Bible Explorer ಆ್ಯಪ್ ಪಡೆಯಿರಿ

ಮುಖಪುಟ › ದೈನಂದಿನ ಬೈಬಲ್ ವಾಚನಗಳು › ಸೆಪ್ಟೆಂಬರ್ 2027 › 6 ಸೆಪ್ಟೆಂಬರ್

ಆರ್ಥೊಡಾಕ್ಸ್ ಪಂಚಾಂಗ · ಆಗಸ್ಟ್ 24 (ಹಳೆಯ ಪದ್ಧತಿ)

ಆರ್ಥೊಡಾಕ್ಸ್ ದೈನಂದಿನ ವಾಚನಗಳು — 6 ಸೆಪ್ಟೆಂಬರ್ 2027

ಸೋಮವಾರ · ಪಂಚಾಶತ್ತಮದ ನಂತರದ 12ನೇ ವಾರ · ಸ್ವರ 2

ಹಬ್ಬಗಳು ಮತ್ತು ಸಂತರು

Hieromartyr Eutychius, disciple of the Apostle John the Theologian (1st C)

ಉಪವಾಸ

ಉಪವಾಸವಿಲ್ಲ

ಇದು ಮಠದ ನಿಯಮವನ್ನು ಅನುಸರಿಸುತ್ತದೆ. ಸಭೆಯಲ್ಲಿ ಉಪವಾಸದ ಪ್ರಮಾಣವನ್ನು ಆರೋಗ್ಯ, ವಯಸ್ಸು ಮತ್ತು ಸಂದರ್ಭಗಳಿಗೆ ಅನುಗುಣವಾಗಿ ಪಾಪನಿವೇದನೆಯ ಗುರುವಿನೊಂದಿಗೆ ಸೇರಿ ನಿರ್ಧರಿಸಲಾಗುತ್ತದೆ.

ದಿನದ ವಾಚನಗಳು

ಪತ್ರಿಕೆ

2 ಕೊರಿ 5:10–15

10ಯಾಕೆಂದರೆ ಪ್ರತಿಯೊಬ್ಬನು ತನ್ನ ದೇಹದ ಮೂಲಕ ನಡೆಸಿದ ಒಳ್ಳೆಯ ಅಥವಾ ಕೆಟ್ಟ ಕಾರ್ಯಕ್ಕೆ ತಕ್ಕ ಪ್ರತಿಫಲವನ್ನು ಹೊಂದುವುದಕ್ಕೋಸ್ಕರ ಕ್ರಿಸ್ತನ ನ್ಯಾಯಾಸನದ ಮುಂದೆ ಯಥಾಸ್ಥಿತಿಯಲ್ಲಿ ಕಾಣಿಸಿಕೊಳ್ಳಬೇಕಾಗಿದೆ. 11ಆದ್ದರಿಂದ, ಕರ್ತನಲ್ಲಿ ಭಯವುಳ್ಳವರಾಗಿರಬೇಕೆಂದು ನಾವು, ಮನುಷ್ಯರನ್ನು ಒಡಂಬಡಿಸುತ್ತೇವೆ. ನಾವು ಎಂಥವರೆಂದು ದೇವರಿಗೆ ಪ್ರಕಟವಾಗಿದ್ದೇವೆ. ಅದು ನಿಮ್ಮ ಮನಸ್ಸಾಕ್ಷಿಗೆ ಕೂಡಾ ಗೊತ್ತಾಗಿದೆ ಎಂದು ನಂಬಿಕೊಂಡಿದ್ದೇನೆ. 12ನಾವು ನಮ್ಮನ್ನು ಮತ್ತೆ, ಮತ್ತೆ ನಿಮ್ಮೆದುರು ಹೊಗಳಿಕೊಳ್ಳುವುದಿಲ್ಲ; ಅಂತರಂಗವನ್ನು ಅರಿಯದೆ ಅವನ ಹೊರ ತೋರಿಕೆಯನ್ನೇ ನೆಚ್ಚಿ ನಲಿಯುವವರಿಗೆ ಸೂಕ್ತ ಪ್ರತ್ಯುತ್ತರವನ್ನು ಕೊಡಲು ನೀವು ಶಕ್ತರಾಗುತ್ತೀರಿ. 13ನಮಗೆ ಬುದ್ಧಿಭ್ರಮಣೆಯಾಗಿದ್ದರೆ ಅದು ದೇವರ ಮಹಿಮೆಗಾಗಿಯೇ; ಹಾಗೂ ನಮಗೆ ಸ್ವಸ್ಥಬುದ್ಧಿ ಇದ್ದರೆ ಅದು ನಿಮ್ಮ ಪ್ರಯೋಜನಕ್ಕಾಗಿಯೇ. 14ಯಾಕೆಂದರೆ ಕ್ರಿಸ್ತನ ಪ್ರೀತಿಯು ನಮ್ಮನ್ನು ಒತ್ತಾಯಪಡಿಸುತ್ತದೆ; ಎಲ್ಲರಿಗೋಸ್ಕರ ಒಬ್ಬನು ಸತ್ತಮೇಲೆ ಎಲ್ಲರೂ ಸತ್ತಂತಾಯಿತೆಂದು ನಿಶ್ಚಯಿಸಿಕೊಂಡಿದ್ದೇವೆ. 15ಕ್ರಿಸ್ತನು ಎಲ್ಲರಿಗೋಸ್ಕರ ಸತ್ತದ್ದರಿಂದಾಗಿ ಜೀವಿಸುವವರು ಇನ್ನು ಮೇಲೆ ತಮಗಾಗಿ ಜೀವಿಸದೇ ತಮಗೋಸ್ಕರ ಸತ್ತು ಎದ್ದು ಬಂದಾತನಿಗಾಗಿ ಜೀವಿಸಬೇಕು.

ಸುವಾರ್ತೆ

ಮಾರ್ಕ 1:9–15

9ಆ ದಿನಗಳಲ್ಲಿ ಯೇಸು ಗಲಿಲಾಯ ಸೀಮೆಗೆ ಸೇರಿದ ನಜರೇತೆಂಬ ಊರಿನಿಂದ ಬಂದು ಯೊರ್ದನ್ ಹೊಳೆಯಲ್ಲಿ ಯೋಹಾನನಿಂದ ದೀಕ್ಷಾಸ್ನಾನ ಮಾಡಿಸಿಕೊಂಡನು. 10ಯೇಸುವು ನೀರಿನೊಳಗಿನಿಂದ ಮೇಲಕ್ಕೆ ಬಂದ ಕೂಡಲೇ ಪರಲೋಕವು ತೆರೆಯಲ್ಪಟ್ಟು ದೇವರಾತ್ಮನು ಪಾರಿವಾಳದ ಹಾಗೆ ಆತನ ಮೇಲೆ ಇಳಿಯುವುದನ್ನು ಕಂಡನು. 11ಆಗ “ನೀನು ಪ್ರಿಯನಾಗಿರುವ ನನ್ನ ಮಗನು, ನಾನು ನಿನ್ನನ್ನು ಬಹಳವಾಗಿ ಮೆಚ್ಚಿದ್ದೇನೆ” ಎಂಬ ದೈವ ವಾಣಿ ಪರಲೋಕದಿಂದ ಕೇಳಿಸಿತು. 12ಕೂಡಲೇ ಪವಿತ್ರಾತ್ಮ ಪ್ರೇರಿತನಾಗಿ ಯೇಸು ಅಡವಿಗೆ ಹೋದನು. 13ಆತನು ನಲವತ್ತು ದಿನ ಅಡವಿಯಲ್ಲಿ ಕಾಡುಮೃಗಗಳೊಂದಿಗೆ ಇದ್ದು ಸೈತಾನನಿಂದ ಶೋಧಿಸಲ್ಪಟ್ಟನು ಮತ್ತು ದೇವದೂತರು ಯೇಸುವಿಗೆ ಉಪಚಾರ ಮಾಡಿದರು. 14ಯೋಹಾನನು ಬಂಧಿತನಾದ ತರುವಾಯ ಯೇಸು ಗಲಿಲಾಯಕ್ಕೆ ಬಂದು ದೇವರ ಸುವಾರ್ತೆಯನ್ನು ಹೀಗೆ ಸಾರಿ ಹೇಳಿದನು, 15“ಕಾಲವು ಪರಿಪೂರ್ಣವಾಯಿತು, ದೇವರ ರಾಜ್ಯವು ಸಮೀಪಿಸಿತು; ಪಶ್ಚಾತ್ತಾಪಪಟ್ಟು ಸುವಾರ್ತೆಯನ್ನು ನಂಬಿರಿ.”

ದಿನಾಂಕಗಳು ರಷ್ಯನ್ ಸಭೆಯ ಜೂಲಿಯನ್ ಪಂಚಾಂಗದ ಪ್ರಕಾರ ಇವೆ (ಸರ್ಬಿಯನ್ ಮತ್ತು ಜಾರ್ಜಿಯನ್ ಸಭೆಗಳು ಮತ್ತು ಅಥೋಸ್ ಪರ್ವತದಂತೆ): ಸಭೆಯ ಪಂಚಾಂಗದ 24 ಆಗಸ್ಟ್ ಎಂದರೆ ನಾಗರಿಕ ಪಂಚಾಂಗದ 6 ಸೆಪ್ಟೆಂಬರ್. ಹೊಸ ಪಂಚಾಂಗದ ಸಭೆಗಳು (ಗ್ರೀಸ್, ರೊಮೇನಿಯಾ, ಬಲ್ಗೇರಿಯಾ, ಉಕ್ರೇನ್…) ನಿಗದಿತ ದಿನಾಂಕದ ಹಬ್ಬಗಳನ್ನೂ ಸಂತರನ್ನೂ ಅದೇ ನಾಗರಿಕ ದಿನಾಂಕದಂದು, 13 ದಿನಗಳ ಮುಂಚೆ, ಆಚರಿಸುತ್ತವೆ, ಮತ್ತು ಅವುಗಳ ಕೆಲವು ವಾಚನಗಳು ಬೇರೆಯಾಗಿವೆ; ಈಸ್ಟರ್ ಮತ್ತು ಅದನ್ನು ಅವಲಂಬಿಸಿರುವ ದಿನಗಳು ಒಂದೇ ಆಗಿವೆ.

ಮೂಲಗಳು: ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ · © 2017, 2019 Bridge Connectivity Solutions, CC BY-SA 4.0; changed: footnotes, headings and the letters over Psalm 119 left out, verses in the app's numbering. · ಮೂಲಗಳು ಮತ್ತು ಹಕ್ಕುಗಳು