ಮುಖಪುಟ › ದೈನಂದಿನ ಬೈಬಲ್ ವಾಚನಗಳು › ಆಗಸ್ಟ್ 2027 › 31 ಆಗಸ್ಟ್
ಕ್ಯಾಥೊಲಿಕ್ ಪಂಚಾಂಗ
ದೈನಂದಿನ ಬೈಬಲ್ ವಾಚನಗಳು (ಕಥೋಲಿಕ) — 31 ಆಗಸ್ಟ್ 2027
ಮಂಗಳವಾರ · ಸಾಮಾನ್ಯ ಕಾಲದ 22ನೇ ವಾರ
ಹಬ್ಬಗಳು ಮತ್ತು ಸಂತರು
ಸಾಮಾನ್ಯ ಕಾಲದ 22ನೇ ವಾರದ ಮಂಗಳವಾರ
ವಾರದ ದಿನ · ಆರಾಧನಾ ಬಣ್ಣ: ಹಸಿರು
ದಿನದ ವಾಚನಗಳು
ಮೊದಲನೆಯ ವಾಚನ
1ಸಹೋದರರೇ, ಈ ಸಂಗತಿಗಳು ನಡೆಯಬೇಕಾಗಿರುವ ಕಾಲಗಳನ್ನೂ ಗಳಿಗೆಗಳನ್ನೂ ಕುರಿತು ನಿಮಗೆ ಬರೆಯುವುದು ಅಗತ್ಯವಿಲ್ಲ. 2ರಾತ್ರಿ ಕಳ್ಳನು ಹೇಗೆ ಬರುತ್ತಾನೋ ಹಾಗೆಯೇ ಕರ್ತನ ದಿನವು ಬರುವುದೆಂದು ನೀವೇ ಚೆನ್ನಾಗಿ ತಿಳಿದಿದ್ದೀರಲ್ಲಾ. 3“ಸಮಾಧಾನವಾಗಿಯೂ ನಿರ್ಭಯವಾಗಿಯೂ ಇರುತ್ತೇವೆಂದು” ಜನರು ಹೇಳುತ್ತಿರುವಾಗಲೇ ನಾಶನವು ಅವರ ಮೇಲೆ ಗರ್ಭಿಣಿಗೆ ಪ್ರಸವವೇದನೆ ಬರುವ ಪ್ರಕಾರ ಬರುವುದು, ಅವರು ಹೇಗೂ ತಪ್ಪಿಸಿಕೊಳ್ಳಲಾರರು. 4ಆದರೆ ಸಹೋದರರೇ, ಆ ದಿನವು ಕಳ್ಳನಂತೆ ನಿಮ್ಮ ಮೇಲೆ ಬರತಕ್ಕದ್ದಲ್ಲ, ಯಾಕೆಂದರೆ ನೀವು ಕತ್ತಲೆಯಲ್ಲಿರುವವರಲ್ಲ. 5ನೀವೆಲ್ಲರೂ ‘ಬೆಳಕಿನ ಮಕ್ಕಳು’ ಹಾಗೂ ‘ಹಗಲಿನ ಮಕ್ಕಳು’ ಆಗಿದ್ದೀರಷ್ಟೆ, ನಾವು ರಾತ್ರಿಯವರೂ ಅಲ್ಲ, ಕತ್ತಲೆಯವರೂ ಅಲ್ಲ. 6ಆದಕಾರಣ ನಾವು ಇತರರಂತೆ ನಿದ್ರೆಮಾಡದೆ ಎಚ್ಚರವಾಗಿರೋಣ, ಸ್ವಸ್ಥಚಿತ್ತರಾಗಿರೋಣ. 9ಯಾಕೆಂದರೆ ದೇವರು ನಮ್ಮನ್ನು ತನ್ನ ಕೋಪಕ್ಕೆ ಗುರಿಯಾಗಬೇಕೆಂದು ನೇಮಿಸದೆ ನಾವು ನಮ್ಮ ಕರ್ತನಾದ ಯೇಸು ಕ್ರಿಸ್ತನ ಮೂಲಕವಾಗಿ ರಕ್ಷಣೆಯನ್ನು ಹೊಂದಿಕೊಳ್ಳಬೇಕೆಂದು ನೇಮಿಸಿದನು. 10ನಾವು ಎಚ್ಚರವಾಗಿದ್ದರೂ ಸರಿಯೇ ಅಥವಾ ನಿದ್ರೆಯಲ್ಲಿದ್ದರೂ ಸರಿಯೇ, ತನ್ನ ಜೊತೆಯಲ್ಲಿಯೇ ಜೀವಿಸಬೇಕೆಂದು ಯೇಸು ನಮಗೋಸ್ಕರ ತನ್ನ ಪ್ರಾಣವನ್ನು ಕೊಟ್ಟನು. 11ಆದ್ದರಿಂದ ನೀವು ಈಗ ಮಾಡುತ್ತಿರುವ ಪ್ರಕಾರವೇ ಒಬ್ಬರನ್ನೊಬ್ಬರು ಪ್ರೋತ್ಸಾಹಿಸುತ್ತಾ ಒಬ್ಬರ ಭಕ್ತಿಯನ್ನೊಬ್ಬರು ವೃದ್ಧಿಪಡಿಸುತ್ತಾ ಇರಿ.
ಪ್ರತಿವಚನ ಕೀರ್ತನೆ
1ದಾವೀದನ ಕೀರ್ತನೆ. ಯೆಹೋವನು ನನಗೆ ಬೆಳಕೂ, ರಕ್ಷಕನೂ ಆಗಿದ್ದಾನೆ; ನಾನು ಯಾರಿಗೆ ಭಯಪಟ್ಟೆನು? ಯೆಹೋವನು ನನ್ನ ಪ್ರಾಣದ ಆಧಾರವು; ನಾನು ಯಾರಿಗೆ ಹೆದರೇನು? 4ನನ್ನ ಜೀವಮಾನದಲ್ಲೆಲ್ಲಾ ಯೆಹೋವನ ಮನೆಯಲ್ಲಿ ವಾಸಮಾಡುತ್ತಾ, ಆತನ ಪ್ರಸನ್ನತೆಯನ್ನು ನೋಡುವುದಕ್ಕೂ, ಆತನ ಮಂದಿರದಲ್ಲಿ ಧ್ಯಾನ ಮಾಡುವುದಕ್ಕೂ ನನಗೆ ಅಪ್ಪಣೆಯಾಗಬೇಕೆಂಬ ಒಂದೇ ವರವನ್ನು ಯೆಹೋವನಿಂದ ಕೇಳಿಕೊಂಡು ಅದನ್ನೇ ಎದುರು ನೋಡುತ್ತಿರುವೆನು. 13ಜೀವಲೋಕದಲ್ಲಿಯೇ ಯೆಹೋವನ ದಯೆಯನ್ನು ಅನುಭವಿಸುವೆನು ಎಂದು ದೃಢವಾಗಿ ನಂಬಿದ್ದೇನೆ. 14ಯೆಹೋವನನ್ನು ನಿರೀಕ್ಷಿಸಿಕೊಂಡಿರು, ದೃಢವಾಗಿರು; ನಿನ್ನ ಹೃದಯವು ಧೈರ್ಯದಿಂದಿರಲಿ; ಯೆಹೋವನನ್ನು ನಿರೀಕ್ಷಿಸಿಕೊಂಡೇ ಇರು.
ಸುವಾರ್ತೆ
31ಬಳಿಕ ಆತನು ಘಟ್ಟಾ ಇಳಿದು ಗಲಿಲಾಯಕ್ಕೆ ಸೇರಿದ ಕಪೆರ್ನೌಮೆಂಬ ಊರಿಗೆ ಬಂದನು. ಅಲ್ಲಿ ಸಬ್ಬತ್ ದಿನದಲ್ಲಿ ಅವರಿಗೆ ಉಪದೇಶಮಾಡುತ್ತಿರಲು, 32ಆತನ ಮಾತು ಅಧಿಕಾರವುಳ್ಳದ್ದಾಗಿದ್ದದರಿಂದ ಅವರು ಆತನ ಉಪದೇಶಕ್ಕೆ ಅತ್ಯಾಶ್ಚರ್ಯಪಟ್ಟರು. 33ಆ ಸಭಾಮಂದಿರದಲ್ಲಿ ದೆವ್ವಹಿಡಿದ ಒಬ್ಬ ಮನುಷ್ಯನಿದ್ದನು. ಆತನು, “ನಜರೇತಿನ ಯೇಸುವೇ, ನಮ್ಮ ಗೊಡವೆ ನಿನಗೇಕೆ? ನಮ್ಮನ್ನು ನಾಶಮಾಡುವುದಕ್ಕೆ ಬಂದೆಯಾ? ನಿನ್ನನ್ನು ಬಲ್ಲೆವು. ನೀನು ದೇವರಿಂದ ಬಂದ ಪರಿಶುದ್ಧನೇ” ಎಂದು ಜೋರಾಗಿ ಕೂಗಿ ಹೇಳಿದನು. 35ಯೇಸು ದೆವ್ವವನ್ನು ಗದರಿಸಿ, “ಸುಮ್ಮನಿರು, ಇವನನ್ನು ಬಿಟ್ಟು ಹೋಗು” ಎನ್ನಲಾಗಿ ಆ ದೆವ್ವವು ಅವನನ್ನು ಎಲ್ಲರ ನಡುವೆ ಬೀಳಿಸಿ ಅವನಿಗೆ ಯಾವ ಕೇಡನ್ನೂ ಮಾಡದೆ ಬಿಟ್ಟುಹೋಯಿತು. 36ಅದಕ್ಕೆ ಎಲ್ಲರು ಬೆರಗಾಗಿ, “ಇದೆಂಥ ಮಾತಾಗಿರಬಹುದು? ಈತನು ಅಧಿಕಾರದಿಂದಲೂ, ಬಲದಿಂದಲೂ ದೆವ್ವಗಳಿಗೆ ಅಪ್ಪಣೆಕೊಡುತ್ತಾನೆ, ಅವು ಬಿಟ್ಟು ಹೋಗುತ್ತವೆ” ಎಂದು ತಮ್ಮತಮ್ಮೊಳಗೆ ಮಾತನಾಡಿಕೊಂಡರು. 37ಮತ್ತು ಆತನ ಸುದ್ದಿಯು ಸುತ್ತಲಿರುವ ಪ್ರಾಂತ್ಯದ ಊರುಗಳಲ್ಲೆಲ್ಲಾ ಹರಡಿತು.
ಸಾಮಾನ್ಯ ರೋಮನ್ ಪಂಚಾಂಗ; ಬಿಷಪರ ಸಮ್ಮೇಳನವು ಕೆಲವು ಹಬ್ಬಗಳನ್ನು (ಪ್ರಭುವಿನ ಪ್ರಕಟನೆ, ಸ್ವರ್ಗಾರೋಹಣ, ಕ್ರಿಸ್ತನ ದೇಹ ಮತ್ತು ರಕ್ತ) ಭಾನುವಾರಕ್ಕೆ ಸರಿಸಬಹುದು ಅಥವಾ ತನ್ನದೇ ಹಬ್ಬಗಳನ್ನು ಸೇರಿಸಬಹುದು. ವಾಚನ ಸಂಗ್ರಹ: ಭಾನುವಾರದ ಚಕ್ರ B, ವಾರದ ದಿನಗಳ ವರ್ಷ I.
ಮೂಲಗಳು: ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ · © 2017, 2019 Bridge Connectivity Solutions, CC BY-SA 4.0; changed: footnotes, headings and the letters over Psalm 119 left out, verses in the app's numbering. · ಮೂಲಗಳು ಮತ್ತು ಹಕ್ಕುಗಳು