ಮುಖಪುಟ › ದೈನಂದಿನ ಬೈಬಲ್ ವಾಚನಗಳು › ಸೆಪ್ಟೆಂಬರ್ 2027 › 4 ಸೆಪ್ಟೆಂಬರ್
ಆರ್ಥೊಡಾಕ್ಸ್ ಪಂಚಾಂಗ · ಆಗಸ್ಟ್ 22 (ಹಳೆಯ ಪದ್ಧತಿ)
ಆರ್ಥೊಡಾಕ್ಸ್ ದೈನಂದಿನ ವಾಚನಗಳು — 4 ಸೆಪ್ಟೆಂಬರ್ 2027
ಶನಿವಾರ · ಪಂಚಾಶತ್ತಮದ ನಂತರದ 11ನೇ ವಾರ · ಸ್ವರ 1
ಹಬ್ಬಗಳು ಮತ್ತು ಸಂತರು
Afterfeast of the Dormition
ಉಪವಾಸ
ಉಪವಾಸವಿಲ್ಲ
ಇದು ಮಠದ ನಿಯಮವನ್ನು ಅನುಸರಿಸುತ್ತದೆ. ಸಭೆಯಲ್ಲಿ ಉಪವಾಸದ ಪ್ರಮಾಣವನ್ನು ಆರೋಗ್ಯ, ವಯಸ್ಸು ಮತ್ತು ಸಂದರ್ಭಗಳಿಗೆ ಅನುಗುಣವಾಗಿ ಪಾಪನಿವೇದನೆಯ ಗುರುವಿನೊಂದಿಗೆ ಸೇರಿ ನಿರ್ಧರಿಸಲಾಗುತ್ತದೆ.
ದಿನದ ವಾಚನಗಳು
ಪತ್ರಿಕೆ
3ನಮ್ಮ ತಂದೆಯಾಗಿರುವ ದೇವರಿಂದಲೂ ಹಾಗೂ ಕರ್ತನಾದ ಯೇಸು ಕ್ರಿಸ್ತನಿಂದಲೂ ನಿಮಗೆ ಕೃಪೆಯೂ, ಶಾಂತಿಯೂ ಉಂಟಾಗಲಿ. 4ಕ್ರಿಸ್ತ ಯೇಸುವಿನಲ್ಲಿ ದೇವರು ನಿಮಗೆ ಅನುಗ್ರಹಿಸಿದ ಕೃಪೆಯ ನಿಮಿತ್ತವಾಗಿ ನಾನು ನಿಮಗೋಸ್ಕರ ಯಾವಾಗಲೂ ನನ್ನ ದೇವರನ್ನು ಕೊಂಡಾಡುತ್ತೇನೆ. 5ಆತನು ಎಲ್ಲಾ ರೀತಿಯಲ್ಲಿಯೂ, ಎಲ್ಲಾ ನುಡಿಗಳಲ್ಲಿಯೂ, ಎಲ್ಲಾ ತಿಳಿವಳಿಕೆಯಲ್ಲಿಯೂ, ನಿಮ್ಮನ್ನು ಸಮೃದ್ಧಿಯುಳ್ಳವರನ್ನಾಗಿ ಮಾಡಿದ್ದಾನೆ. 6ಕ್ರಿಸ್ತನ ಕುರಿತಾದ ಸಾಕ್ಷಿಯು ನಿಮ್ಮಲ್ಲಿ ದೃಢವಾಗಿರುವ ಹಾಗೆಯೇ ಆತನು ನಿಮ್ಮನ್ನು ಸಮೃದ್ಧಿಯುಳ್ಳವರನ್ನಾಗಿ ಮಾಡಿದ್ದಾನೆ. 7ನಮ್ಮ ಕರ್ತನಾದ ಯೇಸು ಕ್ರಿಸ್ತನ ಪ್ರತ್ಯಕ್ಷತೆಯನ್ನು ನೀವು ಎದುರುನೋಡುತ್ತಾ ಇರುವುದರಿಂದ ಆತ್ಮೀಕ ಕೃಪಾವರದ ಕೊರತೆಯೂ ನಿಮಗೆ ಉಂಟಾಗುವುದಿಲ್ಲ, 8ನಮ್ಮ ಕರ್ತನಾದ ಯೇಸು ಕ್ರಿಸ್ತನ ದಿನದಲ್ಲಿ ನೀವು ನಿರಪರಾಧಿಗಳಾಗಿರುವಂತೆ ಆತನು ನಿಮ್ಮನ್ನು ಕಡೆಯವರೆಗೂ ದೃಢಪಡಿಸುವನು. 9ತನ್ನ ಮಗನೂ ಹಾಗೂ ನಮ್ಮ ಕರ್ತನಾಗಿರುವ ಯೇಸು ಕ್ರಿಸ್ತನ ಅನ್ಯೋನ್ಯತೆಗೆ ನಿಮ್ಮನ್ನು ಕರೆದ ದೇವರು ನಂಬಿಗಸ್ತನು.
ಸುವಾರ್ತೆ
3ಫರಿಸಾಯರು ಯೇಸುವನ್ನು ಪರೀಕ್ಷಿಸಲು ಆತನ ಹತ್ತಿರಕ್ಕೆ ಬಂದು, “ಒಬ್ಬನು ಯಾವುದಾದರೂ ಒಂದು ಕಾರಣದಿಂದ ತನ್ನ ಹೆಂಡತಿಯನ್ನು ಬಿಟ್ಟುಬಿಡುವುದು ಶಾಸ್ತ್ರ ಸಮ್ಮತವೋ?” ಎಂದು ಕೇಳಲು, 4ಆತನು ಪ್ರತ್ಯುತ್ತರವಾಗಿ, “ಮನುಷ್ಯರನ್ನು ಉಂಟುಮಾಡಿದವನು ಆದಿಯಿಂದಲೇ ಅವರನ್ನು ಗಂಡು ಮತ್ತು ಹೆಣ್ಣಾಗಿ ಉಂಟುಮಾಡಿದನು, 5‘ಈ ಕಾರಣದಿಂದಲೇ ಪುರುಷನು ತಂದೆತಾಯಿಗಳನ್ನು ಬಿಟ್ಟು ತನ್ನ ಹೆಂಡತಿಯನ್ನು ಸೇರಿಕೊಳ್ಳುವನು. ಅವರಿಬ್ಬರು ಒಂದೇ ಶರೀರವಾಗಿರುವರು ಎಂದು ನೀವು ಓದಲಿಲ್ಲವೋ?’ 6ಹೀಗಿರುವುದರಿಂದ ಅವರು ಇನ್ನು ಇಬ್ಬರಲ್ಲ ಒಂದೇ ಶರೀರವಾಗಿದ್ದಾರೆ. ಆದುದರಿಂದ ದೇವರು ಕೂಡಿಸಿದ್ದನ್ನು ಮನುಷ್ಯನು ಅಗಲಿಸಬಾರದು” ಅಂದನು. 7ಅದಕ್ಕೆ ಅವರು ಆತನನ್ನು, “ಹಾಗಾದರೆ ವಿಚ್ಛೇದನ ಪತ್ರವನ್ನು ಕೊಟ್ಟು ಆಕೆಯನ್ನು ಬಿಟ್ಟುಬಿಡಬಹುದೆಂದು ಮೋಶೆಯು ಏಕೆ ಆಜ್ಞೆ ಕೊಟ್ಟನು?” ಎಂದು ಕೇಳಿದರು. 8ಅದಕ್ಕೆ ಯೇಸು ಅವರಿಗೆ, “ಮೋಶೆಯು ನಿಮ್ಮ ಮೊಂಡತನದ ದೆಸೆಯಿಂದ ನಿಮ್ಮ ಹೆಂಡತಿಯರನ್ನು ಬಿಟ್ಟುಬಿಡುವುದಕ್ಕೆ ಅಪ್ಪಣೆ ಕೊಟ್ಟನು. ಆದರೆ ಆದಿಯಿಂದ ಹೀಗೆ ಇರಲಿಲ್ಲ ಅಂದನು. 9ಮತ್ತು ವ್ಯಭಿಚಾರದ ಕಾರಣದಿಂದಲ್ಲದೆ ತನ್ನ ಹೆಂಡತಿಯನ್ನು ಬಿಟ್ಟು ಮತ್ತೊಬ್ಬಳನ್ನು ಮದುವೆ ಮಾಡಿಕೊಳ್ಳುವವನು ವ್ಯಭಿಚಾರ ಮಾಡಿದಂತೆ; ಮತ್ತು ಗಂಡ ಬಿಟ್ಟವಳನ್ನು ಮದುವೆಯಾಗುವವನು ವ್ಯಭಿಚಾರ ಮಾಡಿದಂತೆ” ಎಂದು ನಿಮಗೆ ಹೇಳುತ್ತೇನೆ ಅಂದನು. 10ಅದಕ್ಕೆ ಶಿಷ್ಯರು ಯೇಸುವಿಗೆ, “ಹೆಂಡತಿಯೊಂದಿಗೆ ಗಂಡನ ಸಂಬಂಧ ಹೀಗಿದ್ದರೆ ಮದುವೆಯಾಗುವುದು ಒಳ್ಳೆಯದಲ್ಲ” ಅಂದರು. 11ಆದರೆ ಯೇಸು ಅವರಿಗೆ, “ಈ ಮಾತನ್ನು ಎಲ್ಲರೂ ಅಂಗೀಕರಿಸಲಾರರು ಆದರೆ ಯಾರಿಗೆ ಆ ವರವು ಕೊಡಲ್ಪಟ್ಟಿದೆಯೋ ಅವರು ಮಾತ್ರ ಅದನ್ನು ಅಂಗೀಕರಿಸುವರು. 12ತಾಯಿಯ ಗರ್ಭದಿಂದ ನಪುಂಸಕರಾಗಿ ಹುಟ್ಟಿದವರು ಕೆಲವರು ಇದ್ದಾರೆ ಮತ್ತು ಮನುಷ್ಯರಿಂದ ನಪುಂಸಕರಾಗಿ ಮಾಡಲ್ಪಟ್ಟವರು ಕೆಲವರು ಇದ್ದಾರೆ ಮತ್ತು ಪರಲೋಕ ರಾಜ್ಯದ ನಿಮಿತ್ತವಾಗಿ ತಮ್ಮನ್ನು ತಾವೇ ನಪುಂಸಕರಾಗಿ ಮಾಡಿಕೊಂಡವರು ಕೆಲವರು ಇದ್ದಾರೆ. ಈ ಬೋಧನೆಯನ್ನು ಅಂಗೀಕರಿಸಬಲ್ಲವರು ಅಂಗೀಕರಿಸಲಿ” ಎಂದು ಹೇಳಿದನು.
ದಿನಾಂಕಗಳು ರಷ್ಯನ್ ಸಭೆಯ ಜೂಲಿಯನ್ ಪಂಚಾಂಗದ ಪ್ರಕಾರ ಇವೆ (ಸರ್ಬಿಯನ್ ಮತ್ತು ಜಾರ್ಜಿಯನ್ ಸಭೆಗಳು ಮತ್ತು ಅಥೋಸ್ ಪರ್ವತದಂತೆ): ಸಭೆಯ ಪಂಚಾಂಗದ 22 ಆಗಸ್ಟ್ ಎಂದರೆ ನಾಗರಿಕ ಪಂಚಾಂಗದ 4 ಸೆಪ್ಟೆಂಬರ್. ಹೊಸ ಪಂಚಾಂಗದ ಸಭೆಗಳು (ಗ್ರೀಸ್, ರೊಮೇನಿಯಾ, ಬಲ್ಗೇರಿಯಾ, ಉಕ್ರೇನ್…) ನಿಗದಿತ ದಿನಾಂಕದ ಹಬ್ಬಗಳನ್ನೂ ಸಂತರನ್ನೂ ಅದೇ ನಾಗರಿಕ ದಿನಾಂಕದಂದು, 13 ದಿನಗಳ ಮುಂಚೆ, ಆಚರಿಸುತ್ತವೆ, ಮತ್ತು ಅವುಗಳ ಕೆಲವು ವಾಚನಗಳು ಬೇರೆಯಾಗಿವೆ; ಈಸ್ಟರ್ ಮತ್ತು ಅದನ್ನು ಅವಲಂಬಿಸಿರುವ ದಿನಗಳು ಒಂದೇ ಆಗಿವೆ.
ಮೂಲಗಳು: ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ · © 2017, 2019 Bridge Connectivity Solutions, CC BY-SA 4.0; changed: footnotes, headings and the letters over Psalm 119 left out, verses in the app's numbering. · ಮೂಲಗಳು ಮತ್ತು ಹಕ್ಕುಗಳು