ಮುಖಪುಟ › ದೈನಂದಿನ ಬೈಬಲ್ ವಾಚನಗಳು › ಆಗಸ್ಟ್ 2027 › 28 ಆಗಸ್ಟ್
ಆರ್ಥೊಡಾಕ್ಸ್ ಪಂಚಾಂಗ · ಆಗಸ್ಟ್ 15 (ಹಳೆಯ ಪದ್ಧತಿ)
ಆರ್ಥೊಡಾಕ್ಸ್ ದೈನಂದಿನ ವಾಚನಗಳು — 28 ಆಗಸ್ಟ್ 2027
ಶನಿವಾರ · ಪಂಚಾಶತ್ತಮದ ನಂತರದ 10ನೇ ವಾರ · ಸ್ವರ 8
ಹಬ್ಬಗಳು ಮತ್ತು ಸಂತರು
The Dormition (Repose) of our Most Holy Lady Theotokos and Ever-Virgin Mary
ಉಪವಾಸ
ಉಪವಾಸವಿಲ್ಲ
ಇದು ಮಠದ ನಿಯಮವನ್ನು ಅನುಸರಿಸುತ್ತದೆ. ಸಭೆಯಲ್ಲಿ ಉಪವಾಸದ ಪ್ರಮಾಣವನ್ನು ಆರೋಗ್ಯ, ವಯಸ್ಸು ಮತ್ತು ಸಂದರ್ಭಗಳಿಗೆ ಅನುಗುಣವಾಗಿ ಪಾಪನಿವೇದನೆಯ ಗುರುವಿನೊಂದಿಗೆ ಸೇರಿ ನಿರ್ಧರಿಸಲಾಗುತ್ತದೆ.
ದಿನದ ವಾಚನಗಳು
ಸಂಧ್ಯಾ ಪ್ರಾರ್ಥನೆ: ವಾಚನ
10ಆಗ ಯಾಕೋಬನು ಹಾರಾನಿಗೆ ಹೋಗಬೇಕೆಂದು ಬೇರ್ಷೆಬದಿಂದ ಹೊರಟನು. 11ಅವನು ಪ್ರಯಾಣಾರ್ಥವಾಗಿ ಹೋಗುತ್ತಿರುವಾಗ ಹೊತ್ತು ಮುಳುಗಿದ್ದರಿಂದ ಆ ರಾತ್ರಿ ಅಲ್ಲಿಯೇ ಉಳಿದುಕೊಂಡನು. ಅವನು ಅಲ್ಲಿದ್ದ ಕಲ್ಲುಗಳಲ್ಲಿ ಒಂದು ಕಲ್ಲನ್ನು ತಲೆದಿಂಬಾಗಿ ಇಟ್ಟುಕೊಂಡು ಆ ಸ್ಥಳದಲ್ಲಿ ಮಲಗಿಕೊಂಡನು. 12ಆ ರಾತ್ರಿ ಅವನು ಒಂದು ಕನಸು ಕಂಡನು. ಆ ಕನಸಿನಲ್ಲಿ ಒಂದು ಏಣಿಯು ಭೂಮಿಯ ಮೇಲೆ ನಿಂತಿತು. ಅದರ ತುದಿ ಆಕಾಶವನ್ನು ಮುಟ್ಟಿತು. ಅದರ ಮೇಲೆ ದೇವ ದೂತರು ಏರುತ್ತಾ ಇಳಿಯುತ್ತಾ ಇದ್ದರು. 13ಇದಲ್ಲದೆ ಯೆಹೋವನು ಅದರ ಮೇಲೆ ನಿಂತುಕೊಂಡು, “ನಿನ್ನ ತಂದೆಯಾದ ಅಬ್ರಹಾಮನ ದೇವರೂ, ಇಸಾಕನ ದೇವರೂ ಆಗಿರುವ ಯೆಹೋವನು ನಾನೇ. ನೀನು ಮಲಗಿರುವ ಭೂಮಿಯನ್ನು ನಿನಗೂ, ನಿನ್ನ ಸಂತತಿಗೂ ಕೊಡುವೆನು. 14ನಿನ್ನ ಸಂತತಿಯು ಭೂಮಿಯ ಧೂಳಿನಷ್ಟು ಅಸಂಖ್ಯವಾಗುವುದು. ನೀನು ಪೂರ್ವ, ಪಶ್ಚಿಮ, ದಕ್ಷಿಣ ಉತ್ತರ ದಿಕ್ಕುಗಳಿಗೆ ಹರಡಿಕೊಳ್ಳುವಿ. ನಿನ್ನಿಂದಲೂ, ನಿನ್ನ ಸಂತತಿಯಿಂದಲೂ, ಭೂಮಿಯ ಎಲ್ಲಾ ಕುಲದವರು ಆಶೀರ್ವಾದ ಹೊಂದುವರು. 15ಇಗೋ, ನಾನು ನಿನ್ನ ಸಂಗಡ ಇದ್ದು ನೀನು ಹೋಗುವಲ್ಲೆಲ್ಲಾ ನಿನ್ನನ್ನು ಕಾಪಾಡಿ, ಪುನಃ ಈ ದೇಶಕ್ಕೆ ಬರಮಾಡುವೆನು. ಏಕೆಂದರೆ ನಾನು ನಿನಗೆ ಹೇಳಿದ್ದನ್ನೆಲ್ಲಾ ನೆರವೇರಿಸದ ಹೊರತು ಬಿಡುವುದಿಲ್ಲ” ಎಂದನು. 16ಯಾಕೋಬನು ನಿದ್ದೆಯಿಂದ ಎಚ್ಚೆತ್ತು, “ನಿಜವಾಗಿ ಯೆಹೋವನು ಈ ಸ್ಥಳದಲ್ಲಿ ನೆಲೆಸಿದ್ದಾನೆ. ಇದು ನನಗೆ ತಿಳಿಯದೆ ಹೋಯಿತು” ಎಂದನು. 17ಅವನು ಭಯಪಟ್ಟವನಾಗಿ, “ಈ ಸ್ಥಳವು ಪವಿತ್ರವಾದ್ದದು. ಇದು ದೇವರ ಮನೆಯೇ ಹೊರತು ಬೇರೆಯಲ್ಲ, ಇದು ಪರಲೋಕದ ಬಾಗಿಲು” ಎಂದನು.
ಸಂಧ್ಯಾ ಪ್ರಾರ್ಥನೆ: ವಾಚನ
27ಏಳು ದಿನಗಳ ಕಾರ್ಯವನ್ನು ಮುಗಿಸಿದ ಬಳಿಕ, ಎಂಟನೆಯ ದಿನದಿಂದ ಯಾಜಕರು ಯಜ್ಞವೇದಿಯ ಮೇಲೆ ನಿಮ್ಮ ಪಕ್ಷವಾಗಿ ಸರ್ವಾಂಗಹೋಮಗಳನ್ನೂ ಸಮಾಧಾನಯಜ್ಞಗಳನ್ನೂ ಮಾಡಬೇಕು. ಆಗ ನಾನು ನಿಮ್ಮನ್ನು ಅಂಗೀಕರಿಸುವೆನು” ಇದು ಕರ್ತನಾದ ಯೆಹೋವನ ನುಡಿ. 44:1ತರುವಾಯ ಆ ಪುರುಷನು ನನ್ನನ್ನು ಪವಿತ್ರಾಲಯದ ಪೂರ್ವದಿಕ್ಕಿನ ಹೊರಗಿನ ಹೆಬ್ಬಾಗಿಲಿಗೆ ತಿರುಗಿ ಕರೆದುಕೊಂಡು ಬಂದನು. ಅದು ಮುಚ್ಚಲ್ಪಟ್ಟಿತ್ತು. 2ಆಗ ಯೆಹೋವನು ನನಗೆ, “ಈ ಬಾಗಿಲು ಮುಚ್ಚಲ್ಪಟ್ಟಿರಬೇಕು, ಇದನ್ನು ತೆರೆಯಬಾರದು, ಇದರಿಂದ ಯಾರೂ ಪ್ರವೇಶಿಸಬಾರದು. ಇಸ್ರಾಯೇಲಿನ ದೇವರಾದ ಯೆಹೋವನು ಇದರಿಂದ ಪ್ರವೇಶಿಸಿದ್ದಾನೆ. ಆದುದರಿಂದ ಇದು ಮುಚ್ಚಿರಬೇಕು. 3ಇಸ್ರಾಯೇಲಿನ ಪ್ರಭುವೋ ಯೆಹೋವನ ಸನ್ನಿಧಿಯಲ್ಲಿ ಊಟ ಮಾಡುವುದಕ್ಕಾಗಿ ಇಲ್ಲಿ ಕುಳಿತುಕೊಳ್ಳಬಹುದು. ಅವನು ಹೆಬ್ಬಾಗಿಲ ಪಡಸಾಲೆಯ ಮಾರ್ಗವಾಗಿ ಪ್ರವೇಶಿಸಿ, ಅದೇ ಮಾರ್ಗವಾಗಿ ಹೊರಗೆ ಹೋಗಬೇಕು” ಎಂದು ಹೇಳಿದನು. 4ಬಳಿಕ ಆ ಪುರುಷನು ಉತ್ತರದಿಕ್ಕಿನ ಹೆಬ್ಬಾಗಿಲಿನ ಮಾರ್ಗವಾಗಿ ನನ್ನನ್ನು ಆಲಯದ ಮುಂದೆ ಕರೆದುಕೊಂಡು ತಂದನು; ಆಹಾ, ನಾನು ನೋಡಿದ ಯೆಹೋವನ ಮಹಿಮೆಯೂ, ಯೆಹೋವನ ಆಲಯವನ್ನು ತುಂಬಿಕೊಂಡಿತು. ಅದನ್ನು ನೋಡಿ ನಾನು ಬೋರಲು ಬಿದ್ದೆನು.
ಸಂಧ್ಯಾ ಪ್ರಾರ್ಥನೆ: ವಾಚನ
1ಜ್ಞಾನವೆಂಬಾಕೆಯು ಏಳು ಕಂಬಗಳನ್ನು ಕಡಿದು, ತನ್ನ ಮನೆಯನ್ನು ಕಟ್ಟಿಕೊಂಡಿದ್ದಾಳೆ. 2ಆಕೆ ಪಶುಗಳನ್ನು ಕೊಯಿಸಿ ಪಾನದ್ರವ್ಯಗಳೊಡನೆ ದ್ರಾಕ್ಷಾರಸವನ್ನು ಬೆರಸಿ, ಔತಣವನ್ನು ಸಿದ್ಧಪಡಿಸಿದ್ದಾಳೆ. 3ಆಕೆಯು ತನ್ನ ದಾಸಿಯರನ್ನು ಕಳುಹಿಸಿ, ಪಟ್ಟಣದ ರಾಜಮಾರ್ಗಗಳ ಮುಖ್ಯಸ್ಥಾನಗಳಲ್ಲಿ ಪ್ರಕಟಿಸುತ್ತಾಳೆ. 4ಆಕೆಯು ಬುದ್ಧಿಹೀನರಿಗೆ, “ಮೂಢನಾಗಿರುವವನು ಈ ಕಡೆಗೆ ತಿರುಗಲಿ, 5ಬನ್ನಿರಿ, ನಾನು ಬಡಿಸುವ ಆಹಾರವನ್ನು ಉಣ್ಣಿರಿ, ನಾನು ಬೆರೆಸಿರುವ ದ್ರಾಕ್ಷಾರಸವನ್ನು ಕುಡಿಯಿರಿ. 6ಮೂಢರೇ ಮೂಢತ್ವವನ್ನು ಬಿಟ್ಟು ಬಾಳಿರಿ, ವಿವೇಕಮಾರ್ಗದಲ್ಲಿ ನೆಟ್ಟಗೆ ನಡೆಯಿರಿ” ಎಂದು ಪ್ರಬೋಧಿಸುತ್ತಾಳೆ. 7ಧರ್ಮನಿಂದಕನನ್ನು ಶಿಕ್ಷಿಸುವವನು ತನ್ನನ್ನು ಅವಮಾನಕ್ಕೆ ಗುರಿಮಾಡಿಕೊಳ್ಳುವನು, ಕೆಟ್ಟವನನ್ನು ಗದರಿಸುವವನಿಗೇ ಕಳಂಕವಾಗುವುದು. 8ಧರ್ಮನಿಂದಕನನ್ನು ಗದರಿಸಬೇಡ, ನಿನ್ನನ್ನು ಹಗೆಮಾಡುವನು. ಜ್ಞಾನವಂತನನ್ನು ಗದರಿಸಿದರೆ ನಿನ್ನನ್ನು ಪ್ರೀತಿಸುವನು. 9ಜ್ಞಾನಿಗೆ ಉಪದೇಶಿಸಿದರೆ ಹೆಚ್ಚು ಜ್ಞಾನವನ್ನು ಹೊಂದುವನು, ನೀತಿವಂತನಿಗೆ ಬೋಧಿಸಿದರೆ ಹೆಚ್ಚು ತಿಳಿವಳಿಕೆಯನ್ನು ಪಡೆಯುವನು. 10ಯೆಹೋವನ ಭಯವೇ ಜ್ಞಾನಕ್ಕೆ ಮೂಲವು, ಪರಿಶುದ್ಧ ದೇವರ ತಿಳಿವಳಿಕೆಯೇ ವಿವೇಕವು. 11ನನ್ನಿಂದ ನಿನ್ನ ದಿನಗಳು ಹೆಚ್ಚುವವು, ನಿನ್ನ ಆಯುಷ್ಯದ ವರ್ಷಗಳು ವೃದ್ಧಿಯಾಗುವವು.
ಉದಯಕಾಲದ ಪ್ರಾರ್ಥನೆ: ಸುವಾರ್ತೆ
39ಇದಾದ ನಂತರ ಮರಿಯಳು ಎದ್ದು ತ್ವರೆಯಾಗಿ ಯೆಹೂದದ ಮಲೆನಾಡಿನಲ್ಲಿರುವ ಒಂದು ಊರಿಗೆ ಹೋದಳು. 40ಜಕರೀಯನ ಮನೆಯನ್ನು ಸೇರಿ ಎಲಿಸಬೇತಳಿಗೆ ವಂದಿಸಿದಳು. 41ಎಲಿಸಬೇತಳು ಮರಿಯಳ ವಂದನೆಯನ್ನು ಕೇಳುತ್ತಲೇ ಆಕೆಯ ಗರ್ಭದಲ್ಲಿದ್ದ ಕೂಸು ಕುಣಿದಾಡಿತು ಮತ್ತು ಎಲಿಸಬೇತಳು ಪವಿತ್ರಾತ್ಮಭರಿತಳಾದಳು. 42ಆಗ ಆಕೆಯು ಮಹಾಧ್ವನಿಯಿಂದ ಕೂಗಿ, “ನೀನು ಸ್ತ್ರೀಯರೊಳಗೆ ಧನ್ಯಳು, ಮತ್ತು ನಿನ್ನಲ್ಲಿ ಹುಟ್ಟುವ ಕೂಸು ಆಶೀರ್ವಾದ ಹೊಂದಿದ್ದು. 43ನನ್ನ ಕರ್ತನ ತಾಯಿಯು ನನ್ನ ಬಳಿಗೆ ಬರುವಷ್ಟು ಸೌಭಾಗ್ಯ ನನಗೆ ಎಲ್ಲಿಂದಾಯಿತು? 44ಇಗೋ, ನಿನ್ನ ವಂದನೆಯು ನನ್ನ ಕಿವಿಗೆ ಬೀಳುತ್ತಲೇ ಕೂಸು ನನ್ನ ಗರ್ಭದಲ್ಲಿ ಉಲ್ಲಾಸದಿಂದ ಕುಣಿದಾಡಿತು. 45ಕರ್ತನು ನಿನಗೆ ಹೇಳಿದ ಮಾತುಗಳು ನೆರವೇರುವವು ಅಂದಳು. ಇದನ್ನು ನಂಬಿದವಳಾದ ನೀನು ಧನ್ಯಳು.” 46ಆಗ ಮರಿಯಳು, “ನನ್ನ ಪ್ರಾಣವು ಕರ್ತನನ್ನು ಕೊಂಡಾಡುತ್ತದೆ, 47ನನ್ನ ಆತ್ಮವು ನನ್ನ ರಕ್ಷಕನಾದ ದೇವರಲ್ಲಿ ಉಲ್ಲಾಸಗೊಂಡಿದೆ. 48ಆತನು ತನ್ನ ದಾಸಿಯ ದೀನಸ್ಥಿತಿಯ ಮೇಲೆ ಲಕ್ಷ್ಯವಿಟ್ಟಿದ್ದಾನೆ. ಇಗೋ, ಇಂದಿನಿಂದ ತಲತಲಾಂತರದವರೆಗೆ ಎಲ್ಲರೂ ನನ್ನನ್ನು ಧನ್ಯಳೆಂದು ಹೊಗಳುವರು, 49ಏಕೆಂದರೆ ಶಕ್ತನಾಗಿರುವಾತನು ನನಗೆ ದೊಡ್ಡ ಉಪಕಾರಗಳನ್ನು ಮಾಡಿದ್ದಾನೆ; ಆತನ ನಾಮವು ಪರಿಶುದ್ಧವಾದುದು. 56ಮರಿಯಳು ಸುಮಾರು ಮೂರು ತಿಂಗಳು ಎಲಿಸಬೇತಳ ಬಳಿಯಲ್ಲಿದ್ದು ತನ್ನ ಮನೆಗೆ ಹಿಂತಿರುಗಿ ಹೋದಳು.
ಪತ್ರಿಕೆ (ದೇವಮಾತೆಯ ನಿದ್ರಾಗಮನ)
5ಕ್ರಿಸ್ತ ಯೇಸುವಿನಲ್ಲಿದ್ದಂಥ ಮನಸ್ಸು ನಿಮ್ಮಲ್ಲಿಯೂ ಇರಲಿ. 6ಆತನು ದೇವಸ್ವರೂಪನಾಗಿದ್ದರೂ, ದೇವರಿಗೆ ಸರಿಸಮಾನನಾಗಿರುವನೆಂಬ ಅಮೂಲ್ಯ ಪದವಿಯನ್ನು ಬಿಡಲೊಲ್ಲೆನು ಎಂದೆಣಿಸದೆ, 7ತನ್ನನ್ನು ಬರಿದು ಮಾಡಿಕೊಂಡು ದಾಸನ ರೂಪವನ್ನು ಧರಿಸಿಕೊಂಡು ಮನುಷ್ಯರಿಗೆ ಸಮನಾದನು. ಮನುಷ್ಯನಾಕಾರದಲ್ಲಿ ಕಾಣಿಸಿಕೊಂಡನು. 8ಆತನು ತನ್ನನ್ನು ತಗ್ಗಿಸಿಕೊಂಡು ಮರಣವನ್ನು ಅಂದರೆ ಶಿಲುಬೆಯ ಮರಣವನ್ನಾದರೂ ಹೊಂದುವಷ್ಟು ವಿಧೇಯನಾದನು. 9ಈ ಕಾರಣದಿಂದ ದೇವರು ಆತನನ್ನು ಅತ್ಯುನ್ನತ ಸ್ಥಾನಕ್ಕೆ ಏರಿಸಿ, ಎಲ್ಲಾ ಹೆಸರುಗಳಿಗಿಂತ ಶ್ರೇಷ್ಠವಾದ ಹೆಸರನ್ನು ಆತನಿಗೆ ದಯಪಾಲಿಸಿದ್ದಾನೆ. 10ಆದ್ದರಿಂದ ಸ್ವರ್ಗ ಮರ್ತ್ಯ ಪಾತಾಳಗಳಲ್ಲಿರುವವರೆಲ್ಲರೂ ಯೇಸುವಿನ ಹೆಸರಿನಲ್ಲಿ ಮೊಣಕಾಲೂರಿ ಅಡ್ಡಬಿದ್ದು, 11ತಂದೆಯಾದ ದೇವರ ಮಹಿಮೆಗಾಗಿ ಪ್ರತಿಯೊಂದು ನಾಲಿಗೆಯು ಯೇಸು ಕ್ರಿಸ್ತನನ್ನು ಕರ್ತನೆಂದು ಅರಿಕೆಮಾಡುವುದು.
ಸುವಾರ್ತೆ (ದೇವಮಾತೆಯ ನಿದ್ರಾಗಮನ)
38ಅವರು ಸಂಚಾರಮಾಡುತ್ತಿರುವಾಗ ಆತನು ಒಂದು ಹಳ್ಳಿಗೆ ಬಂದನು. ಅಲ್ಲಿ ಮಾರ್ಥಳೆಂಬ ಒಬ್ಬ ಸ್ತ್ರೀಯು ಆತನನ್ನು ತನ್ನ ಮನೆಯಲ್ಲಿ ಉಳಿಸಿಕೊಂಡಳು. 39ಆಕೆಗೆ ಮರಿಯಳೆಂಬ ಒಬ್ಬ ತಂಗಿ ಇದ್ದಳು. ಈಕೆಯು ಯೇಸುವಿನ ಪಾದಗಳ ಬಳಿಯಲ್ಲಿ ಕುಳಿತುಕೊಂಡು ಆತನ ವಾಕ್ಯವನ್ನು ಕೇಳುತ್ತಿದ್ದಳು. 40ಆದರೆ ಮಾರ್ಥಳು ಉಪಚಾರ ಸೇವೆಯ ವಿಷಯವಾಗಿ ಬಹಳ ಬೇಸತ್ತು ಯೇಸುವಿನ ಬಳಿಗೆ ಬಂದು, “ಕರ್ತನೇ, ನನ್ನ ತಂಗಿಯು ಸೇವೆಗೆ ನನ್ನೊಬ್ಬಳನ್ನೇ ಬಿಟ್ಟಿದ್ದಾಳೆ, ಇದಕ್ಕೆ ನಿನಗೆ ಚಿಂತೆಯಿಲ್ಲವೋ? ನನಗೆ ನೆರವಾಗಬೇಕೆಂದು ಆಕೆಗೆ ಹೇಳು” ಅಂದಳು. 41ಆದರೆ, ಕರ್ತನು ಆಕೆಗೆ, “ಮಾರ್ಥಳೇ, ಮಾರ್ಥಳೇ, ನೀನು ಅನೇಕ ವಿಷಯಗಳಿಗಾಗಿ ಚಿಂತೆಯಲ್ಲಿಯೂ ಗಡಿಬಿಡಿಯಲ್ಲಿಯೂ ಸಿಕ್ಕಿಕೊಂಡಿದ್ದೀ. 42ಆದರೆ ಅಗತ್ಯವಾದದ್ದು ಒಂದೇ, ಮರಿಯಳು ಆ ಉತ್ತಮ ಭಾಗವನ್ನು ಆರಿಸಿಕೊಂಡಿದ್ದಾಳೆ, ಅದು ಆಕೆಯಿಂದ ತೆಗೆಯಲ್ಪಡುವುದಿಲ್ಲ” ಎಂದು ಉತ್ತರಕೊಟ್ಟನು. 11:27ಯೇಸು ಈ ಮಾತುಗಳನ್ನು ಹೇಳುತ್ತಿರುವಾಗ ಜನರಲ್ಲಿ ಒಬ್ಬ ಸ್ತ್ರೀಯು, “ನಿನ್ನನ್ನು ಹೊತ್ತ ಗರ್ಭವೂ, ನೀನು ಕುಡಿದ ಮೊಲೆಗಳೂ ಧನ್ಯವಾದವುಗಳು” ಎಂದು ಕೂಗಿದಳು. 28ಅದಕ್ಕೆ ಯೇಸು, “ಹಾಗನ್ನ ಬೇಡ, ದೇವರ ವಾಕ್ಯವನ್ನು ಕೇಳಿ ಅದನ್ನು ಅನುಸರಿಸುವವನು ಹೆಚ್ಚು ಧನ್ಯನು” ಅಂದನು.
ದಿನಾಂಕಗಳು ರಷ್ಯನ್ ಸಭೆಯ ಜೂಲಿಯನ್ ಪಂಚಾಂಗದ ಪ್ರಕಾರ ಇವೆ (ಸರ್ಬಿಯನ್ ಮತ್ತು ಜಾರ್ಜಿಯನ್ ಸಭೆಗಳು ಮತ್ತು ಅಥೋಸ್ ಪರ್ವತದಂತೆ): ಸಭೆಯ ಪಂಚಾಂಗದ 15 ಆಗಸ್ಟ್ ಎಂದರೆ ನಾಗರಿಕ ಪಂಚಾಂಗದ 28 ಆಗಸ್ಟ್. ಹೊಸ ಪಂಚಾಂಗದ ಸಭೆಗಳು (ಗ್ರೀಸ್, ರೊಮೇನಿಯಾ, ಬಲ್ಗೇರಿಯಾ, ಉಕ್ರೇನ್…) ನಿಗದಿತ ದಿನಾಂಕದ ಹಬ್ಬಗಳನ್ನೂ ಸಂತರನ್ನೂ ಅದೇ ನಾಗರಿಕ ದಿನಾಂಕದಂದು, 13 ದಿನಗಳ ಮುಂಚೆ, ಆಚರಿಸುತ್ತವೆ, ಮತ್ತು ಅವುಗಳ ಕೆಲವು ವಾಚನಗಳು ಬೇರೆಯಾಗಿವೆ; ಈಸ್ಟರ್ ಮತ್ತು ಅದನ್ನು ಅವಲಂಬಿಸಿರುವ ದಿನಗಳು ಒಂದೇ ಆಗಿವೆ.
ಮೂಲಗಳು: ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ · © 2017, 2019 Bridge Connectivity Solutions, CC BY-SA 4.0; changed: footnotes, headings and the letters over Psalm 119 left out, verses in the app's numbering. · ಮೂಲಗಳು ಮತ್ತು ಹಕ್ಕುಗಳು