Bible Explorer ಆ್ಯಪ್ ಪಡೆಯಿರಿ

ಮುಖಪುಟ › ದೈನಂದಿನ ಬೈಬಲ್ ವಾಚನಗಳು › ಆಗಸ್ಟ್ 2027 › 25 ಆಗಸ್ಟ್

ಆರ್ಥೊಡಾಕ್ಸ್ ಪಂಚಾಂಗ · ಆಗಸ್ಟ್ 12 (ಹಳೆಯ ಪದ್ಧತಿ)

ಆರ್ಥೊಡಾಕ್ಸ್ ದೈನಂದಿನ ವಾಚನಗಳು — 25 ಆಗಸ್ಟ್ 2027

ಬುಧವಾರ · ಪಂಚಾಶತ್ತಮದ ನಂತರದ 10ನೇ ವಾರ · ಸ್ವರ 8

ಹಬ್ಬಗಳು ಮತ್ತು ಸಂತರು

Afterfeast of the Transfiguration of the Lord

ದೇವಮಾತೆಯ ನಿದ್ರಾಗಮನದ ಉಪವಾಸ

ಕಟ್ಟುನಿಟ್ಟಿನ ಉಪವಾಸ (ಒಣ ಆಹಾರ: ರೊಟ್ಟಿ, ತರಕಾರಿ, ಹಣ್ಣು)

ಇದು ಮಠದ ನಿಯಮವನ್ನು ಅನುಸರಿಸುತ್ತದೆ. ಸಭೆಯಲ್ಲಿ ಉಪವಾಸದ ಪ್ರಮಾಣವನ್ನು ಆರೋಗ್ಯ, ವಯಸ್ಸು ಮತ್ತು ಸಂದರ್ಭಗಳಿಗೆ ಅನುಗುಣವಾಗಿ ಪಾಪನಿವೇದನೆಯ ಗುರುವಿನೊಂದಿಗೆ ಸೇರಿ ನಿರ್ಧರಿಸಲಾಗುತ್ತದೆ.

ದಿನದ ವಾಚನಗಳು

ಪತ್ರಿಕೆ

1 ಕೊರಿ 16:4–12

4ಮತ್ತೆ ನಾನು ಸಹ ಹೋಗುವುದು ಯುಕ್ತವಾಗಿ ತೋರಿದರೆ ಅವರು ನನ್ನ ಜೊತೆಯಲ್ಲಿ ಬರಬಹುದು. 5ನಾನು ಹಾದುಹೋಗಬೇಕೆಂದಿರುವ ಮಕೆದೋನ್ಯ ಸೀಮೆಯನ್ನು ದಾಟುವಾಗ ನಿಮ್ಮ ಬಳಿಗೆ ಬಂದು ಬಹುಶಃ ನಿಮ್ಮ ಬಳಿಯಲ್ಲೇ ಉಳಿದುಕೊಳ್ಳುವೆನು. 6ಅಥವಾ ನಿಮ್ಮಲ್ಲಿ ಹಿಮಕಾಲವನ್ನಾದರೂ ಕಳೆಯುವೆನು; ಹಾಗೆಯೇ ನಾನು ಹೋಗಬೇಕಾದ ಸ್ಥಳಕ್ಕೆ ನೀವು ನನ್ನನ್ನು ಸಾಗಕಳುಹಿಸಲು ಸಹಾಯಮಾಡಬಹುದು. 7ನಾನು ಹಾದುಹೋಗುವ ಈ ಸ್ವಲ್ಪ ಸಮಯದಲ್ಲಿ ನಿಮ್ಮನ್ನು ನೋಡಲು ಬಯಸುವುದಿಲ್ಲ. ಕರ್ತನ ಅಪ್ಪಣೆಯಾದರೆ ನಿಮ್ಮ ಬಳಿಯಲ್ಲಿ ಕೆಲವು ಕಾಲ ತಂಗಲು ಬಯಸುತ್ತೇನೆ. 8ಪಂಚಾಶತ್ತಮ ದಿನ ಹಬ್ಬದ ತನಕ ಎಫೆಸದಲ್ಲಿರುವೆನು; 9ಯಾಕೆಂದರೆ ಸೇವೆಗೆ ಅನುಕೂಲವೂ, ಸಫಲವೂ ಆಗಿರುವ ಹೆಬ್ಬಾಗಿಲೊಂದು ನನಗಾಗಿ ತೆರೆಯಲ್ಪಟ್ಟಿದೆ. ಹಾಗೆಯೇ ವಿರೋಧಿಗಳೂ ಅನೇಕರಿದ್ದಾರೆ. 10ತಿಮೊಥೆಯನು ಬಂದರೆ ಅವನು ನಿಮ್ಮಲ್ಲಿ ನಿರ್ಭಯನಾಗಿರುವಂತೆ ನೋಡಿಕೊಳ್ಳಿರಿ; ಅವನು ಸಹ ನನ್ನ ಹಾಗೆಯೇ ಕರ್ತನ ಸೇವೆಯನ್ನು ಮಾಡುತ್ತಿದ್ದಾನಲ್ಲಾ. 11ಆದ್ದರಿಂದ ಯಾರೂ ಅವನನ್ನು ತಿರಸ್ಕರಿಸಬಾರದು. ಅವನು ನನ್ನ ಬಳಿಗೆ ಬರುವಂತೆ ಅವನನ್ನು ಸಮಾಧಾನದಿಂದ ಕಳುಹಿಸಿರಿ; ಅವನು ಸಹೋದರರೊಂದಿಗೆ ಬರುವುದನ್ನು ಎದುರುನೋಡುತ್ತಾ ಇದ್ದೇನೆ. 12ಸಹೋದರ ಅಪೊಲ್ಲೋಸನ ಕುರಿತು; ಅವನು ಸಹೋದರರೊಂದಿಗೆ ನಿಮ್ಮನ್ನು ಭೇಟಿಮಾಡಬೇಕೆಂದು ನಾನು ಬಹಳವಾಗಿ ಅವನನ್ನು ಪ್ರೋತ್ಸಾಹಿಸಿದೆನು. ಆದರೆ ಅವನು ಈಗ ಬರುವುದಿಲ್ಲ ಎಂದು ನಿರ್ಧರಿಸಿದನು. ಆದರೆ ಒಳ್ಳೆ ಅವಕಾಶ ಸಿಕ್ಕಿದಾಗ ಬರುವನು.

ಸುವಾರ್ತೆ

ಮತ್ತಾ 21:28–32

28ಆದರೆ ನಿಮಗೆ ಹೇಗೆ ತೋರುತ್ತದೆ? ಒಬ್ಬ ಮನುಷ್ಯನಿಗೆ ಇಬ್ಬರು ಮಕ್ಕಳಿದ್ದರು. ಅವನು ಮೊದಲನೆಯವನ ಬಳಿಗೆ ಬಂದು, ‘ಮಗನೇ, ನೀನು ಹೋಗಿ ಈ ದಿನ ದ್ರಾಕ್ಷಾತೋಟದಲ್ಲಿ ಕೆಲಸ ಮಾಡು’ ಎಂದು ಹೇಳಲು 29ಅವನು ಪ್ರತ್ಯುತ್ತರವಾಗಿ, ‘ನಾನು ಹೋಗುವುದಿಲ್ಲವೆಂದು’ ಹೇಳಿದ್ದಾಗ್ಯೂ ತರುವಾಯ ತನ್ನ ಮನಸ್ಸನ್ನು ಬದಲಿಸಿ, ತೋಟಕ್ಕೆ ಹೋದನು. 30ಆಮೇಲೆ ಎರಡನೆಯವನ ಬಳಿಗೆ ಬಂದು ಅದೇ ಮಾತನ್ನು ಹೇಳಿದಾಗ ಅವನು, ‘ನಾನು ಹೋಗುತ್ತೇನಪ್ಪಾ’ ಎಂದು ಹೇಳಿದರೂ ಅವನು ಹೋಗಲೇ ಇಲ್ಲ. 31ಅವರಿಬ್ಬರಲ್ಲಿ ತಂದೆಯ ಚಿತ್ತದಂತೆ ನಡೆದವನು ಯಾರು? ಎಂದು ಕೇಳಿದ್ದಕ್ಕೆ ಅವರು, ‘ಮೊಲನೆಯವನೇ’” ಅಂದರು. ಆಗ ಯೇಸು ಅವರಿಗೆ, ಸುಂಕದವರೂ, ವೇಶ್ಯೆಯರೂ ನಿಮಗಿಂತ ಮೊದಲು ದೇವರ ರಾಜ್ಯವನ್ನು ಸೇರುವರು ಎಂದು ನಿಮಗೆ ಸತ್ಯವಾಗಿ ಹೇಳುತ್ತೇನೆ. 32ಯಾಕೆಂದರೆ, ಯೋಹಾನನು ನೀತಿಮಾರ್ಗವನ್ನು ಬೋಧಿಸುವವನಾಗಿ ನಿಮ್ಮ ಬಳಿಗೆ ಬಂದನು. ನೀವು ಅವನನ್ನು ನಂಬಲಿಲ್ಲ; ಸುಂಕದವರು, ವೇಶ್ಯೆಯರು ಅವನನ್ನು ನಂಬಿದರು; ನೀವು ಇದನ್ನು ನೋಡಿದ್ದಾಗ್ಯೂ ಪಶ್ಚಾತ್ತಾಪ ಪಡಲಿಲ್ಲ, ಅವನನ್ನು ನಂಬಲಿಲ್ಲ.

ದಿನಾಂಕಗಳು ರಷ್ಯನ್ ಸಭೆಯ ಜೂಲಿಯನ್ ಪಂಚಾಂಗದ ಪ್ರಕಾರ ಇವೆ (ಸರ್ಬಿಯನ್ ಮತ್ತು ಜಾರ್ಜಿಯನ್ ಸಭೆಗಳು ಮತ್ತು ಅಥೋಸ್ ಪರ್ವತದಂತೆ): ಸಭೆಯ ಪಂಚಾಂಗದ 12 ಆಗಸ್ಟ್ ಎಂದರೆ ನಾಗರಿಕ ಪಂಚಾಂಗದ 25 ಆಗಸ್ಟ್. ಹೊಸ ಪಂಚಾಂಗದ ಸಭೆಗಳು (ಗ್ರೀಸ್, ರೊಮೇನಿಯಾ, ಬಲ್ಗೇರಿಯಾ, ಉಕ್ರೇನ್…) ನಿಗದಿತ ದಿನಾಂಕದ ಹಬ್ಬಗಳನ್ನೂ ಸಂತರನ್ನೂ ಅದೇ ನಾಗರಿಕ ದಿನಾಂಕದಂದು, 13 ದಿನಗಳ ಮುಂಚೆ, ಆಚರಿಸುತ್ತವೆ, ಮತ್ತು ಅವುಗಳ ಕೆಲವು ವಾಚನಗಳು ಬೇರೆಯಾಗಿವೆ; ಈಸ್ಟರ್ ಮತ್ತು ಅದನ್ನು ಅವಲಂಬಿಸಿರುವ ದಿನಗಳು ಒಂದೇ ಆಗಿವೆ.

ಮೂಲಗಳು: ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ · © 2017, 2019 Bridge Connectivity Solutions, CC BY-SA 4.0; changed: footnotes, headings and the letters over Psalm 119 left out, verses in the app's numbering. · ಮೂಲಗಳು ಮತ್ತು ಹಕ್ಕುಗಳು