ಮುಖಪುಟ › ದೈನಂದಿನ ಬೈಬಲ್ ವಾಚನಗಳು › ಆಗಸ್ಟ್ 2027 › 25 ಆಗಸ್ಟ್
ಕ್ಯಾಥೊಲಿಕ್ ಪಂಚಾಂಗ
ದೈನಂದಿನ ಬೈಬಲ್ ವಾಚನಗಳು (ಕಥೋಲಿಕ) — 25 ಆಗಸ್ಟ್ 2027
ಬುಧವಾರ · ಸಾಮಾನ್ಯ ಕಾಲದ 21ನೇ ವಾರ
ಹಬ್ಬಗಳು ಮತ್ತು ಸಂತರು
ಸಾಮಾನ್ಯ ಕಾಲದ 21ನೇ ವಾರದ ಬುಧವಾರ
ಐಚ್ಛಿಕ ಸ್ಮರಣೆ · ಆರಾಧನಾ ಬಣ್ಣ: ಹಸಿರು
ಕಲಸಾನ್ಸ್ನ ಸಂತ ಜೋಸೆಫ್, ಧರ್ಮಗುರು · ಐಚ್ಛಿಕ ಸ್ಮರಣೆ
ಸಂತ ಲೂಯಿ · ಐಚ್ಛಿಕ ಸ್ಮರಣೆ
ದಿನದ ವಾಚನಗಳು
ಮೊದಲನೆಯ ವಾಚನ
9ಸಹೋದರರೇ, ನಾವು ನಿಮ್ಮಲ್ಲಿ ಯಾರಿಗೂ ಹೊರೆಯಾಗಬಾರದೆಂದು ಹಗಲಿರುಳು ದುಡಿಯುತ್ತಾ ದೇವರ ಸುವಾರ್ತೆಯನ್ನು ನಿಮಗೆ ಸಾರಿದೆವು. ಆ ನಮ್ಮ ಕಷ್ಟವೂ ಪ್ರಯಾಸಗಳು ನಿಮ್ಮ ನೆನಪಿನಲ್ಲಿರಲಿ. 10ನಂಬುವವರಾದ ನಿಮ್ಮ ವಿಷಯದಲ್ಲಿ ನಾವು ಎಷ್ಟೋ ನಿರ್ಮಲರಾಗಿಯೂ ನೀತಿವಂತರಾಗಿಯೂ ನಿರ್ದೋಷಿಗಳಾಗಿಯೂ ನಡೆದುಕೊಂಡೆವೆಂಬುದಕ್ಕೆ ನೀವು ಮತ್ತು ದೇವರೂ ಸಾಕ್ಷಿಗಳಾಗಿದ್ದೀರಿ. 11ತಂದೆಯು ತನ್ನ ಮಕ್ಕಳಿಗೆ ಹೇಗೋ ಹಾಗೆಯೇ ನಾವು ನಿಮ್ಮಲ್ಲಿ ಪ್ರತಿಯೊಬ್ಬರಿಗೂ ಬುದ್ಧಿ ಹೇಳುತ್ತಾ, 12ಧೈರ್ಯಪಡಿಸುತ್ತಾ ತನ್ನ ರಾಜ್ಯದಲ್ಲಿ ಮತ್ತು ಆತನ ಮಹಿಮೆಯಲ್ಲಿ ಪಾಲುಗಾರರಾಗುವುದಕ್ಕಾಗಿ ಕರೆಯುವ ದೇವರಿಗೆ ತಕ್ಕಹಾಗೆ ಯೋಗ್ಯರಾಗಿ ನೀವು ಜೀವಿಸಬೇಕೆಂದು ವಿಧಿಸಿದೆವೆಂಬುದು ನಿಮಗೇ ತಿಳಿದಿದೆ. 13ಹೀಗಿರಲಾಗಿ ನೀವು ದೇವರ ವಾಕ್ಯವನ್ನು ನಮ್ಮಿಂದ ಕೇಳಿದಾಗ ಅದನ್ನು ಮನುಷ್ಯರ ವಾಕ್ಯವೆಂದೆಣಿಸದೆ ದೇವರ ವಾಕ್ಯವೆಂದೇ ತಿಳಿದು ಅಂಗೀಕರಿಸಿದ್ದಕ್ಕಾಗಿ ನಾವಂತೂ ಎಡೆಬಿಡದೆ ದೇವರಿಗೆ ಕೃತಜ್ಞತಾಸ್ತುತಿ ಮಾಡುತ್ತೇವೆ. ಅದು ಸತ್ಯವಾಗಿ ದೇವರ ವಾಕ್ಯವೇ. ಆ ವಾಕ್ಯವು, ನಂಬುವವರಾದ ನಿಮ್ಮೊಳಗೆ ಕೆಲಸ ಮಾಡುತ್ತದೆ.
ಪ್ರತಿವಚನ ಕೀರ್ತನೆ
7ನಾನು ನಿನ್ನ ಆತ್ಮಕ್ಕೆ ತಪ್ಪಿಸಿಕೊಳ್ಳುವಂತೆ ಎಲ್ಲಿಗೆ ಹೋಗಲಿ? ನಿನ್ನ ಕಣ್ಣಿಗೆ ಮರೆಯಾಗುವಂತೆ ಎಲ್ಲಿಗೆ ಓಡಲಿ? 8ಮೇಲಣ ಲೋಕಕ್ಕೆ ಏರಿಹೋದರೆ ಅಲ್ಲಿ ನೀನಿರುತ್ತಿ, ಪಾತಾಳಕ್ಕೆ ಹೋಗಿ ಮಲಗಿಕೊಂಡೇನೆಂದರೆ ಅಲ್ಲಿಯೂ ನೀನಿರುವಿ. 9ಅರುಣನ ರೆಕ್ಕೆಗಳನ್ನು ಕಟ್ಟಿಕೊಂಡು ಹಾರಿಹೋಗಿ, ಸಮುದ್ರದ ಕಟ್ಟಕಡೆಯಲ್ಲಿ ವಾಸಮಾಡಲು ಪ್ರಯತ್ನಿಸಿದರೆ, 10ಅಲ್ಲಿಯೂ ನಿನ್ನ ಕೈ ನನ್ನನ್ನು ನಡೆಸುವುದು; ನಿನ್ನ ಬಲಗೈ ನನ್ನನ್ನು ಹಿಡಿದಿರುವುದು. 11ಕಾರ್ಗತ್ತಲೆಯು ನನ್ನನ್ನು ಕವಿಯುವುದು, “ಹಗಲು ಹೋಗಿ ನನ್ನ ಸುತ್ತಲು ಇರುಳಾಗುವುದು” ಎಂದು ಹೇಳಿಕೊಂಡರೇನು? 12ನಿನಗೆ ಕತ್ತಲೆಯು ಕತ್ತಲೆಯಲ್ಲ; ಇರುಳು ಹಗಲಾಗಿಯೇ ಇರುತ್ತದೆ, ಕತ್ತಲು ಬೆಳಕುಗಳೆರಡೂ ನಿನಗೆ ಒಂದೇ.
ಸುವಾರ್ತೆ
27“ಅಯ್ಯೋ, ಕಪಟಿಗಳಾದ ಶಾಸ್ತ್ರಿಗಳೇ, ಫರಿಸಾಯರೇ ನೀವು ಸುಣ್ಣಾ ಹಚ್ಚಿದ ಸಮಾಧಿಗಳಿಗೆ ಹೋಲಿಕೆಯಾಗಿದ್ದೀರಿ; ಇವು ಹೊರಗೆ ಸುಂದರವಾಗಿ ಕಾಣುತ್ತವೆ. ಒಳಗೆ ನೋಡಿದರೆ ಸತ್ತವರ ಎಲುಬುಗಳಿಂದಲೂ ಎಲ್ಲಾ ಹೊಲಸಿನಿಂದಲೂ ತುಂಬಿರುತ್ತವೆ. 28ಹಾಗೆಯೇ ನೀವು ಸಹ ಹೊರಗೆ ಜನರಿಗೆ ನೀತಿವಂತರಂತೆ ಕಾಣಿಸಿಕೊಳ್ಳುತ್ತೀರಿ. ಆದರೆ ಒಳಗೆ ಕಪಟ ಮತ್ತು ಅಕ್ರಮದಿಂದ ತುಂಬಿದವರಾಗಿದ್ದೀರಿ. 29ಅಯ್ಯೋ, ಕಪಟಿಗಳಾದ ಶಾಸ್ತ್ರಿಗಳೇ, ಫರಿಸಾಯರೇ, ನೀವು ಪ್ರವಾದಿಗಳ ಸಮಾಧಿಗಳನ್ನು ಕಟ್ಟಿ, ನೀತಿವಂತರ ಗೋರಿಗಳನ್ನು ಅಲಂಕರಿಸಿ, 30‘ನಾವು ನಮ್ಮ ಹಿರಿಯರ ಕಾಲದಲ್ಲಿ ಇದ್ದಿದ್ದರೆ ಪ್ರವಾದಿಗಳನ್ನು ಕೊಂದ ಪಾಪದಲ್ಲಿ ಪಾಲುಗಾರರಾಗುತ್ತಿರಲಿಲ್ಲ’ ಅನ್ನುತ್ತೀರಿ. 31ಹಾಗಾದರೆ ನೀವು ಪ್ರವಾದಿಗಳನ್ನು ಕೊಂದವರ ಮಕ್ಕಳೇ ಹೌದು ಎಂಬುದಕ್ಕೆ ನಿಮಗೆ ನೀವೇ ಸಾಕ್ಷಿಗಳಾಗಿದ್ದೀರಿ. 32ಒಳ್ಳೆಯದು, ನೀವು ನಿಮ್ಮ ಹಿರಿಯರ ಪಾಪದ ಅಳತೆಯನ್ನು ಪೂರ್ತಿಮಾಡುತ್ತೀರಿ.
ಇಂದಿನ ಸಂತರು
- ಕಲಸಾನ್ಸ್ನ ಸಂತ ಜೋಸೆಫ್, ಧರ್ಮಗುರು
- ಸಂತ ಲೂಯಿ
ಸಾಮಾನ್ಯ ರೋಮನ್ ಪಂಚಾಂಗ; ಬಿಷಪರ ಸಮ್ಮೇಳನವು ಕೆಲವು ಹಬ್ಬಗಳನ್ನು (ಪ್ರಭುವಿನ ಪ್ರಕಟನೆ, ಸ್ವರ್ಗಾರೋಹಣ, ಕ್ರಿಸ್ತನ ದೇಹ ಮತ್ತು ರಕ್ತ) ಭಾನುವಾರಕ್ಕೆ ಸರಿಸಬಹುದು ಅಥವಾ ತನ್ನದೇ ಹಬ್ಬಗಳನ್ನು ಸೇರಿಸಬಹುದು. ವಾಚನ ಸಂಗ್ರಹ: ಭಾನುವಾರದ ಚಕ್ರ B, ವಾರದ ದಿನಗಳ ವರ್ಷ I.
ಮೂಲಗಳು: ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ · © 2017, 2019 Bridge Connectivity Solutions, CC BY-SA 4.0; changed: footnotes, headings and the letters over Psalm 119 left out, verses in the app's numbering. · ಮೂಲಗಳು ಮತ್ತು ಹಕ್ಕುಗಳು