ಮುಖಪುಟ › ದೈನಂದಿನ ಬೈಬಲ್ ವಾಚನಗಳು › ಆಗಸ್ಟ್ 2027 › 28 ಆಗಸ್ಟ್
ಕ್ಯಾಥೊಲಿಕ್ ಪಂಚಾಂಗ
ದೈನಂದಿನ ಬೈಬಲ್ ವಾಚನಗಳು (ಕಥೋಲಿಕ) — 28 ಆಗಸ್ಟ್ 2027
ಶನಿವಾರ · ಸಾಮಾನ್ಯ ಕಾಲದ 21ನೇ ವಾರ
ಹಬ್ಬಗಳು ಮತ್ತು ಸಂತರು
ಸಾಮಾನ್ಯ ಕಾಲದ 21ನೇ ವಾರದ ಶನಿವಾರ
ಸ್ಮರಣೆ · ಆರಾಧನಾ ಬಣ್ಣ: ಬಿಳಿ
ಹಿಪ್ಪೋದ ಸಂತ ಅಗಸ್ಟೀನ್, ಧರ್ಮಾಧ್ಯಕ್ಷ ಮತ್ತು ಧರ್ಮಸಭೆಯ ಪಂಡಿತ · ಸ್ಮರಣೆ
ದಿನದ ವಾಚನಗಳು
ಮೊದಲನೆಯ ವಾಚನ
9ಸಹೋದರ ಸ್ನೇಹದ ವಿಷಯದಲ್ಲಿ ನಿಮಗೆ ಬರೆಯುವ ಅವಶ್ಯಕತೆಯಿಲ್ಲ, ಒಬ್ಬರನ್ನೊಬ್ಬರು ಪ್ರೀತಿಸಬೇಕೆಂಬ ಉಪದೇಶವನ್ನು ನೀವೇ ದೇವರಿಂದ ಹೊಂದಿದವರಾಗಿದ್ದೀರಿ. 10ಮಕೆದೋನ್ಯದಲ್ಲಿ ವಾಸಿಸುವ ಎಲ್ಲ ಸಹೋದರರನ್ನೂ ಪ್ರೀತಿಸುತ್ತಿರುವುದೇನೋ ನಿಜವೇ. ಆದರೂ ಸಹೋದರರೇ, ನೀವು ಪ್ರೀತಿಯಲ್ಲಿ ಇನ್ನೂ ಹೆಚ್ಚುತ್ತಾ ಬರಬೇಕೆಂದು ನಿಮ್ಮನ್ನು ಉತ್ತೇಜಿಸುತ್ತೇವೆ. 11ಇದಲ್ಲದೆ ನಾವು ನಿಮಗೆ ಆಜ್ಞೆ ಕೊಟ್ಟಿರುವ ಪ್ರಕಾರ ನೀವು ಮತ್ತೊಬ್ಬರ ವಿಷಯದಲ್ಲಿ ತಲೆಹಾಕದೆ ಸುಮ್ಮಗಿದ್ದು, ಸ್ವಂತ ಕಾರ್ಯಗಳನ್ನೇ ನೋಡಿಕೊಳ್ಳುತ್ತಾ, ಕೈಯಾರೆ ಕೆಲಸಮಾಡಿ ದುಡಿಯಿರಿ.
ಪ್ರತಿವಚನ ಕೀರ್ತನೆ
1ಯೆಹೋವನಿಗೆ ಹೊಸ ಕೀರ್ತನೆಯನ್ನು ಹಾಡಿರಿ; ಆತನು ಅದ್ಭುತಕೃತ್ಯಗಳನ್ನು ನಡೆಸಿದ್ದಾನೆ. ಆತನ ಬಲಗೈಯೂ, ಪರಿಶುದ್ಧಬಾಹುವೂ ಜಯವನ್ನು ಉಂಟುಮಾಡಿವೆ. 7ಯೆಹೋವನ ಮುಂದೆ ಸಮುದ್ರವೂ, ಅದರಲ್ಲಿರುವುದೆಲ್ಲವೂ, ಭೂಮಿಯೂ, ಅದರ ನಿವಾಸಿಗಳೂ ಘೋಷಿಸಲಿ. 8ನದಿಗಳು ಚಪ್ಪಾಳೆ ಹೊಡೆಯಲಿ; ಪರ್ವತಗಳೆಲ್ಲಾ ಉತ್ಸಾಹಧ್ವನಿಮಾಡಲಿ. 9ಆತನು ಭೂನಿವಾಸಿಗಳಿಗೆ ನ್ಯಾಯತೀರಿಸಲಿಕ್ಕೆ ಬರುತ್ತಾನೆ; ಆತನು ಲೋಕಕ್ಕೆ ನೀತಿಗನುಸಾರವಾಗಿಯೂ, ಜನಾಂಗಗಳಿಗೆ ಯಥಾರ್ಥವಾಗಿಯೂ ತೀರ್ಪುಕೊಡುವನು.
ಸುವಾರ್ತೆ
14“ದೇವರ ರಾಜ್ಯವು ಹೇಗೆಂದರೆ ದೇಶಾಂತರಕ್ಕೆ ಹೊರಟ್ಟಿದ್ದ ಒಬ್ಬ ಮನುಷ್ಯನು ತನ್ನ ಸೇವಕರನ್ನು ಕರೆದು ಅವರಿಗೆ ತನ್ನ ಆಸ್ತಿಯನ್ನು ಒಪ್ಪಿಸಿಕೊಟ್ಟಂತಿರುವುದು. 15ಅವನು ಒಬ್ಬನಿಗೆ ಐದು ತಲಾಂತು, ಇನ್ನೊಬ್ಬನಿಗೆ ಎರಡು, ಮತ್ತೊಬ್ಬನಿಗೆ ಒಂದು, ಹೀಗೆ ಅವನವನ ಸಾಮರ್ಥ್ಯದ ಪ್ರಕಾರ ತಲಾಂತನ್ನು ವಹಿಸಿಕೊಟ್ಟು ತನ್ನ ಪ್ರಯಾಣಕ್ಕೆ ಹೋದನು. 16ತಕ್ಷಣವೇ ಐದು ತಲಾಂತು ಹೊಂದಿದವನು ಹೋಗಿ ಅದನ್ನು ವ್ಯಾಪಾರಕ್ಕೆ ಹಾಕಿ ಇನ್ನೂ ಐದು ತಲಾಂತು ಗಳಿಸಿಕೊಂಡನು. 17ಹಾಗೆಯೇ ಎರಡು ತಲಾಂತು ಹೊಂದಿದವನು ಇನ್ನೂ ಎರಡು ಸಂಪಾದಿಸಿಕೊಂಡನು. 18ಆದರೆ ಒಂದು ತಲಾಂತು ಹೊಂದಿದವನು ಹೋಗಿ ಭೂಮಿಯನ್ನು ಅಗೆದು ತನ್ನ ಯಜಮಾನನ ಹಣವನ್ನು ಬಚ್ಚಿಟ್ಟನು. 19ಬಹುಕಾಲದ ಮೇಲೆ ಆ ಸೇವಕರ ಯಜಮಾನನು ಬಂದು ಅವರಿಂದ ಲೆಕ್ಕ ತೆಗೆದುಕೊಳ್ಳಲು 20ಐದು ತಲಾಂತುಗಳು ಹೊಂದಿದವನು ಮುಂದೆ ಬಂದು ಇನ್ನೂ ಐದು ತಲಾಂತುಗಳನ್ನು ತಂದು, ‘ಯಜಮಾನನೇ, ನೀನು ಐದು ತಲಾಂತಗಳನ್ನು ನನಗೆ ಕೊಟ್ಟಿದ್ದೆಯಲ್ಲಾ, ಇಗೋ, ಇನ್ನು ಐದು ತಲಾಂತು ಸಂಪಾದಿಸಿದ್ದೇನೆ’ ಅಂದನು. 21ಅವನ ಯಜಮಾನನು ಅವನಿಗೆ, ‘ಭಲಾ, ನಂಬಿಗಸ್ತನಾದ ಒಳ್ಳೆಯ ಸೇವಕನೇ; ನೀನು ಸ್ವಲ್ಪ ಕೆಲಸದಲ್ಲಿ ಪ್ರಾಮಾಣಿಕನಾಗಿದ್ದಿ; ದೊಡ್ಡ ಕೆಲಸದಲ್ಲಿ ನಿನ್ನನ್ನು ಇಡುತ್ತೇನೆ; ನಿನ್ನ ಒಡೆಯನ ಸಂತೋಷದಲ್ಲಿ ಸೇರು’ ಅಂದನು. 22ಆಗ ಎರಡು ತಲಾಂತು ಹೊಂದಿದವನು ಮುಂದೆ ಬಂದು, ‘ಯಜಮಾನನೇ, ನೀನು ಎರಡು ತಲಾಂತನ್ನು ನನಗೆ ಒಪ್ಪಿಸಿದ್ದೆಯಲ್ಲಾ; ಇಗೋ, ಇನ್ನು ಎರಡು ತಲಾಂತು ಸಂಪಾದಿಸಿದ್ದೇನೆ’ ಅಂದನು. 23ಅವನ ಯಜಮಾನನು ಅವನಿಗೆ, ‘ಭಲಾ, ನಂಬಿಗಸ್ತನಾದ ಒಳ್ಳೆಯ ಸೇವಕನೇ; ನೀನು ಸ್ವಲ್ಪ ಕೆಲಸದಲ್ಲಿ ಪ್ರಾಮಾಣಿಕನಾಗಿದ್ದಿ, ದೊಡ್ಡ ಕೆಲಸದಲ್ಲಿ ನಿನ್ನನ್ನು ಇಡುತ್ತೇನೆ; ನಿನ್ನ ಒಡೆಯನ ಸಂತೋಷದಲ್ಲಿ ಸೇರು’ ಎಂದು ಹೇಳಿದನು. 24ತರುವಾಯ ಒಂದು ತಲಾಂತು ಹೊಂದಿದವನು ಸಹ ಮುಂದೆಬಂದು, ‘ಯಜಮಾನನೇ, ನೀನು ಬಿತ್ತದಿರುವಲ್ಲಿ ಕೊಯ್ಯುವವನು, ನೀನು ತೂರದಿರುವಲ್ಲಿ ರಾಶಿಮಾಡಿಕೊಳ್ಳುವವನು ಆಗಿರುವ ಕಠಿಣ ಮನುಷ್ಯನು ಎಂದು ನಾನು ತಿಳಿದು 25ಹೆದರಿ, ಹೊರಟುಹೋಗಿ ನಿನ್ನ ತಲಾಂತನ್ನು ಭೂಮಿಯಲ್ಲಿ ಬಚ್ಚಿಟ್ಟೆನು; ಇಗೋ, ನಿನ್ನದು ನಿನಗೇ ಸಲ್ಲಿಸುತ್ತಿದ್ದೇನೆ’ ಅಂದನು. 26ಆಗ ಅವನ ಯಜಮಾನನು ಅವನಿಗೆ, ‘ಮೈಗಳ್ಳನಾದ ದುಷ್ಟ ಸೇವಕನೇ; ನೀನು ನನ್ನನ್ನು ಬಿತ್ತದಿರುವಲ್ಲಿ ಕೊಯ್ಯುವವನು ತೂರದಿರುವಲ್ಲಿ ರಾಶಿಮಾಡಿಕೊಳ್ಳುವವನು ಎಂದು ತಿಳಿದಿದ್ದೇಯಾ? 27ಹಾಗಾದರೆ, ನೀನು ನನ್ನ ಹಣವನ್ನು ಸಾಹುಕಾರರಲ್ಲಿ ಬಡ್ಡಿಗೆ ಹಾಕಬೇಕಾಗಿತ್ತು; ನಾನು ಬಂದು ನನ್ನದನ್ನು ಬಡ್ಡಿ ಸಹಿತ ಪಡೆದುಕೊಳ್ಳುತ್ತಿದ್ದೆನು ಎಂದು ಹೇಳಿ, 28ಅವನಿಂದ ಆ ತಲಾಂತನ್ನು ತೆಗೆದು ಹತ್ತು ತಲಾಂತು ಇರುವ ಸೇವಕನಿಗೆ ಕೊಟ್ಟನು. 29ಇದ್ದವರಿಗೆ ಇನ್ನೂ ಹೆಚ್ಚಾಗಿ ಕೊಡಲ್ಪಡುವುದು, ಅವರಿಗೆ ಇನ್ನೂ ಹೆಚ್ಚಾಗುವುದು; ಇಲ್ಲದವನ ಕಡೆಯಿಂದ ಇದ್ದದ್ದೂ ತೆಗೆಯಲ್ಪಡುವುದು. 30ಮತ್ತು ನಿಷ್ಪ್ರಯೋಜಕನಾದ ಈ ಸೇವಕನನ್ನು ಹೊರಗೆ ಕಗ್ಗತ್ತಲೆಗೆ ಹಾಕಿಬಿಡಿರಿ ಎಂದು ಅಪ್ಪಣೆಕೊಟ್ಟನು. ಅಲ್ಲಿ ಗೋಳಾಟವೂ ಕಟಕಟನೆ ಹಲ್ಲುಕಡಿಯೋಣವೂ ಇರುವವು.’
ಇಂದಿನ ಸಂತರು
- ಹಿಪ್ಪೋದ ಸಂತ ಅಗಸ್ಟೀನ್, ಧರ್ಮಾಧ್ಯಕ್ಷ ಮತ್ತು ಧರ್ಮಸಭೆಯ ಪಂಡಿತ
ಸಾಮಾನ್ಯ ರೋಮನ್ ಪಂಚಾಂಗ; ಬಿಷಪರ ಸಮ್ಮೇಳನವು ಕೆಲವು ಹಬ್ಬಗಳನ್ನು (ಪ್ರಭುವಿನ ಪ್ರಕಟನೆ, ಸ್ವರ್ಗಾರೋಹಣ, ಕ್ರಿಸ್ತನ ದೇಹ ಮತ್ತು ರಕ್ತ) ಭಾನುವಾರಕ್ಕೆ ಸರಿಸಬಹುದು ಅಥವಾ ತನ್ನದೇ ಹಬ್ಬಗಳನ್ನು ಸೇರಿಸಬಹುದು. ವಾಚನ ಸಂಗ್ರಹ: ಭಾನುವಾರದ ಚಕ್ರ B, ವಾರದ ದಿನಗಳ ವರ್ಷ I.
ಮೂಲಗಳು: ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ · © 2017, 2019 Bridge Connectivity Solutions, CC BY-SA 4.0; changed: footnotes, headings and the letters over Psalm 119 left out, verses in the app's numbering. · ಮೂಲಗಳು ಮತ್ತು ಹಕ್ಕುಗಳು