲಿ ದೇವರು ಕ್ರಿಸ್ತನನ್ನು ಎಬ್ಬಿಸಲೇ ಇಲ್ಲ; ಎಬ್ಬಿಸಿದನೆಂದು ಸಾಕ್ಷಿಕೊಟ್ಟ ನಾವು ದೇವರ ವಿಷಯವಾಗಿ ಸುಳ್ಳುಸಾಕ್ಷಿ ಹೇಳಿದವರಾಗಿ ಕಂಡುಬಂದೆವು. 16ಸತ್ತವರು ಎದ್ದು ಬರುವುದಿಲ್ಲವಾದರೆ ಕ್ರಿಸ್ತನೂ ಎದ್ದು ಬರಲಿಲ್ಲ. 17ಕ್ರಿಸ್ತನು ಎದ್ದುಬರಲಿಲ್ಲವಾದರೆ ನಿಮ್ಮ ನಂಬಿಕೆಯು ನಿರರ್ಥಕವಾಗಿದೆ, ಹಾಗೂ ನೀವು ಇನ್ನೂ ನಿಮ್ಮ ಪಾಪಗಳಲ್ಲಿಯೇ ಇದ್ದೀರಿ. 18ಇದು ಮಾತ್ರವಲ್ಲದೆ ಕ್ರಿಸ್ತನಲ್ಲಿ ನಿದ್ರೆಹೋದವರು ನಾಶವಾದರು ಎಂದರ್ಥ. 19ಕ್ರಿಸ್ತನಲ್ಲಿ ನಮಗಿರುವ ನಿರೀಕ್ಷೆಯು ಕೇವಲ ಈ ಬದುಕಿಗೆ ಮಾತ್ರ ಸೀಮಿತವಾಗಿದ್ದರೆ ನಾವು ಎಲ್ಲಾ ಮನುಷ್ಯರಿಗಿಂತಲೂ ಹೀನರಾಗುತ್ತೇವೆ.

ಸುವಾರ್ತೆ

ಮತ್ತಾ 21:18–22

18ಬೆಳಗ್ಗೆ ಯೇಸು ಪಟ್ಟಣಕ್ಕೆ ಹಿಂತಿರುಗಿ ಬರುತ್ತಿರುವಾಗ ಹಸಿದಿದ್ದನು. 19ದಾರಿಯಲ್ಲಿ ಒಂದು ಅಂಜೂರದ ಮರವನ್ನು ಕಂಡು ಅದರ ಹತ್ತಿರಕ್ಕೆ ಹೋಗಿ ಅದರಲ್ಲಿ ಬರೀ ಎಲೆಗಳು ಮಾತ್ರ ಇರುವುದನ್ನು ಕಂಡು ಅದಕ್ಕೆ, “ಇನ್ನು ಮೇಲೆ ನಿನ್ನಲ್ಲಿ ಎಂದೆಂದಿಗೂ ಫಲವು ಫಲಿಸದೆ ಹೋಗಲಿ” ಎಂದು ಹೇಳಿದನು. ಆ ಕ್ಷಣವೇ ಆ ಅಂಜೂರದ ಮರವು ಒಣಗಿಹೋಯಿತು. 20ಶಿಷ್ಯರು ಅದನ್ನು ನೋಡಿ ಬೆರಗಾಗಿ, “ಈ ಅಂಜೂರದ ಮರವು ಒಂದು ಕ್ಷಣದಲ್ಲೇ ಒಣಗಿಹೋಯಿತಲ್ಲಾ” ಎಂದು ಆಶ್ಚರ್ಯಗೊಂಡರು. 21ಅದಕ್ಕೆ ಯೇಸು, “ನಿಮಗೆ ಸತ್ಯವಾಗಿ ಹೇಳುತ್ತೇನೆ ನೀವು ಸಂಶಯಪಡದೆ ನಂಬಿದರೆ ಈ ಅಂಜೂರದ ಮರಕ್ಕೆ ಮಾಡಿದಂಥದನ್ನು ನೀವು ಮಾಡುವಿರಿ ಮಾತ್ರವಲ್ಲದೆ ಈ ಬೆಟ್ಟಕ್ಕೆ, ‘ನೀನು ಕಿತ್ತುಕೊಂಡು ಹೋಗಿ ಸಮುದ್ರದಲ್ಲಿ ಬೀಳು’ ಎಂದು ಹೇಳಿದರೆ ಅದೂ ಆಗುವುದು. 22ನೀವು ನಂಬಿಕೊಂಡು ಪ್ರಾರ್ಥನೆಯಲ್ಲಿ ಏನೇನು ಬೇಡಿಕೊಳ್ಳುವಿರೋ ಅದನ್ನೆಲ್ಲಾ ಹೊಂದುವಿರಿ” ಅಂದನು.

ದಿನಾಂಕಗಳು ರಷ್ಯನ್ ಸಭೆಯ ಜೂಲಿಯನ್ ಪಂಚಾಂಗದ ಪ್ರಕಾರ ಇವೆ (ಸರ್ಬಿಯನ್ ಮತ್ತು ಜಾರ್ಜಿಯನ್ ಸಭೆಗಳು ಮತ್ತು ಅಥೋಸ್ ಪರ್ವತದಂತೆ): ಸಭೆಯ ಪಂಚಾಂಗದ 10 ಆಗಸ್ಟ್ ಎಂದರೆ ನಾಗರಿಕ ಪಂಚಾಂಗದ 23 ಆಗಸ್ಟ್. ಹೊಸ ಪಂಚಾಂಗದ ಸಭೆಗಳು (ಗ್ರೀಸ್, ರೊಮೇನಿಯಾ, ಬಲ್ಗೇರಿಯಾ, ಉಕ್ರೇನ್…) ನಿಗದಿತ ದಿನಾಂಕದ ಹಬ್ಬಗಳನ್ನೂ ಸಂತರನ್ನೂ ಅದೇ ನಾಗರಿಕ ದಿನಾಂಕದಂದು, 13 ದಿನಗಳ ಮುಂಚೆ, ಆಚರಿಸುತ್ತವೆ, ಮತ್ತು ಅವುಗಳ ಕೆಲವು ವಾಚನಗಳು ಬೇರೆಯಾಗಿವೆ; ಈಸ್ಟರ್ ಮತ್ತು ಅದನ್ನು ಅವಲಂಬಿಸಿರುವ ದಿನಗಳು ಒಂದೇ ಆಗಿವೆ.

ಮೂಲಗಳು: ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ · © 2017, 2019 Bridge Connectivity Solutions, CC BY-SA 4.0; changed: footnotes, headings and the letters over Psalm 119 left out, verses in the app's numbering. · ಮೂಲಗಳು ಮತ್ತು ಹಕ್ಕುಗಳು