ಮುಖಪುಟ › ದೈನಂದಿನ ಬೈಬಲ್ ವಾಚನಗಳು › ಸೆಪ್ಟೆಂಬರ್ 2027 › 7 ಸೆಪ್ಟೆಂಬರ್
ಆರ್ಥೊಡಾಕ್ಸ್ ಪಂಚಾಂಗ · ಆಗಸ್ಟ್ 25 (ಹಳೆಯ ಪದ್ಧತಿ)
ಆರ್ಥೊಡಾಕ್ಸ್ ದೈನಂದಿನ ವಾಚನಗಳು — 7 ಸೆಪ್ಟೆಂಬರ್ 2027
ಮಂಗಳವಾರ · ಪಂಚಾಶತ್ತಮದ ನಂತರದ 12ನೇ ವಾರ · ಸ್ವರ 2
ಹಬ್ಬಗಳು ಮತ್ತು ಸಂತರು
Return of the relics of the Apostle Bartholomew from Anastasiopolis to Lipari (6th C)
ಉಪವಾಸ
ಉಪವಾಸವಿಲ್ಲ
ಇದು ಮಠದ ನಿಯಮವನ್ನು ಅನುಸರಿಸುತ್ತದೆ. ಸಭೆಯಲ್ಲಿ ಉಪವಾಸದ ಪ್ರಮಾಣವನ್ನು ಆರೋಗ್ಯ, ವಯಸ್ಸು ಮತ್ತು ಸಂದರ್ಭಗಳಿಗೆ ಅನುಗುಣವಾಗಿ ಪಾಪನಿವೇದನೆಯ ಗುರುವಿನೊಂದಿಗೆ ಸೇರಿ ನಿರ್ಧರಿಸಲಾಗುತ್ತದೆ.
ದಿನದ ವಾಚನಗಳು
ಪತ್ರಿಕೆ
15ಕ್ರಿಸ್ತನು ಎಲ್ಲರಿಗೋಸ್ಕರ ಸತ್ತದ್ದರಿಂದಾಗಿ ಜೀವಿಸುವವರು ಇನ್ನು ಮೇಲೆ ತಮಗಾಗಿ ಜೀವಿಸದೇ ತಮಗೋಸ್ಕರ ಸತ್ತು ಎದ್ದು ಬಂದಾತನಿಗಾಗಿ ಜೀವಿಸಬೇಕು. 16ಹೀಗಿರಲಾಗಿ ಇಂದಿನಿಂದ ನಾವು ಯಾರನ್ನೂ ಮಾನವ ದೃಷ್ಟಿಯಿಂದ ಪರಿಗಣಿಸುವುದಿಲ್ಲ. ಒಮ್ಮೆ ಕ್ರಿಸ್ತನನ್ನು ನಾವು ಹೀಗೇ ಪರಿಗಣಿಸಿದ್ದುಂಟು. ಆದರೆ ಇನ್ನು ಮುಂದೆ ಆ ರೀತಿಯಾಗಿ ಪರಿಗಣಿಸುವುದಿಲ್ಲ. 17ಆದ್ದರಿಂದ ಯಾವನಾದರೂ ಕ್ರಿಸ್ತನಲ್ಲಿದ್ದರೆ ಅವನು ನೂತನ ಸೃಷ್ಟಿಯಾಗಿದ್ದಾನೆ. ಇಗೋ, ಪೂರ್ವಸ್ಥಿತಿ ಹೋಗಿ ಎಲ್ಲಾ ನೂತನವಾಯಿತು. 18ಇವೆಲ್ಲವುಗಳು ದೇವರಿಂದಲೇ ಉಂಟಾದದ್ದು. ದೇವರು ಕ್ರಿಸ್ತನ ಮೂಲಕ ನಮ್ಮನ್ನು ತನಗೆ ಸಂಧಾನಪಡಿಸಿಕೊಂಡು, ಸಂಧಾನಮಾಡುವ ಸೇವೆಯನ್ನು ನಮಗೆ ಅನುಗ್ರಹಿಸಿದ್ದಾನೆ; 19ಹೇಗೆಂದರೆ, ಕ್ರಿಸ್ತನಲ್ಲಿ ದೇವರು ಜಗತ್ತನ್ನು ತನ್ನೊಡನೆ ಸಂಧಾನಮಾಡಿಕೊಳ್ಳುತ್ತಿದ್ದಾನೆ; ಮನುಷ್ಯರ ಅಪರಾಧಗಳನ್ನು ಅವರ ಲೆಕ್ಕಕ್ಕೆ ಹಾಕದೇ, ಈ ಸಂಧಾನದ ಸಂದೇಶವನ್ನು ಎಲ್ಲರಿಗೂ ಸಾರುವಂತೆ ಅದನ್ನು ನಮ್ಮ ಮೇಲೆ ಹೊರಿಸಿದ್ದಾನೆ. 20ಆದ್ದರಿಂದ ನಾವು ಕ್ರಿಸ್ತನ ರಾಯಭಾರಿಗಳು. ದೇವರೇ ನಮ್ಮ ಮುಖಾಂತರ ಕರೆನೀಡುತ್ತಿದ್ದಾನೆ. ದೇವರೊಡನೆ ನೀವು ಸಂಧಾನಮಾಡಿಕೊಳ್ಳಿರೆಂದು ಕ್ರಿಸ್ತನ ಹೆಸರಿನಲ್ಲಿ ನಾವು ನಿಮ್ಮನ್ನು ವಿನಂತಿಸುತೇವೆ. 21ಪಾಪವನ್ನೇ ಅರಿಯದ ಕ್ರಿಸ್ತ ಯೇಸುವನ್ನು ದೇವರು ನಮಗೋಸ್ಕರ ಪಾಪಸ್ವರೂಪಿಯನ್ನಾಗಿಸಿದರು. ಕ್ರಿಸ್ತ ಯೇಸುವಿನಲ್ಲಿ ನಾವು ನೀತಿವಂತರಾಗಬೇಕೆಂದು ದೇವರು ಹೀಗೆ ಮಾಡಿದರು.
ಸುವಾರ್ತೆ
16ಯೇಸು ಗಲಿಲಾಯ ಸಮುದ್ರದ ಬಳಿಯಲ್ಲಿ ಹೋಗುತ್ತಿರುವಾಗ ಸೀಮೋನನು ಮತ್ತು ಅವನ ತಮ್ಮನಾದ ಅಂದ್ರೆಯನು ಸಮುದ್ರದಲ್ಲಿ ಬಲೆ ಬೀಸುವುದನ್ನು ಕಂಡನು. ಅವರು ಬೆಸ್ತರಾಗಿದ್ದರು. 17ಯೇಸು ಅವರಿಗೆ, “ನನ್ನನ್ನು ಹಿಂಬಾಲಿಸಿರಿ; ಮನುಷ್ಯರನ್ನು ಹಿಡಿಯುವ ಬೆಸ್ತರನ್ನಾಗಿ ನಿಮ್ಮನ್ನು ಮಾಡುವೆನು” ಎಂದು ಹೇಳಿದನು. 18ಕೂಡಲೆ ಅವರು ತಮ್ಮ ಬಲೆಗಳನ್ನು ಬಿಟ್ಟು ಆತನನ್ನು ಹಿಂಬಾಲಿಸಿದರು. 19ಯೇಸು ಇನ್ನು ಸ್ವಲ್ಪ ಮುಂದೆ ಹೋಗಿ ಜೆಬೆದಾಯನ ಮಗನಾದ ಯಾಕೋಬನನ್ನೂ ಅವನ ತಮ್ಮನಾದ ಯೋಹಾನನನ್ನೂ ಕಂಡನು; ಅವರು ದೋಣಿಯೊಳಗೆ ತಮ್ಮ ಬಲೆಗಳನ್ನು ಸರಿಮಾಡುತ್ತಿದ್ದರು. 20ಅವನು ಕೂಡಲೇ ಅವರನ್ನೂ ಕರೆದನು. ಅವರು ತಮ್ಮ ತಂದೆಯಾದ ಜೆಬೆದಾಯನನ್ನು ಕೂಲಿಯಾಳುಗಳ ಸಂಗಡ ದೋಣಿಯಲ್ಲಿ ಬಿಟ್ಟು ಆತನನ್ನು ಹಿಂಬಾಲಿಸಿದರು. 21ಬಳಿಕ ಅವರು ಕಪೆರ್ನೌಮೆಂಬ ಊರಿಗೆ ಹೋದರು. ಸಬ್ಬತ್ ದಿನವಾದಾಗ ಯೇಸು ಸಭಾಮಂದಿರಕ್ಕೆ ಹೋಗಿ ಉಪದೇಶ ಮಾಡತೊಡಗಿದನು. 22ಜನರು ಆತನ ಬೋಧನೆಯನ್ನು ಕೇಳಿ ಆತ್ಯಾಶ್ಚರ್ಯಪಟ್ಟರು; ಏಕೆಂದರೆ ಆತನು ಶಾಸ್ತ್ರಿಗಳಂತೆ ಬೋಧಿಸದೆ ಅಧಿಕಾರವಿದ್ದವನಂತೆ ಅವರಿಗೆ ಬೋಧಿಸುತ್ತಿದ್ದನು.
ದಿನಾಂಕಗಳು ರಷ್ಯನ್ ಸಭೆಯ ಜೂಲಿಯನ್ ಪಂಚಾಂಗದ ಪ್ರಕಾರ ಇವೆ (ಸರ್ಬಿಯನ್ ಮತ್ತು ಜಾರ್ಜಿಯನ್ ಸಭೆಗಳು ಮತ್ತು ಅಥೋಸ್ ಪರ್ವತದಂತೆ): ಸಭೆಯ ಪಂಚಾಂಗದ 25 ಆಗಸ್ಟ್ ಎಂದರೆ ನಾಗರಿಕ ಪಂಚಾಂಗದ 7 ಸೆಪ್ಟೆಂಬರ್. ಹೊಸ ಪಂಚಾಂಗದ ಸಭೆಗಳು (ಗ್ರೀಸ್, ರೊಮೇನಿಯಾ, ಬಲ್ಗೇರಿಯಾ, ಉಕ್ರೇನ್…) ನಿಗದಿತ ದಿನಾಂಕದ ಹಬ್ಬಗಳನ್ನೂ ಸಂತರನ್ನೂ ಅದೇ ನಾಗರಿಕ ದಿನಾಂಕದಂದು, 13 ದಿನಗಳ ಮುಂಚೆ, ಆಚರಿಸುತ್ತವೆ, ಮತ್ತು ಅವುಗಳ ಕೆಲವು ವಾಚನಗಳು ಬೇರೆಯಾಗಿವೆ; ಈಸ್ಟರ್ ಮತ್ತು ಅದನ್ನು ಅವಲಂಬಿಸಿರುವ ದಿನಗಳು ಒಂದೇ ಆಗಿವೆ.
ಮೂಲಗಳು: ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ · © 2017, 2019 Bridge Connectivity Solutions, CC BY-SA 4.0; changed: footnotes, headings and the letters over Psalm 119 left out, verses in the app's numbering. · ಮೂಲಗಳು ಮತ್ತು ಹಕ್ಕುಗಳು