Bible Explorer ಆ್ಯಪ್ ಪಡೆಯಿರಿ

ಮುಖಪುಟ › ದೈನಂದಿನ ಬೈಬಲ್ ವಾಚನಗಳು › ಆಗಸ್ಟ್ 2027 › 27 ಆಗಸ್ಟ್

ಆರ್ಥೊಡಾಕ್ಸ್ ಪಂಚಾಂಗ · ಆಗಸ್ಟ್ 14 (ಹಳೆಯ ಪದ್ಧತಿ)

ಆರ್ಥೊಡಾಕ್ಸ್ ದೈನಂದಿನ ವಾಚನಗಳು — 27 ಆಗಸ್ಟ್ 2027

ಶುಕ್ರವಾರ · ಪಂಚಾಶತ್ತಮದ ನಂತರದ 10ನೇ ವಾರ · ಸ್ವರ 8

ಹಬ್ಬಗಳು ಮತ್ತು ಸಂತರು

Forefeast of the Dormition of the Mother of God

ದೇವಮಾತೆಯ ನಿದ್ರಾಗಮನದ ಉಪವಾಸ

ಕಟ್ಟುನಿಟ್ಟಿನ ಉಪವಾಸ (ಒಣ ಆಹಾರ: ರೊಟ್ಟಿ, ತರಕಾರಿ, ಹಣ್ಣು)

ಇದು ಮಠದ ನಿಯಮವನ್ನು ಅನುಸರಿಸುತ್ತದೆ. ಸಭೆಯಲ್ಲಿ ಉಪವಾಸದ ಪ್ರಮಾಣವನ್ನು ಆರೋಗ್ಯ, ವಯಸ್ಸು ಮತ್ತು ಸಂದರ್ಭಗಳಿಗೆ ಅನುಗುಣವಾಗಿ ಪಾಪನಿವೇದನೆಯ ಗುರುವಿನೊಂದಿಗೆ ಸೇರಿ ನಿರ್ಧರಿಸಲಾಗುತ್ತದೆ.

ದಿನದ ವಾಚನಗಳು

ಪತ್ರಿಕೆ

2 ಕೊರಿ 1:12–20

12ನಾವು ಕೇವಲ ಮನುಷ್ಯಜ್ಞಾನವನ್ನು ಬಳಸದೇ ದೇವರ ಕೃಪೆಯನ್ನು ಆಶ್ರಯಿಸಿ ಪರಿಶುದ್ಧರಾಗಿಯೂ, ಪ್ರಾಮಾಣಿಕರಾಗಿಯೂ ಈ ಲೋಕದಲ್ಲಿ ಮುಖ್ಯವಾಗಿ ನಿಮ್ಮ ವಿಷಯದಲ್ಲಿ ನಡೆದುಕೊಂಡೆವೆಂದು ನಮ್ಮ ಮನಸ್ಸಾಕ್ಷಿ ಹೇಳುತ್ತದೆ. ಇದೇ ನಮಗಿರುವ ಹೆಮ್ಮೆ. 13ನೀವು ನಮ್ಮ ಪತ್ರಿಕೆಗಳಲ್ಲಿ ಓದಿ ಅರ್ಥಮಾಡಿಕೊಂಡ ಸಂಗತಿಗಳನ್ನೇ ಹೊರತು ಬೇರೆ ಯಾವುದನ್ನು ನಾವು ನಿಮಗೆ ಬರೆಯಲಿಲ್ಲ. 14ನೀವು ನಮ್ಮನ್ನು ಸ್ವಲ್ಪಮಟ್ಟಿಗೆ ಅರ್ಥಮಾಡಿಕೊಂಡಿದ್ದೀರಿ ಕಡೆ ವರೆಗೂ ಒಪ್ಪಿಕೊಳ್ಳುವಿರಿ ಎಂಬುದಾಗಿಯೂ, ನಮ್ಮ ಕರ್ತನಾದ ಯೇಸುವಿನ ಪ್ರತ್ಯಕ್ಷತೆಯ ದಿನದಲ್ಲಿ ನೀವು ನಮ್ಮ ಅಭಿಮಾನಕ್ಕೆ ಕಾರಣವಾದಂತೆ ನಾವು ನಿಮ್ಮ ಅಭಿಮಾನಕ್ಕೆ ಕಾರಣರಾಗಿರುವೆವು ಎಂದು ನೀವು ಒಪ್ಪಿಕೊಳ್ಳುತ್ತೀರಿ. 15ನಾನು ಇಂಥ ಭರವಸವುಳ್ಳವನಾಗಿದ್ದರಿಂದ ನೀವು ಎರಡನೆಯ ಸಾರಿ ಕೃಪಾರ್ಶೀವಾದವನ್ನು ಪಡೆದುಕೊಳ್ಳುವಂತೆ ನಿಮ್ಮ ಬಳಿಗೆ ಮೊದಲೇ ಬರಬೇಕೆಂದಿದ್ದೆನು. 16ಮೊದಲು ನಿಮ್ಮ ಬಳಿಗೆ ಬಂದು ನಿಮ್ಮ ಮಾರ್ಗವಾಗಿ ಮಕೆದೋನ್ಯಕ್ಕೆ ಹೋಗಿ ಅನಂತರ ಮಕೆದೋನ್ಯವನ್ನು ಬಿಟ್ಟು ತಿರುಗಿ ನಿಮ್ಮ ಬಳಿಗೆ ಬಂದು ನೀವು ನನ್ನನ್ನು ಯೂದಾಯಕ್ಕೆ ಕಳುಹಿಸಿ ಕೊಡಬೇಕೆಂದು ಯೋಚಿಸಿದ್ದೆನು. 17ಹೀಗೆ ಯೋಚಿಸಿದ್ದರಿಂದ ನಾನು ಚಂಚಲಚಿತ್ತನಾಗಿದ್ದೇನೋ? ಕೇವಲ ಪ್ರಾಪಂಚಿಕ ಗುಣಮಟ್ಟಕ್ಕೆ ಯೋಚಿಸಿ ಈ ಕ್ಷಣ “ಹೌದು” ಮರು ಕ್ಷಣ “ಇಲ್ಲ” ಎಂದು ಹೇಳುವವನಂತಿದ್ದೇನೋ? ಎಂದಿಗೂ ಇಲ್ಲ. 18ದೇವರು ನಂಬಿಗಸ್ತನಾಗಿರುವಂತೆ ನಾವು ನಿಮಗೆ ಹೇಳುವ ಮಾತು ಒಂದು ಸಾರಿ “ಹೌದೆಂದು” ಮತ್ತೊಂದು ಸಾರಿ “ಇಲ್ಲವೆಂದು” ಆಗಿರಲು ಸಾಧ್ಯವಿಲ್ಲ. ಅದಕ್ಕೆ ನಂಬಿಗಸ್ತನಾದ ದೇವರೇ ಸಾಕ್ಷಿಯಾಗಿದ್ದಾನೆ. 19ನಾನೂ, ಸಿಲ್ವಾನನೂ, ತಿಮೊಥೆಯನೂ ನಿಮ್ಮಲ್ಲಿ ಪ್ರಸಿದ್ಧಿಪಡಿಸಿದ ದೇವರ ಮಗನಾದ ಯೇಸು ಕ್ರಿಸ್ತನು ಈ ಕ್ಷಣ “ಹೌದು” ಮರುಕ್ಷಣ “ಇಲ್ಲ” ಎಂದು ಹೇಳುವವನಲ್ಲ. ಆತನಲ್ಲಿ ಹೌದೆಂಬುದೇ ನೆಲೆಗೊಂಡಿದೆ. 20ಆದ್ದರಿಂದ ದೇವರ ಕೊಟ್ಟಿರುವ ವಾಗ್ದಾನಗಳೆಲ್ಲವೂ ಕ್ರಿಸ್ತನಲ್ಲಿ “ಹೌದು” ಎಂಬುದೇ ಆಗಿದೆ. ನಮ್ಮ ಮೂಲಕ ದೇವರಿಗೆ ಮಹಿಮೆಯುಂಟಾಗುವಂತೆ ಆತನ ಮೂಲಕವಾಗಿ ನಾವು “ಆಮೆನ್” ಎಂದು ಹೇಳುತ್ತೇವೆ.

ಪತ್ರಿಕೆ (ಶನಿವಾರಕ್ಕೆ)

ರೋಮಾ 15:30–33

30ಸಹೋದರರೇ, ನೀವು ನನಗೋಸ್ಕರ ದೇವರ ಮುಂದೆ ಮಾಡುವ ಪ್ರಾರ್ಥನೆಗಳಲ್ಲಿ ನನ್ನೊಂದಿಗೆ ಬಲವಾಗಿ ವಿಜ್ಞಾಪಿಸಿಕೊಳ್ಳಬೇಕೆಂದು ನಮ್ಮ ಕರ್ತನಾದ ಯೇಸು ಕ್ರಿಸ್ತನ ನಿಮಿತ್ತವಾಗಿಯೂ ಪವಿತ್ರಾತ್ಮನಿಂದಾಗುವ ಪ್ರೀತಿಯ ನಿಮಿತ್ತವಾಗಿಯೂ ನಿಮ್ಮನ್ನು ಬೇಡಿಕೊಳ್ಳುತ್ತೇನೆ. 31ದೇವರು ನನ್ನನ್ನು ಯೂದಾಯದಲ್ಲಿರುವ ಅವಿಧೇಯರ ಕೈಯಿಂದ ತಪ್ಪಿಸಬೇಕೆಂತಲೂ ಯೆರೂಸಲೇಮಿಗೋಸ್ಕರ ನಾನು ಮಾಡುವಂಥ ಈ ಧರ್ಮಕಾರ್ಯವು ಅಲ್ಲಿರುವ ದೇವಜನರಿಗೆ ಹಿತಕರವಾಗಿ ತೋರಬೇಕೆಂತಲೂ ಪ್ರಾರ್ಥಿಸಿರಿ. 32ಹೀಗೆ ನಾನು ದೇವರ ಚಿತ್ತಾನುಸಾರ ಆನಂದವುಳ್ಳವನಾಗಿ ನಿಮ್ಮಲ್ಲಿಗೆ ಬಂದು ನಿಮ್ಮ ಸಂಗಡ ವಿಶ್ರಾಂತಿಹೊಂದಲಾಗುವುದು. 33ಶಾಂತಿದಾಯಕವಾದ ದೇವರು ನಿಮ್ಮೆಲ್ಲರೊಂದಿಗಿರಲಿ. ಆಮೆನ್.

ಸುವಾರ್ತೆ

ಮತ್ತಾ 22:23–33

23ಅದೇ ದಿನದಲ್ಲಿ ಪುನರುತ್ಥಾನವಿಲ್ಲ ಎಂದು ವಾದಿಸುವ ಕೆಲವು ಸದ್ದುಕಾಯರು ಆತನ ಬಳಿಗೆ ಬಂದರು. 24ಇವರು ಆತನಿಗೆ, “ಬೋಧಕನೇ, ‘ಒಬ್ಬನು ಮಕ್ಕಳಿಲ್ಲದೆ ಸತ್ತರೆ ಅವನ ಹೆಂಡತಿಯನ್ನು ಅವನ ತಮ್ಮನು ಮದುವೆಮಾಡಿಕೊಂಡು ತನ್ನ ಅಣ್ಣನಿಗೆ ಮಕ್ಕಳನ್ನು ಪಡೆಯಬೇಕೆಂದು ಮೋಶೆಯು ಹೇಳಿದ್ದಾನೆ.’ 25ಆದರೆ ನಮ್ಮಲ್ಲಿ ಏಳು ಮಂದಿ ಸಹೋದರರಿದ್ದರು. ಮೊದಲನೆಯವನು ಮದುವೆ ಆಗಿ ತೀರಿಹೋದನು. ಅವನಿಗೆ ಮಕ್ಕಳಿಲ್ಲದ ಕಾರಣ ಹೆಂಡತಿಯನ್ನು ತನ್ನ ತಮ್ಮನಿಗೆ ಬಿಟ್ಟನು; 26ಅದರಂತೆ ಎರಡನೆಯವನೂ ಮೂರನೆಯವನೂ ಹಾಗೆಯೇ ಏಳನೆಯವನ ವರೆಗೂ ಮಾಡಿದರು. 27ಅವರೆಲ್ಲರು ಸತ್ತ ಮೇಲೆ ಆ ಹೆಂಗಸೂ ಸತ್ತಳು. 28ಹಾಗಾದರೆ ಪುನರುತ್ಥಾನದಲ್ಲಿ ಆಕೆ ಆ ಏಳು ಮಂದಿಯಲ್ಲಿ ಯಾರಿಗೆ ಹೆಂಡತಿಯಾಗಿರುವಳು? ಆಕೆಯನ್ನು ಅವರೆಲ್ಲರೂ ಮದುವೆಮಾಡಿಕೊಂಡಿದ್ದರಲ್ಲಾ” ಎಂದು ಪ್ರಶ್ನಿಸಿದರು. 29ಅದಕ್ಕೆ ಯೇಸು ಉತ್ತರವಾಗಿ ಅವರಿಗೆ, “ನೀವು ದೇವರ ವಾಕ್ಯವನ್ನಾದರೂ ದೇವರ ಶಕ್ತಿಯನ್ನಾದರೂ ಸರಿಯಾಗಿ ತಿಳಿದುಕೊಳ್ಳದೆ ತಪ್ಪು ಅಭಿಪ್ರಾಯದಲ್ಲಿದ್ದೀರಿ; 30ಪುನರುತ್ಥಾನವಾದ ಮೇಲೆ ಮದುವೆಮಾಡಿಕೊಳ್ಳುವುದೂ ಇಲ್ಲ, ಮದುವೆ ಮಾಡಿಕೊಡುವುದೂ ಇಲ್ಲ; ಪರಲೋಕದಲ್ಲಿರುವ ದೇವದೂತರಂತೆ ಅವರು ಇರುತ್ತಾರೆ. 31ಸತ್ತವರ ಪುನರುತ್ಥಾನದ ವಿಷಯವಾಗಿ ಹೇಳಬೇಕಾದರೆ, 32‘ನಾನು ಅಬ್ರಹಾಮನ ದೇವರು, ಇಸಾಕನ ದೇವರು, ಯಾಕೋಬನ ದೇವರು’ ಎಂದು ದೇವರು ನಿಮಗೆ ನುಡಿದಿದ್ದನ್ನು ನೀವು ಓದಲಿಲ್ಲವೇ. ಆತನು ಸತ್ತವರಿಗೆ ದೇವರಲ್ಲ, ಆದರೆ ಜೀವಿಸುವವರಿಗೆ ದೇವರಾಗಿದ್ದಾನೆ” ಎಂದು ಹೇಳಿದನು. 33ಜನರ ಗುಂಪು ಅದನ್ನು ಕೇಳಿ ಆತನ ಬೋಧನೆಗೆ ಆಶ್ಚರ್ಯಪಟ್ಟರು.

ಸುವಾರ್ತೆ (ಶನಿವಾರಕ್ಕೆ)

ಮತ್ತಾ 17:24–18:4

24ಅವರು ಕಪೆರ್ನೌಮಿಗೆ ಬಂದಾಗ ದೇವಾಲಯಕ್ಕಾಗಿ ತೆರಿಗೆಯನ್ನು ಸಂಗ್ರಹಿಸುವವರು ಪೇತ್ರನ ಬಳಿಗೆ ಬಂದು, “ನಿಮ್ಮ ಗುರುವು ದೇವಾಲಯದ ತೆರಿಗೆಯನ್ನು ಕಟ್ಟುವುದಿಲ್ಲವೇ” ಎಂದು ಕೇಳಲು, “ಹೌದು ಕಟ್ಟುವನು” ಅಂದನು. 25ಪೇತ್ರನು ಮನೆಯೊಳಗೆ ಬಂದಾಗ, ಅವನು ಬಾಯಿ ತೆರೆದು ಮಾತನಾಡುವ ಮೊದಲೇ, ಯೇಸು ಅವನಿಗೆ, “ಸೀಮೋನನೇ, ನಿನಗೆ ಹೇಗೆ ತೋರುತ್ತದೆ? ಭೂಲೋಕದ ಅರಸರು ಕಂದಾಯವನ್ನಾಗಲಿ ತೆರಿಗೆಯನ್ನಾಗಲಿ ಯಾರಿಂದ ತೆಗೆದುಕೊಳ್ಳುತ್ತಾರೆ? ತಮ್ಮ ಪ್ರಜೆಗಳಿಂದಲೋ ಅಥವಾ ಪರರಿಂದಲೋ?” ಎಂದು ಕೇಳಿದನು. 26ಅವನು, “ಪರರಿಂದ” ಎಂದು ಉತ್ತರ ಕೊಡಲು, ಯೇಸು ಅವನಿಗೆ, “ಹಾಗಾದರೆ ಪ್ರಜೆಗಳು ಅದನ್ನು ಕೊಡಬೇಕಾಗಿಲ್ಲವೇ. 27ಆದರೂ ನಾವು ಅವರಿಗೆ ಅಡ್ಡಿಯಾಗದಂತೆ, ನೀನು ಸಮುದ್ರಕ್ಕೆ ಹೋಗಿ ಗಾಳವನ್ನು ಹಾಕಿ ಮೊದಲು ಸಿಕ್ಕುವ ಮೀನನ್ನು ಹಿಡಿದು, ಅದರ ಬಾಯಿ ತೆರೆದು ನೋಡು ಅದರಲ್ಲಿ ಒಂದು ಬೆಳ್ಳಿ ನಾಣ್ಯ ಸಿಕ್ಕುವುದು. ಅದನ್ನು ತೆಗೆದುಕೊಂಡು ನನಗೋಸ್ಕರ ಮತ್ತು ನಿನಗೋಸ್ಕರ ತೆರಿಗೆ ಹಣ ಕೊಡು” ಎಂದು ಹೇಳಿದನು. 18:1ಆದೇ ವೇಳೆಯಲ್ಲಿ ಶಿಷ್ಯರು ಯೇಸುವಿನ ಬಳಿ ಬಂದು, “ಪರಲೋಕ ರಾಜ್ಯದಲ್ಲಿ ಯಾವನು ದೊಡ್ಡವನು?” ಎಂದು ಕೇಳಿದರು. 2ಆತನು ಚಿಕ್ಕ ಮಗುವನ್ನು ಹತ್ತಿರಕ್ಕೆ ಕರೆದು ಅವರ ನಡುವೆ ನಿಲ್ಲಿಸಿ, 3ಅವರಿಗೆ, “ನಿಮ್ಮ ಮನಸ್ಸು ಪರಿವರ್ತನೆಕೊಂಡು ಚಿಕ್ಕ ಮಕ್ಕಳಂತೆ ಆಗದೇ ಹೋದರೆ ನೀವು ಪರಲೋಕ ರಾಜ್ಯದಲ್ಲಿ ಪ್ರವೇಶಿಸುವುದೇ ಇಲ್ಲವೆಂದು ನಿಮಗೆ ಸತ್ಯವಾಗಿ ಹೇಳುತ್ತೇನೆ. 4ಹೀಗಿರುವುದರಿಂದ ಯಾವನು ಈ ಚಿಕ್ಕ ಮಗುವಿನಂತೆ ತನ್ನನ್ನು ತಾನೇ ತಗ್ಗಿಸಿಕೊಳ್ಳುತ್ತಾನೋ ಅವನೇ ಪರಲೋಕ ರಾಜ್ಯದಲ್ಲಿ ದೊಡ್ಡವನು.

ದಿನಾಂಕಗಳು ರಷ್ಯನ್ ಸಭೆಯ ಜೂಲಿಯನ್ ಪಂಚಾಂಗದ ಪ್ರಕಾರ ಇವೆ (ಸರ್ಬಿಯನ್ ಮತ್ತು ಜಾರ್ಜಿಯನ್ ಸಭೆಗಳು ಮತ್ತು ಅಥೋಸ್ ಪರ್ವತದಂತೆ): ಸಭೆಯ ಪಂಚಾಂಗದ 14 ಆಗಸ್ಟ್ ಎಂದರೆ ನಾಗರಿಕ ಪಂಚಾಂಗದ 27 ಆಗಸ್ಟ್. ಹೊಸ ಪಂಚಾಂಗದ ಸಭೆಗಳು (ಗ್ರೀಸ್, ರೊಮೇನಿಯಾ, ಬಲ್ಗೇರಿಯಾ, ಉಕ್ರೇನ್…) ನಿಗದಿತ ದಿನಾಂಕದ ಹಬ್ಬಗಳನ್ನೂ ಸಂತರನ್ನೂ ಅದೇ ನಾಗರಿಕ ದಿನಾಂಕದಂದು, 13 ದಿನಗಳ ಮುಂಚೆ, ಆಚರಿಸುತ್ತವೆ, ಮತ್ತು ಅವುಗಳ ಕೆಲವು ವಾಚನಗಳು ಬೇರೆಯಾಗಿವೆ; ಈಸ್ಟರ್ ಮತ್ತು ಅದನ್ನು ಅವಲಂಬಿಸಿರುವ ದಿನಗಳು ಒಂದೇ ಆಗಿವೆ.

ಮೂಲಗಳು: ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ · © 2017, 2019 Bridge Connectivity Solutions, CC BY-SA 4.0; changed: footnotes, headings and the letters over Psalm 119 left out, verses in the app's numbering. · ಮೂಲಗಳು ಮತ್ತು ಹಕ್ಕುಗಳು