ಮುಖಪುಟ › ದೈನಂದಿನ ಬೈಬಲ್ ವಾಚನಗಳು › ಸೆಪ್ಟೆಂಬರ್ 2027 › 8 ಸೆಪ್ಟೆಂಬರ್
ಕ್ಯಾಥೊಲಿಕ್ ಪಂಚಾಂಗ
ದೈನಂದಿನ ಬೈಬಲ್ ವಾಚನಗಳು (ಕಥೋಲಿಕ) — 8 ಸೆಪ್ಟೆಂಬರ್ 2027
ಬುಧವಾರ · ಸಾಮಾನ್ಯ ಕಾಲದ 23ನೇ ವಾರ
ಹಬ್ಬಗಳು ಮತ್ತು ಸಂತರು
ಪೂಜ್ಯ ಕನ್ಯೆ ಮರಿಯಳ ಜನನ
ಹಬ್ಬ · ಆರಾಧನಾ ಬಣ್ಣ: ಬಿಳಿ
ದಿನದ ವಾಚನಗಳು
ಮೊದಲನೆಯ ವಾಚನ
ಅಥವಾ: ರೋಮಾ 8:28–30
2ಎಫ್ರಾತದ ಬೇತ್ಲೆಹೇಮೇ, ನೀನು ಯೆಹೂದದ ಗ್ರಾಮಗಳಲ್ಲಿ ಚಿಕ್ಕದ್ದಾಗಿದ್ದರೂ ಇಸ್ರಾಯೇಲನ್ನು ಆಳತಕ್ಕವನು ನಿನ್ನೊಳಗಿಂದ ನನಗಾಗಿ ಹೊರಡುವನು. ಆತನ ಕುಲದ ಮೂಲವು ಪುರಾತನವೂ ಮತ್ತು ಅನಾದಿಯೂ ಆದದ್ದು. 3ಹೀಗಿರಲು ಪ್ರಸವವೇದನೆ ಪಡತಕ್ಕವಳು ಮಗನನ್ನು ಹೆರುವವರೆಗೂ ನನ್ನ ಜನರು ಶತ್ರುವಶವಾಗಿರುವಂತೆ ಮಾಡುವೆನು. ಅನಂತರ ಆ ಮಗನ ಸಹೋದರರಲ್ಲಿ ಉಳಿದವರು ಇಸ್ರಾಯೇಲರೊಂದಿಗೆ ಹಿಂದಿರುಗುವರು 4ಆತನು ಯೆಹೋವನ ಬಲವನ್ನೂ, ತನ್ನ ದೇವರಾದ ಯೆಹೋವನ ನಾಮದ ಮಹಿಮೆಯನ್ನೂ ಹೊಂದಿದವನಾಗಿ ನಿಂತು ತನ್ನ ಹಿಂಡನ್ನು ಮೇಯಿಸುವನು. ಆ ಹಿಂಡು ನೆಮ್ಮದಿಯಾಗಿ ನೆಲೆಗೊಂಡಿರುವುದು. ಆತನು ಭೂಮಿಯ ಕಟ್ಟಕಡೆಯವರೆಗೂ ಪ್ರಬಲನಾಗಿರುವನು. 5ಆತನೇ ನಮಗೆ ಸಮಾಧಾನಪ್ರದನು. ಅಶ್ಶೂರ್ಯರು ನಮ್ಮ ದೇಶದಲ್ಲಿ ನುಗ್ಗಿ, ನಮ್ಮ ಅರಮನೆಗಳನ್ನು ತುಳಿದುಹಾಕುವಾಗ, ನಾವು ಅವರಿಗೆ ವಿರುದ್ಧವಾಗಿ ಏಳು ಪಾಲಕರನ್ನು ಹೌದು ಎಂಟು ಪುರುಷಶ್ರೇಷ್ಠರನ್ನು ನೇಮಿಸುವೆವು.
ಪ್ರತಿವಚನ ಕೀರ್ತನೆ
5ನಾನಂತೂ ನಿನ್ನ ಕೃಪೆಯಲ್ಲಿ ಭರವಸವಿಟ್ಟಿದ್ದೇನೆ; ನೀನು ನನ್ನನ್ನು ರಕ್ಷಿಸಿದ್ದರಿಂದ ನನ್ನ ಹೃದಯವು ಹರ್ಷಗೊಳ್ಳುವುದು. 6ಯೆಹೋವನ ಮಹೋಪಕಾರಕ್ಕಾಗಿ ಆತನಿಗೆ ಹಾಡುವೆನು.
ಸುವಾರ್ತೆ
1ಅಬ್ರಹಾಮನ ಮಗನಾದ ದಾವೀದನ ಕುಮಾರನಾದ ಯೇಸು ಕ್ರಿಸ್ತನ ವಂಶಾವಳಿ. 2ಅಬ್ರಹಾಮನ ಮಗನು ಇಸಾಕನು. ಇಸಾಕನ ಮಗನು ಯಾಕೋಬನು. ಯಾಕೋಬನ ಮಗನು ಯೆಹೂದನು, ಅವನ ಅಣ್ಣತಮ್ಮಂದಿರು ಯೆಹೂದನ ಮಕ್ಕಳು. 3ಯೆಹೂದನಿಗೆ ತಾಮಾರಳಲ್ಲಿ ಪೆರೆಚನು, ಜೆರಹನು ಹುಟ್ಟಿದರು. ಪೆರೆಚನ ಮಗನು ಹೆಚ್ರೋನನು. 4ಹೆಚ್ರೋನನ ಮಗನು ಅರಾಮನು. ಅರಾಮನ ಮಗನು ಅಮ್ಮಿನಾದಾಬನು. ಅಮ್ಮಿನಾದಾಬನ ಮಗನು ನಹಶೋನನು. ನಹಶೋನನ ಮಗನು ಸಲ್ಮೋನನು. 5ಸಲ್ಮೋನನ ಮಗನಾದ ಬೋವಜನು ರಾಹಾಬಳಲ್ಲಿ ಹುಟ್ಟಿದವನು. ಬೋವಜನ ಮಗನು ಓಬೇದನು ರೂತಳಲ್ಲಿ ಹುಟ್ಟಿದವನು. ಓಬೇದನ ಮಗನು ಇಷಯನು. 6ಇಷಯನ ಮಗನು ಅರಸನಾದ ದಾವೀದನು. ದಾವೀದನ ಮಗನಾದ ಸೊಲೊಮೋನನು ಊರೀಯನ ಹೆಂಡತಿಯಲ್ಲಿ ಹುಟ್ಟಿದವನು. 7ಸೊಲೊಮೋನನ ಮಗನು ರೆಹಬ್ಬಾಮನು. ರೆಹಬ್ಬಾಮನ ಮಗನು ಅಬೀಯನು. ಅಬೀಯನ ಮಗನು ಆಸನು. 8ಆಸನ ಮಗನು ಯೆಹೋಷಾಫಾಟನು. ಯೆಹೋಷಾಫಾಟನ ಮಗನು ಯೆಹೋರಾಮನು. ಯೆಹೋರಾಮನ ಮಗನು ಉಜ್ಜೀಯನು. 9ಉಜ್ಜೀಯನ ಮಗನು ಯೋತಾಮನು. ಯೋತಾಮನ ಮಗನು ಆಹಾಜನನು. ಆಹಾಜನ ಮಗನು ಹಿಜ್ಕೀಯನು. 10ಹಿಜ್ಕೀಯನ ಮಗನು ಮನಸ್ಸೆಯನು. ಮನಸ್ಸೆಯ ಮಗನು ಆಮೋನನು. 11ಆಮೋನ ಮಗನು ಯೋಷೀಯನು. ಬಾಬಿಲೋನಿಗೆ ಸೆರೆಹೋದ ಸಮಯದಲ್ಲಿ ಯೋಷೀಯನಿಗೆ ಯೆಕೊನ್ಯನು, ಅವನ ಅಣ್ಣತಮ್ಮಂದಿರು ಹುಟ್ಟಿದರು. 12ಬಾಬಿಲೋನಿಗೆ ಸೆರೆಹೋದ ಮೇಲೆ ಯೆಕೊನ್ಯನು ಶೆಯಲ್ತಿಯೇಲನನ್ನು ಪಡೆದನು. ಶೆಯಲ್ತಿಯೇಲನ ಮಗನು ಜೆರುಬ್ಬಾಬೆಲನು 13ಜೆರುಬ್ಬಾಬೆಲನ ಮಗನು ಅಬಿಹೂದನು. ಅಬಿಹೂದನ ಮಗನು ಎಲ್ಯಕೀಮನು. ಎಲ್ಯಕೀಮನ ಮಗನು ಅಜೋರನು. 14ಅಜೋರನ ಮಗನು ಸದೋಕನು. ಸದೋಕನ ಮಗನು ಅಖೀಮನು. ಅಖೀಮನ ಮಗನು ಎಲಿಹೂದನು. 15ಎಲಿಹೂದನ ಮಗನು ಎಲಿಯಾಜರನು. ಎಲಿಯಾಜರನ ಮಗನು ಮತ್ತಾನನು. ಮತ್ತಾನನ ಮಗನು ಯಾಕೋಬನು. 16ಯಾಕೋಬನ ಮಗನು ಯೋಸೇಫನು. ಯೋಸೇಫನು ಮರಿಯಳ ಗಂಡನು. ಈ ಮರಿಯಳಿಂದಲೇ ಕ್ರಿಸ್ತನೆಂಬ ಯೇಸು ಹುಟ್ಟಿದನು. 18ಯೇಸು ಕ್ರಿಸ್ತನ ಜನನವು ಹೇಗಾಯಿತಂದರೆ, ಆತನ ತಾಯಿಯಾದ ಮರಿಯಳಿಗೂ ಯೋಸೇಫನಿಗೂ ನಿಶ್ಚಿತಾರ್ಥವಾಗಿತ್ತು. ಅವರಿಬ್ಬರೂ ಮದುವೆಯಾಗಿ ಕೂಡಿಬಾಳುವುದಕ್ಕಿಂತ ಮೊದಲೇ ಮರಿಯಳು ಪವಿತ್ರಾತ್ಮನ ಶಕ್ತಿಯಿಂದ ಗರ್ಭಧರಿಸಿದ್ದು ತಿಳಿದುಬಂತು. 19ಆದರೆ ಆಕೆಯ ಗಂಡನಾದ ಯೋಸೇಫನು ನೀತಿವಂತನಾಗಿದ್ದ ಕಾರಣ ಮರಿಯಳನ್ನು ಬಯಲಿಗೆ ತಂದು ಅವಮಾನಕ್ಕೆ ಗುರಿಮಾಡದೆ ನಿಶ್ಚಿತಾರ್ಥವನ್ನು ರಹಸ್ಯವಾಗಿ ಮುರಿದುಬಿಡಬೇಕೆಂದು ಆಲೋಚಿಸಿದ್ದನು. 20ಅವನು ಇದನ್ನು ಕುರಿತು ಆಲೋಚಿಸುತ್ತಿರುವಾಗ, ದೇವದೂತನು ಅವನಿಗೆ ಕನಸಿನಲ್ಲಿ ಕಾಣಿಸಿಕೊಂಡು, “ದಾವೀದನ ಮಗನಾದ ಯೋಸೇಫನೇ, ನೀನು ಮರಿಯಳನ್ನು ಹೆಂಡತಿಯಾಗಿ ಸೇರಿಸಿಕೊಳ್ಳುವುದಕ್ಕೆ ಅಂಜಬೇಡ. ಆಕೆ ಗರ್ಭವತಿಯಾದದ್ದು ಪವಿತ್ರಾತ್ಮನಿಂದಲೇ. 21ಆಕೆಯು ಒಬ್ಬ ಮಗನನ್ನು ಹೆರುವಳು; ನೀನು ಆತನಿಗೆ ‘ಯೇಸು’ ಎಂದು ಹೆಸರಿಡಬೇಕು; ಏಕೆಂದರೆ ಆತನೇ ತನ್ನ ಜನರನ್ನು ಅವರ ಪಾಪಗಳಿಂದ ಬಿಡಿಸಿ ರಕ್ಷಿಸುವನು,” ಅಂದನು. 22ಕರ್ತನು ಪ್ರವಾದಿಯ ಮುಖಾಂತರ ಹೇಳಿದ ಮಾತು ನೆರವೇರುವಂತೆ ಇದೆಲ್ಲಾ ನಡೆಯಿತು; ಆ ಮಾತು ಏನೆಂದರೆ, 23“ಇಗೋ, ಒಬ್ಬ ಕನ್ನಿಕೆಯು ಗರ್ಭಿಣಿಯಾಗಿ ಮಗನನ್ನು ಹೆರುವಳು; ಆತನಿಗೆ ಇಮ್ಮಾನುವೇಲ್ ಎಂದು ಹೆಸರಿಡುವರು. ‘ದೇವರು ನಮ್ಮ ಕೂಡ ಇದ್ದಾನೆಂದು’ ಈ ಹೆಸರಿನ ಅರ್ಥ.”
ಸಾಮಾನ್ಯ ರೋಮನ್ ಪಂಚಾಂಗ; ಬಿಷಪರ ಸಮ್ಮೇಳನವು ಕೆಲವು ಹಬ್ಬಗಳನ್ನು (ಪ್ರಭುವಿನ ಪ್ರಕಟನೆ, ಸ್ವರ್ಗಾರೋಹಣ, ಕ್ರಿಸ್ತನ ದೇಹ ಮತ್ತು ರಕ್ತ) ಭಾನುವಾರಕ್ಕೆ ಸರಿಸಬಹುದು ಅಥವಾ ತನ್ನದೇ ಹಬ್ಬಗಳನ್ನು ಸೇರಿಸಬಹುದು. ವಾಚನ ಸಂಗ್ರಹ: ಭಾನುವಾರದ ಚಕ್ರ B, ವಾರದ ದಿನಗಳ ವರ್ಷ I.
ಮೂಲಗಳು: ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ · © 2017, 2019 Bridge Connectivity Solutions, CC BY-SA 4.0; changed: footnotes, headings and the letters over Psalm 119 left out, verses in the app's numbering. · ಮೂಲಗಳು ಮತ್ತು ಹಕ್ಕುಗಳು