Bible Explorer ಆ್ಯಪ್ ಪಡೆಯಿರಿ

ಮುಖಪುಟ › ದೈನಂದಿನ ಬೈಬಲ್ ವಾಚನಗಳು › ಸೆಪ್ಟೆಂಬರ್ 2027 › 3 ಸೆಪ್ಟೆಂಬರ್

ಕ್ಯಾಥೊಲಿಕ್ ಪಂಚಾಂಗ

ದೈನಂದಿನ ಬೈಬಲ್ ವಾಚನಗಳು (ಕಥೋಲಿಕ) — 3 ಸೆಪ್ಟೆಂಬರ್ 2027

ಶುಕ್ರವಾರ · ಸಾಮಾನ್ಯ ಕಾಲದ 22ನೇ ವಾರ

ಹಬ್ಬಗಳು ಮತ್ತು ಸಂತರು

ಸಾಮಾನ್ಯ ಕಾಲದ 22ನೇ ವಾರದ ಶುಕ್ರವಾರ

ಸ್ಮರಣೆ · ಆರಾಧನಾ ಬಣ್ಣ: ಬಿಳಿ

ಮಹಾನ್ ಸಂತ ಗ್ರೆಗೊರಿ, ಪೋಪ್ ಮತ್ತು ಧರ್ಮಸಭೆಯ ಪಂಡಿತ · ಸ್ಮರಣೆ

ಉಪವಾಸ ಮತ್ತು ಪ್ರಾಯಶ್ಚಿತ್ತ

ಪ್ರಾಯಶ್ಚಿತ್ತದ ದಿನ

ಪ್ರತಿ ಶುಕ್ರವಾರವೂ ಪ್ರಾಯಶ್ಚಿತ್ತದ ದಿನ; ಅದನ್ನು ಹೇಗೆ ಆಚರಿಸಬೇಕು ಎಂಬುದನ್ನು ಪ್ರತಿಯೊಂದು ಬಿಷಪರ ಸಮ್ಮೇಳನ ನಿರ್ಧರಿಸುತ್ತದೆ: ಮಾಂಸ ವರ್ಜನೆ ಅಥವಾ ಬೇರೊಂದು ಪ್ರಾಯಶ್ಚಿತ್ತ ಕಾರ್ಯ. ಉಪವಾಸ 18 ರಿಂದ 59 ವರ್ಷದವರಿಗೆ, ಮಾಂಸ ವರ್ಜನೆ 14 ವರ್ಷದಿಂದ ಕಡ್ಡಾಯ.

ದಿನದ ವಾಚನಗಳು

ಮೊದಲನೆಯ ವಾಚನ

ಕೊಲೊ 1:15–20

15ಕ್ರಿಸ್ತನು ಅದೃಶ್ಯನಾದ ದೇವರ ಪ್ರತಿರೂಪನೂ, ಸೃಷ್ಟಿಗೆಲ್ಲಾ ಜೇಷ್ಠಪುತ್ರನೂ ಆಗಿದ್ದಾನೆ. 16ಭೂಪರಲೋಕಗಳಲ್ಲಿರುವ ದೃಶ್ಯ ಅದೃಶ್ಯವಾದವುಗಳೆಲ್ಲವೂ, ಸಿಂಹಾಸನಗಳಾಗಲಿ, ಪ್ರಭುತ್ವಗಳಾಗಲಿ, ದೊರೆತನಗಳಾಗಲಿ, ಅಧಿಕಾರಗಳಾಗಲಿ ಆತನಿಂದ ಸೃಷ್ಟಿಸಲ್ಪಟ್ಟವು. ಸರ್ವವೂ ಆತನ ಮುಖಾಂತರವಾಗಿ ಆತನಿಗೋಸ್ಕರವಾಗಿ ಸೃಷ್ಟಿಸಲ್ಪಟ್ಟಿತು. 17ಆತನು ಎಲ್ಲಕ್ಕೂ ಮೊದಲು ಇದ್ದಾತನು, ಆತನಲ್ಲಿ ಸಮಸ್ತವು ಒಂದಾಗಿ ನೆಲೆಗೊಂಡಿದ್ದೆ. 18ಸಭೆಯೆಂಬ ದೇಹಕ್ಕೆ ಆತನು ತಲೆಯಾಗಿದ್ದಾನೆ, ಆತನೇ ಆದಿಸಂಭೂತನು, ಎಲ್ಲಾದರಲ್ಲಿ ಆತನು ಮೊದಲಿಗನಾಗುವುದಕ್ಕಾಗಿ ಸತ್ತವರೊಳಗಿಂದ ಮೊದಲು ಎದ್ದು ಬಂದವನು ಆತನೇ. 19ಏಕೆಂದರೆ ಆತನಲ್ಲಿಯೇ ತನ್ನ ಸರ್ವಸಂಪೂರ್ಣತೆಯು ವಾಸವಾಗಿರಬೇಕೆಂತಲೂ, 20ಮತ್ತು ಆತನು ಶಿಲುಬೆಯ ಮೇಲೆ ಸುರಿಸಿದ ರಕ್ತದಿಂದ ತಾನು ಸಮಾಧಾನವನ್ನುಂಟುಮಾಡಿ, ಭೂಪರಲೋಕಗಳಲ್ಲಿರುವ ಸಮಸ್ತವನ್ನೂ ತನ್ನ ಕುಮಾರನ ಮೂಲಕ ತನಗೆ ಸಂಧಾನಪಡಿಸಿಕೊಳ್ಳಬೇಕೆಂತಲೂ ತಂದೆಯಾದ ದೇವರು ಇಚ್ಛಿಸಿದನು.

ಪ್ರತಿವಚನ ಕೀರ್ತನೆ

ಕೀರ್ತ 100:1–5

1ಕೃತಜ್ಞತಾಯಜ್ಞ ಕೀರ್ತನೆ. ಸಮಸ್ತಭೂನಿವಾಸಿಗಳೇ, ಯೆಹೋವನಿಗೆ ಉತ್ಸಾಹಧ್ವನಿಮಾಡಿರಿ. 2ಯೆಹೋವನನ್ನು ಸಂತೋಷದಿಂದ ಸೇವಿಸಿರಿ; ಕೀರ್ತನೆ ಹಾಡುತ್ತಾ ಆತನ ಸನ್ನಿಧಿಗೆ ಬನ್ನಿರಿ. 3ಯೆಹೋವನೇ ದೇವರೆಂದು ತಿಳಿದುಕೊಳ್ಳಿರಿ. ನಮ್ಮನ್ನು ಉಂಟುಮಾಡಿದವನು ಆತನೇ; ನಾವು ಆತನವರು, ಆತನ ಪ್ರಜೆಯೂ, ಆತನು ಪಾಲಿಸುವ ಹಿಂಡೂ ಆಗಿದ್ದೇವೆ. 4ಕೃತಜ್ಞತಾ ಸ್ತುತಿಯೊಡನೆ ಆತನ ಮಂದಿರದ್ವಾರಗಳಿಗೂ, ಸ್ತುತಿಸ್ತೋತ್ರದೊಡನೆ ಆತನ ಅಂಗಳಗಳಿಗೂ ಬನ್ನಿರಿ; ಆತನ ಉಪಕಾರಗಳನ್ನು ಸ್ಮರಿಸಿರಿ; ಆತನ ನಾಮವನ್ನು ಕೊಂಡಾಡಿರಿ. 5ಯೆಹೋವನು ಒಳ್ಳೆಯವನು; ಆತನ ಕೃಪೆಯು ಯುಗಯುಗಕ್ಕೂ, ಆತನ ಸತ್ಯತೆಯು ತಲತಲಾಂತರಕ್ಕೂ ಇರುವವು.

ಸುವಾರ್ತೆ

ಲೂಕ 5:33–39

33ಅವರು ಆತನಿಗೆ, “ಯೋಹಾನನ ಶಿಷ್ಯರು ಪದೇಪದೇ ಉಪವಾಸದಿಂದ ವಿಜ್ಞಾಪನೆಗಳನ್ನು ಮಾಡುತ್ತಾ ಇರುತ್ತಾರೆ; ಅದರಂತೆ ಫರಿಸಾಯರ ಶಿಷ್ಯರೂ ಮಾಡುತ್ತಾರೆ; ಆದರೆ ನಿನ್ನ ಶಿಷ್ಯರು ಊಟಮಾಡುತ್ತಾರೆ ಕುಡಿಯುತ್ತಾರೆ” ಎಂದು ಹೇಳಲು, 34ಯೇಸು ಅವರಿಗೆ, “ಮದಲಿಂಗನು ಮದುವೆಯ ಅತಿಥಿಗಳ ಸಂಗಡ ಇರುವಲ್ಲಿ ಅವರಿಗೆ ಉಪವಾಸವಿರಿಸುವುದಕ್ಕೆ ನಿಮ್ಮಿಂದಾದೀತೇ? 35ಆದರೆ ಮದಲಿಂಗನನ್ನು ಅವರ ಬಳಿಯಿಂದ ತೆಗೆದುಕೊಳ್ಳಲ್ಪಡುವ ಕಾಲ ಬರುತ್ತದೆ. ಆ ಕಾಲದಲ್ಲೆ ಅವರು ಉಪವಾಸಮಾಡುವರು” ಎಂದು ಉತ್ತರಕೊಟ್ಟನು. 36ಯೇಸು ಅವರಿಗೆ ಒಂದು ಸಾಮ್ಯವನ್ನು ಸಹ ಹೇಳಿದನು, ಅದೇನೆಂದರೆ, “ಯಾರೂ ಹೊಸ ವಸ್ತ್ರದಿಂದ ಒಂದು ತುಂಡನ್ನು ತೆಗೆದುಕೊಂಡು ಹಳೇ ವಸ್ತ್ರಕ್ಕೆ ತ್ಯಾಪೆ ಹಚ್ಚುವುದಿಲ್ಲ, ಹಚ್ಚಿದರೆ ಆ ಹೊಸದನ್ನು ಹರಿದು ಕೆಡಿಸಿದ ಹಾಗಾಗುವುದಲ್ಲದೆ, ಹೊಸದರಿಂದ ಹರಿದು ಹಚ್ಚಿದ ತ್ಯಾಪೆಯು ಹಳೆಯ ವಸ್ತ್ರಕ್ಕೆ ಒಪ್ಪುವದೂ ಇಲ್ಲ. 37ಮತ್ತು ಹಳೇ ಬುದ್ದಲಿಗಳಲ್ಲಿ ಹೊಸ ದ್ರಾಕ್ಷಾರಸವನ್ನು ಯಾರೂ ಹಾಕಿಡುವುದಿಲ್ಲ; ಹಾಗೆ ಇಟ್ಟರೆ ಆ ಹೊಸ ದ್ರಾಕ್ಷಾರಸವು ಬುದ್ದಲಿಗಳನ್ನು ಒಡೆದು ಚೆಲ್ಲಿಹೋಗುವುದಲ್ಲದೆ ಬುದ್ದಲಿಗಳೂ ಒಡೆದು ಹೋಗುವವು. 38ಆದರೆ ಹೊಸ ದ್ರಾಕ್ಷಾರಸವನ್ನು ಹೊಸ ಬುದ್ದಲಿಗಳಲ್ಲಿ ಹಾಕಿಡತಕ್ಕದ್ದು. 39ಇದಲ್ಲದೆ ಹಳೇ ದ್ರಾಕ್ಷಾರಸವನ್ನು ಕುಡಿದವನು ಹೊಸದು ಬೇಕು ಅನ್ನುವುದಿಲ್ಲ, ‘ಹಳೆಯದೇ ಉತ್ತಮ’ ಅನ್ನುವನು.”

ಇಂದಿನ ಸಂತರು

ಸಾಮಾನ್ಯ ರೋಮನ್ ಪಂಚಾಂಗ; ಬಿಷಪರ ಸಮ್ಮೇಳನವು ಕೆಲವು ಹಬ್ಬಗಳನ್ನು (ಪ್ರಭುವಿನ ಪ್ರಕಟನೆ, ಸ್ವರ್ಗಾರೋಹಣ, ಕ್ರಿಸ್ತನ ದೇಹ ಮತ್ತು ರಕ್ತ) ಭಾನುವಾರಕ್ಕೆ ಸರಿಸಬಹುದು ಅಥವಾ ತನ್ನದೇ ಹಬ್ಬಗಳನ್ನು ಸೇರಿಸಬಹುದು. ವಾಚನ ಸಂಗ್ರಹ: ಭಾನುವಾರದ ಚಕ್ರ B, ವಾರದ ದಿನಗಳ ವರ್ಷ I.

ಮೂಲಗಳು: ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ · © 2017, 2019 Bridge Connectivity Solutions, CC BY-SA 4.0; changed: footnotes, headings and the letters over Psalm 119 left out, verses in the app's numbering. · ಮೂಲಗಳು ಮತ್ತು ಹಕ್ಕುಗಳು