ಮುಖಪುಟ › ದೈನಂದಿನ ಬೈಬಲ್ ವಾಚನಗಳು › ಸೆಪ್ಟೆಂಬರ್ 2027 › 3 ಸೆಪ್ಟೆಂಬರ್
ಆರ್ಥೊಡಾಕ್ಸ್ ಪಂಚಾಂಗ · ಆಗಸ್ಟ್ 21 (ಹಳೆಯ ಪದ್ಧತಿ)
ಆರ್ಥೊಡಾಕ್ಸ್ ದೈನಂದಿನ ವಾಚನಗಳು — 3 ಸೆಪ್ಟೆಂಬರ್ 2027
ಶುಕ್ರವಾರ · ಪಂಚಾಶತ್ತಮದ ನಂತರದ 11ನೇ ವಾರ · ಸ್ವರ 1
ಹಬ್ಬಗಳು ಮತ್ತು ಸಂತರು
Afterfeast of the Dormition
ಉಪವಾಸದ ದಿನ
ಉಪವಾಸ: ಎಣ್ಣೆಯೊಂದಿಗೆ
ಇದು ಮಠದ ನಿಯಮವನ್ನು ಅನುಸರಿಸುತ್ತದೆ. ಸಭೆಯಲ್ಲಿ ಉಪವಾಸದ ಪ್ರಮಾಣವನ್ನು ಆರೋಗ್ಯ, ವಯಸ್ಸು ಮತ್ತು ಸಂದರ್ಭಗಳಿಗೆ ಅನುಗುಣವಾಗಿ ಪಾಪನಿವೇದನೆಯ ಗುರುವಿನೊಂದಿಗೆ ಸೇರಿ ನಿರ್ಧರಿಸಲಾಗುತ್ತದೆ.
ದಿನದ ವಾಚನಗಳು
ಪತ್ರಿಕೆ
13“ನಾನು ನಂಬಿದೆನು. ಆದ್ದರಿಂದ ಮಾತನಾಡಿದೆನು.” ಎಂಬ ಶಾಸ್ತ್ರೋಕ್ತಿಯಲ್ಲಿ ಕಾಣುವಹಾಗೆ ನಂಬಿಕೆಯ ಅದೇ ಆತ್ಮನು ನಮ್ಮಲ್ಲಿರುವುದರಿಂದ ನಾವು ನಂಬಿದವರಾಗಿ ಮಾತನಾಡುತ್ತೇವೆ. 14ಕರ್ತನಾದ ಯೇಸುವನ್ನು ಎಬ್ಬಿಸಿದಾತನು ನಮ್ಮನ್ನು ಸಹ ಯೇಸುವಿನೊಂದಿಗೆ ಎಬ್ಬಿಸಿ ನಿಮ್ಮ ಜೊತೆಯಲ್ಲಿ ತನ್ನ ಮುಂದೆ ನಿಲ್ಲಿಸುವನೆಂದು ತಿಳಿದವರಾಗಿದ್ದೇವೆ. 15ಆ ಬಾಧೆಗಳೆಲ್ಲಾ ನಿಮ್ಮ ಹಿತಕ್ಕಾಗಿಯೇ ನಮಗೆ ಸಂಭವಿಸುತ್ತವೆ. ಅವುಗಳಲ್ಲಿ ಅಧಿಕವಾಗಿ ದೊರಕುವ ದೈವಕೃಪೆಯು ಬಹು ಜನರೊಳಗೆ ಕೃತಜ್ಞತೆಯನ್ನು ಹುಟ್ಟಿಸುವುದರಿಂದ ದೇವರ ಮಹಿಮೆಗೆ ಅಧಿಕವಾದ ಸ್ತುತಿ ಸ್ತೋತ್ರಗಳು ಉಂಟಾಗುವುದು. 16ಆದ್ದರಿಂದ ನಾವು ಧೈರ್ಯಗೆಡುವುದಿಲ್ಲ. ನಮ್ಮ ದೇಹವು ನಾಶವಾಗುತ್ತಾ ಇದ್ದರೂ ನಮ್ಮ ಅಂತರಂಗವು ದಿನೇ ದಿನೇ ಹೊಸದಾಗುತ್ತಾ ಬರುತ್ತದೆ. 17ಹೇಗೆಂದರೆ ಕ್ಷಣಮಾತ್ರವಿರುವ ನಮ್ಮ ಈ ಸ್ವಲ್ಪ ಸಂಕಟವು ಅತ್ಯಂತಾಧಿಕವಾಗಿ ಪ್ರತಿಫಲವನ್ನು ಉಂಟುಮಾಡಿ ನಮಗೆ ನಿರಂತರವಾಗಿರುವ ಅತಿಶ್ರೇಷ್ಟ ತೇಜಸ್ಸನ್ನು ದೊರಕಿಸುತ್ತದೆ. 18ನಾವು ಕಾಣುವಂಥದ್ದನ್ನು ಲಕ್ಷಿಸದೇ ಕಾಣದಿರುವಂಥದ್ದನ್ನು ಲಕ್ಷಿಸುವವರಾಗಿದ್ದೇವೆ. ಕಾಣುವಂಥದ್ದು ಸ್ವಲ್ಪ ಕಾಲ ಮಾತ್ರ ಇರುವುದು ಕಾಣದಿರುವಂಥದ್ದು ಸದಾಕಾಲವೂ ಇರುವುದು.
ಸುವಾರ್ತೆ
27ಹೇಗೆ ಮಿಂಚು ಪೂರ್ವದಲ್ಲಿ ಹುಟ್ಟಿ ಪಶ್ಚಿಮದ ವರೆಗೂ ಹೊಳೆಯುತ್ತದೋ ಹಾಗೆಯೇ ಮನುಷ್ಯಕುಮಾರನ ಬರುವಿಕೆಯೂ ಆಗುವುದು. 28ಹೆಣ ಬಿದ್ದಲ್ಲಿ ಹದ್ದುಗಳು ಬಂದು ಸೇರಿಕೊಳ್ಳುವವು. 29“ಆ ದಿನಗಳ ಸಂಕಟವು ಮುಗಿದಕೂಡಲೆ ಸೂರ್ಯನು ಕತ್ತಲಾಗಿ ಹೋಗುವನು, ಚಂದ್ರನು ಬೆಳಕು ಕೊಡದೆ ಇರುವನು, ನಕ್ಷತ್ರಗಳು ಆಕಾಶದಿಂದ ಉದುರುವವು, ಆಕಾಶದ ಶಕ್ತಿಗಳು ಕದಲುವವು. 30ಆಗ ಮನುಷ್ಯಕುಮಾರನನ್ನು ಸೂಚಿಸುವ ಗುರುತು ಆಕಾಶದಲ್ಲಿ ಕಾಣಬರುವವು. ಆಗ ಭೂಲೋಕದಲ್ಲಿರುವ ಎಲ್ಲಾ ಕುಲದವರು ಎದೆಬಡಕೊಳ್ಳುವರು, ಮತ್ತು ಮನುಷ್ಯಕುಮಾರನು ಬಲದಿಂದಲೂ, ಬಹು ಮಹಿಮೆಯಿಂದಲೂ ಆಕಾಶದ ಮೇಘಗಳ ಮೇಲೆ ಬರುವುದನ್ನು ಕಾಣುವರು. 31ಆತನು ತನ್ನ ದೂತರನ್ನು ತುತ್ತೂರಿಯ ಮಹಾ ಶಬ್ದದೊಂದಿಗೆ ಕಳುಹಿಸುವನು. ಅವರು ಆತನು ಆರಿಸಿಕೊಂಡವರನ್ನು ಆಕಾಶದ ಒಂದು ಕಡೆಯಿಂದ ಮತ್ತೊಂದು ಕಡೆಯವರೆಗೆ ನಾಲ್ಕು ದಿಕ್ಕುಗಳಿಂದ ಒಟ್ಟುಗೂಡಿಸುವರು. 32“ಅಂಜೂರ ಮರದ ದೃಷ್ಟಾಂತದಿಂದ ಬುದ್ಧಿಕಲಿಯಿರಿ. ಅದರ ಕೊಂಬೆ ಇನ್ನು ಎಳೆಯದಾಗಿದ್ದು ಎಲೆ ಬಿಡುವಾಗ ಬೇಸಿಗೆಯು ಹತ್ತಿರವಾಯಿತೆಂದು ತಿಳಿದುಕೊಳ್ಳುತ್ತೀರಲ್ಲಾ. 33ಹಾಗೆಯೇ ನೀವು ಸಹ ಇದನ್ನೆಲ್ಲಾ ನೋಡುವಾಗ ಆ ದಿನವು ಹತ್ತಿರವಿದೆ, ಹೊಸ್ತಿಲಲ್ಲೇ ಇದೆ ಎಂದು ತಿಳಿದುಕೊಳ್ಳಿರಿ. 42“ಹೀಗಿರಲಾಗಿ ನಿಮ್ಮ ಕರ್ತನು ಬರುವ ದಿನವು ನಿಮಗೆ ಗೊತ್ತಿಲ್ಲದಿರುವುದರಿಂದ ಎಚ್ಚರವಾಗಿರಿ. 43ಕಳ್ಳನು ಬರುವ ಗಳಿಗೆ ಮನೆಯ ಯಜಮಾನನಿಗೆ ತಿಳಿದಿದ್ದರೆ ಅವನು ತನ್ನ ಮನೆಗೆ ಕನ್ನಾ ಹಾಕಗೊಡಿಸದೇ ಕಾಯುತ್ತಿದ್ದನೆಂದು ತಿಳಿದುಕೊಳ್ಳಿರಿ. 44ಆದಕಾರಣ ನೀವು ಸಹ ಸಿದ್ಧವಾಗಿರಿ; ನೀವು ನೆನಸದ ಗಳಿಗೆಯಲ್ಲಿ ಮನುಷ್ಯಕುಮಾರನು ಬರುತ್ತಾನೆ. 45ಹಾಗಾದರೆ ಯಜಮಾನನು ತನ್ನ ಮನೆಯವರಿಗೆ ಹೊತ್ತು ಹೊತ್ತಿಗೆ ಆಹಾರ ಕೊಡುವುದಕ್ಕಾಗಿ ಅವರ ಮೇಲಿರಿಸಿದ ನಂಬಿಗಸ್ತನೂ, ವಿವೇಕಿಯೂ ಆದಂಥ ಆಳು ಯಾರು? 46ಯಜಮಾನನು ಬರುವಾಗ ಯಾವ ಆಳು ಹೀಗೆ ಮಾಡುತ್ತಿರುವುದನ್ನು ಕಾಣುವನೋ ಆ ಆಳು ಧನ್ಯನು. 47ಅಂಥವನನ್ನು ಅವನು ತನ್ನ ಎಲ್ಲಾ ಆಸ್ತಿಯ ಮೇಲ್ವಿಚಾರಕನನ್ನಾಗಿ ನೇಮಿಸುವನು ಎಂದು ನಿಮಗೆ ನಿಜವಾಗಿ ಹೇಳುತ್ತೇನೆ. 48ಆದರೆ ಆ ದುಷ್ಟ ಆಳು, ‘ನನ್ನ ಯಜಮಾನನು ಬರುವುದಕ್ಕೆ ತಡ ಮಾಡುತ್ತಾನೆ’ ಎಂದು ತನ್ನ ಮನಸ್ಸಿನಲ್ಲಿ ಅಂದುಕೊಂಡು 49ತನ್ನ ಜೊತೆ ಆಳುಗಳನ್ನು ಹೊಡೆಯುವುದಕ್ಕೂ, ಕುಡುಕರ ಸಂಗಡ ತಿನ್ನುವುದಕ್ಕೂ, ಕುಡಿಯುವುದಕ್ಕೂ ಪ್ರಾರಂಭಿಸಿದಾದರೆ, 50ಅವನು ನೆನಸದ ದಿನದಲ್ಲಿಯೂ, ತಿಳಿಯದ ಗಳಿಗೆಯಲ್ಲಿಯೂ ಆ ಆಳಿನ ಯಜಮಾನನು ಬಂದು ಅವನನ್ನು ಕಠಿಣವಾಗಿ ದಂಡಿಸಿ 51ಕಪಟಿಗಳಿಗೆ ಆಗತಕ್ಕ ಗತಿಯನ್ನು ಅವನಿಗೂ ಮಾಡುವನು. ಅಲ್ಲಿ ಗೋಳಾಟವೂ ಕಟಕಟನೆ ಹಲ್ಲು ಕಡಿಯೋಣವೂ ಇರುವವು.
ದಿನಾಂಕಗಳು ರಷ್ಯನ್ ಸಭೆಯ ಜೂಲಿಯನ್ ಪಂಚಾಂಗದ ಪ್ರಕಾರ ಇವೆ (ಸರ್ಬಿಯನ್ ಮತ್ತು ಜಾರ್ಜಿಯನ್ ಸಭೆಗಳು ಮತ್ತು ಅಥೋಸ್ ಪರ್ವತದಂತೆ): ಸಭೆಯ ಪಂಚಾಂಗದ 21 ಆಗಸ್ಟ್ ಎಂದರೆ ನಾಗರಿಕ ಪಂಚಾಂಗದ 3 ಸೆಪ್ಟೆಂಬರ್. ಹೊಸ ಪಂಚಾಂಗದ ಸಭೆಗಳು (ಗ್ರೀಸ್, ರೊಮೇನಿಯಾ, ಬಲ್ಗೇರಿಯಾ, ಉಕ್ರೇನ್…) ನಿಗದಿತ ದಿನಾಂಕದ ಹಬ್ಬಗಳನ್ನೂ ಸಂತರನ್ನೂ ಅದೇ ನಾಗರಿಕ ದಿನಾಂಕದಂದು, 13 ದಿನಗಳ ಮುಂಚೆ, ಆಚರಿಸುತ್ತವೆ, ಮತ್ತು ಅವುಗಳ ಕೆಲವು ವಾಚನಗಳು ಬೇರೆಯಾಗಿವೆ; ಈಸ್ಟರ್ ಮತ್ತು ಅದನ್ನು ಅವಲಂಬಿಸಿರುವ ದಿನಗಳು ಒಂದೇ ಆಗಿವೆ.
ಮೂಲಗಳು: ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ · © 2017, 2019 Bridge Connectivity Solutions, CC BY-SA 4.0; changed: footnotes, headings and the letters over Psalm 119 left out, verses in the app's numbering. · ಮೂಲಗಳು ಮತ್ತು ಹಕ್ಕುಗಳು