ಮುಖಪುಟ › ದೈನಂದಿನ ಬೈಬಲ್ ವಾಚನಗಳು › ಸೆಪ್ಟೆಂಬರ್ 2027 › 6 ಸೆಪ್ಟೆಂಬರ್
ಕ್ಯಾಥೊಲಿಕ್ ಪಂಚಾಂಗ
ದೈನಂದಿನ ಬೈಬಲ್ ವಾಚನಗಳು (ಕಥೋಲಿಕ) — 6 ಸೆಪ್ಟೆಂಬರ್ 2027
ಸೋಮವಾರ · ಸಾಮಾನ್ಯ ಕಾಲದ 23ನೇ ವಾರ
ಹಬ್ಬಗಳು ಮತ್ತು ಸಂತರು
ಸಾಮಾನ್ಯ ಕಾಲದ 23ನೇ ವಾರದ ಸೋಮವಾರ
ವಾರದ ದಿನ · ಆರಾಧನಾ ಬಣ್ಣ: ಹಸಿರು
ದಿನದ ವಾಚನಗಳು
ಮೊದಲನೆಯ ವಾಚನ
24ನಾನು ಈಗ ನಿಮಗೋಸ್ಕರ ಅನುಭವಿಸುತ್ತಿರುವ ಬಾಧೆಗಳಲ್ಲಿ ನನಗೆ ಸಂತೋಷವಿದೆ. ಕ್ರಿಸ್ತನ ಯಾತನೆಗಳಲ್ಲಿ ಕೊರತೆಯಾಗಿರುವುದನ್ನು ಆತನ ಸಭೆಯೆಂಬ ದೇಹಕೋಸ್ಕರ ನಾನು ನನ್ನ ದೇಹದಲ್ಲಿ ಅನುಭವಿಸಿ ತೀರಿಸುತ್ತೇನೆ. 25ದೇವರ ಸಂಕಲ್ಪದ ಮೇರೆಗೆ ನಿಮ್ಮ ಪ್ರಯೋಜನಕ್ಕೋಸ್ಕರವಾಗಿ ನಾನು ಸಭೆಗೆ ಸೇವಕನಾದೆನು. ದೇವರು ತನ್ನ ವಾಕ್ಯವನ್ನು ಸಂಪೂರ್ಣವಾಗಿ ತಿಳಿಸುವ ಕಾರ್ಯವನ್ನು ನನಗೆ ದಯಪಾಲಿಸಿದನು. 26ಈ ರಹಸ್ಯವಾದ ಸತ್ಯವಾಕ್ಯವು ಹಿಂದಿನ ಯುಗಯುಗಗಳಿಂದಲೂ, ತಲತಲಾಂತರಗಳಿಂದಲೂ ಮರೆಯಾಗಿತ್ತು, ಆದರೆ ಈಗ ದೇವರು ಅದನ್ನು ತನ್ನ ದೇವಜನರಿಗೆ ಪ್ರಕಟಿಸಿದ್ದಾನೆ. 27ಈ ಮರ್ಮದ ಮಹಿಮಾತಿಶಯವು ಎಷ್ಟೆಂಬುದನ್ನು ಅನ್ಯಜನಗಳಿಗೂ ತಿಳಿಸಲಿಕ್ಕೆ ದೇವರು ಇಚ್ಛಿಸಿದನು. ಈ ಮರ್ಮವು ಏನೆಂದರೆ ಮಹಿಮೆಯ ನಿರೀಕ್ಷೆಗೆ ಆಧಾರನಾಗಿರುವ ಕ್ರಿಸ್ತನು ನಿಮ್ಮಲ್ಲಿದ್ದಾನೆಂಬುದೇ. 28ನಾವು ಆತನನ್ನು ಸಾರುತ್ತಲಿದ್ದೇವೆ, ಸಕಲರಿಗೂ ಬುದ್ಧಿ ಹೇಳುತ್ತಾ, ಸರ್ವರಿಗೂ ಪೂರ್ಣಜ್ಞಾನವನ್ನು ಉಪದೇಶಿಸುತ್ತಾ, ದೇವರ ಮುಂದೆ ಎಲ್ಲರನ್ನೂ ಕ್ರಿಸ್ತನಲ್ಲಿ ಪ್ರವೀಣರನ್ನಾಗಿ ನಿಲ್ಲಿಸುವುದಕ್ಕೆ ಪ್ರಯತ್ನಿಸುತ್ತಿದ್ದೇವೆ. 29ನನ್ನಲ್ಲಿ ಕಾರ್ಯಸಾಧಿಸುವ ದೇವರ ಬಲದಿಂದ ಇದಕ್ಕೊಸ್ಕರವೇ ಶ್ರಮಿಸಿ ಹೋರಾಡುತ್ತೇನೆ. 2:1ನಿಮಗಾಗಿಯೂ, ಲವೊದಿಕೀಯದವರಿಗಾಗಿಯೂ ಹಾಗೂ ನನ್ನನ್ನು ಮುಖಾಮುಖಿಯಾಗಿ ನೋಡದಿರುವವರೆಲ್ಲರಿಗಾಗಿಯೂ, 2ಅವರ ಹೃದಯಗಳು ಉತ್ತೇಜನಗೊಂಡು, ಪ್ರೀತಿಯಿಂದ ಒಂದಾಗಿದ್ದು, ದೇವರ ಮರ್ಮವನ್ನು ಅಂದರೆ ಕ್ರಿಸ್ತನನ್ನು ತಿಳಿದುಕೊಳ್ಳುವ ಮೂಲಕ ಬರುವ ನಿಶ್ಚಯವಾದ ಭಾಗ್ಯವನ್ನು ಪಡೆಯಬೇಕೆಂಬುದೇ ನನ್ನ ಅಪೇಕ್ಷೆ. ಅದಕ್ಕಾಗಿಯೇ ನಾನು ಎಷ್ಟು ಪ್ರಯಾಸಪಡುತ್ತಿದ್ದೇನೆಂಬುದು ನಿಮಗೆ ತಿಳಿದಿರಬೇಕೆಂದು ಬಯಸುತ್ತೇನೆ. 3ಈ ಕ್ರಿಸ್ತನಲ್ಲಿಯೇ ಜ್ಞಾನ ಮತ್ತು ವಿವೇಕದ ಸರ್ವಸಂಪತ್ತು ಅಡಗಿದೆ.
ಪ್ರತಿವಚನ ಕೀರ್ತನೆ
5ನನ್ನ ಮನವೇ, ದೇವರನ್ನೇ ನಂಬಿ ಶಾಂತವಾಗಿರು. ನನ್ನ ನಿರೀಕ್ಷೆಯು ನೆರವೇರುವುದು ಆತನಿಂದಲೇ. 6ಆತನೇ ನನಗೆ ಶರಣನೂ, ರಕ್ಷಕನೂ ಮತ್ತು ದುರ್ಗವೂ; ನಾನು ಕದಲುವುದಿಲ್ಲ. 8ಜನರೇ, ಯಾವಾಗಲೂ ಆತನನ್ನೇ ನಂಬಿ, ನಿಮ್ಮ ಹೃದಯವನ್ನು ಆತನ ಮುಂದೆ ತೆರೆಯಿರಿ; ದೇವರು ನಮ್ಮ ಆಶ್ರಯವು. ಸೆಲಾ
ಸುವಾರ್ತೆ
6ಮತ್ತೊಂದು ಸಬ್ಬತ್ ದಿನದಲ್ಲಿ ಆತನು ಸಭಾಮಂದಿರಕ್ಕೆ ಹೋಗಿ ಉಪದೇಶಮಾಡುತ್ತಿರುವಾಗ, ಅಲ್ಲಿ ಬಲಗೈ ಬತ್ತಿದವನೊಬ್ಬನು ಇದ್ದನು. 7ಶಾಸ್ತ್ರಿಗಳೂ ಫರಿಸಾಯರೂ ಆತನ ಮೇಲೆ ತಪ್ಪುಹೊರಿಸುವುದಕ್ಕೆ ಕಾರಣ ಸಿಕ್ಕಬೇಕೆಂದು ಸಬ್ಬತ್ ದಿನದಲ್ಲಿ ಸ್ವಸ್ಥಮಾಡುವನೋ ಇಲ್ಲವೋ ಎಂದು ಆತನನ್ನು ಹೊಂಚಿನೋಡುತ್ತಿದ್ದರು. 8ಆದರೆ ಆತನು ಅವರ ಯೋಚನೆಗಳನ್ನು ತಿಳಿದು ಕೈ ಬತ್ತಿಹೋಗಿದ್ದ ಆ ಮನುಷ್ಯನಿಗೆ, “ಎದ್ದು ನಡುವೆ ಬಂದು ನಿಂತುಕೋ” ಎಂದು ಹೇಳಿದನು. ಅವನು ಎದ್ದುಬಂದು ನಿಂತುಕೊಂಡನು. 9ಆಗ ಯೇಸು ಅವರಿಗೆ, “ನಿಮ್ಮನ್ನು ಒಂದು ಮಾತು ಕೇಳುತ್ತೇನೆ, ಸಬ್ಬತ್ ದಿನದಲ್ಲಿ ಯಾವುದನ್ನು ಮಾಡುವುದು ನ್ಯಾಯ? ಮೇಲನ್ನು ಮಾಡುವುದೋ ಅಥವಾ ಕೇಡನ್ನು ಮಾಡುವುದೋ? ಪ್ರಾಣವನ್ನು ಉಳಿಸುವುದೋ ಅಥವಾ ಹಾಳುಮಾಡುವುದೋ?” ಎಂದು ಕೇಳಿ, 10ಸುತ್ತಲೂ ಇದ್ದವರೆಲ್ಲರನ್ನೂ ನೋಡಿ ಆ ಮನುಷ್ಯನಿಗೆ, “ನಿನ್ನ ಕೈಚಾಚು” ಎಂದು ಹೇಳಿದನು. ಅವನು ಹಾಗೆಯೇ ಮಾಡಿದನು, ಕೈ ವಾಸಿಯಾಯಿತು. 11ಆದರೆ ಅವರು ಕ್ರೋಧಭರಿತರಾಗಿದ್ದರಿಂದ, ಈ ಯೇಸುವಿಗೆ ಏನು ಮಾಡೋಣ ಎಂದು ತಮ್ಮತಮ್ಮೊಳಗೆ ಮಾತನಾಡಿಕೊಂಡರು.
ಸಾಮಾನ್ಯ ರೋಮನ್ ಪಂಚಾಂಗ; ಬಿಷಪರ ಸಮ್ಮೇಳನವು ಕೆಲವು ಹಬ್ಬಗಳನ್ನು (ಪ್ರಭುವಿನ ಪ್ರಕಟನೆ, ಸ್ವರ್ಗಾರೋಹಣ, ಕ್ರಿಸ್ತನ ದೇಹ ಮತ್ತು ರಕ್ತ) ಭಾನುವಾರಕ್ಕೆ ಸರಿಸಬಹುದು ಅಥವಾ ತನ್ನದೇ ಹಬ್ಬಗಳನ್ನು ಸೇರಿಸಬಹುದು. ವಾಚನ ಸಂಗ್ರಹ: ಭಾನುವಾರದ ಚಕ್ರ B, ವಾರದ ದಿನಗಳ ವರ್ಷ I.
ಮೂಲಗಳು: ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ · © 2017, 2019 Bridge Connectivity Solutions, CC BY-SA 4.0; changed: footnotes, headings and the letters over Psalm 119 left out, verses in the app's numbering. · ಮೂಲಗಳು ಮತ್ತು ಹಕ್ಕುಗಳು