Bible Explorer ಆ್ಯಪ್ ಪಡೆಯಿರಿ

ಮುಖಪುಟ › ದೈನಂದಿನ ಬೈಬಲ್ ವಾಚನಗಳು › ಸೆಪ್ಟೆಂಬರ್ 2027 › 1 ಸೆಪ್ಟೆಂಬರ್

ಆರ್ಥೊಡಾಕ್ಸ್ ಪಂಚಾಂಗ · ಆಗಸ್ಟ್ 19 (ಹಳೆಯ ಪದ್ಧತಿ)

ಆರ್ಥೊಡಾಕ್ಸ್ ದೈನಂದಿನ ವಾಚನಗಳು — 1 ಸೆಪ್ಟೆಂಬರ್ 2027

ಬುಧವಾರ · ಪಂಚಾಶತ್ತಮದ ನಂತರದ 11ನೇ ವಾರ · ಸ್ವರ 1

ಹಬ್ಬಗಳು ಮತ್ತು ಸಂತರು

Afterfeast of the Dormition

ಉಪವಾಸದ ದಿನ

ಉಪವಾಸ: ಎಣ್ಣೆಯೊಂದಿಗೆ

ಇದು ಮಠದ ನಿಯಮವನ್ನು ಅನುಸರಿಸುತ್ತದೆ. ಸಭೆಯಲ್ಲಿ ಉಪವಾಸದ ಪ್ರಮಾಣವನ್ನು ಆರೋಗ್ಯ, ವಯಸ್ಸು ಮತ್ತು ಸಂದರ್ಭಗಳಿಗೆ ಅನುಗುಣವಾಗಿ ಪಾಪನಿವೇದನೆಯ ಗುರುವಿನೊಂದಿಗೆ ಸೇರಿ ನಿರ್ಧರಿಸಲಾಗುತ್ತದೆ.

ದಿನದ ವಾಚನಗಳು

ಪತ್ರಿಕೆ

2 ಕೊರಿ 3:4–11

4ನಮಗೆ ಇಂಥ ಭರವಸೆಯು ಕ್ರಿಸ್ತನ ಮೂಲಕವೇ ದೇವರಲ್ಲಿದೆ. 5ನಮ್ಮಿಂದಲೇ ಏನಾದರೂ ಉಂಟಾಯಿತೆಂದು ತೀರ್ಮಾನಿಸಿಕೊಳ್ಳುವುದಕ್ಕೆ ನಮಗೆ ನಾವೇ ಯೋಗ್ಯರಲ್ಲ ನಮಗಿರುವ ಯೋಗ್ಯತೆಯೂ ದೇವರಿಂದಲೇ ಬಂದದ್ದು. 6ಆತನು ಹೊಸ ಒಡಂಬಡಿಕೆಗೆ ಸೇವಕರಾಗಿರುವ ಸಾಮರ್ಥ್ಯವನ್ನು ನಮಗೆ ಅನುಗ್ರಹಿಸಿದ್ದಾನೆ. ಈ ಒಡಂಬಡಿಕೆಯು ಲಿಖಿತರೂಪವಾಗಿರದೆ ದೇವರಾತ್ಮ ಸಂಬಂಧವಾದದ್ದು ಆಗಿದೆ. ಲಿಖಿತ ರೂಪವಾದ ಒಡಂಬಡಿಕೆಯು ಮರಣವನ್ನುಂಟು ಮಾಡುತ್ತದೆ. ದೇವರಾತ್ಮ ಸಂಬಂಧವಾದದ್ದು ಜೀವವನ್ನುಂಟುಮಾಡುತ್ತದೆ. 7ಕಲ್ಲಿನ ಮೇಲೆ ಕೊರೆಯಲಾದ ಮೃತ್ಯುಕಾರಕವಾದ ಈ ಶಾಸನ ಅಷ್ಟು ಮಹಿಮೆಯಿಂದ ಕೂಡಿದ್ದಾಗಿತ್ತು. ಆ ಮಹಿಮೆಯಿಂದ ಮೋಶೆಯ ಮುಖವನ್ನು ಆವರಿಸಿದ್ದ ಮಹಿಮೆಯೂ ಕುಂದಿಹೋಗುವಂಥದ್ದಾಗಿದ್ದರೂ ಆ ಮಹಿಮೆಯಿಂದಾಗಿ ಆತನ ಮುಖವನ್ನು ದಿಟ್ಟಿಸಿ ನೋಡಲು ಇಸ್ರಾಯೇಲರಿಗೆ ಆಗಲಿಲ್ಲ. 8ಹೀಗಿದ್ದ ಮೇಲೆ ದೇವರಾತ್ಮಸಂಬಂಧವಾದ ಈ ಸೇವೆಯು ಇನ್ನೆಷ್ಟು ಮಹಿಮೆಯಿಂದ ಇರಬೇಕಲ್ಲವೇ? 9ಅಪರಾಧ ನಿರ್ಣಯಕ್ಕೆ ಸಾಧನವಾಗಿರುವ ಸೇವೆಯು ಮಹಿಮೆಹೊಂದಿರಲಾಗಿ, ನೀತಿಗೆ ಸಾಧನವಾಗಿರುವ ಸೇವೆಯು ಇನ್ನೆಷ್ಟೋ ಅಧಿಕ ಮಹಿಮೆಯುಳ್ಳದ್ದಾಗಿ ಇರತ್ತದಲ್ಲವೋ? 10ಅಧಿಕವಾದ ಮಹಿಮೆಯುಳ್ಳದ್ದು ಬಂದದ್ದರಿಂದ ಮೊದಲಿದ್ದ ಮಹಿಮೆಯು ಅದರ ಎದುರು ಮಹಿಮೆಯಿಲ್ಲದಂತಾಯಿತು. 11ಅಳಿದು ಹೋಗುವಂಥದ್ದೇ, ಅಷ್ಟು ಪ್ರಭಾವವುಳ್ಳದ್ದಾಗಿದ್ದರೆ ಶಾಶ್ವತವಾಗಿ ಉಳಿಯುವಂಥದ್ದು ಮತ್ತೆಷ್ಟು ಹೆಚ್ಚಾದ ಪ್ರಭಾವವುಳ್ಳದ್ದಾಗಿರಬೇಕಲ್ಲವೋ?

ಸುವಾರ್ತೆ

ಮತ್ತಾ 23:29–39

29ಅಯ್ಯೋ, ಕಪಟಿಗಳಾದ ಶಾಸ್ತ್ರಿಗಳೇ, ಫರಿಸಾಯರೇ, ನೀವು ಪ್ರವಾದಿಗಳ ಸಮಾಧಿಗಳನ್ನು ಕಟ್ಟಿ, ನೀತಿವಂತರ ಗೋರಿಗಳನ್ನು ಅಲಂಕರಿಸಿ, 30‘ನಾವು ನಮ್ಮ ಹಿರಿಯರ ಕಾಲದಲ್ಲಿ ಇದ್ದಿದ್ದರೆ ಪ್ರವಾದಿಗಳನ್ನು ಕೊಂದ ಪಾಪದಲ್ಲಿ ಪಾಲುಗಾರರಾಗುತ್ತಿರಲಿಲ್ಲ’ ಅನ್ನುತ್ತೀರಿ. 31ಹಾಗಾದರೆ ನೀವು ಪ್ರವಾದಿಗಳನ್ನು ಕೊಂದವರ ಮಕ್ಕಳೇ ಹೌದು ಎಂಬುದಕ್ಕೆ ನಿಮಗೆ ನೀವೇ ಸಾಕ್ಷಿಗಳಾಗಿದ್ದೀರಿ. 32ಒಳ್ಳೆಯದು, ನೀವು ನಿಮ್ಮ ಹಿರಿಯರ ಪಾಪದ ಅಳತೆಯನ್ನು ಪೂರ್ತಿಮಾಡುತ್ತೀರಿ. 33ಹಾವುಗಳೇ, ಸರ್ಪಜಾತಿಯವರೇ, ನರಕದಂಡನೆಯಿಂದ ಹೇಗೆ ನೀವು ತಪ್ಪಿಸಿಕೊಳ್ಳುವಿರಿ? 34ಆದುದರಿಂದ ನೋಡಿರಿ, ನಾನು ನಿಮ್ಮ ಬಳಿಗೆ ಪ್ರವಾದಿಗಳನ್ನೂ ಜ್ಞಾನಿಗಳನ್ನೂ ಶಾಸ್ತ್ರಿಗಳನ್ನೂ ಕಳುಹಿಸುತ್ತೇನೆ; ಅವರಲ್ಲಿ ಕೆಲವರನ್ನು ನೀವು ಕೊಲ್ಲುವಿರಿ, ಶಿಲುಬೆಗೆ ಹಾಕುವಿರಿ; ಕೆಲವರನ್ನು ನಿಮ್ಮ ಸಭಾಮಂದಿರಗಳಲ್ಲಿ ಚಾಟಿಗಳಿಂದ ಹೊಡೆದು ಊರಿಂದ ಊರಿಗೆ ಅಟ್ಟಿಕೊಂಡು ಹೋಗುವಿರಿ. 35ಹೀಗೆ ನೀತಿವಂತನಾದ ಹೇಬೆಲನ ರಕ್ತವು ಮೊದಲುಗೊಂಡು ನೀವು ದೇವಾಲಯಕ್ಕೂ ಯಜ್ಞವೇದಿಗೂ ನಡುವೆ ಕೊಂದು ಹಾಕಿದ ಬರಕೀಯನ ಮಗನಾದ ಜಕರೀಯನ ರಕ್ತದವರೆಗೂ ಭೂಮಿಯ ಮೇಲೆ ಸುರಿಸಲ್ಪಟ್ಟ ಎಲ್ಲಾ ನೀತಿವಂತರ ರಕ್ತಸುರಿಸಿದ ಅಪರಾಧವು ನಿಮ್ಮ ತಲೆಯ ಮೇಲೆ ಬರುವುದು. 36ಇದೆಲ್ಲಾ ಈ ಸಂತತಿಯವರ ಮೇಲೆ ಬರುವುದೆಂದು ನಿಮಗೆ ಸತ್ಯವಾಗಿ ಹೇಳುತ್ತೇನೆ. 37“ಯೆರೂಸಲೇಮೇ, ಯೆರೂಸಲೇಮೇ, ಪ್ರವಾದಿಗಳ ಪ್ರಾಣತೆಗೆಯುವವಳೇ, ದೇವರು ನಿನ್ನ ಬಳಿಗೆ ಕಳುಹಿಸಿಕೊಟ್ಟವರನ್ನು ಕಲ್ಲೆಸೆದು ಕೊಲ್ಲುವವಳೇ! ಕೋಳಿ ತನ್ನ ಮರಿಗಳನ್ನು ರೆಕ್ಕೆಗಳ ಕೆಳಗೆ ಹುದುಗಿಸಿಕೊಳ್ಳುವಂತೆ ನಿನ್ನ ಮಕ್ಕಳನ್ನು ಸೇರಿಸಿಕೊಳ್ಳಲು ನನಗೆ ಎಷ್ಟೋ ಸಾರಿ ಮನಸ್ಸಿತ್ತು; ಆದರೆ ನಿನಗೆ ಮನಸ್ಸಿಲ್ಲದೆ ಹೋಯಿತು. 38ನೋಡಿರಿ, ನಿಮ್ಮ ಮನೆಯು ನಿಮಗೆ ಬರಿದಾಗಿ ಬಿಡುತ್ತದೆ. 39ಈಗಿಂದ, ‘ಕರ್ತನ ಹೆಸರಿನಲ್ಲಿ ಬರುವವನು ಧನ್ಯನು ಎಂದು ನೀವಾಗಿ ನೀವು ಹೇಳುವ ತನಕ ನೀವು ನನ್ನನ್ನು ನೋಡುವುದೇ ಇಲ್ಲವೆಂದು ನಿಮಗೆ ಹೇಳುತ್ತೇನೆ’” ಅಂದನು.

ದಿನಾಂಕಗಳು ರಷ್ಯನ್ ಸಭೆಯ ಜೂಲಿಯನ್ ಪಂಚಾಂಗದ ಪ್ರಕಾರ ಇವೆ (ಸರ್ಬಿಯನ್ ಮತ್ತು ಜಾರ್ಜಿಯನ್ ಸಭೆಗಳು ಮತ್ತು ಅಥೋಸ್ ಪರ್ವತದಂತೆ): ಸಭೆಯ ಪಂಚಾಂಗದ 19 ಆಗಸ್ಟ್ ಎಂದರೆ ನಾಗರಿಕ ಪಂಚಾಂಗದ 1 ಸೆಪ್ಟೆಂಬರ್. ಹೊಸ ಪಂಚಾಂಗದ ಸಭೆಗಳು (ಗ್ರೀಸ್, ರೊಮೇನಿಯಾ, ಬಲ್ಗೇರಿಯಾ, ಉಕ್ರೇನ್…) ನಿಗದಿತ ದಿನಾಂಕದ ಹಬ್ಬಗಳನ್ನೂ ಸಂತರನ್ನೂ ಅದೇ ನಾಗರಿಕ ದಿನಾಂಕದಂದು, 13 ದಿನಗಳ ಮುಂಚೆ, ಆಚರಿಸುತ್ತವೆ, ಮತ್ತು ಅವುಗಳ ಕೆಲವು ವಾಚನಗಳು ಬೇರೆಯಾಗಿವೆ; ಈಸ್ಟರ್ ಮತ್ತು ಅದನ್ನು ಅವಲಂಬಿಸಿರುವ ದಿನಗಳು ಒಂದೇ ಆಗಿವೆ.

ಮೂಲಗಳು: ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ · © 2017, 2019 Bridge Connectivity Solutions, CC BY-SA 4.0; changed: footnotes, headings and the letters over Psalm 119 left out, verses in the app's numbering. · ಮೂಲಗಳು ಮತ್ತು ಹಕ್ಕುಗಳು