Bible Explorer ಆ್ಯಪ್ ಪಡೆಯಿರಿ

ಮುಖಪುಟ › ದೈನಂದಿನ ಬೈಬಲ್ ವಾಚನಗಳು › ಆಗಸ್ಟ್ 2027 › 26 ಆಗಸ್ಟ್

ಕ್ಯಾಥೊಲಿಕ್ ಪಂಚಾಂಗ

ದೈನಂದಿನ ಬೈಬಲ್ ವಾಚನಗಳು (ಕಥೋಲಿಕ) — 26 ಆಗಸ್ಟ್ 2027

ಗುರುವಾರ · ಸಾಮಾನ್ಯ ಕಾಲದ 21ನೇ ವಾರ

ಹಬ್ಬಗಳು ಮತ್ತು ಸಂತರು

ಸಾಮಾನ್ಯ ಕಾಲದ 21ನೇ ವಾರದ ಗುರುವಾರ

ವಾರದ ದಿನ · ಆರಾಧನಾ ಬಣ್ಣ: ಹಸಿರು

ದಿನದ ವಾಚನಗಳು

ಮೊದಲನೆಯ ವಾಚನ

1 ಥೆಸ 3:7–13

7ಸಹೋದರರೇ, ಈ ವಾರ್ತೆಯನ್ನು ಕೇಳಿ ನಮ್ಮ ಎಲ್ಲಾ ಕಷ್ಟದಲ್ಲಿಯೂ ಸಂಕಟದಲ್ಲಿಯೂ ನಿಮ್ಮ ನಂಬಿಕೆಯ ಮುಖಾಂತರ ನಮಗೆ ಸಮಾಧಾನವಾಯಿತು. 8ನೀವು ಕರ್ತನಲ್ಲಿ ದೃಢವಾಗಿ ನಿಂತಿದ್ದರೆ ನಮಗೆ ಜೀವಕಳೆ. 9ನಿಮ್ಮ ನಿಮಿತ್ತ ನಮ್ಮ ದೇವರ ಮುಂದೆ ನಮಗಿರುವ ಎಲ್ಲಾ ಸಂತೋಷಗಳಿಗಾಗಿ ದೇವರಿಗೆ ಅಷ್ಟೊಂದು ಸ್ತೋತ್ರ ಮಾಡುವುದು ನಮ್ಮಿಂದಾದಿತೇ? 10ನಿಮ್ಮ ಮುಖವನ್ನು ನೋಡುವುದಕ್ಕೂ ನಿಮ್ಮ ನಂಬಿಕೆಯ ಕೊರತೆಗಳನ್ನು ನೀಗುವುದಕ್ಕೂ ನಾವು ಹಗಲಿರುಳು ದೇವರನ್ನು ತುಂಬಾ ಕಳಕಳಿಯಿಂದ ಬೇಡುವವರಾಗಿದ್ದೇವೆ. 11ನಮ್ಮ ತಂದೆಯಾದ ದೇವರೂ ನಮ್ಮ ಕರ್ತನಾದ ಯೇಸು, ನಾವು ನಿಮ್ಮ ಬಳಿಗೆ ಬರುವುದಕ್ಕೆ ಮಾರ್ಗವನ್ನು ಸರಾಗಮಾಡಿಕೊಡಲಿ. 12ನಿಮ್ಮಲ್ಲಿ ನಮ್ಮ ಪ್ರೀತಿಯು ಹೆಚ್ಚಾದ ಹಾಗೆಯೇ ನಿಮ್ಮ ಪ್ರೀತಿಯು ಒಬ್ಬರಿಂದೊಬ್ಬರಿಗೆ ಹರಡಿ ಎಲ್ಲಾ ಮನುಷ್ಯರ ಮೇಲೆಯೂ ಅಭಿವೃದ್ಧಿ ಹೊಂದಿ ಅತ್ಯಧಿಕವಾಗುವಂತೆ ಕರ್ತನು ಆಶೀರ್ವದಿಸಲಿ. 13ನಮ್ಮ ಕರ್ತನಾದ ಯೇಸು ತನ್ನ ಪರಿಶುದ್ಧ ಪರಿವಾರ ಸಮೇತ ಪುನರಾಗಮಿಸುವಾಗ ತಂದೆಯಾದ ದೇವರ ಸಮಕ್ಷಮದಲ್ಲಿ ನೀವು ಪರಿಶುದ್ಧರೂ, ನಿರ್ದೋಷಿಗಳೂ ಆಗಿರುವಂತೆ ನಿಮ್ಮ ಹೃದಯಗಳನ್ನು ದೃಢಪಡಿಸಲಿ.

ಪ್ರತಿವಚನ ಕೀರ್ತನೆ

ಕೀರ್ತ 90:3–4, 12–14, 17

3“ಮನುಷ್ಯರೇ, ಸಾಯಿರಿ” ಎಂದು ಆಜ್ಞಾಪಿಸಿ, ಅವರನ್ನು ಪುನಃ ಮಣ್ಣಿಗೆ ಸೇರಿಸುತ್ತೀ. 4ಸಾವಿರ ವರ್ಷಗಳು ನಿನ್ನ ದೃಷ್ಟಿಯಲ್ಲಿ ಗತಿಸಿಹೋದ ನಿನ್ನೆಯ ದಿನದಂತೆಯೂ, ರಾತ್ರಿಯ ಜಾವದಂತೆಯೂ ಇವೆ. 12ನಮ್ಮ ದಿನಗಳು ಕೊಂಚವೇ ಎಂದು ಎಣಿಸಿಕೊಳ್ಳುವ ಹಾಗೆ ನಮಗೆ ಕಲಿಸು; ಆಗ ಜ್ಞಾನದ ಹೃದಯವನ್ನು ಪಡೆದುಕೊಳ್ಳುವೆವು. 13ಯೆಹೋವನೇ, ಮನಸ್ಸನ್ನು ಬೇರೆ ಮಾಡಿಕೋ; ಎಷ್ಟರವರೆಗೆ ಕೋಪ ಮಾಡುವಿ? ನಿನ್ನ ಸೇವಕರ ಮೇಲೆ ಕರುಣೆಯಿರಲಿ. 14ಮುಂಜಾನೆಯಲ್ಲಿ ನಿನ್ನ ಕೃಪೆಯಿಂದ ನಮ್ಮನ್ನು ಸಂತೃಪ್ತಿಪಡಿಸು; ಆಗ ಜೀವಮಾನದಲ್ಲೆಲ್ಲಾ ಉಲ್ಲಾಸಿಸಿ ಹರ್ಷಿಸುವೆವು. 17ನಮ್ಮ ಯೆಹೋವ ದೇವರ ಪ್ರಸನ್ನತೆಯು ನಮ್ಮ ಮೇಲೆ ಇರಲಿ. ನಾವು ಕೈ ಹಾಕಿದ ಕೆಲಸವನ್ನು ನಮಗೆ ಸಫಲಪಡಿಸು; ನಾವು ಕೈಹಾಕಿದ ಕೆಲಸವನ್ನು ಸಫಲ ವಾಗುವಂತೆ ಮಾಡು.

ಸುವಾರ್ತೆ

ಮತ್ತಾ 24:42–51

42“ಹೀಗಿರಲಾಗಿ ನಿಮ್ಮ ಕರ್ತನು ಬರುವ ದಿನವು ನಿಮಗೆ ಗೊತ್ತಿಲ್ಲದಿರುವುದರಿಂದ ಎಚ್ಚರವಾಗಿರಿ. 43ಕಳ್ಳನು ಬರುವ ಗಳಿಗೆ ಮನೆಯ ಯಜಮಾನನಿಗೆ ತಿಳಿದಿದ್ದರೆ ಅವನು ತನ್ನ ಮನೆಗೆ ಕನ್ನಾ ಹಾಕಗೊಡಿಸದೇ ಕಾಯುತ್ತಿದ್ದನೆಂದು ತಿಳಿದುಕೊಳ್ಳಿರಿ. 44ಆದಕಾರಣ ನೀವು ಸಹ ಸಿದ್ಧವಾಗಿರಿ; ನೀವು ನೆನಸದ ಗಳಿಗೆಯಲ್ಲಿ ಮನುಷ್ಯಕುಮಾರನು ಬರುತ್ತಾನೆ. 45ಹಾಗಾದರೆ ಯಜಮಾನನು ತನ್ನ ಮನೆಯವರಿಗೆ ಹೊತ್ತು ಹೊತ್ತಿಗೆ ಆಹಾರ ಕೊಡುವುದಕ್ಕಾಗಿ ಅವರ ಮೇಲಿರಿಸಿದ ನಂಬಿಗಸ್ತನೂ, ವಿವೇಕಿಯೂ ಆದಂಥ ಆಳು ಯಾರು? 46ಯಜಮಾನನು ಬರುವಾಗ ಯಾವ ಆಳು ಹೀಗೆ ಮಾಡುತ್ತಿರುವುದನ್ನು ಕಾಣುವನೋ ಆ ಆಳು ಧನ್ಯನು. 47ಅಂಥವನನ್ನು ಅವನು ತನ್ನ ಎಲ್ಲಾ ಆಸ್ತಿಯ ಮೇಲ್ವಿಚಾರಕನನ್ನಾಗಿ ನೇಮಿಸುವನು ಎಂದು ನಿಮಗೆ ನಿಜವಾಗಿ ಹೇಳುತ್ತೇನೆ. 48ಆದರೆ ಆ ದುಷ್ಟ ಆಳು, ‘ನನ್ನ ಯಜಮಾನನು ಬರುವುದಕ್ಕೆ ತಡ ಮಾಡುತ್ತಾನೆ’ ಎಂದು ತನ್ನ ಮನಸ್ಸಿನಲ್ಲಿ ಅಂದುಕೊಂಡು 49ತನ್ನ ಜೊತೆ ಆಳುಗಳನ್ನು ಹೊಡೆಯುವುದಕ್ಕೂ, ಕುಡುಕರ ಸಂಗಡ ತಿನ್ನುವುದಕ್ಕೂ, ಕುಡಿಯುವುದಕ್ಕೂ ಪ್ರಾರಂಭಿಸಿದಾದರೆ, 50ಅವನು ನೆನಸದ ದಿನದಲ್ಲಿಯೂ, ತಿಳಿಯದ ಗಳಿಗೆಯಲ್ಲಿಯೂ ಆ ಆಳಿನ ಯಜಮಾನನು ಬಂದು ಅವನನ್ನು ಕಠಿಣವಾಗಿ ದಂಡಿಸಿ 51ಕಪಟಿಗಳಿಗೆ ಆಗತಕ್ಕ ಗತಿಯನ್ನು ಅವನಿಗೂ ಮಾಡುವನು. ಅಲ್ಲಿ ಗೋಳಾಟವೂ ಕಟಕಟನೆ ಹಲ್ಲು ಕಡಿಯೋಣವೂ ಇರುವವು.

ಸಾಮಾನ್ಯ ರೋಮನ್ ಪಂಚಾಂಗ; ಬಿಷಪರ ಸಮ್ಮೇಳನವು ಕೆಲವು ಹಬ್ಬಗಳನ್ನು (ಪ್ರಭುವಿನ ಪ್ರಕಟನೆ, ಸ್ವರ್ಗಾರೋಹಣ, ಕ್ರಿಸ್ತನ ದೇಹ ಮತ್ತು ರಕ್ತ) ಭಾನುವಾರಕ್ಕೆ ಸರಿಸಬಹುದು ಅಥವಾ ತನ್ನದೇ ಹಬ್ಬಗಳನ್ನು ಸೇರಿಸಬಹುದು. ವಾಚನ ಸಂಗ್ರಹ: ಭಾನುವಾರದ ಚಕ್ರ B, ವಾರದ ದಿನಗಳ ವರ್ಷ I.

ಮೂಲಗಳು: ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ · © 2017, 2019 Bridge Connectivity Solutions, CC BY-SA 4.0; changed: footnotes, headings and the letters over Psalm 119 left out, verses in the app's numbering. · ಮೂಲಗಳು ಮತ್ತು ಹಕ್ಕುಗಳು