ಮುಖಪುಟ › ದೈನಂದಿನ ಬೈಬಲ್ ವಾಚನಗಳು › ಸೆಪ್ಟೆಂಬರ್ 2027 › 8 ಸೆಪ್ಟೆಂಬರ್
ಆರ್ಥೊಡಾಕ್ಸ್ ಪಂಚಾಂಗ · ಆಗಸ್ಟ್ 26 (ಹಳೆಯ ಪದ್ಧತಿ)
ಆರ್ಥೊಡಾಕ್ಸ್ ದೈನಂದಿನ ವಾಚನಗಳು — 8 ಸೆಪ್ಟೆಂಬರ್ 2027
ಬುಧವಾರ · ಪಂಚಾಶತ್ತಮದ ನಂತರದ 12ನೇ ವಾರ · ಸ್ವರ 2
ಹಬ್ಬಗಳು ಮತ್ತು ಸಂತರು
Meeting of the Vladimir Icon of the Most Holy Mother of God (1395)
ಉಪವಾಸದ ದಿನ
ಉಪವಾಸ: ಎಣ್ಣೆಯೊಂದಿಗೆ
ಇದು ಮಠದ ನಿಯಮವನ್ನು ಅನುಸರಿಸುತ್ತದೆ. ಸಭೆಯಲ್ಲಿ ಉಪವಾಸದ ಪ್ರಮಾಣವನ್ನು ಆರೋಗ್ಯ, ವಯಸ್ಸು ಮತ್ತು ಸಂದರ್ಭಗಳಿಗೆ ಅನುಗುಣವಾಗಿ ಪಾಪನಿವೇದನೆಯ ಗುರುವಿನೊಂದಿಗೆ ಸೇರಿ ನಿರ್ಧರಿಸಲಾಗುತ್ತದೆ.
ದಿನದ ವಾಚನಗಳು
ಉದಯಕಾಲದ ಪ್ರಾರ್ಥನೆ: ಸುವಾರ್ತೆ (ದೇವಮಾತೆಯ ವ್ಲಾದಿಮಿರ್ ಐಕಾನ್)
39ಇದಾದ ನಂತರ ಮರಿಯಳು ಎದ್ದು ತ್ವರೆಯಾಗಿ ಯೆಹೂದದ ಮಲೆನಾಡಿನಲ್ಲಿರುವ ಒಂದು ಊರಿಗೆ ಹೋದಳು. 40ಜಕರೀಯನ ಮನೆಯನ್ನು ಸೇರಿ ಎಲಿಸಬೇತಳಿಗೆ ವಂದಿಸಿದಳು. 41ಎಲಿಸಬೇತಳು ಮರಿಯಳ ವಂದನೆಯನ್ನು ಕೇಳುತ್ತಲೇ ಆಕೆಯ ಗರ್ಭದಲ್ಲಿದ್ದ ಕೂಸು ಕುಣಿದಾಡಿತು ಮತ್ತು ಎಲಿಸಬೇತಳು ಪವಿತ್ರಾತ್ಮಭರಿತಳಾದಳು. 42ಆಗ ಆಕೆಯು ಮಹಾಧ್ವನಿಯಿಂದ ಕೂಗಿ, “ನೀನು ಸ್ತ್ರೀಯರೊಳಗೆ ಧನ್ಯಳು, ಮತ್ತು ನಿನ್ನಲ್ಲಿ ಹುಟ್ಟುವ ಕೂಸು ಆಶೀರ್ವಾದ ಹೊಂದಿದ್ದು. 43ನನ್ನ ಕರ್ತನ ತಾಯಿಯು ನನ್ನ ಬಳಿಗೆ ಬರುವಷ್ಟು ಸೌಭಾಗ್ಯ ನನಗೆ ಎಲ್ಲಿಂದಾಯಿತು? 44ಇಗೋ, ನಿನ್ನ ವಂದನೆಯು ನನ್ನ ಕಿವಿಗೆ ಬೀಳುತ್ತಲೇ ಕೂಸು ನನ್ನ ಗರ್ಭದಲ್ಲಿ ಉಲ್ಲಾಸದಿಂದ ಕುಣಿದಾಡಿತು. 45ಕರ್ತನು ನಿನಗೆ ಹೇಳಿದ ಮಾತುಗಳು ನೆರವೇರುವವು ಅಂದಳು. ಇದನ್ನು ನಂಬಿದವಳಾದ ನೀನು ಧನ್ಯಳು.” 46ಆಗ ಮರಿಯಳು, “ನನ್ನ ಪ್ರಾಣವು ಕರ್ತನನ್ನು ಕೊಂಡಾಡುತ್ತದೆ, 47ನನ್ನ ಆತ್ಮವು ನನ್ನ ರಕ್ಷಕನಾದ ದೇವರಲ್ಲಿ ಉಲ್ಲಾಸಗೊಂಡಿದೆ. 48ಆತನು ತನ್ನ ದಾಸಿಯ ದೀನಸ್ಥಿತಿಯ ಮೇಲೆ ಲಕ್ಷ್ಯವಿಟ್ಟಿದ್ದಾನೆ. ಇಗೋ, ಇಂದಿನಿಂದ ತಲತಲಾಂತರದವರೆಗೆ ಎಲ್ಲರೂ ನನ್ನನ್ನು ಧನ್ಯಳೆಂದು ಹೊಗಳುವರು, 49ಏಕೆಂದರೆ ಶಕ್ತನಾಗಿರುವಾತನು ನನಗೆ ದೊಡ್ಡ ಉಪಕಾರಗಳನ್ನು ಮಾಡಿದ್ದಾನೆ; ಆತನ ನಾಮವು ಪರಿಶುದ್ಧವಾದುದು. 56ಮರಿಯಳು ಸುಮಾರು ಮೂರು ತಿಂಗಳು ಎಲಿಸಬೇತಳ ಬಳಿಯಲ್ಲಿದ್ದು ತನ್ನ ಮನೆಗೆ ಹಿಂತಿರುಗಿ ಹೋದಳು.
ಪತ್ರಿಕೆ
11ಕೊರಿಂಥದವರೇ, ಬಿಚ್ಚುಮನದಿಂದಲೂ ತೆರೆದ ಹೃದಯದಿಂದಲೂ ನಾವು ನಿಮ್ಮೊಡನೆ ಮಾತನಾಡಿದ್ದೇವೆ. 12ನಮ್ಮಲ್ಲಿ ಸಂಕುಚಿತ ಭಾವನೆಯೇನೂ ಇಲ್ಲ. ಇದು ಇರುವುದಾದರೆ ನಿಮ್ಮಲ್ಲೇ. 13ಆದ್ದರಿಂದ ಮಕ್ಕಳಿಗೆ ಹೇಳುವಂತೆ ಹೇಳುತ್ತಿದ್ದೇವೆ; ನಾವು ನಿಮ್ಮನ್ನು ಪೂರ್ಣ ಹೃದಯದಿಂದ ಪ್ರೀತಿಸಿದಂತೆ, ನೀವು ನಮ್ಮನ್ನು ಪೂರ್ಣ ಹೃದಯದಿಂದ ಪ್ರೀತಿಸಿರಿ. 14ನೀವು ಕ್ರಿಸ್ತ ನಂಬಿಕೆಯಿಲ್ಲದವರೊಂದಿಗೆ ಸೇರಿ ಇಜ್ಜೋಡಿಯಾಗಬೇಡಿರಿ. ಧರ್ಮಕ್ಕೂ, ಅಧರ್ಮಕ್ಕೂ ಸಹವಾಸವೇನು? 15ಬೆಳಕಿಗೂ, ಕತ್ತಲೆಗೂ ಅನ್ಯೋನ್ಯತೆಯೇನು? ಕ್ರಿಸ್ತನಿಗೂ ಸೈತಾನನಿಗೂ ಒಪ್ಪಂದವೇನು? ವಿಶ್ವಾಸಿಗೂ ಅವಿಶ್ವಾಸಿಗೂ ಪಾಲುಗಾರಿಕೆಯೇನು? 16ದೇವ ಮಂದಿರಕ್ಕೂ, ವಿಗ್ರಹಗಳಿಗೂ ಒಪ್ಪಿಗೆಯೇನು? ನಾವು ದೇವರೇ ಹೇಳಿರುವಂತೆ ಜೀವಸ್ವರೂಪನಾದ ದೇವರ ಮಂದಿರವಾಗಿದ್ದೇವಲ್ಲಾ, “ನಾನು ಅವರಲ್ಲಿ ವಾಸಮಾಡುವೆನು, ಅವರ ನಡುವೆಯೇ ನಾ ತಿರುಗಾಡುವೆನು ಅವರಿಗೆ ನಾನೇ ದೇವರಾಗಿರುವೆನು, ಅವರು ನನಗೆ ಪ್ರಜೆಯಾಗಿರುವರು” ಎಂದು ಹೇಳಿದ್ದಾನೆ.
ಪತ್ರಿಕೆ (ದೇವಮಾತೆಯ ವ್ಲಾದಿಮಿರ್ ಐಕಾನ್)
5ಕ್ರಿಸ್ತ ಯೇಸುವಿನಲ್ಲಿದ್ದಂಥ ಮನಸ್ಸು ನಿಮ್ಮಲ್ಲಿಯೂ ಇರಲಿ. 6ಆತನು ದೇವಸ್ವರೂಪನಾಗಿದ್ದರೂ, ದೇವರಿಗೆ ಸರಿಸಮಾನನಾಗಿರುವನೆಂಬ ಅಮೂಲ್ಯ ಪದವಿಯನ್ನು ಬಿಡಲೊಲ್ಲೆನು ಎಂದೆಣಿಸದೆ, 7ತನ್ನನ್ನು ಬರಿದು ಮಾಡಿಕೊಂಡು ದಾಸನ ರೂಪವನ್ನು ಧರಿಸಿಕೊಂಡು ಮನುಷ್ಯರಿಗೆ ಸಮನಾದನು. ಮನುಷ್ಯನಾಕಾರದಲ್ಲಿ ಕಾಣಿಸಿಕೊಂಡನು. 8ಆತನು ತನ್ನನ್ನು ತಗ್ಗಿಸಿಕೊಂಡು ಮರಣವನ್ನು ಅಂದರೆ ಶಿಲುಬೆಯ ಮರಣವನ್ನಾದರೂ ಹೊಂದುವಷ್ಟು ವಿಧೇಯನಾದನು. 9ಈ ಕಾರಣದಿಂದ ದೇವರು ಆತನನ್ನು ಅತ್ಯುನ್ನತ ಸ್ಥಾನಕ್ಕೆ ಏರಿಸಿ, ಎಲ್ಲಾ ಹೆಸರುಗಳಿಗಿಂತ ಶ್ರೇಷ್ಠವಾದ ಹೆಸರನ್ನು ಆತನಿಗೆ ದಯಪಾಲಿಸಿದ್ದಾನೆ. 10ಆದ್ದರಿಂದ ಸ್ವರ್ಗ ಮರ್ತ್ಯ ಪಾತಾಳಗಳಲ್ಲಿರುವವರೆಲ್ಲರೂ ಯೇಸುವಿನ ಹೆಸರಿನಲ್ಲಿ ಮೊಣಕಾಲೂರಿ ಅಡ್ಡಬಿದ್ದು, 11ತಂದೆಯಾದ ದೇವರ ಮಹಿಮೆಗಾಗಿ ಪ್ರತಿಯೊಂದು ನಾಲಿಗೆಯು ಯೇಸು ಕ್ರಿಸ್ತನನ್ನು ಕರ್ತನೆಂದು ಅರಿಕೆಮಾಡುವುದು.
ಸುವಾರ್ತೆ
23ಆಗ ಅವರ ಸಭಾಮಂದಿರದಲ್ಲಿ ದೆವ್ವಹಿಡಿದ ಒಬ್ಬ ಮನುಷ್ಯನಿದ್ದನು. 24ಆ ದೆವ್ವವು, “ನಜರೇತಿನ ಯೇಸುವೇ, ನಮ್ಮ ಗೊಡವೆ ನಿನಗೇಕೆ? ನೀನು ನಮ್ಮನ್ನು ನಾಶಮಾಡುವುದಕ್ಕೆ ಬಂದೆಯಾ? ನೀನು ಯಾರೆಂದು ನಾನು ಬಲ್ಲೆನು. ನೀನು ದೇವರಿಂದ ಬಂದ ಪರಿಶುದ್ಧನು” ಎಂದು ಕೂಗಿ ಹೇಳಿತು. 25ಯೇಸು ಅದನ್ನು ಗದರಿಸಿ, “ಸುಮ್ಮನಿರು, ಅವನನ್ನು ಬಿಟ್ಟು ಹೊರಗೆ ಬಾ” ಎಂದನು. 26ಆ ದೆವ್ವವು ಅವನನ್ನು ಒದ್ದಾಡಿಸಿ ಗಟ್ಟಿಯಾಗಿ ಕೂಗುತ್ತಾ, ಅವನೊಳಗಿಂದ ಹೊರಗೆ ಬಂದಿತು. 27ಜನರೆಲ್ಲರೂ ಬೆರಗಾಗಿ, “ಇದೇನು? ಅಧಿಕಾರಸಹಿತವಾದ ಹೊಸ ಬೋಧನೆ! ಈತನು ದೆವ್ವಗಳಿಗೂ ಸಹ ಆಜ್ಞಾಪಿಸುತ್ತಾನೆ, ಅವು ಈತನಿಗೆ ವಿಧೇಯವಾಗುತ್ತವೆ!” ಎಂದು ತಮ್ಮತಮ್ಮೊಳಗೆ ವಿಚಾರಮಾಡಿಕೊಂಡರು. 28ಕೂಡಲೆ ಆತನ ಸುದ್ದಿಯು ಗಲಿಲಾಯ ಸೀಮೆಯಲ್ಲೆಲ್ಲಾ ಹಬ್ಬಿತು.
ಸುವಾರ್ತೆ (ದೇವಮಾತೆಯ ವ್ಲಾದಿಮಿರ್ ಐಕಾನ್)
38ಅವರು ಸಂಚಾರಮಾಡುತ್ತಿರುವಾಗ ಆತನು ಒಂದು ಹಳ್ಳಿಗೆ ಬಂದನು. ಅಲ್ಲಿ ಮಾರ್ಥಳೆಂಬ ಒಬ್ಬ ಸ್ತ್ರೀಯು ಆತನನ್ನು ತನ್ನ ಮನೆಯಲ್ಲಿ ಉಳಿಸಿಕೊಂಡಳು. 39ಆಕೆಗೆ ಮರಿಯಳೆಂಬ ಒಬ್ಬ ತಂಗಿ ಇದ್ದಳು. ಈಕೆಯು ಯೇಸುವಿನ ಪಾದಗಳ ಬಳಿಯಲ್ಲಿ ಕುಳಿತುಕೊಂಡು ಆತನ ವಾಕ್ಯವನ್ನು ಕೇಳುತ್ತಿದ್ದಳು. 40ಆದರೆ ಮಾರ್ಥಳು ಉಪಚಾರ ಸೇವೆಯ ವಿಷಯವಾಗಿ ಬಹಳ ಬೇಸತ್ತು ಯೇಸುವಿನ ಬಳಿಗೆ ಬಂದು, “ಕರ್ತನೇ, ನನ್ನ ತಂಗಿಯು ಸೇವೆಗೆ ನನ್ನೊಬ್ಬಳನ್ನೇ ಬಿಟ್ಟಿದ್ದಾಳೆ, ಇದಕ್ಕೆ ನಿನಗೆ ಚಿಂತೆಯಿಲ್ಲವೋ? ನನಗೆ ನೆರವಾಗಬೇಕೆಂದು ಆಕೆಗೆ ಹೇಳು” ಅಂದಳು. 41ಆದರೆ, ಕರ್ತನು ಆಕೆಗೆ, “ಮಾರ್ಥಳೇ, ಮಾರ್ಥಳೇ, ನೀನು ಅನೇಕ ವಿಷಯಗಳಿಗಾಗಿ ಚಿಂತೆಯಲ್ಲಿಯೂ ಗಡಿಬಿಡಿಯಲ್ಲಿಯೂ ಸಿಕ್ಕಿಕೊಂಡಿದ್ದೀ. 42ಆದರೆ ಅಗತ್ಯವಾದದ್ದು ಒಂದೇ, ಮರಿಯಳು ಆ ಉತ್ತಮ ಭಾಗವನ್ನು ಆರಿಸಿಕೊಂಡಿದ್ದಾಳೆ, ಅದು ಆಕೆಯಿಂದ ತೆಗೆಯಲ್ಪಡುವುದಿಲ್ಲ” ಎಂದು ಉತ್ತರಕೊಟ್ಟನು. 11:27ಯೇಸು ಈ ಮಾತುಗಳನ್ನು ಹೇಳುತ್ತಿರುವಾಗ ಜನರಲ್ಲಿ ಒಬ್ಬ ಸ್ತ್ರೀಯು, “ನಿನ್ನನ್ನು ಹೊತ್ತ ಗರ್ಭವೂ, ನೀನು ಕುಡಿದ ಮೊಲೆಗಳೂ ಧನ್ಯವಾದವುಗಳು” ಎಂದು ಕೂಗಿದಳು. 28ಅದಕ್ಕೆ ಯೇಸು, “ಹಾಗನ್ನ ಬೇಡ, ದೇವರ ವಾಕ್ಯವನ್ನು ಕೇಳಿ ಅದನ್ನು ಅನುಸರಿಸುವವನು ಹೆಚ್ಚು ಧನ್ಯನು” ಅಂದನು.
ದಿನಾಂಕಗಳು ರಷ್ಯನ್ ಸಭೆಯ ಜೂಲಿಯನ್ ಪಂಚಾಂಗದ ಪ್ರಕಾರ ಇವೆ (ಸರ್ಬಿಯನ್ ಮತ್ತು ಜಾರ್ಜಿಯನ್ ಸಭೆಗಳು ಮತ್ತು ಅಥೋಸ್ ಪರ್ವತದಂತೆ): ಸಭೆಯ ಪಂಚಾಂಗದ 26 ಆಗಸ್ಟ್ ಎಂದರೆ ನಾಗರಿಕ ಪಂಚಾಂಗದ 8 ಸೆಪ್ಟೆಂಬರ್. ಹೊಸ ಪಂಚಾಂಗದ ಸಭೆಗಳು (ಗ್ರೀಸ್, ರೊಮೇನಿಯಾ, ಬಲ್ಗೇರಿಯಾ, ಉಕ್ರೇನ್…) ನಿಗದಿತ ದಿನಾಂಕದ ಹಬ್ಬಗಳನ್ನೂ ಸಂತರನ್ನೂ ಅದೇ ನಾಗರಿಕ ದಿನಾಂಕದಂದು, 13 ದಿನಗಳ ಮುಂಚೆ, ಆಚರಿಸುತ್ತವೆ, ಮತ್ತು ಅವುಗಳ ಕೆಲವು ವಾಚನಗಳು ಬೇರೆಯಾಗಿವೆ; ಈಸ್ಟರ್ ಮತ್ತು ಅದನ್ನು ಅವಲಂಬಿಸಿರುವ ದಿನಗಳು ಒಂದೇ ಆಗಿವೆ.
ಮೂಲಗಳು: ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ · © 2017, 2019 Bridge Connectivity Solutions, CC BY-SA 4.0; changed: footnotes, headings and the letters over Psalm 119 left out, verses in the app's numbering. · ಮೂಲಗಳು ಮತ್ತು ಹಕ್ಕುಗಳು