Bible Explorer ಆ್ಯಪ್ ಪಡೆಯಿರಿ

ಮುಖಪುಟ › ದೈನಂದಿನ ಬೈಬಲ್ ವಾಚನಗಳು › ಸೆಪ್ಟೆಂಬರ್ 2027 › 5 ಸೆಪ್ಟೆಂಬರ್

ಕ್ಯಾಥೊಲಿಕ್ ಪಂಚಾಂಗ

ದೈನಂದಿನ ಬೈಬಲ್ ವಾಚನಗಳು (ಕಥೋಲಿಕ) — 5 ಸೆಪ್ಟೆಂಬರ್ 2027

ಭಾನುವಾರ · ಸಾಮಾನ್ಯ ಕಾಲದ 23ನೇ ವಾರ

ಹಬ್ಬಗಳು ಮತ್ತು ಸಂತರು

ಸಾಮಾನ್ಯ ಕಾಲದ 23ನೇ ಭಾನುವಾರ

ಭಾನುವಾರ · ಆರಾಧನಾ ಬಣ್ಣ: ಹಸಿರು

ದಿನದ ವಾಚನಗಳು

ಮೊದಲನೆಯ ವಾಚನ

ಯೆಶಾ 35:4–7

4ಭಯಭ್ರಾಂತ ಹೃದಯದವರಿಗೆ, “ಬಲಗೊಳ್ಳಿರಿ, ಹೆದರಬೇಡಿರಿ! ಇಗೋ, ನಿಮ್ಮ ದೇವರು ಮುಯ್ಯಿತೀರಿಸುವುದಕ್ಕೂ, ದೈವಿಕ ಪ್ರತಿಫಲವನ್ನು ಕೊಡುವುದಕ್ಕೂ ಬರುವನು. ತಾನೇ ಬಂದು ನಿಮ್ಮನ್ನು ರಕ್ಷಿಸುವನು” ಎಂದು ಹೇಳಿರಿ. 5ಆಗ ಕುರುಡರ ಕಣ್ಣು ಕಾಣುವುದು, ಕಿವುಡರ ಕಿವಿ ಕೇಳುವುದು. 6ಕುಂಟನು ಜಿಂಕೆಯಂತೆ ಹಾರುವನು, ಮೂಕನ ನಾಲಿಗೆಯು ಹರ್ಷಧ್ವನಿಗೈಯುವುದು, ಅರಣ್ಯದಲ್ಲಿ ಒರತೆಗಳು ಒಡೆಯುವವು, ಮರುಭೂಮಿಯಲ್ಲಿ ನದಿಗಳು ಹುಟ್ಟಿ ಹರಿಯುವವು. 7ಬೆಂಗಾಡು ಸರೋವರವಾಗುವುದು, ಒಣನೆಲದಲ್ಲಿ ಬುಗ್ಗೆಗಳು ಹರಿಯುವವು; ನರಿಗಳು ಮಲಗುತ್ತಿದ್ದ ಸ್ಥಳವು ಆಪುಜಂಬುಗಳ ಪ್ರದೇಶವಾಗುವುದು.

ಪ್ರತಿವಚನ ಕೀರ್ತನೆ

ಕೀರ್ತ 146:7–10

7ಹಿಂಸೆಗೆ ಗುರಿಯಾದವರ ನ್ಯಾಯವನ್ನು ಸ್ಥಾಪಿಸುವವನೂ, ಹಸಿದವರಿಗೆ ಆಹಾರ ಕೊಡುವವನೂ ಆತನೇ. ಯೆಹೋವನು ಸೆರೆಯಲ್ಲಿರುವವರನ್ನು ಬಿಡಿಸುತ್ತಾನೆ. 8ಯೆಹೋವನು ಕುರುಡರಿಗೆ ಕಣ್ಣು ಕೊಡುತ್ತಾನೆ. ಯೆಹೋವನು ಕುಗ್ಗಿದವರನ್ನು ಉದ್ಧರಿಸುತ್ತಾನೆ. ಯೆಹೋವನು ನೀತಿವಂತರನ್ನು ಪ್ರೀತಿಸುತ್ತಾನೆ. 9ಯೆಹೋವನು ಪರದೇಶದವರನ್ನು ಕಾಪಾಡುತ್ತಾನೆ. ಆತನು ಅನಾಥರಿಗೂ, ವಿಧವೆಯರಿಗೂ ಆಧಾರವಾಗಿದ್ದಾನೆ. ಆದರೆ ದುಷ್ಟರ ಮಾರ್ಗವನ್ನು ಡೊಂಕು ಮಾಡುತ್ತಾನೆ. 10ಯೆಹೋವನು ಸದಾಕಾಲವೂ ಅರಸನಾಗಿರುವನು, ಚೀಯೋನೇ, ನಿನ್ನ ದೇವರು ತಲತಲಾಂತರಕ್ಕೂ ಆಳುವನು, ಯೆಹೋವನಿಗೆ ಸ್ತೋತ್ರ!

ಎರಡನೆಯ ವಾಚನ

ಯಾಕೋ 2:1–5

1ನನ್ನ ಸಹೋದರರೇ, ಮಹಿಮೆಯುಳ್ಳ ನಮ್ಮ ಕರ್ತನಾದ ಯೇಸು ಕ್ರಿಸ್ತನಲ್ಲಿ ನಂಬಿಕೆಯಿಟ್ಟವರಾದ ನೀವು ಪಕ್ಷಪಾತಿಗಳಾಗಿರಬಾರದು. 2ಹೇಗೆಂದರೆ ಒಬ್ಬ ಮನುಷ್ಯನು ಚಿನ್ನದ ಉಂಗುರಗಳನ್ನು ಮತ್ತು ಉತ್ತಮವಾದ ವಸ್ತ್ರಗಳನ್ನೂ ಹಾಕಿಕೊಂಡು ನಿಮ್ಮ ಸಭೆಯೊಳಗೆ ಬಂದಾಗ ಮತ್ತು ಒಬ್ಬ ಬಡ ಮನುಷ್ಯನು ಕೊಳಕು ಬಟ್ಟೆಗಳನ್ನು ಧರಿಸಿಕೊಂಡು ಬಂದಾಗ, 3ನೀವು ಉತ್ತಮವಾದ ವಸ್ತ್ರಗಳನ್ನು ಧರಿಸಿಕೊಂಡು ಬಂದಿರುವವನನ್ನು ಗೌರವದಿಂದ ನೋಡಿ ಅವನಿಗೆ “ನೀವು ಇಲ್ಲಿ ಈ ಗೌರವ ಆಸನದಲ್ಲಿ ಕುಳಿತುಕೊಳ್ಳಿರಿ” ಎಂತಲೂ, ಆ ಬಡ ಮನುಷ್ಯನಿಗೆ “ನೀನು ಅಲ್ಲಿ ನಿಂತುಕೋ” ಇಲ್ಲವೇ “ಇಲ್ಲಿ ನನ್ನ ಕಾಲ್ಮಣೆಯ ಬಳಿ ಕುಳಿತುಕೋ” ಎಂತಲೂ ಹೇಳಿದರೆ, 4ನೀವು ನಿಮ್ಮ ನಿಮ್ಮಲ್ಲಿ ಭೇದಭಾವ ಮಾಡುವವರಾಗಿದ್ದು, ತಾರತಮ್ಯ ಆಲೋಚನೆಗಳಂತೆ ನಡೆಯುವ ನಿರ್ಧಾರ ಮಾಡುವವರಾಗಿರುತ್ತೀರಿ ಅಲ್ಲವೇ? 5ನನ್ನ ಪ್ರಿಯ ಸಹೋದರರೇ, ಕೇಳಿರಿ ದೇವರು ಈ ಲೋಕದಲ್ಲಿನ ಬಡವರನ್ನು ನಂಬಿಕೆಯಲ್ಲಿ ಐಶ್ವರ್ಯವಂತರನ್ನಾಗಿಯೂ, ತನ್ನನ್ನು ಪ್ರೀತಿಸುವವರಿಗೆ ತಾನು ವಾಗ್ದಾನ ಮಾಡಿದ ರಾಜ್ಯಕ್ಕೆ ಬಾಧ್ಯರಾಗಿಯೂ ಇರಬೇಕೆಂದು ಆರಿಸಿಕೊಳ್ಳಲಿಲ್ಲವೇ?

ಸುವಾರ್ತೆ

ಮಾರ್ಕ 7:31–37

31ಅನಂತರ ಆತನು ತೂರ್ ಪಟ್ಟಣದ ಪ್ರಾಂತ್ಯಗಳನ್ನು ಬಿಟ್ಟು ಸೀದೋನ್ ಪಟ್ಟಣದ ಮಾರ್ಗವಾಗಿ ದೆಕಪೊಲಿಯ ಪ್ರಾಂತ್ಯಗಳನ್ನು ಹಾದು ಗಲಿಲಾಯ ಸಮುದ್ರದ ದಡಕ್ಕೆ ಬಂದನು. 32ಆಗ ಕೆಲವರು ತೊದಲು ಮಾತನಾಡುವ ಒಬ್ಬ ಕಿವುಡನನ್ನು ಆತನ ಬಳಿಗೆ ಕರೆದುಕೊಂಡು ಬಂದು, ಇವನ ಮೇಲೆ ನಿನ್ನ ಕೈಯಿಡಬೇಕು ಎಂದು ಆತನನ್ನು ಬೇಡಿಕೊಂಡರು. 33ಆತನು ಅವನನ್ನು ಜನರ ಗುಂಪಿನಿಂದ ಪ್ರತ್ಯೇಕವಾಗಿ ಕರೆದುಕೊಂಡು ಹೋಗಿ, ತನ್ನ ಬೆರಳುಗಳನ್ನು ಅವನ ಕಿವಿಗಳಲ್ಲಿ ಇಟ್ಟನು ಮತ್ತು ಉಗುಳಿ ನಂತರ ಅವನ ನಾಲಿಗೆಯನ್ನು ಮುಟ್ಟಿ, 34ಆಕಾಶದ ಕಡೆಗೆ ನೋಡಿ ದೀರ್ಘವಾಗಿ ನಿಟ್ಟುಸಿರುಬಿಟ್ಟು ಅವನಿಗೆ, “ಎಪ್ಫಥಾ” ಎಂದು ಹೇಳಿದನು. ಆ ಶಬ್ದಕ್ಕೆ “ತೆರೆಯಲಿ” ಎಂದರ್ಥ. 35ಹೇಳುತ್ತಲೇ ಅವನ ಕಿವಿಗಳು ತೆರೆದವು; ಅವನ ನಾಲಿಗೆಯು ಸಡಿಲವಾಯಿತು; ಅವನು ಸ್ಪಷ್ಟವಾಗಿ ಮಾತನಾಡಿದನು. 36ಆಗ ಆತನು, ಇದನ್ನು ಯಾರಿಗೂ ತಿಳಿಸಬಾರದೆಂದು ಅವರಿಗೆ ಕಟ್ಟಪ್ಪಣೆ ಮಾಡಿದನು. ಆದರೆ ಎಷ್ಟು ಹೇಳಿದರೂ ಕೇಳದೆ ಅವರು ಮತ್ತಷ್ಟು ಹೆಚ್ಚಾಗಿ ಅದನ್ನು ಪ್ರಚಾರ ಮಾಡಿದರು. 37ಅವರು ಅತ್ಯಂತ ಆಶ್ಚರ್ಯಪಟ್ಟು, “ಆತನು ಎಲ್ಲವನ್ನು ಚೆನ್ನಾಗಿ ಮಾಡಿದ್ದಾನೆ; ಕಿವುಡರು ಕೇಳುವಂತೆಯೂ ಮೂಕರು ಮಾತನಾಡುವಂತೆಯೂ ಮಾಡುತ್ತಾನೆ” ಎಂದು ಅಂದುಕೊಂಡರು.

ಇಂದಿನ ಸಂತರು

ಸಾಮಾನ್ಯ ರೋಮನ್ ಪಂಚಾಂಗ; ಬಿಷಪರ ಸಮ್ಮೇಳನವು ಕೆಲವು ಹಬ್ಬಗಳನ್ನು (ಪ್ರಭುವಿನ ಪ್ರಕಟನೆ, ಸ್ವರ್ಗಾರೋಹಣ, ಕ್ರಿಸ್ತನ ದೇಹ ಮತ್ತು ರಕ್ತ) ಭಾನುವಾರಕ್ಕೆ ಸರಿಸಬಹುದು ಅಥವಾ ತನ್ನದೇ ಹಬ್ಬಗಳನ್ನು ಸೇರಿಸಬಹುದು. ವಾಚನ ಸಂಗ್ರಹ: ಭಾನುವಾರದ ಚಕ್ರ B, ವಾರದ ದಿನಗಳ ವರ್ಷ I.

ಮೂಲಗಳು: ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ · © 2017, 2019 Bridge Connectivity Solutions, CC BY-SA 4.0; changed: footnotes, headings and the letters over Psalm 119 left out, verses in the app's numbering. · ಮೂಲಗಳು ಮತ್ತು ಹಕ್ಕುಗಳು