Bible Explorer ಆ್ಯಪ್ ಪಡೆಯಿರಿ

ಮುಖಪುಟ › ದೈನಂದಿನ ಬೈಬಲ್ ವಾಚನಗಳು › ಆಗಸ್ಟ್ 2027 › 30 ಆಗಸ್ಟ್

ಆರ್ಥೊಡಾಕ್ಸ್ ಪಂಚಾಂಗ · ಆಗಸ್ಟ್ 17 (ಹಳೆಯ ಪದ್ಧತಿ)

ಆರ್ಥೊಡಾಕ್ಸ್ ದೈನಂದಿನ ವಾಚನಗಳು — 30 ಆಗಸ್ಟ್ 2027

ಸೋಮವಾರ · ಪಂಚಾಶತ್ತಮದ ನಂತರದ 11ನೇ ವಾರ · ಸ್ವರ 1

ಹಬ್ಬಗಳು ಮತ್ತು ಸಂತರು

Afterfeast of the Dormition

ಉಪವಾಸ

ಉಪವಾಸವಿಲ್ಲ

ಇದು ಮಠದ ನಿಯಮವನ್ನು ಅನುಸರಿಸುತ್ತದೆ. ಸಭೆಯಲ್ಲಿ ಉಪವಾಸದ ಪ್ರಮಾಣವನ್ನು ಆರೋಗ್ಯ, ವಯಸ್ಸು ಮತ್ತು ಸಂದರ್ಭಗಳಿಗೆ ಅನುಗುಣವಾಗಿ ಪಾಪನಿವೇದನೆಯ ಗುರುವಿನೊಂದಿಗೆ ಸೇರಿ ನಿರ್ಧರಿಸಲಾಗುತ್ತದೆ.

ದಿನದ ವಾಚನಗಳು

ಪತ್ರಿಕೆ

2 ಕೊರಿ 2:3–15

3ಆದಕಾರಣ ನಾನು ಆ ಪತ್ರವನ್ನು ಬರೆದದ್ದು: ನನ್ನನ್ನು ಸಂತೋಷಪಡಿಸಬೇಕಾದವರೇ ನನ್ನನ್ನು ದುಃಖಕ್ಕೆ ಈಡುಮಾಡಬಾರದೆಂದು ನಾನು ಬರಲಿಲ್ಲ. ನನ್ನ ಸಂತೋಷವೇ ನಿಮ್ಮೆಲ್ಲರ ಸಂತೋಷವೆಂದು ನೀವು ಭಾವಿಸುತ್ತೀರೆಂದು ನಂಬಿದ್ದೇನೆ. 4ನಿಮ್ಮ ಮೇಲೆ ನನಗಿರುವ ಅಧಿಕವಾದ ಪ್ರೀತಿಯನ್ನು ನೀವು ತಿಳಿದುಕೊಳ್ಳಬೇಕೆಂತಲೇ ನಾನು ಬಹಳವಾಗಿ ಕಣ್ಣೀರಿಡುತ್ತಾ ಹೃದಯದ ಬಹು ಸಂಕಟದಿಂದಲೂ ವ್ಯಾಕುಲದಿಂದಲೂ ನಿಮಗೆ ಬರೆದೆನೇ ಹೊರತು ನಿಮ್ಮನ್ನು ನೋಯಿಸುವುದಕ್ಕಾಗಿಯಲ್ಲ. 5ಮನಸ್ಸಿಗೆ ನೋವುಂಟುಮಾಡಿದವನು ಒಬ್ಬನು ನಿಮ್ಮಲ್ಲಿ ಇದ್ದರೂ ಅವನು ನನ್ನನ್ನು ಮಾತ್ರ ದುಃಖಪಡಿಸದೆ ನಿಮ್ಮಲ್ಲಿ ಬಹುಜನರನ್ನೂ ನೋಯಿಸಿದ್ದಾನೆ. ಆ ದುಃಖವು ಎಲ್ಲರಲ್ಲಿಯೂ ಉಂಟಾಯಿತೆಂದು ನಾನು ಹೇಳುವುದಿಲ್ಲ. 6ಇಂಥವನಿಗೆ ನಿಮ್ಮಲ್ಲಿ ಬಹುಜನರಿಂದಾದ ಆ ಶಿಕ್ಷೆಯೇ ಸಾಕು. 7ಇನ್ನೂ ಅವನನ್ನು ಶಿಕ್ಷಿಸದೇ ಮನ್ನಿಸಿರಿ, ಸಂತೈಸಿರಿ. ಇಲ್ಲವಾದರೆ ಅವನು ಅಧಿಕವಾದ ದುಃಖದಲ್ಲಿ ಮುಳುಗಿ ಹೋಗುವನು. 8ಆದ್ದರಿಂದ ಅವನಿಗೆ ನಿಮ್ಮ ಪ್ರೀತಿಯನ್ನು ತೋರಿಸಬೇಕೆಂದು ನಿಮ್ಮನ್ನು ಬೇಡಿಕೊಳ್ಳುತ್ತೇನೆ. 9ಎಲ್ಲಾ ವಿಷಯದಲ್ಲೂ ನೀವು ವಿಧೇಯರಾಗಿದ್ದೀರೋ ಎಂದು ನಿಮ್ಮ ಗುಣವನ್ನು ಪರೀಕ್ಷಿಸಿ ತಿಳಿದುಕೊಳ್ಳಬೇಕೆಂಬುವ ಉದ್ದೇಶದಿಂದಲೇ ಹೀಗೆ ಬರೆದೆನು. 10ನೀವು ಯಾರನ್ನು ಕ್ಷಮಿಸುತ್ತೀರೋ ನಾನು ಸಹ ಅವನನ್ನು ಕ್ಷಮಿಸುತ್ತೇನೆ. ನಿಮಗೋಸ್ಕರವೇ ಅವನನ್ನು ಕ್ರಿಸ್ತನ ಸನ್ನಿಧಾನದಲ್ಲಿ ಕ್ಷಮಿಸಿದ್ದೇನೆ. 11ಸೈತಾನನು ನಮ್ಮನ್ನು ವಂಚಿಸಬಾರದೆಂದು ಹೀಗೆ ಮಾಡಿದೆನು. ಅವನ ಕುತಂತ್ರಗಳನ್ನು ನಾವು ಚೆನ್ನಾಗಿ ತಿಳಿದಿದ್ದೇವಲ್ಲಾ. 12ದೇವರು ನನಗಾಗಿ ಬಾಗಿಲನ್ನು ತೆರೆದಿದ್ದಾನೆಂದು ಯೋಚಿಸಿ ಕ್ರಿಸ್ತನ ಸುವಾರ್ತೆಯನ್ನು ಸಾರುವುದಕ್ಕಾಗಿ ನಾನು ತ್ರೋವ ಪಟ್ಟಣಕ್ಕೆ ಬಂದೆನು. 13ಆದರೂ ನನ್ನ ಸಹೋದರ ತೀತನು ನನಗೆ ಅಲ್ಲಿ ಸಿಕ್ಕಲಿಲ್ಲವಾದ ಕಾರಣ ನನ್ನ ಮನಸ್ಸಿಗೆ ಸಮಾಧಾನವಿಲ್ಲದೆ ಅಲ್ಲಿದ್ದವರಿಗೆ ವಂದಿಸಿ ಅಲ್ಲಿಂದ ಹೊರಟು ಮಕೆದೋನ್ಯಕ್ಕೆ ಬಂದೆನು. 14ಕ್ರಿಸ್ತನ ಮುಖಾಂತರ ನಮ್ಮನ್ನು ವಿಜಯೋತ್ಸವದತ್ತ ನಡೆಸುವ ಹಾಗೂ ನಮ್ಮ ಮೂಲಕವಾಗಿ ತನ್ನ ಜ್ಞಾನವೆಂಬ ಸುವಾಸನೆಯನ್ನು ಎಲ್ಲಾ ಸ್ಥಳಗಳಲ್ಲಿ ಹರಡಿಸಿದ ದೇವರಿಗೆ ಸ್ತೋತ್ರವಾಗಲಿ. 15ರಕ್ಷಣಾ ಮಾರ್ಗದಲ್ಲಿರುವವರಲ್ಲಿಯೂ ಮತ್ತು ನಾಶನದ ಮಾರ್ಗದಲ್ಲಿರುವವರಲ್ಲಿಯೂ ನಾವು ದೇವರಿಗೆ ಕ್ರಿಸ್ತನ ಪರಿಮಳವಾಗಿದ್ದೇವೆ.

ಸುವಾರ್ತೆ

ಮತ್ತಾ 23:13–22

13“ಅಯ್ಯೋ, ಕಪಟಿಗಳಾದ ಶಾಸ್ತ್ರಿಗಳೇ, ಫರಿಸಾಯರೇ, ಪರಲೋಕ ರಾಜ್ಯದ ಬಾಗಿಲನ್ನು ಮನುಷ್ಯರ ಎದುರಿಗೆ ಮುಚ್ಚಿಬಿಡುತ್ತೀರಿ. ನೀವಂತೂ ಒಳಕ್ಕೆ ಪ್ರವೇಶಿಸುವುದಿಲ್ಲ, ಒಳಕ್ಕೆ ಪ್ರವೇಶಿಸಬೇಕೆಂದಿರುವವರನ್ನೂ ಪ್ರವೇಶಿಸಗೊಡಿಸುವುದೂ ಇಲ್ಲ. 14ಅಯ್ಯೋ, ಕಪಟಿಗಳಾದ ಶಾಸ್ತ್ರಿಗಳೇ, ಫರಿಸಾಯರೇ ಜನರು ನೋಡಬೇಕೆಂದು ಉದ್ದವಾದ ಪ್ರಾರ್ಥನೆಗಳನ್ನು ಮಾಡುತ್ತೀರೀ. ನೀವು ವಿಧವೆಯರ ಮನೆಗಳನ್ನು ನುಂಗಿ ನಟನೆಮಾಡುತ್ತೀರಿ. ಆದುದರಿಂದ ನೀವು ಹೆಚ್ಚಿನ ದಂಡನೆಯನ್ನು ಹೊಂದುವಿರಿ. 15“ಅಯ್ಯೋ, ಕಪಟಿಗಳಾದ ಶಾಸ್ತ್ರಿಗಳೇ, ಫರಿಸಾಯರೇ, ನೀವು ಒಬ್ಬ ಮನುಷ್ಯನನ್ನು ಮತಾಂತರಗೊಳ್ಳಿಸುವುದಕ್ಕಾಗಿ ಭೂಮಿಯನ್ನೂ ಸಮುದ್ರವನ್ನೂ ಸುತ್ತಾಡಿಕೊಂಡು ಬರುತ್ತೀರಿ; ಅವನು ನಿಮ್ಮ ಮತಕ್ಕೆ ಸೇರಿದ ಮೇಲೆ ಅವನನ್ನು ನಿಮಗಿಂತ ಎರಡರಷ್ಟು ನರಕಕ್ಕೆ ಪಾತ್ರನಾಗಮಾಡುತ್ತೀರಿ. 16“ಅಯ್ಯೋ, ಕುರುಡು ಮಾರ್ಗದರ್ಶಿಗಳೇ, ‘ಒಬ್ಬನು ದೇವಾಲಯದ ಮೇಲೆ ಆಣೆಯಿಟ್ಟುಕೊಂಡರೆ ಅದೇನು ಆಣೆಯಲ್ಲ ಅನ್ನುತ್ತೀರಿ. ಆದರೆ ಒಬ್ಬನು ದೇವಾಲಯದ ಚಿನ್ನದ ಮೇಲೆ ಆಣೆಯಿಟ್ಟುಕೊಂಡರೆ ಅದನ್ನು ನಡಿಸಲೇಬೇಕು’ ಎಂದು ಹೇಳುತ್ತೀರಿ. 17ಕುರುಡರೇ, ಮೂರ್ಖರೇ, ಯಾವುದು ಹೆಚ್ಚಿನದು? ಚಿನ್ನವೋ, ಚಿನ್ನವನ್ನು ಪ್ರತಿಷ್ಠೆ ಮಾಡುವ ದೇವಾಲಯವೋ? 18ಮತ್ತು ‘ಒಬ್ಬನು ಯಜ್ಞವೇದಿಯ ಮೇಲೆ ಆಣೆಯಿಟ್ಟುಕೊಂಡರೆ ಅದೇನು ಆಣೆಯಲ್ಲ ಅನ್ನುತ್ತೀರಿ, ಆದರೆ ಅದರಲ್ಲಿರುವ ಕಾಣಿಕೆಯ ಮೇಲೆ ಆಣೆಯಿಟ್ಟುಕೊಂಡರೆ ಅದನ್ನು ನಡಿಸಲೇಬೇಕು’ ಎಂದು ಹೇಳುತ್ತೀರಿ. 19ಕುರುಡರೇ, ಮೂರ್ಖರೇ, ಯಾವುದು ಹೆಚ್ಚಿನದು? ಕಾಣಿಕೆಯೋ, ಆ ಕಾಣಿಕೆಯನ್ನು ಪ್ರತಿಷ್ಠೆ ಮಾಡುವ ಯಜ್ಞವೇದಿಯೋ? 20ಹೀಗಿರುವುದರಿಂದ ಯಾವನಾದರೂ ಯಜ್ಞವೇದಿಯ ಮೇಲೆ ಆಣೆಯಿಟ್ಟುಕೊಂಡರೆ ಅದರ ಮೇಲೆಯೂ, ಅದರಲ್ಲಿರುವ ಎಲ್ಲದರ ಮೇಲೆಯೂ ಆಣೆಯಿಟ್ಟುಕೊಂಡ ಹಾಗಾಯಿತು. 21ಮತ್ತು ಯಾವನಾದರೂ ದೇವಾಲಯದ ಮೇಲೆ ಆಣೆಯಿಟ್ಟುಕೊಂಡರೆ ಅದರ ಮೇಲೆಯೂ, ಅದರಲ್ಲಿ ವಾಸಮಾಡುವಾತನ ಮೇಲೆಯೂ ಆಣೆಯಿಟ್ಟುಕೊಂಡ ಹಾಗಾಯಿತು. 22ಮತ್ತು ಪರಲೋಕದ ಮೇಲೆ ಆಣೆಯಿಟ್ಟುಕೊಂಡರೆ ದೇವರ ಸಿಂಹಾಸನದ ಮೇಲೆಯೂ ಅದರಲ್ಲಿ ಕುಳಿತಿರುವಾತನ ಮೇಲೆಯೂ ಆಣೆಯಿಟ್ಟುಕೊಂಡ ಹಾಗಾಯಿತು.

ದಿನಾಂಕಗಳು ರಷ್ಯನ್ ಸಭೆಯ ಜೂಲಿಯನ್ ಪಂಚಾಂಗದ ಪ್ರಕಾರ ಇವೆ (ಸರ್ಬಿಯನ್ ಮತ್ತು ಜಾರ್ಜಿಯನ್ ಸಭೆಗಳು ಮತ್ತು ಅಥೋಸ್ ಪರ್ವತದಂತೆ): ಸಭೆಯ ಪಂಚಾಂಗದ 17 ಆಗಸ್ಟ್ ಎಂದರೆ ನಾಗರಿಕ ಪಂಚಾಂಗದ 30 ಆಗಸ್ಟ್. ಹೊಸ ಪಂಚಾಂಗದ ಸಭೆಗಳು (ಗ್ರೀಸ್, ರೊಮೇನಿಯಾ, ಬಲ್ಗೇರಿಯಾ, ಉಕ್ರೇನ್…) ನಿಗದಿತ ದಿನಾಂಕದ ಹಬ್ಬಗಳನ್ನೂ ಸಂತರನ್ನೂ ಅದೇ ನಾಗರಿಕ ದಿನಾಂಕದಂದು, 13 ದಿನಗಳ ಮುಂಚೆ, ಆಚರಿಸುತ್ತವೆ, ಮತ್ತು ಅವುಗಳ ಕೆಲವು ವಾಚನಗಳು ಬೇರೆಯಾಗಿವೆ; ಈಸ್ಟರ್ ಮತ್ತು ಅದನ್ನು ಅವಲಂಬಿಸಿರುವ ದಿನಗಳು ಒಂದೇ ಆಗಿವೆ.

ಮೂಲಗಳು: ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ · © 2017, 2019 Bridge Connectivity Solutions, CC BY-SA 4.0; changed: footnotes, headings and the letters over Psalm 119 left out, verses in the app's numbering. · ಮೂಲಗಳು ಮತ್ತು ಹಕ್ಕುಗಳು