ಮುಖಪುಟ › ದೈನಂದಿನ ಬೈಬಲ್ ವಾಚನಗಳು › ಸೆಪ್ಟೆಂಬರ್ 2027 › 4 ಸೆಪ್ಟೆಂಬರ್
ಕ್ಯಾಥೊಲಿಕ್ ಪಂಚಾಂಗ
ದೈನಂದಿನ ಬೈಬಲ್ ವಾಚನಗಳು (ಕಥೋಲಿಕ) — 4 ಸೆಪ್ಟೆಂಬರ್ 2027
ಶನಿವಾರ · ಸಾಮಾನ್ಯ ಕಾಲದ 22ನೇ ವಾರ
ಹಬ್ಬಗಳು ಮತ್ತು ಸಂತರು
ಸಾಮಾನ್ಯ ಕಾಲದ 22ನೇ ವಾರದ ಶನಿವಾರ
ಐಚ್ಛಿಕ ಸ್ಮರಣೆ · ಆರಾಧನಾ ಬಣ್ಣ: ಹಸಿರು
ಶನಿವಾರದ ಪೂಜ್ಯ ಕನ್ಯೆ ಮರಿಯಳ ಸ್ಮರಣೆ · ಐಚ್ಛಿಕ ಸ್ಮರಣೆ
ದಿನದ ವಾಚನಗಳು
ಮೊದಲನೆಯ ವಾಚನ
21ಇದಲ್ಲದೆ ನೀವು ಪೂರ್ವದಲ್ಲಿ ಅನ್ಯರು ನಿಮ್ಮ ದುಷ್ಕೃತ್ಯಗಳಿಂದಲೂ ದ್ವೇಷಮನಸ್ಸುಳ್ಳವರಾಗಿ ಆತನಿಗೆ ವಿರೋಧಿಗಳೂ ಆಗಿದ್ದಿರಿ. 22ಈಗಲಾದರೋ ದೇವರು ನಿಮ್ಮನ್ನು ಯೇಸುಕ್ರಿಸ್ತನ ಶಾರೀರಿಕ ಮರಣದ ಮೂಲಕವಾಗಿ ಸಂಧಾನಪಡಿಸಿಕೊಂಡಿದ್ದಾನೆ. ದೇವರು ತನ್ನ ಸನ್ನಿಧಿಯಲ್ಲಿ ನಿಮ್ಮನ್ನು ಪರಿಶುದ್ಧರನ್ನಾಗಿಯೂ, ನಿರ್ದೋಷಿಗಳನ್ನಾಗಿಯೂ, ನಿರಪರಾಧಿಗಳನ್ನಾಗಿಯೂ ನಿಲ್ಲಿಸಬೇಕೆಂದು ಹೀಗೆ ಮಾಡಿದ್ದಾನೆ. 23ಆಕಾಶದ ಕೆಳಗಿರುವ ಸರ್ವ ಸೃಷ್ಟಿಗೂ ಸಾರಲ್ಪಟ್ಟಂತಹ ಮತ್ತು ನೀವು ಕೇಳಿದಂತಹ ಸುವಾರ್ತೆಯಿಂದ ಉಂಟಾದ ನಿರೀಕ್ಷೆಯಿಂದ ಕದಲಿಹೋಗದಂತೆ ನಂಬಿಕೆಯಲ್ಲಿ ದೃಢವಾಗಿರಿ ಮತ್ತು ನೆಲೆಗೊಂಡಿರಿ. ಇದೇ ಸುವಾರ್ತೆಗೆ ಪೌಲನೆಂಬ ನಾನು ಸೇವಕನಾಗಿದ್ದೇನೆ.
ಪ್ರತಿವಚನ ಕೀರ್ತನೆ
1ಪ್ರಧಾನಗಾಯಕನ ಕೀರ್ತನ ಸಂಗ್ರಹದಿಂದ ಆರಿಸಿಕೊಂಡದ್ದು; ತಂತಿವಾದ್ಯದೊಡನೆ ಹಾಡತಕ್ಕದ್ದು; ಜಿಫ್ಯರು ಸೌಲನ ಬಳಿಗೆ ಬಂದು ದಾವೀದನು ತಮ್ಮಲ್ಲೇ ಅಡಗಿಕೊಂಡಿದ್ದಾನೆಂದು ತಿಳಿಸಿದಾಗ ದಾವೀದನು ರಚಿಸಿದ ಪದ್ಯ. ದೇವರೇ, ನಿನ್ನ ನಾಮಮಹತ್ತಿನಿಂದ ನನ್ನನ್ನು ರಕ್ಷಿಸು; ನಿನ್ನ ಪರಾಕ್ರಮದಿಂದ ನನ್ನ ನ್ಯಾಯವನ್ನು ಸ್ಥಾಪಿಸು. 2ದೇವರೇ, ನನ್ನ ಪ್ರಾರ್ಥನೆಯನ್ನು ಲಾಲಿಸು; ನನ್ನ ಮಾತುಗಳಿಗೆ ಕಿವಿಗೊಡು. 4ಇಗೋ, ದೇವರೇ ನನಗೆ ಸಹಾಯಕನು; ಕರ್ತನೇ ನನ್ನ ಪ್ರಾಣವನ್ನು ಕಾಪಾಡುವವನು. 6ನಾನು ಸಂತೋಷದಿಂದ ನಿನಗೆ ಯಜ್ಞವನ್ನು ಸಮರ್ಪಿಸುವೆನು; ಉತ್ತಮೋತ್ತಮವಾಗಿರುವ ನಿನ್ನ ಹೆಸರನ್ನು ಕೊಂಡಾಡುವೆನು.
ಸುವಾರ್ತೆ
1ಸಬ್ಬತ್ ದಿನದಲ್ಲಿ ಯೇಸು ಪೈರಿನ ಹೊಲಗಳನ್ನು ಹಾದುಹೋಗುತ್ತಿರುವಾಗ ಆತನ ಶಿಷ್ಯರು ತೆನೆಗಳನ್ನು ಮುರಿದು ಕೈಗಳಲ್ಲಿ ಹೊಸಕಿಕೊಂಡು ತಿನ್ನುತ್ತಿದ್ದರು. 2ಆದರೆ ಫರಿಸಾಯರಲ್ಲಿ ಕೆಲವರು, “ಸಬ್ಬತ್ ದಿನದಲ್ಲಿ ನಿಷಿದ್ಧವಾದ ಕೆಲಸವನ್ನು ನೀವು ಯಾಕೆ ಮಾಡುತ್ತೀರಿ?” ಎಂದು ಕೇಳಿದ್ದಕ್ಕೆ, 3ಯೇಸು ಅವರಿಗೆ, “ದಾವೀದನು ಮತ್ತು ಆತನ ಸಂಗಡ ಇದ್ದವರೂ ಹಸಿದಿದ್ದಾಗ, ಆತನು ಏನು ಮಾಡಿದನೆಂಬುದನ್ನು ನೀವು ಓದಲಿಲ್ಲವೋ? 4ಅವನು ದೇವಮಂದಿರದೊಳಕ್ಕೆ ಹೋಗಿ ಯಾಜಕರು ಮಾತ್ರವೇ ಹೊರತು ಮತ್ತಾರೂ ತಿನ್ನಬಾರದ ನೈವೇದ್ಯದ ರೊಟ್ಟಿಗಳನ್ನು ತೆಗೆದುಕೊಂಡು ತಾನೂ ತಿಂದು ತನ್ನ ಸಂಗಡ ಇದ್ದವರಿಗೂ ಕೊಟ್ಟನಲ್ಲಾ?” ಎಂದು ಉತ್ತರಿಸಿ, 5“ಮನುಷ್ಯಕುಮಾರನು ಸಬ್ಬತ್ ದಿನಕ್ಕೆ ಒಡೆಯನಾಗಿದ್ದಾನೆ” ಎಂದು ಅವರಿಗೆ ಹೇಳಿದನು.
ಸಾಮಾನ್ಯ ರೋಮನ್ ಪಂಚಾಂಗ; ಬಿಷಪರ ಸಮ್ಮೇಳನವು ಕೆಲವು ಹಬ್ಬಗಳನ್ನು (ಪ್ರಭುವಿನ ಪ್ರಕಟನೆ, ಸ್ವರ್ಗಾರೋಹಣ, ಕ್ರಿಸ್ತನ ದೇಹ ಮತ್ತು ರಕ್ತ) ಭಾನುವಾರಕ್ಕೆ ಸರಿಸಬಹುದು ಅಥವಾ ತನ್ನದೇ ಹಬ್ಬಗಳನ್ನು ಸೇರಿಸಬಹುದು. ವಾಚನ ಸಂಗ್ರಹ: ಭಾನುವಾರದ ಚಕ್ರ B, ವಾರದ ದಿನಗಳ ವರ್ಷ I.
ಮೂಲಗಳು: ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ · © 2017, 2019 Bridge Connectivity Solutions, CC BY-SA 4.0; changed: footnotes, headings and the letters over Psalm 119 left out, verses in the app's numbering. · ಮೂಲಗಳು ಮತ್ತು ಹಕ್ಕುಗಳು