ಮುಖಪುಟ › ದೈನಂದಿನ ಬೈಬಲ್ ವಾಚನಗಳು › ಆಗಸ್ಟ್ 2027 › 31 ಆಗಸ್ಟ್
ಆರ್ಥೊಡಾಕ್ಸ್ ಪಂಚಾಂಗ · ಆಗಸ್ಟ್ 18 (ಹಳೆಯ ಪದ್ಧತಿ)
ಆರ್ಥೊಡಾಕ್ಸ್ ದೈನಂದಿನ ವಾಚನಗಳು — 31 ಆಗಸ್ಟ್ 2027
ಮಂಗಳವಾರ · ಪಂಚಾಶತ್ತಮದ ನಂತರದ 11ನೇ ವಾರ · ಸ್ವರ 1
ಹಬ್ಬಗಳು ಮತ್ತು ಸಂತರು
Afterfeast of the Dormition
ಉಪವಾಸ
ಉಪವಾಸವಿಲ್ಲ
ಇದು ಮಠದ ನಿಯಮವನ್ನು ಅನುಸರಿಸುತ್ತದೆ. ಸಭೆಯಲ್ಲಿ ಉಪವಾಸದ ಪ್ರಮಾಣವನ್ನು ಆರೋಗ್ಯ, ವಯಸ್ಸು ಮತ್ತು ಸಂದರ್ಭಗಳಿಗೆ ಅನುಗುಣವಾಗಿ ಪಾಪನಿವೇದನೆಯ ಗುರುವಿನೊಂದಿಗೆ ಸೇರಿ ನಿರ್ಧರಿಸಲಾಗುತ್ತದೆ.
ದಿನದ ವಾಚನಗಳು
ಪತ್ರಿಕೆ
14ಕ್ರಿಸ್ತನ ಮುಖಾಂತರ ನಮ್ಮನ್ನು ವಿಜಯೋತ್ಸವದತ್ತ ನಡೆಸುವ ಹಾಗೂ ನಮ್ಮ ಮೂಲಕವಾಗಿ ತನ್ನ ಜ್ಞಾನವೆಂಬ ಸುವಾಸನೆಯನ್ನು ಎಲ್ಲಾ ಸ್ಥಳಗಳಲ್ಲಿ ಹರಡಿಸಿದ ದೇವರಿಗೆ ಸ್ತೋತ್ರವಾಗಲಿ. 15ರಕ್ಷಣಾ ಮಾರ್ಗದಲ್ಲಿರುವವರಲ್ಲಿಯೂ ಮತ್ತು ನಾಶನದ ಮಾರ್ಗದಲ್ಲಿರುವವರಲ್ಲಿಯೂ ನಾವು ದೇವರಿಗೆ ಕ್ರಿಸ್ತನ ಪರಿಮಳವಾಗಿದ್ದೇವೆ. 16ನಾವು ವಿನಾಶಮಾರ್ಗದಲ್ಲಿರುವವರಿಗೆ ಮೃತ್ಯುಕಾರಕ ಗಂಧ; ರಕ್ಷಣಾಮಾರ್ಗದಲ್ಲಿರುವವರಿಗೆ ಸಜೀವದಾಯಕ ಸುಗಂಧ. ಇಂಥ ಕಾರ್ಯಗಳಿಗೆ ಯಾರು ಯೋಗ್ಯರು? 17ಎಷ್ಟೋ ಮಂದಿ ದೇವರ ವಾಕ್ಯವನ್ನು ಕಲಬೆರಕೆ ಮಾಡಿ ವ್ಯಾಪಾರಮಾಡುತ್ತಾರೆ. ನಾವು ಹಾಗಲ್ಲ; ದೇವರಿಂದಲೇ ನಿಯೋಜಿತರಾಗಿ, ದೇವರ ಸಮಕ್ಷಮದಲ್ಲಿ, ಕ್ರಿಸ್ತ ಅನ್ಯೋನ್ಯತೆಯಲ್ಲಿ ನಾವು ಯಥಾರ್ಥವಾದುದನ್ನೇ ಉಪದೇಶಿಸುವವರು. 3:1ನಮ್ಮನ್ನು ನಾವೇ ಮತ್ತೆ ಹೊಗಳಿಕೊಳ್ಳುವುದಕ್ಕೆ ಪ್ರಾರಂಭಿಸುತ್ತೇವೋ? ಇಲ್ಲವೆ ಕೆಲವರಿಗೆ ಬೇಕಾಗಿರುವ ಪ್ರಕಾರ ನಿಮಗೆ ತೋರಿಸತಕ್ಕ ಯೋಗ್ಯತಾ ಪತ್ರಗಳು ನಮಗೆ ಅಗತ್ಯವೋ? ಅಥವಾ ಅಂಥ ಪತ್ರಗಳನ್ನು ನಿಮ್ಮಿಂದ ಪಡೆದುಕೊಳ್ಳಬೇಕೋ? 2ಸ್ವತಃ “ನೀವೇ ನಮ್ಮ ಯೋಗ್ಯತಾ ಪತ್ರ” ಅದು ನಮ್ಮ ಹೃದಯಗಳಲ್ಲೇ ಬರೆದಿದೆ ಆ ಪತ್ರವನ್ನು ಎಲ್ಲರೂ ಬಲ್ಲರು. ಎಲ್ಲರೂ ಓದುತ್ತಾರೆ. 3ನೀವು, ನಮ್ಮ ಸೇವೆಯ ಫಲವಾಗಿ, ಕ್ರಿಸ್ತನು ನಮ್ಮ ಕೈಯಿಂದ ಬರೆಸಿಕೊಟ್ಟ ಪತ್ರವಾಗಿದ್ದೀರೆಂಬದು ಪ್ರತ್ಯಕ್ಷಪಡಿಸಿದ್ದೀರಿ. ಅದು ಮಸಿಯಿಂದ ಬರೆದದ್ದಲ್ಲ. ಜೀವವುಳ್ಳ ದೇವರ ಆತ್ಮನಿಂದಲೇ ಬರೆದದ್ದು. ಕಲ್ಲಿನ ಹಲಿಗೆಯ ಮೇಲಲ್ಲಾ, ಮನುಷ್ಯನ ಹೃದಯಗಳೆಂಬ ಹಲಿಗೆಗಳ ಮೇಲೆ ಬರೆದದ್ದು.
ಸುವಾರ್ತೆ
23ಅಯ್ಯೋ, ಕಪಟಿಗಳಾದ ಶಾಸ್ತ್ರಿಗಳೇ, ಫರಿಸಾಯರೇ, ನೀವು ಪುದೀನ, ಮರುಗಪತ್ರೆ, ಸಬಸಿಗೆಸೊಪ್ಪು, ಜೀರಿಗೆಗಳಲ್ಲಿ ದಶಮ ಭಾಗವನ್ನು ಕೊಡುತ್ತೀರಿ ಸರಿ, ಆದರೆ ಧರ್ಮಶಾಸ್ತ್ರದಲ್ಲಿ ಮುಖ್ಯವಾದುದನ್ನು ಅಂದರೆ ನ್ಯಾಯವನ್ನೂ, ಕರುಣೆಯನ್ನೂ ನಂಬಿಕೆಯನ್ನೂ ಬಿಟ್ಟುಬಿಟ್ಟಿದ್ದೀರಿ. ಇವುಗಳನ್ನು ಮಾಡಬೇಕು; ಅವುಗಳನ್ನೂ ಬಿಡಬಾರದು. 24ಕುರುಡ ಮಾರ್ಗದರ್ಶಿಗಳೇ, ನೀವು ಸೊಳ್ಳೇ ಸೋಸುವವರು, ಆದರೆ ಒಂಟೆ ನುಂಗುವವರು. 25“ಅಯ್ಯೋ, ಕಪಟಿಗಳಾದ ಶಾಸ್ತ್ರಿಗಳೇ, ಫರಿಸಾಯರೇ, ನೀವು ಪಾತ್ರೆ, ಬಟ್ಟಲು ಇವುಗಳ ಹೊರಭಾಗವನ್ನು ಶುಚಿಮಾಡುತ್ತೀರಿ ಆದರೆ ಅವುಗಳ ಒಳಗೆ ಸುಲಿಗೆಯಿಂದಲೂ, ದುರಾಶೆಯಿಂದಲೂ ತುಂಬಿರುತ್ತವೆ. 26ಕುರುಡನಾದ ಫರಿಸಾಯನೇ, ಮೊದಲು ಪಾತ್ರೆ ಬಟ್ಟಲುಗಳ ಒಳಭಾಗವನ್ನು ಶುಚಿಮಾಡು, ಆಗ ಅವುಗಳ ಹೊರಭಾಗವೂ ಶುಚಿಯಾಗುವುದು. 27“ಅಯ್ಯೋ, ಕಪಟಿಗಳಾದ ಶಾಸ್ತ್ರಿಗಳೇ, ಫರಿಸಾಯರೇ ನೀವು ಸುಣ್ಣಾ ಹಚ್ಚಿದ ಸಮಾಧಿಗಳಿಗೆ ಹೋಲಿಕೆಯಾಗಿದ್ದೀರಿ; ಇವು ಹೊರಗೆ ಸುಂದರವಾಗಿ ಕಾಣುತ್ತವೆ. ಒಳಗೆ ನೋಡಿದರೆ ಸತ್ತವರ ಎಲುಬುಗಳಿಂದಲೂ ಎಲ್ಲಾ ಹೊಲಸಿನಿಂದಲೂ ತುಂಬಿರುತ್ತವೆ. 28ಹಾಗೆಯೇ ನೀವು ಸಹ ಹೊರಗೆ ಜನರಿಗೆ ನೀತಿವಂತರಂತೆ ಕಾಣಿಸಿಕೊಳ್ಳುತ್ತೀರಿ. ಆದರೆ ಒಳಗೆ ಕಪಟ ಮತ್ತು ಅಕ್ರಮದಿಂದ ತುಂಬಿದವರಾಗಿದ್ದೀರಿ.
ದಿನಾಂಕಗಳು ರಷ್ಯನ್ ಸಭೆಯ ಜೂಲಿಯನ್ ಪಂಚಾಂಗದ ಪ್ರಕಾರ ಇವೆ (ಸರ್ಬಿಯನ್ ಮತ್ತು ಜಾರ್ಜಿಯನ್ ಸಭೆಗಳು ಮತ್ತು ಅಥೋಸ್ ಪರ್ವತದಂತೆ): ಸಭೆಯ ಪಂಚಾಂಗದ 18 ಆಗಸ್ಟ್ ಎಂದರೆ ನಾಗರಿಕ ಪಂಚಾಂಗದ 31 ಆಗಸ್ಟ್. ಹೊಸ ಪಂಚಾಂಗದ ಸಭೆಗಳು (ಗ್ರೀಸ್, ರೊಮೇನಿಯಾ, ಬಲ್ಗೇರಿಯಾ, ಉಕ್ರೇನ್…) ನಿಗದಿತ ದಿನಾಂಕದ ಹಬ್ಬಗಳನ್ನೂ ಸಂತರನ್ನೂ ಅದೇ ನಾಗರಿಕ ದಿನಾಂಕದಂದು, 13 ದಿನಗಳ ಮುಂಚೆ, ಆಚರಿಸುತ್ತವೆ, ಮತ್ತು ಅವುಗಳ ಕೆಲವು ವಾಚನಗಳು ಬೇರೆಯಾಗಿವೆ; ಈಸ್ಟರ್ ಮತ್ತು ಅದನ್ನು ಅವಲಂಬಿಸಿರುವ ದಿನಗಳು ಒಂದೇ ಆಗಿವೆ.
ಮೂಲಗಳು: ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ · © 2017, 2019 Bridge Connectivity Solutions, CC BY-SA 4.0; changed: footnotes, headings and the letters over Psalm 119 left out, verses in the app's numbering. · ಮೂಲಗಳು ಮತ್ತು ಹಕ್ಕುಗಳು