ಮುಖಪುಟ › ದೈನಂದಿನ ಬೈಬಲ್ ವಾಚನಗಳು › ಆಗಸ್ಟ್ 2027 › 24 ಆಗಸ್ಟ್
ಆರ್ಥೊಡಾಕ್ಸ್ ಪಂಚಾಂಗ · ಆಗಸ್ಟ್ 11 (ಹಳೆಯ ಪದ್ಧತಿ)
ಆರ್ಥೊಡಾಕ್ಸ್ ದೈನಂದಿನ ವಾಚನಗಳು — 24 ಆಗಸ್ಟ್ 2027
ಮಂಗಳವಾರ · ಪಂಚಾಶತ್ತಮದ ನಂತರದ 10ನೇ ವಾರ · ಸ್ವರ 8
ಹಬ್ಬಗಳು ಮತ್ತು ಸಂತರು
Afterfeast of the Transfiguration of the Lord
ದೇವಮಾತೆಯ ನಿದ್ರಾಗಮನದ ಉಪವಾಸ
ಉಪವಾಸ: ಎಣ್ಣೆಯಿಲ್ಲದ ಬೇಯಿಸಿದ ಆಹಾರ
ಇದು ಮಠದ ನಿಯಮವನ್ನು ಅನುಸರಿಸುತ್ತದೆ. ಸಭೆಯಲ್ಲಿ ಉಪವಾಸದ ಪ್ರಮಾಣವನ್ನು ಆರೋಗ್ಯ, ವಯಸ್ಸು ಮತ್ತು ಸಂದರ್ಭಗಳಿಗೆ ಅನುಗುಣವಾಗಿ ಪಾಪನಿವೇದನೆಯ ಗುರುವಿನೊಂದಿಗೆ ಸೇರಿ ನಿರ್ಧರಿಸಲಾಗುತ್ತದೆ.
ದಿನದ ವಾಚನಗಳು
ಪತ್ರಿಕೆ
29ಸತ್ತವರಿಗೆ ಪುನರುತ್ಥಾನವಿಲ್ಲವಾದರೆ ಸತ್ತವರಿಗೋಸ್ಕರ ದೀಕ್ಷಾಸ್ನಾನ ಮಾಡಿಸಿಕೊಳ್ಳುವವರು ಏನು ಮಾಡುವರು? ಸತ್ತವರು ಎದ್ದು ಬರುವುದೇ ಇಲ್ಲ ಎನ್ನುವುದು ನಿಜವಾಗಿದ್ದರೆ ಯಾಕೆ ಅವರಿಗೋಸ್ಕರ ದೀಕ್ಷಾಸ್ನಾನ ಮಾಡಿಸಿಕೊಳ್ಳುತ್ತಾರೆ. 30ನಾವು ಸಹ ಯಾಕೆ ಪ್ರತಿ ಗಳಿಗೆಯಲ್ಲಿಯೂ ಭಯದಲ್ಲಿದ್ದೇವೆ? 31ಪ್ರಿಯರೇ, ನಮ್ಮ ಕರ್ತನಾದ ಕ್ರಿಸ್ತ ಯೇಸುವಿನಲ್ಲಿ ನಿಮ್ಮನ್ನು ಕುರಿತಾಗಿ ನನಗಿರುವ ಹೆಮ್ಮೆಯ ನಿಮಿತ್ತ ನಾನು ದಿನಾಲು ಸಾಯುತ್ತಲಿದ್ದೇನೆ ಎಂದು ಹೇಳುತ್ತೇನೆ. 32ನಾನು ಎಫೆಸದಲ್ಲಿ ಮೃಗ ಯುದ್ಧ ಮಾಡಿದ್ದು ಕೇವಲ ಮಾನುಷಾಭಿಪ್ರಾಯದಿಂದಾದರೆ ನನಗೇನು ಪ್ರಯೋಜನ? ಸತ್ತವರು ಎದ್ದು ಬರುವುದಿಲ್ಲವಾದರೆ, ನಾವು ತಿನ್ನೋಣ, ಕುಡಿಯೋಣ, ನಾಳೆ ಸಾಯುತ್ತೇವಲ್ಲಾ. 33ಮೋಸಹೋಗಬೇಡಿರಿ; “ಕೆಟ್ಟ ಸಹವಾಸವು ಸದಾಚಾರವನ್ನು ಕೆಡಿಸುತ್ತವೆ.” 34ಗಂಭೀರವಾಗಿ ಯೋಚಿಸಿರಿ! ನೀತಿವಂತರಾಗಿ ಎಚ್ಚರದಿಂದಿರಿ. ಪಾಪಮಾಡಬೇಡಿರಿ. ಕೆಲವರಿಗೆ ದೇವರ ಕುರಿತಾಗಿ ಜ್ಞಾನವೇ ಇಲ್ಲ; ನಿಮಗೆ ನಾಚಿಕೆ ಆಗಲೆಂದೇ ಇದನ್ನು ಹೇಳುತ್ತಿದ್ದೇನೆ. 35“ಸತ್ತವರನ್ನು ಮರಳಿ ಜೀವಂತರಾಗಿಸುವುದು ಹೇಗೆ ಸಾಧ್ಯ? ಎಂಥ ದೇಹದಿಂದ ಎದ್ದುಬರುತ್ತಾರೆ?” ಎಂದು ಯಾರಾದರೂ ಪ್ರಶ್ನಿಸಬಹುದು. 36ಮೂರ್ಖನೇ; ನೀನು ಬಿತ್ತುವ ಬೀಜವು ಸಾಯದಿದ್ದರೆ, ಅದು ಜೀವ ತಾಳುವುದುಂಟೆ? ಇಲ್ಲ. 37ನೋಡು; ಒಂದು ವೇಳೆ ಗೋದಿಯಕಾಳನ್ನಾಗಲಿ ಬೇರೆ ಯಾವುದೇ ಬೀಜವನ್ನಾಗಲಿ ಬಿತ್ತುವಾಗ ಬರೀ ಕಾಳನ್ನೇ ಹೊರತು ಮುಂದೆ ಬೆಳೆಯಬೇಕಾದ ಗಿಡವನ್ನು ಬಿತ್ತುವುದಿಲ್ಲ. 38ಆದರೆ ದೇವರು ತನ್ನ ಇಷ್ಟದಂತೆ ಅದಕ್ಕೆ ದೇಹವನ್ನು ಕೊಡುತ್ತಾನೆ. ಒಂದೊಂದು ಬೀಜಕ್ಕೂ ಅದಕ್ಕೆ ತಕ್ಕ ದೇಹವನ್ನು ಕೊಡುತ್ತಾನೆ.
ಸುವಾರ್ತೆ
23ತರುವಾಯ ಯೇಸು ದೇವಾಲಯಕ್ಕೆ ಬಂದು ಬೋಧಿಸುತ್ತಿರುವಾಗ ಮುಖ್ಯಯಾಜಕರೂ ಜನರ ಹಿರಿಯರೂ ಆತನ ಬಳಿಗೆ ಬಂದು, “ನೀನು ಯಾವ ಅಧಿಕಾರದಿಂದ ಇದನ್ನೆಲ್ಲಾ ಮಾಡುತ್ತಿರುವೆ? ಈ ಅಧಿಕಾರವನ್ನು ನಿನಗೆ ಕೊಟ್ಟವರು ಯಾರು?” ಎಂದು ಕೇಳಿದರು. 24ಯೇಸು ಅವರಿಗೆ ಹೇಳಿದ್ದೇನೆಂದರೆ, “ನಾನೂ ಸಹ ನಿಮ್ಮನ್ನು ಒಂದು ಪ್ರಶ್ನೆ ಕೇಳುತ್ತೇನೆ; ಅದಕ್ಕೆ ನೀವು ನನಗೆ ಉತ್ತರಿಸಿದರೆ ಆಗ ನಾನು ಯಾವ ಅಧಿಕಾರದಿಂದ ಇದನ್ನು ಮಾಡುತ್ತೇನೆಂಬುದನ್ನು ನಿಮಗೆ ಹೇಳುತ್ತೇನೆ. 25ದೀಕ್ಷಾಸ್ನಾನ ಮಾಡಿಸುವ ಅಧಿಕಾರವು ಯೋಹಾನನಿಗೆ ಎಲ್ಲಿಂದ ಬಂದಿತು ಪರಲೋಕದಿಂದಲೋ ಅಥವಾ ಮನುಷ್ಯರಿಂದಲೋ?” ಅಂದನು. ಆಗ ಅವರು, “‘ಪರಲೋಕದಿಂದ ಬಂದಿತೆಂದು’ ನಾವು ಹೇಳಿದರೆ, ‘ಹಾಗಾದರೆ ನೀವು ಅವನನ್ನು ಏಕೆ ನಂಬಲಿಲ್ಲ’ ಎಂದು ನಮಗೆ ಕೇಳಿಯಾನು; 26‘ಮನುಷ್ಯರಿಂದ ಬಂದಿತೆಂದು’ ಹೇಳಿದರೆ, ನಮಗೆ ಜನರ ಭಯವಿದೆ ಯೋಹಾನನು ಪ್ರವಾದಿಯೆಂದು ಎಲ್ಲರೂ ಒಪ್ಪಿಕೊಂಡಿದ್ದಾರಲ್ಲಾ” ಎಂಬುದಾಗಿ ತಮ್ಮತಮ್ಮೊಳಗೆ ಮಾತನಾಡಿಕೊಳ್ಳುತ್ತಿದ್ದರು. 27ಅನಂತರ ಅವರು, “ನಾವರಿಯೆವು” ಎಂದು ಯೇಸುವಿಗೆ ಉತ್ತರಕೊಟ್ಟರು. ಆಗ ಆತನು ಅವರಿಗೆ, “ಯಾವ ಅಧಿಕಾರದಿಂದ ಇದನ್ನೆಲ್ಲಾ ಮಾಡುತ್ತೇನೋ ಅದನ್ನು ನಾನು ಸಹ ನಿಮಗೆ ಹೇಳುವುದಿಲ್ಲ.
ದಿನಾಂಕಗಳು ರಷ್ಯನ್ ಸಭೆಯ ಜೂಲಿಯನ್ ಪಂಚಾಂಗದ ಪ್ರಕಾರ ಇವೆ (ಸರ್ಬಿಯನ್ ಮತ್ತು ಜಾರ್ಜಿಯನ್ ಸಭೆಗಳು ಮತ್ತು ಅಥೋಸ್ ಪರ್ವತದಂತೆ): ಸಭೆಯ ಪಂಚಾಂಗದ 11 ಆಗಸ್ಟ್ ಎಂದರೆ ನಾಗರಿಕ ಪಂಚಾಂಗದ 24 ಆಗಸ್ಟ್. ಹೊಸ ಪಂಚಾಂಗದ ಸಭೆಗಳು (ಗ್ರೀಸ್, ರೊಮೇನಿಯಾ, ಬಲ್ಗೇರಿಯಾ, ಉಕ್ರೇನ್…) ನಿಗದಿತ ದಿನಾಂಕದ ಹಬ್ಬಗಳನ್ನೂ ಸಂತರನ್ನೂ ಅದೇ ನಾಗರಿಕ ದಿನಾಂಕದಂದು, 13 ದಿನಗಳ ಮುಂಚೆ, ಆಚರಿಸುತ್ತವೆ, ಮತ್ತು ಅವುಗಳ ಕೆಲವು ವಾಚನಗಳು ಬೇರೆಯಾಗಿವೆ; ಈಸ್ಟರ್ ಮತ್ತು ಅದನ್ನು ಅವಲಂಬಿಸಿರುವ ದಿನಗಳು ಒಂದೇ ಆಗಿವೆ.
ಮೂಲಗಳು: ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ · © 2017, 2019 Bridge Connectivity Solutions, CC BY-SA 4.0; changed: footnotes, headings and the letters over Psalm 119 left out, verses in the app's numbering. · ಮೂಲಗಳು ಮತ್ತು ಹಕ್ಕುಗಳು