Bible Explorer ಆ್ಯಪ್ ಪಡೆಯಿರಿ

ಮುಖಪುಟ › ದೈನಂದಿನ ಬೈಬಲ್ ವಾಚನಗಳು › ಸೆಪ್ಟೆಂಬರ್ 2027 › 2 ಸೆಪ್ಟೆಂಬರ್

ಆರ್ಥೊಡಾಕ್ಸ್ ಪಂಚಾಂಗ · ಆಗಸ್ಟ್ 20 (ಹಳೆಯ ಪದ್ಧತಿ)

ಆರ್ಥೊಡಾಕ್ಸ್ ದೈನಂದಿನ ವಾಚನಗಳು — 2 ಸೆಪ್ಟೆಂಬರ್ 2027

ಗುರುವಾರ · ಪಂಚಾಶತ್ತಮದ ನಂತರದ 11ನೇ ವಾರ · ಸ್ವರ 1

ಹಬ್ಬಗಳು ಮತ್ತು ಸಂತರು

Afterfeast of the Dormition

ಉಪವಾಸ

ಉಪವಾಸವಿಲ್ಲ

ಇದು ಮಠದ ನಿಯಮವನ್ನು ಅನುಸರಿಸುತ್ತದೆ. ಸಭೆಯಲ್ಲಿ ಉಪವಾಸದ ಪ್ರಮಾಣವನ್ನು ಆರೋಗ್ಯ, ವಯಸ್ಸು ಮತ್ತು ಸಂದರ್ಭಗಳಿಗೆ ಅನುಗುಣವಾಗಿ ಪಾಪನಿವೇದನೆಯ ಗುರುವಿನೊಂದಿಗೆ ಸೇರಿ ನಿರ್ಧರಿಸಲಾಗುತ್ತದೆ.

ದಿನದ ವಾಚನಗಳು

ಪತ್ರಿಕೆ

2 ಕೊರಿ 4:1–6

1ಆದ್ದರಿಂದ ದೇವರ ಕರುಣೆಯಿಂದ ಈ ಸೇವೆಯನ್ನು ಹೊಂದಿದವರಾದ ನಾವು ಧೈರ್ಯಗೆಟ್ಟು ಹಿಂಜರಿಯುವುದಿಲ್ಲ. 2ನಾಚಿಕೆಪಡುವಂತಹ ಗುಪ್ತಕಾರ್ಯಗಳನ್ನು ಬಿಟ್ಟು ಕುತಂತ್ರದಲ್ಲಿ ನಡೆಯದೆ ದೇವರ ವಾಕ್ಯವನ್ನು ಬೆರಕೆ ಮಾಡದೆ, ಸತ್ಯವನ್ನು ಪ್ರಾಮಾಣಿಕವಾಗಿ ಬೋಧಿಸುತ್ತಾ ನಾವು ನೀತಿವಂತರೆಂದು ಪ್ರತಿ ಮನುಷ್ಯನ ಮನಸ್ಸಾಕ್ಷಿಯು ದೇವರ ಮುಂದೆ ಒಪ್ಪಬೇಕಾದ ರೀತಿಯಲ್ಲಿ ನಡೆಯುತ್ತೇವೆ. 3ನಾವು ಸಾರುವ ಸುವಾರ್ತೆಯು ಕೆಲವರಿಗೆ ಮರೆಯಾಗಿರುವುದಾದರೆ ನಾಶಮಾರ್ಗದಲ್ಲಿರುವವರಿಗೇ ಅದು ಮರೆಯಾಗಿರುವುದು. 4ಇವರಲ್ಲಿ ದೇವರ ಪ್ರತಿರೂಪವಾಗಿರುವ ಕ್ರಿಸ್ತನ ತೇಜಸ್ಸನ್ನು ತೋರಿಸುವ ಸುವಾರ್ತೆಯ ಬೆಳಕನ್ನು ನೋಡಬಾರದೆಂದು ಈ ಲೋಕದ ದೇವರು ನಂಬಿಕೆಯಿಲ್ಲದವರ ಮನಸ್ಸನ್ನು ಕುರುಡು ಮಾಡಿದ್ದಾನೆ. 5ನಮ್ಮನ್ನೇ ನಾವು ಪ್ರಚಾರಮಾಡಿಕೊಳ್ಳದೆ ನಮ್ಮನ್ನು ಯೇಸುವಿನ ನಿಮಿತ್ತ ನಿಮ್ಮ ದಾಸರೆಂತಲೂ ಕ್ರಿಸ್ತೇಸುವನ್ನೇ ಕರ್ತನೆಂತಲೂ ಘೋಷಿಸುತ್ತೇವೆ. 6ಯಾಕೆಂದರೆ “ಕತ್ತಲೆಯೊಳಗಿನಿಂದ ಬೆಳಕು ಪ್ರಕಾಶಿಸಲಿ” ಎಂದು ಹೇಳಿದ ದೇವರು ತಾನೇ ಯೇಸು ಕ್ರಿಸ್ತನ ಮುಖದಲ್ಲಿ ತೋರುವ ದೇವಮಹಿಮೆಯ ಜ್ಞಾನವೆಂಬ ಪ್ರಕಾಶವು ಅನೇಕರಿಗೆ ಉಂಟಾಗುವುದಕ್ಕಾಗಿ ನಮ್ಮ ಹೃದಯಗಳಲ್ಲಿ ಪ್ರಕಾಶಿಸಿದನು.

ಸುವಾರ್ತೆ

ಮತ್ತಾ 24:13–28

13ಆದರೆ ಕಡೆಯವರೆಗೂ ತಾಳುವವನು ರಕ್ಷಣೆ ಹೊಂದುವನು. 14ಇದಲ್ಲದೆ ರಾಜ್ಯದ ಈ ಸುವಾರ್ತೆಯು ಸರ್ವಲೋಕದಲ್ಲಿ ಎಲ್ಲಾ ಜನಾಂಗಗಳಿಗೆ ಸಾಕ್ಷಿಗಾಗಿ ಸಾರಲ್ಪಡುವುದು; ಆಗ ಅಂತ್ಯವು ಬರುವುದು. 15“ಪ್ರವಾದಿಯಾದ ದಾನಿಯೇಲನು ಹೇಳಿದ ಹಾಗೆ ವಿನಾಶಕಾರಕ, ವಿಕಾರ ವಸ್ತು ಪವಿತ್ರ ಸ್ಥಾನದಲ್ಲಿ ನಿಂತಿರುವುದನ್ನು ನೀವು ನೋಡುವಾಗ (ಇದನ್ನು ಓದುವವನು ತಿಳಿದುಕೊಳ್ಳಲಿ) 16ಯೂದಾಯದಲ್ಲಿರುವವರು ಬೆಟ್ಟಗಳಿಗೆ ಓಡಿಹೋಗಲಿ; 17ಮಾಳಿಗೆಯ ಮೇಲೆ ಇರುವವನು ತನ್ನ ಮನೆಯೊಳಗಿರುವುದನ್ನು ತೆಗೆದುಕೊಳ್ಳುವುದಕ್ಕೆ ಹೋಗದಿರಲಿ, 18ಹೊಲದಲ್ಲಿರುವವನು ತನ್ನ ಹೊದಿಕೆಯನ್ನು ತೆಗೆದುಕೊಳ್ಳುವುದಕ್ಕೆ ಹಿಂತಿರುಗಿ ಹೋಗದಿರಲಿ. 19ಆದರೆ ಆ ದಿನದಲ್ಲಿ ಬಸುರಿಯರಿಗೂ, ಬಾಣಂತಿಯರಾಗಿರುವ ಹೆಂಗಸರಿಗೂ ಅಯ್ಯೋ ಕಷ್ಟ. 20ನಿಮ್ಮ ಪಲಾಯನವು ಚಳಿಗಾಲದಲ್ಲಾಗಲಿ ಸಬ್ಬತ್ ದಿನದಲ್ಲಿಯಾಗಲಿ ಆಗಬಾರದೆಂದು ಪ್ರಾರ್ಥಿಸಿರಿ. 21ಏಕೆಂದರೆ ಲೋಕದ ಅರಂಭದಿಂದ ಇಂದಿನವರೆಗೂ ಆಗದಿರುವಂಥದ್ದು, ಇನ್ನು ಮೇಲೆಯೂ ಆಗದಿರುವಂತಹ ಮಹಾ ಸಂಕಟವು ಅಂದು ಉಂಟಾಗುವುದು. 22ಕರ್ತನು ಆ ದಿನಗಳನ್ನು ಕಡಿಮೆ ಮಾಡದಿದ್ದರೆ ಒಬ್ಬ ನರಪ್ರಾಣಿಯಾದರೂ ಉಳಿಯನು; ಆದರೆ ತಾನು ಆರಿಸಿಕೊಂಡವರಿಗೋಸ್ಕರ ಆ ದಿನಗಳನ್ನು ಕಡಿಮೆಮಾಡುವನು. 23ಆಗ ಯಾರಾದರು ನಿಮಗೆ, ‘ಇಗೋ ಕ್ರಿಸ್ತನು ಇಲ್ಲಿದ್ದಾನೆ, ಅಗೋ ಅಲ್ಲಿದ್ದಾನೆ’ ಎಂದು ಹೇಳಿದರೆ ನಂಬಬೇಡಿರಿ. 24ಸುಳ್ಳು ಕ್ರಿಸ್ತರೂ, ಸುಳ್ಳುಪ್ರವಾದಿಗಳೂ ಎದ್ದು ಸಾಧ್ಯವಾದರೆ ದೇವರು ಆರಿಸಿಕೊಂಡವರನ್ನು ಸಹ ಮೋಸಗೊಳಿಸುವುದಕ್ಕೋಸ್ಕರ ಮಹಾ ಸೂಚಕ ಕಾರ್ಯಗಳನ್ನೂ ಅದ್ಭುತಕಾರ್ಯಗಳನ್ನೂ ಮಾಡಿ ತೋರಿಸುವರು. 25ನೋಡಿರಿ, ನಾನು ಮುಂಚಿತವಾಗಿಯೇ ನಿಮಗೆ ಇದನ್ನು ಹೇಳುತ್ತಿದ್ದೇನೆ. 26ಆದಕಾರಣ ಯಾರಾದರು ನಿಮಗೆ, ‘ಅಗೋ ಕ್ರಿಸ್ತನು ಅಡವಿಯಲ್ಲಿ ಇದ್ದಾನೆಂದು’ ಹೇಳಿದರೆ ಅಡವಿಗೆ ಹೊರಟುಹೋಗಬೇಡಿರಿ; ‘ಇಗೋ ಒಳಕೋಣೆಗಳಲ್ಲಿದ್ದಾನೆಂದು’ ಹೇಳಿದರೆ ನಂಬಬೇಡಿರಿ. 27ಹೇಗೆ ಮಿಂಚು ಪೂರ್ವದಲ್ಲಿ ಹುಟ್ಟಿ ಪಶ್ಚಿಮದ ವರೆಗೂ ಹೊಳೆಯುತ್ತದೋ ಹಾಗೆಯೇ ಮನುಷ್ಯಕುಮಾರನ ಬರುವಿಕೆಯೂ ಆಗುವುದು. 28ಹೆಣ ಬಿದ್ದಲ್ಲಿ ಹದ್ದುಗಳು ಬಂದು ಸೇರಿಕೊಳ್ಳುವವು.

ದಿನಾಂಕಗಳು ರಷ್ಯನ್ ಸಭೆಯ ಜೂಲಿಯನ್ ಪಂಚಾಂಗದ ಪ್ರಕಾರ ಇವೆ (ಸರ್ಬಿಯನ್ ಮತ್ತು ಜಾರ್ಜಿಯನ್ ಸಭೆಗಳು ಮತ್ತು ಅಥೋಸ್ ಪರ್ವತದಂತೆ): ಸಭೆಯ ಪಂಚಾಂಗದ 20 ಆಗಸ್ಟ್ ಎಂದರೆ ನಾಗರಿಕ ಪಂಚಾಂಗದ 2 ಸೆಪ್ಟೆಂಬರ್. ಹೊಸ ಪಂಚಾಂಗದ ಸಭೆಗಳು (ಗ್ರೀಸ್, ರೊಮೇನಿಯಾ, ಬಲ್ಗೇರಿಯಾ, ಉಕ್ರೇನ್…) ನಿಗದಿತ ದಿನಾಂಕದ ಹಬ್ಬಗಳನ್ನೂ ಸಂತರನ್ನೂ ಅದೇ ನಾಗರಿಕ ದಿನಾಂಕದಂದು, 13 ದಿನಗಳ ಮುಂಚೆ, ಆಚರಿಸುತ್ತವೆ, ಮತ್ತು ಅವುಗಳ ಕೆಲವು ವಾಚನಗಳು ಬೇರೆಯಾಗಿವೆ; ಈಸ್ಟರ್ ಮತ್ತು ಅದನ್ನು ಅವಲಂಬಿಸಿರುವ ದಿನಗಳು ಒಂದೇ ಆಗಿವೆ.

ಮೂಲಗಳು: ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ · © 2017, 2019 Bridge Connectivity Solutions, CC BY-SA 4.0; changed: footnotes, headings and the letters over Psalm 119 left out, verses in the app's numbering. · ಮೂಲಗಳು ಮತ್ತು ಹಕ್ಕುಗಳು