Bible Explorer ಆ್ಯಪ್ ಪಡೆಯಿರಿ

ಮುಖಪುಟ › ದೈನಂದಿನ ಬೈಬಲ್ ವಾಚನಗಳು › ಆಗಸ್ಟ್ 2027 › 27 ಆಗಸ್ಟ್

ಕ್ಯಾಥೊಲಿಕ್ ಪಂಚಾಂಗ

ದೈನಂದಿನ ಬೈಬಲ್ ವಾಚನಗಳು (ಕಥೋಲಿಕ) — 27 ಆಗಸ್ಟ್ 2027

ಶುಕ್ರವಾರ · ಸಾಮಾನ್ಯ ಕಾಲದ 21ನೇ ವಾರ

ಹಬ್ಬಗಳು ಮತ್ತು ಸಂತರು

ಸಾಮಾನ್ಯ ಕಾಲದ 21ನೇ ವಾರದ ಶುಕ್ರವಾರ

ಸ್ಮರಣೆ · ಆರಾಧನಾ ಬಣ್ಣ: ಬಿಳಿ

ಸಂತ ಮೋನಿಕಾ · ಸ್ಮರಣೆ

ಉಪವಾಸ ಮತ್ತು ಪ್ರಾಯಶ್ಚಿತ್ತ

ಪ್ರಾಯಶ್ಚಿತ್ತದ ದಿನ

ಪ್ರತಿ ಶುಕ್ರವಾರವೂ ಪ್ರಾಯಶ್ಚಿತ್ತದ ದಿನ; ಅದನ್ನು ಹೇಗೆ ಆಚರಿಸಬೇಕು ಎಂಬುದನ್ನು ಪ್ರತಿಯೊಂದು ಬಿಷಪರ ಸಮ್ಮೇಳನ ನಿರ್ಧರಿಸುತ್ತದೆ: ಮಾಂಸ ವರ್ಜನೆ ಅಥವಾ ಬೇರೊಂದು ಪ್ರಾಯಶ್ಚಿತ್ತ ಕಾರ್ಯ. ಉಪವಾಸ 18 ರಿಂದ 59 ವರ್ಷದವರಿಗೆ, ಮಾಂಸ ವರ್ಜನೆ 14 ವರ್ಷದಿಂದ ಕಡ್ಡಾಯ.

ದಿನದ ವಾಚನಗಳು

ಮೊದಲನೆಯ ವಾಚನ

1 ಥೆಸ 4:1–8

1ಕಡೆಯದಾಗಿ, ಸಹೋದರರೇ, ನಾವು ಕರ್ತನಾದ ಯೇಸುವಿನ ಮುಖಾಂತರ ನಿಮಗೆ ಕೊಟ್ಟಿರುವ ಆಜ್ಞೆಗಳನ್ನು ತಿಳಿದಿದ್ದೀರಷ್ಟೆ. 2ಅದುದರಿಂದ ನೀವು ಹೇಗೆ ನಡೆದು ದೇವರನ್ನು ಮೆಚ್ಚಿಸಬೇಕಾಗಿದೆಯೋ ಆ ಆಜ್ಞೆಗಳನ್ನು ನಮ್ಮಿಂದ ಕಲಿತುಕೊಂಡು ಅದರಂತೆ ನಡೆಯುತ್ತಲೇ ಇದ್ದಿರಿ. ನೀವು ಹಾಗೆಯೇ ಇನ್ನೂ ಹೆಚ್ಚಾಗಿ ನಡೆಯಬೇಕೆಂದು ನಿಮ್ಮನ್ನು ಯೇಸು ಕರ್ತನಲ್ಲಿ ಬೇಡಿಕೊಳ್ಳುತ್ತೇವೆ ಹಾಗೂ ಪ್ರಬೋಧಿಸುತ್ತೇವೆ. 3ದೇವರ ಚಿತ್ತವೇನಂದರೆ ನೀವು ಶುದ್ಧರಾಗಬೇಕೆಂಬುದೇ. ಆದ್ದರಿಂದ ಹಾದರಕ್ಕೆ ದೂರವಾಗಿರಬೇಕು. 4ದೇವರನ್ನರಿಯದ ಅನ್ಯಜನರಂತೆ ಕಾಮಾಭಿಲಾಷೆಗಳಿಗೆ ಒಳಗಾಗದೆ, ನಿಮ್ಮಲ್ಲಿ ಪ್ರತಿಯೊಬ್ಬನು ಪವಿತ್ರವಾದ ಮನಸ್ಸಿನಿಂದಲೂ ಘನತೆಯಿಂದಲೂ ಪತ್ನಿಯನ್ನು ಸಂಪಾದಿಸಿಕೊಳ್ಳಲು ತಿಳಿಯಬೇಕು. 6ಈ ವಿಷಯದಲ್ಲಿ ಯಾರೂ ತನ್ನ ಸಹೋದರನನ್ನು ವಂಚಿಸಿ ಕೇಡು ಮಾಡಬಾರದು. ನಾವು ಮೊದಲೇ ತಿಳಿಸಿ, ನಿಮಗೆ ಖಂಡಿತವಾಗಿ ಹೇಳಿದ ಪ್ರಕಾರ ಇವೆಲ್ಲವುಗಳ ವಿಷಯದಲ್ಲಿ ಕರ್ತನು ಪ್ರತಿಕಾರ ಮಾಡುವವನಾಗಿದ್ದಾನೆ. 7ದೇವರು ನಮ್ಮನ್ನು ಅಶುದ್ಧತೆಗೆ ಕರೆಯದೆ ಶುದ್ಧರಾಗಿರುವುದಕ್ಕೆ ಕರೆದನು. 8ಹೀಗಿರಲು ಈ ಮಾತನ್ನು ತಿರಸ್ಕರಿಸುವವನು ಮನುಷ್ಯರನ್ನು ಮಾತ್ರವಲ್ಲದೆ, ನಿಮಗೆ ಪವಿತ್ರಾತ್ಮವರವನ್ನು ದಯಪಾಲಿಸುವ ದೇವರನ್ನೂ ತಿರಸ್ಕರಿಸುವವನಾಗಿದ್ದಾನೆ.

ಪ್ರತಿವಚನ ಕೀರ್ತನೆ

ಕೀರ್ತ 97:1–2, 5–6, 10–12

1ಯೆಹೋವನು ರಾಜ್ಯಾಧಿಕಾರವನ್ನು ವಹಿಸಿದ್ದಾನೆ; ಭೂಲೋಕವು ಸಂತೋಷಿಸಲಿ; ಸಮುದ್ರದ ತೀರಪ್ರದೇಶಗಳೆಲ್ಲಾ ಹರ್ಷಿಸಲಿ. 2ಮೋಡಗಳೂ, ಕಾರ್ಗತ್ತಲೆಯೂ ಆತನ ಸುತ್ತಲೂ ಇರುತ್ತವೆ; ಯೆಹೋವನು ನೀತಿ ಮತ್ತು ನ್ಯಾಯಗಳಿಂದ ಆಳುತ್ತಾನೆ. 5ಸಾರ್ವಭೌಮನಾದ ಯೆಹೋವನ ಎದುರಿನಲ್ಲಿ ಪರ್ವತಗಳು ಮೇಣದಂತೆ ಕರಗಿಹೋದವು. 6ಗಗನಮಂಡಲವು ಆತನ ನೀತಿಯನ್ನು ಪ್ರಸಿದ್ಧಪಡಿಸಿತು; ಎಲ್ಲಾ ಜನರು ಆತನ ಮಹಿಮೆಯನ್ನು ಕಂಡರು. 10ಕೆಟ್ಟತನವನ್ನು ಹಗೆಮಾಡುವವರನ್ನು, ಯೆಹೋವನನ್ನು ಪ್ರೀತಿಸುತ್ತಾನೆ. ಆತನು ತನ್ನ ಭಕ್ತರ ಪ್ರಾಣಗಳನ್ನು ಕಾಯುವವನಾಗಿ, ದುಷ್ಟರ ಕೈಯೊಳಗಿಂದ ಅವರನ್ನು ಬಿಡಿಸುವನು. 11ನೀತಿವಂತರಿಗೋಸ್ಕರ ಬೆಳಕು ಪ್ರಕಾಶಿಸುವುದು, ಯಥಾರ್ಥಹೃದಯವುಳ್ಳವರಿಗೆ ಸಂತೋಷವೂ ಕೊಡಲ್ಪಟ್ಟಿವೆ. 12ನೀತಿವಂತರೇ, ಯೆಹೋವನಲ್ಲಿ ಆನಂದಿಸಿರಿ; ಆತನ ಪರಿಶುದ್ಧನಾಮವನ್ನು ಕೊಂಡಾಡಿರಿ.

ಸುವಾರ್ತೆ

ಮತ್ತಾ 25:1–13

1“ಪರಲೋಕ ರಾಜ್ಯವು ತಮ್ಮ ದೀಪಾರತಿಗಳನ್ನು ತೆಗೆದುಕೊಂಡು ಮದಲಿಂಗನನ್ನು ಸಂಧಿಸುವುದಕ್ಕೆ ಹೊರಟಂತಹ ಹತ್ತು ಮಂದಿ ಕನ್ನಿಕೆಯರಿಗೆ ಹೋಲಿಕೆಯಾಗಿದೆ. 2ಅವರಲ್ಲಿ ಐದು ಮಂದಿ ಬುದ್ಧಿವಂತೆಯರು, ಐದು ಮಂದಿ ಬುದ್ಧಿಹೀನರು. 3ಅವಿವೇಕಿಗಳು ತಮ್ಮ ದೀಪಾರತಿಗಳನ್ನು ತೆಗೆದುಕೊಂಡರು, ಆದರೆ ತಮ್ಮೊಂದಿಗೆ ಎಣ್ಣೆಯನ್ನು ತೆಗೆದುಕೊಳ್ಳಲಿಲ್ಲ. 4ಆದರೆ ಬುದ್ಧಿವಂತರಾದ ಕನ್ನಿಕೆಯರು ತಮ್ಮ ದೀಪಾರತಿಗಳೊಂದಿಗೆ ಪಾತ್ರೆಗಳಲ್ಲಿ ಎಣ್ಣೆಯನ್ನೂ ತೆಗೆದುಕೊಂಡರು. 5ಮದಲಿಂಗನು ಬರುವುದಕ್ಕೆ ತಡಮಾಡಲು ಅವರೆಲ್ಲರೂ ತೂಕಡಿಸಿ ನಿದ್ರಿಸಿದರು. 6ಆದರೆ ಅರ್ಧರಾತ್ರಿಯಲ್ಲಿ, ‘ಇಗೋ, ಮದಲಿಂಗನು ಬರುತ್ತಿದ್ದಾನೆ ಅವನನ್ನು ಎದುರುಗೊಳ್ಳಲು ಹೊರಡಿರಿ’ ಎಂಬ ಕೂಗು ಕೇಳಿಸಿತು. 7ಆಗ ಆ ಕನ್ನಿಕೆಯರೆಲ್ಲರು ಎಚ್ಚೆತ್ತು ತಮ್ಮ ದೀಪಾರತಿಗಳನ್ನು ಸರಿಮಾಡಿಕೊಂಡರು. 8ಆಗ ಬುದ್ಧಿಹೀನರಾದ ಕನ್ನಿಕೆಯರು ಬುದ್ಧಿವಂತರಾಗಿದ್ದ ಕನ್ನಿಕೆಯರಿಗೆ, ‘ನಿಮ್ಮ ಎಣ್ಣೆಯಲ್ಲಿ ನಮಗೆ ಸ್ವಲ್ಪ ಕೊಡಿರಿ. 9ಏಕೆಂದರೆ ನಮ್ಮ ದೀಪಗಳು ಆರಿಹೋಗುತ್ತವೆ’ ಎಂದು ಕೇಳಿದರು. ಅದಕ್ಕೆ ಆ ಬುದ್ಧಿವಂತರಾದ ಕನ್ನಿಕೆಯರು, ಆಗುವುದಿಲ್ಲ ‘ನಿಮಗೆ ಕೊಟ್ಟರೆ ನಮಗೂ ನಿಮಗೂ ಸಾಲದೆ ಹೋದೀತು; ನೀವು ಮಾರುವವರ ಬಳಿಗೆ ಹೋಗಿ ಕೊಂಡುಕೊಂಡರೆ ಒಳ್ಳೆಯದು’ ಅಂದರು. 10ಅವರು ಕೊಂಡುಕೊಳ್ಳುವುದಕ್ಕೆ ಹೊರಟುಹೋದಾಗ ಮದಲಿಂಗನು ಬಂದನು. ಸಿದ್ಧವಾಗಿದ್ದವರು ಅವನ ಸಂಗಡ ಮದುವೆಯ ಮನೆಯೊಳಗೆ ಹೋದರು, ಬಾಗಿಲನ್ನು ಮುಚ್ಚಲಾಯಿತು. 11ಅನಂತರ ಉಳಿದ ಕನ್ನಿಕೆಯರು ಸಹ ಬಂದು, ‘ಕರ್ತನೇ, ಕರ್ತನೇ, ನಮಗೆ ಬಾಗಿಲು ತೆರೆಯಿರಿ’ ಅಂದರು. 12ಆದರೆ ಆತನು ಅವರಿಗೆ ಉತ್ತರವಾಗಿ, ‘ನಿಮ್ಮನ್ನು ನಾನರಿಯೆನೆಂದು ನಿಮಗೆ ಸತ್ಯವಾಗಿ ಹೇಳುತ್ತೇನೆ’ ಅಂದನು. 13ಏಕೆಂದರೆ ಆ ದಿನವಾದರೂ ಗಳಿಗೆಯಾದರೂ ನಿಮಗೆ ತಿಳಿಯದು, ಆದಕಾರಣ ಎಚ್ಚರವಾಗಿರಿ.

ಇಂದಿನ ಸಂತರು

ಸಾಮಾನ್ಯ ರೋಮನ್ ಪಂಚಾಂಗ; ಬಿಷಪರ ಸಮ್ಮೇಳನವು ಕೆಲವು ಹಬ್ಬಗಳನ್ನು (ಪ್ರಭುವಿನ ಪ್ರಕಟನೆ, ಸ್ವರ್ಗಾರೋಹಣ, ಕ್ರಿಸ್ತನ ದೇಹ ಮತ್ತು ರಕ್ತ) ಭಾನುವಾರಕ್ಕೆ ಸರಿಸಬಹುದು ಅಥವಾ ತನ್ನದೇ ಹಬ್ಬಗಳನ್ನು ಸೇರಿಸಬಹುದು. ವಾಚನ ಸಂಗ್ರಹ: ಭಾನುವಾರದ ಚಕ್ರ B, ವಾರದ ದಿನಗಳ ವರ್ಷ I.

ಮೂಲಗಳು: ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ · © 2017, 2019 Bridge Connectivity Solutions, CC BY-SA 4.0; changed: footnotes, headings and the letters over Psalm 119 left out, verses in the app's numbering. · ಮೂಲಗಳು ಮತ್ತು ಹಕ್ಕುಗಳು