Bible Explorer ಆ್ಯಪ್ ಪಡೆಯಿರಿ

ಮುಖಪುಟ › ದೈನಂದಿನ ಬೈಬಲ್ ವಾಚನಗಳು › ಸೆಪ್ಟೆಂಬರ್ 2027 › 1 ಸೆಪ್ಟೆಂಬರ್

ಕ್ಯಾಥೊಲಿಕ್ ಪಂಚಾಂಗ

ದೈನಂದಿನ ಬೈಬಲ್ ವಾಚನಗಳು (ಕಥೋಲಿಕ) — 1 ಸೆಪ್ಟೆಂಬರ್ 2027

ಬುಧವಾರ · ಸಾಮಾನ್ಯ ಕಾಲದ 22ನೇ ವಾರ

ಹಬ್ಬಗಳು ಮತ್ತು ಸಂತರು

ಸಾಮಾನ್ಯ ಕಾಲದ 22ನೇ ವಾರದ ಬುಧವಾರ

ವಾರದ ದಿನ · ಆರಾಧನಾ ಬಣ್ಣ: ಹಸಿರು

ದಿನದ ವಾಚನಗಳು

ಮೊದಲನೆಯ ವಾಚನ

ಕೊಲೊ 1:1–8

1ದೇವರ ಚಿತ್ತಾನುಸಾರವಾಗಿ ಕ್ರಿಸ್ತಯೇಸುವಿನ ಅಪೊಸ್ತಲನಾಗಿರುವ ಪೌಲನೂ ಮತ್ತು ಸಹೋದರನಾದ ತಿಮೊಥೆಯನು, 2ಕೊಲೊಸ್ಸೆಯಲ್ಲಿರುವ ದೇವಜನರಿಗೆ ಹಾಗು ಕ್ರಿಸ್ತನಲ್ಲಿ ನಂಬಿಗಸ್ತರಾದ ಸಹೋದರರಿಗೆ ಬರೆಯುವುದೇನೆಂದರೆ, ನಮ್ಮ ತಂದೆಯಾದ ದೇವರಿಂದ ನಿಮಗೆ ಕೃಪೆಯೂ ಮತ್ತು ಶಾಂತಿಯೂ ಉಂಟಾಗಲಿ. 3ನಿಮಗೋಸ್ಕರ ನಾವು ಪ್ರಾರ್ಥಿಸುವಾಗಲೆಲ್ಲಾ ನಿಮ್ಮ ನಿಮಿತ್ತವಾಗಿ ನಮ್ಮ ಕರ್ತನಾದ ಯೇಸು ಕ್ರಿಸ್ತನ ತಂದೆಯಾಗಿರುವ ದೇವರಿಗೆ ಕೃತಜ್ಞತಾಸ್ತುತಿ ಸಲ್ಲಿಸುತ್ತೇವೆ. 4ನೀವು ಕ್ರಿಸ್ತ ಯೇಸುವಿನಲ್ಲಿ ಇಟ್ಟಿರುವ ನಂಬಿಕೆ ಹಾಗು ದೇವಜನರೆಲ್ಲರಲ್ಲಿ ನೀವು ಇಟ್ಟಿರುವ ಪ್ರೀತಿಯ ಬಗ್ಗೆ ನಾವು ಕೇಳಿದ್ದೇವೆ. 5ಪರಲೋಕದಲ್ಲಿ ನಿಮಗೋಸ್ಕರ ಕಾದಿರಿಸಿರುವ ನಿರೀಕ್ಷೆಯನ್ನು ಕುರಿತು ಸುವಾರ್ತೆಯ ಸತ್ಯವಾಕ್ಯದಿಂದ ನೀವು ಮೊದಲೇ ಕೇಳಿದ್ದಿರಿ. 6ನೀವು ಸತ್ಯದಲ್ಲಿ ದೇವರ ಕೃಪೆಯನ್ನು ಕೇಳಿ ತಿಳಿದುಕೊಂಡ ದಿನದಿಂದ ನಿಮ್ಮ ಬಳಿಗೆ ಬಂದ ಆ ಸುವಾರ್ತೆಯು ನಿಮ್ಮಲ್ಲಿ ಫಲಕೊಟ್ಟಂತೆ ಲೋಕದಲ್ಲೆಲ್ಲಾ ಫಲಕೊಟ್ಟು ವೃದ್ಧಿಯಾಗುತ್ತಿದೆ. 7ಈ ಸುವಾರ್ತೆಯನ್ನು ಕ್ರಿಸ್ತನ ನಂಬಿಗಸ್ತ ಸೇವಕನೂ, ನಮ್ಮ ಪ್ರಿಯ ಜೊತೆಸೇವಕನೂ ಆದ ಎಪಫ್ರನಿಂದ ನೀವು ಕಲಿತುಕೊಂಡಿದ್ದೀರಿ. 8ಪವಿತ್ರಾತ್ಮಪ್ರೇರಿತವಾದ ನಿಮ್ಮ ಪ್ರೀತಿಯ ವಿಷಯವನ್ನು ನನಗೆ ತಿಳಿಸಿದವನು ಆತನೇ.

ಪ್ರತಿವಚನ ಕೀರ್ತನೆ

ಕೀರ್ತ 52:8–9

8ಆದರೆ ನಾನು ದೇವಾಲಯದ ಸೊಗಸಾದ ಎಣ್ಣೇ ಮರದಂತಿರುವೆನು; ದೇವರ ಕೃಪೆಯನ್ನು ಯುಗಯುಗಾಂತರಗಳಲ್ಲಿಯೂ ನಂಬಿಕೊಂಡಿರುವೆನು. 9ದೇವರೇ, ನಿನ್ನ ಉಪಕಾರಕ್ಕಾಗಿ ಯಾವಾಗಲೂ ನಿನ್ನನ್ನು ಸ್ತುತಿಸುವೆನು; ನಿನ್ನ ನಾಮವು ಸರ್ವೋತ್ತಮವೆಂದು ನಿನ್ನ ಭಕ್ತರ ಮುಂದೆ ಹೊಗಳುವೆನು.

ಸುವಾರ್ತೆ

ಲೂಕ 4:38–44

38ಆತನು ಸಭಾಮಂದಿರದಿಂದೆದ್ದು ಸೀಮೋನನ ಮನೆಗೆ ಬಂದನು. ಅಲ್ಲಿ ಸೀಮೋನನ ಅತ್ತೆಯು ವಿಪರೀತ ಜ್ವರದಿಂದ ಕಷ್ಟಪಡುತ್ತಿರಲಾಗಿ; ಆಕೆಯ ವಿಷಯದಲ್ಲಿ ಅಲಿದ್ದವರು ಆತನನ್ನು ಬೇಡಿಕೊಂಡರು. 39ಆತನು ಆಕೆಯ ಬಳಿ ನಿಂತು ಬಾಗಿ, ಜ್ವರವನ್ನು ಬಿಟ್ಟುಹೋಗೆಂದು ಗದರಿಸಲು; ಅದು ಆಕೆಯನ್ನು ಬಿಟ್ಟುಹೋಯಿತು. ಕೂಡಲೆ ಆಕೆಯು ಎದ್ದು ಅವರೆಲ್ಲರಿಗೆ ಉಪಚಾರಮಾಡಿದಳು. 40ಸಂಜೆಯಾದಂತೆ ಜನರು ವಿವಿಧ ರೋಗಗಳಿಂದ ಅಸ್ವಸ್ಥವಾದವರನ್ನೆಲ್ಲಾ ಆತನ ಹತ್ತಿರಕ್ಕೆ ಕರತರಲು; ಆತನು ಪ್ರತಿಯೊಬ್ಬರ ಮೇಲೆಯೂ ಕೈಯಿಟ್ಟು ಅವರನ್ನು ವಾಸಿಮಾಡಿದನು. 41ದೆವ್ವಗಳು ಸಹ, ನೀನು ದೇವಕುಮಾರನು ಎಂದು ಅಬ್ಬರಿಸಿ, ಅನೇಕರನ್ನು ಬಿಟ್ಟುಹೋದವು. ಆತನು ಕ್ರಿಸ್ತನೆಂದು ದೆವ್ವಗಳಿಗೆ ಸ್ಪಷ್ಟವಾಗಿ ತಿಳಿದಿದ್ದರಿಂದ ಆತನು ಅವುಗಳನ್ನು ಮಾತನಾಡದಂತೆ ಗದರಿಸಿದನು. 42ಬೆಳಗಾದ ಮೇಲೆ ಆತನು ಹೊರಟು ನಿರ್ಜನವಾದ ಸ್ಥಳಕ್ಕೆ ಹೋದನು; ಜನರು ಗುಂಪುಗುಂಪಾಗಿ ಆತನನ್ನು ಹುಡುಕಿಕೊಂಡು ಆತನಿದ್ದಲ್ಲಿಗೆ ಬಂದು, ಆತನು ಅವರನ್ನು ಬಿಟ್ಟುಹೋಗಬಾರದೆಂದು ಅವರು ಆತನನ್ನು ತಡೆದರು. 43ಆದರೆ ಆತನು ಅವರಿಗೆ, “ನಾನು ದೇವರ ರಾಜ್ಯದ ಸುವಾರ್ತೆಯನ್ನು ಬೇರೆ ಊರುಗಳಿಗೂ ಸಾರಿ ಹೇಳಬೇಕಾಗಿದೆ; ಇದಕ್ಕಾಗಿಯೇ ಕಳುಹಿಸಲ್ಪಟ್ಟಿದ್ದೇನೆ” ಎಂದು ಹೇಳಿದನು. 44ಬಳಿಕ ಆತನು ಯೂದಾಯ ದೇಶದ ಸಭಾಮಂದಿರಗಳಲ್ಲಿ ಸುವಾರ್ತೆಯನ್ನು ಸಾರುತ್ತಾ ಇದ್ದನು.

ಸಾಮಾನ್ಯ ರೋಮನ್ ಪಂಚಾಂಗ; ಬಿಷಪರ ಸಮ್ಮೇಳನವು ಕೆಲವು ಹಬ್ಬಗಳನ್ನು (ಪ್ರಭುವಿನ ಪ್ರಕಟನೆ, ಸ್ವರ್ಗಾರೋಹಣ, ಕ್ರಿಸ್ತನ ದೇಹ ಮತ್ತು ರಕ್ತ) ಭಾನುವಾರಕ್ಕೆ ಸರಿಸಬಹುದು ಅಥವಾ ತನ್ನದೇ ಹಬ್ಬಗಳನ್ನು ಸೇರಿಸಬಹುದು. ವಾಚನ ಸಂಗ್ರಹ: ಭಾನುವಾರದ ಚಕ್ರ B, ವಾರದ ದಿನಗಳ ವರ್ಷ I.

ಮೂಲಗಳು: ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ · © 2017, 2019 Bridge Connectivity Solutions, CC BY-SA 4.0; changed: footnotes, headings and the letters over Psalm 119 left out, verses in the app's numbering. · ಮೂಲಗಳು ಮತ್ತು ಹಕ್ಕುಗಳು