ಮುಖಪುಟ › ದೈನಂದಿನ ಬೈಬಲ್ ವಾಚನಗಳು › ಸೆಪ್ಟೆಂಬರ್ 2027 › 9 ಸೆಪ್ಟೆಂಬರ್
ಆರ್ಥೊಡಾಕ್ಸ್ ಪಂಚಾಂಗ · ಆಗಸ್ಟ್ 27 (ಹಳೆಯ ಪದ್ಧತಿ)
ಆರ್ಥೊಡಾಕ್ಸ್ ದೈನಂದಿನ ವಾಚನಗಳು — 9 ಸೆಪ್ಟೆಂಬರ್ 2027
ಗುರುವಾರ · ಪಂಚಾಶತ್ತಮದ ನಂತರದ 12ನೇ ವಾರ · ಸ್ವರ 2
ಹಬ್ಬಗಳು ಮತ್ತು ಸಂತರು
Venerable Pœmen the Great († c. 450)
ಉಪವಾಸ
ಉಪವಾಸವಿಲ್ಲ
ಇದು ಮಠದ ನಿಯಮವನ್ನು ಅನುಸರಿಸುತ್ತದೆ. ಸಭೆಯಲ್ಲಿ ಉಪವಾಸದ ಪ್ರಮಾಣವನ್ನು ಆರೋಗ್ಯ, ವಯಸ್ಸು ಮತ್ತು ಸಂದರ್ಭಗಳಿಗೆ ಅನುಗುಣವಾಗಿ ಪಾಪನಿವೇದನೆಯ ಗುರುವಿನೊಂದಿಗೆ ಸೇರಿ ನಿರ್ಧರಿಸಲಾಗುತ್ತದೆ.
ದಿನದ ವಾಚನಗಳು
ಪತ್ರಿಕೆ
1ಪ್ರಿಯರೇ, ಈ ವಾಗ್ದಾನಗಳು ನಮಗಿರುವುದರಿಂದ, ನಾವು ದೇಹಾತ್ಮಗಳ ಕಲ್ಮಷವನ್ನು ತೊಲಗಿಸಿ ನಮ್ಮನ್ನು ಶುಚಿಮಾಡಿಕೊಂಡು ದೇವರ ಭಯದಿಂದ ಕೂಡಿದವರಾಗಿ ಪವಿತ್ರತೆಯ ಸಂಪೂರ್ಣತೆಗೆ ಪ್ರಯತ್ನಿಸೋಣ. 2ನಿಮ್ಮ ಹೃದಯಗಳಲ್ಲಿ ನಮಗೆ ಸ್ಥಳ ಕೊಡಿರಿ; ನಿಮ್ಮಲ್ಲಿ ಯಾರಿಗೂ ನಾವು ಅನ್ಯಾಯ ಮಾಡಲಿಲ್ಲ, ಯಾರಿಗೂ ಹಾನಿಯುಂಟುಮಾಡಿಲ್ಲ, ಯಾರನ್ನೂ ವಂಚಿಸಲಿಲ್ಲ. 3ನಿಮ್ಮ ಮೇಲೆ ತಪ್ಪುಹೊರಿಸಬೇಕೆಂದು ನಾನು ಇದನ್ನು ಹೇಳುತ್ತಿಲ್ಲ; ನಿಮ್ಮ ಜೊತೆ ಸಾಯುವುದಕ್ಕೂ, ಬದುಕುವುದಕ್ಕೂ ಎನ್ನುವಷ್ಟರ ಮಟ್ಟಿಗೆ ನೀವು ನಮ್ಮ ಹೃದಯದಲ್ಲಿದ್ದೀರೆಂದು ನಾನು ಮೊದಲೇ ಹೇಳಿದ್ದೆನಲ್ಲಾ. 4ನಿಮ್ಮಲ್ಲಿ ನನಗೆ ಬಹಳ ಭರವಸೆ ಉಂಟು, ಗಾಢವಾದ ಅಭಿಮಾನವುಂಟು. ನಾನು ಎಲ್ಲಾ ಸಂಕಟಗಳಲ್ಲಿಯೂ ಎದೆಗುಂದದೆ ಆನಂದಭರಿತನಾಗಿದ್ದೇನೆ. 5ನಾವು ಮಕೆದೋನ್ಯಕ್ಕೆ ಬಂದ ಮೇಲೂ ನಮ್ಮ ದೇಹಕ್ಕೆ ನೆಮ್ಮದಿ ಇರಲಿಲ್ಲ, ಬದಲಾಗಿ ಎಲ್ಲಾ ವಿಷಯಗಳಲ್ಲಿಯೂ ನಮಗೆ ತೊಂದರೆಗಳಿದ್ದವು. ಹೊರಗೆ ಜಗಳ, ಒಳಗೆ ಭಯ 6ಆದರೆ ದೀನಾವಸ್ಥೆಯಲ್ಲಿರುವವರನ್ನು ಸಂತೈಸುವ ದೇವರು ತೀತನನ್ನು ಕಳುಹಿಸುವ ಮೂಲಕ ನಮ್ಮನ್ನು ಸಂತೈಸಿದನು. 7ಅವನ ಬರುವಿಕೆಯಿಂದ ಮಾತ್ರವಲ್ಲದೆ ನಿಮ್ಮಿಂದ ಅವನು ಬಹಳ ಸಮಾಧಾನವನ್ನು ಹೊಂದಿದೆನೆಂದೂ, ನಿಮ್ಮ ಹಂಬಲ, ನಿಮ್ಮ ದುಃಖ, ನನ್ನ ಮೇಲಿರುವ ನಿಮ್ಮ ಕಾಳಜಿ; ಇವುಗಳನ್ನು ನಮಗೆ ತಿಳಿಸಿದಾಗ ನಾನು ಇನ್ನೂ ಹೆಚ್ಚಾಗಿ ಸಂತೋಷಪಟ್ಟೆನು. 8ನಾನು ಬರೆದ ಪತ್ರದಿಂದ ನಿಮಗೆ ದುಃಖವಾಗಿದ್ದರೂ ನನಗೆ ವಿಷಾದವಿಲ್ಲ, ಅದು ನಿಮ್ಮನ್ನು ಸ್ವಲ್ಪ ಸಮಯ ದುಃಖಪಡಿಸಿತೆಂದು ನಾನು ಮೊದಲು ಪಶ್ಚಾತ್ತಾಪ ಪಟ್ಟಿದ್ದರೂ ಈಗ ಸಂತೋಷಪಡುತ್ತೇನೆ. 9ನಿಮಗೆ ಯಾತನೆಯಾಯಿತೆಂದು ನಾನು ಈಗ ಸಂತೋಷಪಡದೆ ನೀವು ದುಃಖಪಟ್ಟು ಪಶ್ಚಾತ್ತಾಪಪಟ್ಟು ಮಾನಸಾಂತರ ಹೊಂದಿದ್ದಕ್ಕಾಗಿ ಸಂತೋಷಪಡುತ್ತೇನೆ. ನೀವು ದೇವರ ಚಿತ್ತಾನುಸಾರವಾಗಿ ದುಃಖಿಸಿದ್ದರಿಂದ ನಮ್ಮಿಂದಾಗಿ ಯಾವುದರಲ್ಲಿಯೂ ನಿಮಗೆ ನಷ್ಟವಾಗಲಿಲ್ಲವಲ್ಲಾ. 10ದೇವರ ಚಿತ್ತಾನುಸಾರವಾಗಿರುವ ದುಃಖವು ರಕ್ಷಣೆಗೆ ಕಾರಣವಾಗುವ ಮಾನಸಾಂತರವನ್ನುಂಟು ಮಾಡುತ್ತದೆ, ಆ ಮಾನಸಾಂತರದಲ್ಲಿ ಪಶ್ಚಾತ್ತಾಪಕ್ಕೆ ಆಸ್ಪದವಿಲ್ಲ; ಆದರೆ ಲೋಕದವರಿಗಿರುವಂಥ ದುಃಖವು ಮರಣವನ್ನುಂಟುಮಾಡುತ್ತದೆ.
ಸುವಾರ್ತೆ
29ಆ ಮೇಲೆ ಅವರು ಸಭಾಮಂದಿರದಿಂದ ಹೊರಟು ಯಾಕೋಬ ಯೋಹಾನರ ಸಂಗಡ ಸೀಮೋನ ಅಂದ್ರೆಯರ ಮನೆಗೆ ಹೋದರು. 30ಅಲ್ಲಿ ಸೀಮೋನನ ಅತ್ತೆ ಜ್ವರದಿಂದ ಮಲಗಿರಲಾಗಿ ಅವರು ಆಕೆಯ ಸಂಗತಿಯನ್ನು ಆತನಿಗೆ ತಿಳಿಸಿದರು. 31ಆತನು ಹತ್ತಿರಕ್ಕೆ ಬಂದು ಆಕೆಯ ಕೈಯನ್ನು ಹಿಡಿದು ಎಬ್ಬಿಸಲು ಜ್ವರವು ಆಕೆಯನ್ನು ಬಿಟ್ಟುಹೋಯಿತು; ಆಕೆಯು ಅವರಿಗೆ ಉಪಚಾರಮಾಡಿದಳು. 32ಸಂಜೆಯಾಗಿ ಹೊತ್ತು ಮುಳುಗಿದ ಮೇಲೆ ಜನರು ಅಸ್ವಸ್ಥರಾದವರನ್ನೂ, ದೆವ್ವಹಿಡಿದವರನ್ನೂ ಆತನ ಬಳಿಗೆ ಕರತಂದರು. 33ಊರಿನವರೆಲ್ಲಾ ಬಾಗಿಲಿನ ಮುಂದೆ ಒಟ್ಟುಗೂಡಿದ್ದರು. 34ಆಗ ಆತನು ನಾನಾ ರೀತಿಯ ರೋಗಗಳಿಂದ ಅಸ್ವಸ್ಥರಾಗಿದ್ದ ಬಹು ಜನರನ್ನು ಸ್ವಸ್ಥಮಾಡಿ ಅನೇಕ ದೆವ್ವಗಳನ್ನು ಬಿಡಿಸಿದನು. ಆದರೆ ಅವುಗಳಿಗೆ ತಾನು ಇಂಥವನೆಂದು ತಿಳಿದಿದ್ದರಿಂದ ಆತನು ಅವುಗಳನ್ನು ಮಾತನಾಡಗೊಡಿಸಲಿಲ್ಲ. 35ಮುಂಜಾನೆ ಇನ್ನೂ ಮೊಬ್ಬಿರುವಾಗ ಆತನು ಎದ್ದು ನಿರ್ಜನ ಸ್ಥಳಕ್ಕೆ ಹೋಗಿ ಪ್ರಾರ್ಥನೆಮಾಡುತ್ತಿದ್ದನು.
ದಿನಾಂಕಗಳು ರಷ್ಯನ್ ಸಭೆಯ ಜೂಲಿಯನ್ ಪಂಚಾಂಗದ ಪ್ರಕಾರ ಇವೆ (ಸರ್ಬಿಯನ್ ಮತ್ತು ಜಾರ್ಜಿಯನ್ ಸಭೆಗಳು ಮತ್ತು ಅಥೋಸ್ ಪರ್ವತದಂತೆ): ಸಭೆಯ ಪಂಚಾಂಗದ 27 ಆಗಸ್ಟ್ ಎಂದರೆ ನಾಗರಿಕ ಪಂಚಾಂಗದ 9 ಸೆಪ್ಟೆಂಬರ್. ಹೊಸ ಪಂಚಾಂಗದ ಸಭೆಗಳು (ಗ್ರೀಸ್, ರೊಮೇನಿಯಾ, ಬಲ್ಗೇರಿಯಾ, ಉಕ್ರೇನ್…) ನಿಗದಿತ ದಿನಾಂಕದ ಹಬ್ಬಗಳನ್ನೂ ಸಂತರನ್ನೂ ಅದೇ ನಾಗರಿಕ ದಿನಾಂಕದಂದು, 13 ದಿನಗಳ ಮುಂಚೆ, ಆಚರಿಸುತ್ತವೆ, ಮತ್ತು ಅವುಗಳ ಕೆಲವು ವಾಚನಗಳು ಬೇರೆಯಾಗಿವೆ; ಈಸ್ಟರ್ ಮತ್ತು ಅದನ್ನು ಅವಲಂಬಿಸಿರುವ ದಿನಗಳು ಒಂದೇ ಆಗಿವೆ.
ಮೂಲಗಳು: ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ · © 2017, 2019 Bridge Connectivity Solutions, CC BY-SA 4.0; changed: footnotes, headings and the letters over Psalm 119 left out, verses in the app's numbering. · ಮೂಲಗಳು ಮತ್ತು ಹಕ್ಕುಗಳು