Bible Explorer ಆ್ಯಪ್ ಪಡೆಯಿರಿ

ಮುಖಪುಟ › ದೈನಂದಿನ ಬೈಬಲ್ ವಾಚನಗಳು › ಸೆಪ್ಟೆಂಬರ್ 2027 › 9 ಸೆಪ್ಟೆಂಬರ್

ಕ್ಯಾಥೊಲಿಕ್ ಪಂಚಾಂಗ

ದೈನಂದಿನ ಬೈಬಲ್ ವಾಚನಗಳು (ಕಥೋಲಿಕ) — 9 ಸೆಪ್ಟೆಂಬರ್ 2027

ಗುರುವಾರ · ಸಾಮಾನ್ಯ ಕಾಲದ 23ನೇ ವಾರ

ಹಬ್ಬಗಳು ಮತ್ತು ಸಂತರು

ಸಾಮಾನ್ಯ ಕಾಲದ 23ನೇ ವಾರದ ಗುರುವಾರ

ಐಚ್ಛಿಕ ಸ್ಮರಣೆ · ಆರಾಧನಾ ಬಣ್ಣ: ಹಸಿರು

ಸಂತ ಪೀಟರ್ ಕ್ಲೇವರ್, ಧರ್ಮಗುರು · ಐಚ್ಛಿಕ ಸ್ಮರಣೆ

ದಿನದ ವಾಚನಗಳು

ಮೊದಲನೆಯ ವಾಚನ

ಕೊಲೊ 3:12–17

12ಹೀಗಿರಲಾಗಿ ದೇವರಿಂದ ಆರಿಸಿಕೊಂಡವರಾಗಿ, ಪರಿಶುದ್ಧರೂ ಹಾಗೂ ಪ್ರಿಯರೂ ಆಗಿರುವುದರಿಂದ ಕನಿಕರ, ದಯೆ, ದೀನತೆ, ಸಾತ್ವಿಕತ್ವ ಮತ್ತು ಸಹನೆ ಎಂಬ ಸದ್ಗುಣಗಳನ್ನು ಧರಿಸಿಕೊಳ್ಳಿರಿ. 13ಒಬ್ಬರನ್ನೊಬ್ಬರು ಸೈರಿಸಿಕೊಂಡು ಯಾರಿಗಾದರೂ ಮತ್ತೊಬ್ಬನ ಮೇಲೆ ತಪ್ಪುಹೊರಿಸುವುದಕ್ಕೆ ಕಾರಣವಿದ್ದರೂ, ತಪ್ಪುಹೊರಿಸದೆ ಕ್ಷಮಿಸಿರಿ, ಕರ್ತನು ನಿಮ್ಮನ್ನು ಕ್ಷಮಿಸಿದಂತೆಯೇ ನೀವೂ ಕ್ಷಮಿಸಿರಿ. 14ಇವೆಲ್ಲಕ್ಕಿಂತ ಮಿಗಿಲಾಗಿ ಸಂಪೂರ್ಣತೆಯ ಬಂಧವಾಗಿರುವ ಪ್ರೀತಿಯನ್ನು ಧರಿಸಿಕೊಳ್ಳಿರಿ. 15ಕ್ರಿಸ್ತನ ಸಮಾಧಾನವು ನಿಮ್ಮ ಹೃದಯಗಳಲ್ಲಿ ಆಳಲಿ. ಇದೇ ಸಮಾಧಾನದಲ್ಲಿ ಏಕ ದೇಹವಾಗಿರುವಂತೆ ನೀವು ಕರೆಯಲ್ಪಟ್ಟಿರುವಿರಿ ಇದಲ್ಲದೆ ಕೃತಜ್ಞತೆಯುಳ್ಳವರಾಗಿರಿ. 16ಕ್ರಿಸ್ತನ ವಾಕ್ಯವು ನಿಮ್ಮಲ್ಲಿ ಸಮೃದ್ಧಿಯಾಗಿ ವಾಸಿಸಲಿ. ಸಕಲಜ್ಞಾನದಿಂದ ಒಬ್ಬರಿಗೊಬ್ಬರು ಉಪದೇಶಮಾಡಿಕೊಂಡು ಬುದ್ಧಿಹೇಳಿಕೊಳ್ಳಿರಿ. ಕೀರ್ತನೆಗಳಿಂದಲೂ, ಸ್ತುತಿಪದಗಳಿಂದಲೂ ಮತ್ತು ಆತ್ಮೀಕವಾದ ಗೀತೆಗಳಿಂದಲೂ ಹಾಗೂ ನಿಮ್ಮ ಹೃದಯಗಳಲ್ಲಿ ದೇವರಿಗೆ ಕೃತಜ್ಞತೆಯಿಂದಲೂ ಹಾಡಿರಿ. 17ನೀವು ನುಡಿಯಿಂದಾಗಲಿ ನಡೆಯಿಂದಾಗಲಿ ಏನೇ ಮಾಡಿದರೂ ಅದೆಲ್ಲವನ್ನೂ ಕರ್ತನಾದ ಯೇಸುವಿನ ಹೆಸರಿನಲ್ಲಿಯೇ ಮಾಡಿರಿ ಮತ್ತು ತಂದೆಯಾದ ದೇವರಿಗೆ ಆತನ ಮೂಲಕ ಕೃತಜ್ಞತಾಸ್ತುತ್ತಿಯನ್ನು ಸಲ್ಲಿಸಿರಿ.

ಪ್ರತಿವಚನ ಕೀರ್ತನೆ

ಕೀರ್ತ 150:1–6

1ಯೆಹೋವನಿಗೆ ಸ್ತೋತ್ರ! ದೇವರನ್ನು ಆತನ ಪರಿಶುದ್ಧ ಆಲಯದಲ್ಲಿ ಸ್ತುತಿಸಿರಿ; ಆತನ ಶಕ್ತಿಪ್ರದರ್ಶಕವಾದ ಆಕಾಶಮಂಡಲದಲ್ಲಿ ಆತನನ್ನು ಸ್ತುತಿಸಿರಿ. 2ಆತನ ಮಹತ್ಕಾರ್ಯಗಳಿಗಾಗಿ ಆತನನ್ನು ಸ್ತುತಿಸಿರಿ; ಆತನ ಮಹಾಪ್ರಭಾವಕ್ಕೆ ಸರಿಯಾಗಿ ಆತನನ್ನು ಸ್ತುತಿಸಿರಿ. 3ಕೊಂಬೂದುತ್ತಾ ಆತನನ್ನು ಸ್ತುತಿಸಿರಿ; ಸ್ವರಮಂಡಲ, ಕಿನ್ನರಿಗಳಿಂದ ಆತನನ್ನು ಸ್ತುತಿಸಿರಿ. 4ದಮ್ಮಡಿಯನ್ನು ಬಡಿಯುತ್ತಾ, ಕುಣಿಯುತ್ತಾ ಆತನನ್ನು ಸ್ತುತಿಸಿರಿ; ತಂತಿವಾದ್ಯಗಳಿಂದಲೂ, ಕೊಳಲುಗಳಿಂದಲೂ ಆತನನ್ನು ಸ್ತುತಿಸಿರಿ. 5ತಾಳದಿಂದ ಆತನನ್ನು ಸ್ತುತಿಸಿರಿ; ಝಲ್ಲರಿಯಿಂದ ಆತನನ್ನು ಸ್ತುತಿಸಿರಿ. 6ಶ್ವಾಸವಿರುವ ಎಲ್ಲವೂ ಯೆಹೋವನನ್ನು ಸ್ತುತಿಸಲಿ; ಯೆಹೋವನಿಗೆ ಸ್ತೋತ್ರ!

ಸುವಾರ್ತೆ

ಲೂಕ 6:27–38

27“ಕೇಳುವವರಾದ ನಿಮಗೆ ನಾನು ಹೇಳುವುದೇನಂದರೆ, ನಿಮ್ಮ ವೈರಿಗಳನ್ನು ಪ್ರೀತಿಸಿರಿ; ನಿಮ್ಮನ್ನು ಹಗೆಮಾಡುವವರಿಗೆ ಉಪಕಾರಮಾಡಿರಿ; 28ನಿಮ್ಮನ್ನು ಶಪಿಸುವವರನ್ನು ಆಶೀರ್ವದಿಸಿರಿ; ನಿಮ್ಮನ್ನು ನಿಂದಿಸುವವರಿಗಾಗಿ ಪ್ರಾರ್ಥಿಸಿರಿ. 29ನಿನ್ನ ಒಂದು ಕೆನ್ನೆಯ ಮೇಲೆ ಹೊಡೆದವನಿಗೆ ಮತ್ತೊಂದು ಕೆನ್ನೆಯನ್ನೂ ತೋರಿಸು; ನಿನ್ನ ಮೇಲಂಗಿಯನ್ನು ಕಿತ್ತುಕೊಳ್ಳುವವನಿಗೆ ಒಳಂಗಿಯನ್ನೂ ತೆಗೆದುಕೊಳ್ಳಲು ಅಡ್ಡಿಮಾಡಬೇಡ. 30ನಿನ್ನನ್ನು ಬೇಡುವವರೆಲ್ಲರಿಗೂ ಕೊಡು; ನಿನ್ನ ಸೊತ್ತನ್ನು ಕಸಿದುಕೊಳ್ಳುವವನನ್ನು ಹಿಂದಕ್ಕೆ ಕೊಡೆಂದು ಕೇಳಬೇಡ. 31ಜನರು ನಿಮಗೆ ಏನೇನು ಮಾಡಬೇಕೆಂದು ನೀವು ಅಪೇಕ್ಷಿಸುತ್ತೀರೋ, ಅಂಥದನ್ನೇ ನೀವು ಅವರಿಗೆ ಮಾಡಿರಿ. 32“ನಿಮಗೆ ಪ್ರೀತಿ ತೋರಿಸುವವರನ್ನೇ ನೀವು ಪ್ರೀತಿಸಿದರೆ ನಿಮಗೆ ಏನು ಹೊಗಳಿಕೆ ಬಂದೀತು? ಪಾಪಿಷ್ಠರು ಸಹ ತಮಗೆ ಪ್ರೀತಿ ತೋರಿಸುವವರನ್ನು ಪ್ರೀತಿಸುತ್ತಾರಲ್ಲಾ. 33ನಿಮಗೆ ಉಪಕಾರ ಮಾಡುವವರಿಗೇ ನೀವು ಉಪಕಾರ ಮಾಡಿದರೆ ನಿಮಗೆ ಏನು ಹೊಗಳಿಕೆ ಬಂದೀತು? ಪಾಪಿಷ್ಠರು ಸಹ ಹಾಗೆ ಮಾಡುತ್ತಾರಲ್ಲಾ. 34ಸಾಲತೀರಿಸುವುರೆಂದು ನಿರೀಕ್ಷಿಸಿ ನೀವು ಅಂಥವರಿಗೆ ಸಾಲಕೊಟ್ಟರೆ, ನಿಮಗೆ ಏನು ಹೊಗಳಿಕೆ ಬಂದೀತು? ಪಾಪಿಷ್ಠರೂ ಸಹ ತಾವು ಕೊಟ್ಟಷ್ಟು ತಮಗೆ ತಿರುಗಿ ಸಿಕ್ಕೀತೆಂದು ಸಾಲ ಕೊಡುತ್ತಾರಲ್ಲಾ. 35ನೀವಾದರೋ ನಿಮ್ಮ ವೈರಿಗಳನ್ನು ಪ್ರೀತಿಸಿ ಅವರಿಗೆ ಉಪಕಾರಮಾಡಿರಿ. ಏನನ್ನೂ ನಿರೀಕ್ಷಿಸದೆ ಸಾಲಕೊಡಿರಿ. ಹೀಗೇ ಮಾಡಿದರೆ, ನಿಮಗೆ ಬಹಳ ಫಲಸಿಕ್ಕುವುದು ಮತ್ತು ನೀವು ಪರಾತ್ಪರನಾದ ದೇವರ ಮಕ್ಕಳಾಗುವಿರಿ. ದೇವರು ಉಪಕಾರನೆನಸದವರಿಗೂ ಕೆಟ್ಟವರಿಗೂ ಉಪಕಾರಿಯಾಗಿದ್ದಾನೆ. 36ನಿಮ್ಮ ತಂದೆಯು ಕರುಣೆಯುಳ್ಳವನಾಗಿರುವ ಪ್ರಕಾರವೇ ನೀವೂ ಕರುಣೆಯುಳ್ಳವರಾಗಿರಿ. 37“ಇದಲ್ಲದೆ ತೀರ್ಪುಮಾಡಬೇಡಿರಿ, ಆಗ ನಿಮಗೂ ತೀರ್ಪಾಗುವುದಿಲ್ಲ; ಅಪರಾಧಿಯೆಂದು ನಿರ್ಣಯಿಸಬೇಡಿರಿ, ಆಗ ನಿಮ್ಮನ್ನೂ ಅಪರಾಧಿಗಳೆಂದು ನಿರ್ಣಯಿಸುವುದಿಲ್ಲ; ಕ್ಷಮಿಸಿರಿ, ಆಗ ನಿಮಗೂ ಕ್ಷಮಿಸಲ್ಪಡುವುದು. 38ಕೊಡಿರಿ, ಆಗ ನಿಮಗೂ ಕೊಡಲ್ಪಡುವುದು; ಅದುಮಿ, ಅಲ್ಲಾಡಿಸಿ, ತುಂಬಿತುಳುಕುವಂತೆ, ಅಳೆದು ನಿಮ್ಮ ಸೆರಿಗಿಗೆ ಹಾಕುವರು. ನೀವು ಅಳೆಯುವ ಅಳತೆಯಿಂದಲೇ ನಿಮಗೂ ಅಳೆದುಕೊಡುವರು” ಅಂದನು.

ಇಂದಿನ ಸಂತರು

ಸಾಮಾನ್ಯ ರೋಮನ್ ಪಂಚಾಂಗ; ಬಿಷಪರ ಸಮ್ಮೇಳನವು ಕೆಲವು ಹಬ್ಬಗಳನ್ನು (ಪ್ರಭುವಿನ ಪ್ರಕಟನೆ, ಸ್ವರ್ಗಾರೋಹಣ, ಕ್ರಿಸ್ತನ ದೇಹ ಮತ್ತು ರಕ್ತ) ಭಾನುವಾರಕ್ಕೆ ಸರಿಸಬಹುದು ಅಥವಾ ತನ್ನದೇ ಹಬ್ಬಗಳನ್ನು ಸೇರಿಸಬಹುದು. ವಾಚನ ಸಂಗ್ರಹ: ಭಾನುವಾರದ ಚಕ್ರ B, ವಾರದ ದಿನಗಳ ವರ್ಷ I.

ಮೂಲಗಳು: ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ · © 2017, 2019 Bridge Connectivity Solutions, CC BY-SA 4.0; changed: footnotes, headings and the letters over Psalm 119 left out, verses in the app's numbering. · ಮೂಲಗಳು ಮತ್ತು ಹಕ್ಕುಗಳು