ಮುಖಪುಟ › ದೈನಂದಿನ ಬೈಬಲ್ ವಾಚನಗಳು › ಸೆಪ್ಟೆಂಬರ್ 2027 › 10 ಸೆಪ್ಟೆಂಬರ್
ಕ್ಯಾಥೊಲಿಕ್ ಪಂಚಾಂಗ
ದೈನಂದಿನ ಬೈಬಲ್ ವಾಚನಗಳು (ಕಥೋಲಿಕ) — 10 ಸೆಪ್ಟೆಂಬರ್ 2027
ಶುಕ್ರವಾರ · ಸಾಮಾನ್ಯ ಕಾಲದ 23ನೇ ವಾರ
ಹಬ್ಬಗಳು ಮತ್ತು ಸಂತರು
ಸಾಮಾನ್ಯ ಕಾಲದ 23ನೇ ವಾರದ ಶುಕ್ರವಾರ
ವಾರದ ದಿನ · ಆರಾಧನಾ ಬಣ್ಣ: ಹಸಿರು
ಉಪವಾಸ ಮತ್ತು ಪ್ರಾಯಶ್ಚಿತ್ತ
ಪ್ರಾಯಶ್ಚಿತ್ತದ ದಿನ
ಪ್ರತಿ ಶುಕ್ರವಾರವೂ ಪ್ರಾಯಶ್ಚಿತ್ತದ ದಿನ; ಅದನ್ನು ಹೇಗೆ ಆಚರಿಸಬೇಕು ಎಂಬುದನ್ನು ಪ್ರತಿಯೊಂದು ಬಿಷಪರ ಸಮ್ಮೇಳನ ನಿರ್ಧರಿಸುತ್ತದೆ: ಮಾಂಸ ವರ್ಜನೆ ಅಥವಾ ಬೇರೊಂದು ಪ್ರಾಯಶ್ಚಿತ್ತ ಕಾರ್ಯ. ಉಪವಾಸ 18 ರಿಂದ 59 ವರ್ಷದವರಿಗೆ, ಮಾಂಸ ವರ್ಜನೆ 14 ವರ್ಷದಿಂದ ಕಡ್ಡಾಯ.
ದಿನದ ವಾಚನಗಳು
ಮೊದಲನೆಯ ವಾಚನ
1ನಮ್ಮ ರಕ್ಷಕನಾದ ದೇವರ ನಮ್ಮ ನಿರೀಕ್ಷೆಗೆ ಆಧಾರನಾಗಿರುವ ಕ್ರಿಸ್ತ ಯೇಸುವಿನ ಆಜ್ಞೆಯ ಮೇರೆಗೆ ನೇಮಿಸಲ್ಪಟ್ಟ ಕ್ರಿಸ್ತ ಯೇಸುವಿನ ಅಪೊಸ್ತಲನಾದ ಪೌಲನು 2ನಂಬಿಕೆಯ ವಿಷಯದಲ್ಲಿ ನಿಜಕುಮಾರನಾಗಿರುವ ತಿಮೊಥೆಯನಿಗೆ ಬರೆಯುವುದೇನೆಂದರೆ, ತಂದೆಯಾದ ದೇವರಿಂದಲೂ ನಮ್ಮ ಕರ್ತನಾದ ಕ್ರಿಸ್ತ ಯೇಸುವಿನಿಂದಲೂ ನಿನಗೆ ಕೃಪೆಯೂ ಕರುಣೆಯೂ ಶಾಂತಿಯೂ ಉಂಟಾಗಲಿ. 12ನನಗೆ ಬಲವನ್ನು ದಯಪಾಲಿಸಿದವನು ನಮ್ಮ ಕರ್ತನಾದ ಯೇಸು ಕ್ರಿಸ್ತನೇ. ಅದಕ್ಕಾಗಿ ನಾನು ಕೃತಜ್ಞತೆಯುಳ್ಳವನಾಗಿದ್ದೇನೆ. ಮೊದಲು ದೂಷಕನೂ, ಹಿಂಸಕನೂ, ಕೇಡುಮಾಡುವವನೂ ಆಗಿದ್ದ ನನ್ನನ್ನು ಆತನು ನಂಬಿಗಸ್ತನೆಂದು ಎಣಿಸಿ, ತನ್ನ ಸೇವೆಗೆ ನೇಮಿಸಿಕೊಂಡದ್ದಕ್ಕಾಗಿ ನಾನು ಆತನಿಗೆ ಸ್ತೋತ್ರಮಾಡುತ್ತೇನೆ. ನಾನು ಅಜ್ಞಾನಿಯಾಗಿ ತಿಳಿಯದೆ ಅಪನಂಬಿಕೆಯಲ್ಲಿ ಆ ರೀತಿ ನಡೆದುಕೊಂಡದ್ದರಿಂದ ನನ್ನ ಮೇಲೆ ಆತನಿಗೆ ಕರುಣೆ ಉಂಟಾಯಿತು; 14ಆದರೆ ನಮ್ಮ ಕರ್ತನ ಕೃಪೆಯು ಅತ್ಯಧಿಕವಾಗಿದ್ದು ಕ್ರಿಸ್ತಯೇಸುವಿನಲ್ಲಿರುವ ನಂಬಿಕೆಯನ್ನೂ ಪ್ರೀತಿಯನ್ನೂ ನನ್ನಲ್ಲಿ ಉಕ್ಕಿಸಿತ್ತು.
ಪ್ರತಿವಚನ ಕೀರ್ತನೆ
1ದಾವೀದನ ಕಾವ್ಯ. ದೇವರೇ, ನಾನು ನಿನ್ನ ಶರಣಾಗತನು; ನನ್ನನ್ನು ಕಾಪಾಡು. 2ನಾನು ಯೆಹೋವನನ್ನು ಕುರಿತು, “ನೀನೇ ನನ್ನ ಒಡೆಯನು; ನನ್ನ ಸುಖವು ನಿನ್ನಲ್ಲಿಯೇ ಹೊರತು ಬೇರೆ ಇಲ್ಲ” ಎಂದು ಹೇಳುವೆನು. 5ನನ್ನ ಪಾಲೂ, ನನ್ನ ಪಾನವೂ ಯೆಹೋವನೇ, ನೀನೇ ನನ್ನ ಸ್ವತ್ತನ್ನು ಭದ್ರಗೊಳಿಸುತ್ತೀ. 7ಯೆಹೋವನು ನನಗೆ ಆಲೋಚನೆಯನ್ನು ಹೇಳಿಕೊಡುತ್ತಾನೆ; ನಾನು ಆತನನ್ನು ಕೊಂಡಾಡುವೆನು. ರಾತ್ರಿಯ ಸಮಯಗಳಲ್ಲಿ ನನ್ನ ಅಂತರಾತ್ಮವು ನನ್ನನ್ನು ಬೋಧಿಸುತ್ತದೆ. 8ನಾನು ಯೆಹೋವನನ್ನು ಯಾವಾಗಲೂ ನನ್ನೆದುರಿನಲ್ಲಿಯೇ ಇಟ್ಟುಕೊಂಡಿದ್ದೇನೆ; ಆತನು ನನ್ನ ಬಲಗಡೆಯಲ್ಲಿ ಇರುವುದರಿಂದ ನಾನು ಎಂದಿಗೂ ಕದಲುವುದಿಲ್ಲ. 11ನೀನು ನನಗೆ ಜೀವಮಾರ್ಗವನ್ನು ತಿಳಿಯಪಡಿಸುವಿ; ನಿನ್ನ ಸಮ್ಮುಖದಲ್ಲಿ ಪರಿಪೂರ್ಣ ಸಂತೋಷವಿದೆ; ನಿನ್ನ ಬಲಗೈಯಲ್ಲಿ ಶಾಶ್ವತ ಭಾಗ್ಯವಿದೆ.
ಸುವಾರ್ತೆ
39ಇದಲ್ಲದೆ ಆತನು ಅವರಿಗೆ ಒಂದು ಸಾಮ್ಯವನ್ನು ಹೇಳಿದನು. ಅದೇನೆಂದರೆ, “ಕುರುಡನು ಕುರುಡನಿಗೆ ದಾರಿ ತೋರಿಸುವುದಕ್ಕಾದೀತೇ? ಅವರಿಬ್ಬರೂ ಹಳ್ಳದಲ್ಲಿ ಬೀಳುವರಲ್ಲವೆ. 40ಗುರುವಿಗಿಂತ ಶಿಷ್ಯನು ದೊಡ್ಡವನಲ್ಲ; ಆದರೆ ಪೂರ್ಣವಾಗಿ ಕಲಿತವನಾದ ಪ್ರತಿಯೊಬ್ಬನು ತನ್ನ ಗುರುವಿನಂತಾಗಿರುವನು. 41“ಇದಲ್ಲದೆ ನೀನು ನಿನ್ನ ಕಣ್ಣಿನಲ್ಲಿರುವ ತೊಲೆಯನ್ನು ಯೋಚಿಸದೆ ನಿನ್ನ ಸಹೋದರನ ಕಣ್ಣಿನಲ್ಲಿರುವ ಅಣುವನ್ನು ಗಮನಿಸುವುದೇಕೆ? 42ಇಲ್ಲವೆ ನಿನ್ನ ಕಣ್ಣಿನಲ್ಲಿರುವ ತೊಲೆಯನ್ನು ನೀನು ನೋಡದೆ ನಿನ್ನ ಸಹೋದರನಿಗೆ, ‘ಅಣ್ಣಾ, ನಿನ್ನ ಕಣ್ಣಿನೊಳಗಿನ ಅಣುವನ್ನು ತೆಗೆಯುತ್ತೇನೆ ಬಾ’ ಎಂದು ಹೇಳುವುದಕ್ಕೆ ಹೇಗಾದೀತು? ಕಪಟಿಯೇ, ಮೊದಲು ನಿನ್ನ ಕಣ್ಣಿನೊಳಗಿನಿಂದ ತೊಲೆಯನ್ನು ತೆಗೆದುಹಾಕಿಕೋ, ಆ ಮೇಲೆ ನಿನ್ನ ಸಹೋದರನ ಕಣ್ಣಿನೊಳಗಿನ ಅಣುವನ್ನು ತೆಗೆಯುವುದಕ್ಕೆ ಚೆನ್ನಾಗಿ ಕಾಣಿಸುವುದು.
ಸಾಮಾನ್ಯ ರೋಮನ್ ಪಂಚಾಂಗ; ಬಿಷಪರ ಸಮ್ಮೇಳನವು ಕೆಲವು ಹಬ್ಬಗಳನ್ನು (ಪ್ರಭುವಿನ ಪ್ರಕಟನೆ, ಸ್ವರ್ಗಾರೋಹಣ, ಕ್ರಿಸ್ತನ ದೇಹ ಮತ್ತು ರಕ್ತ) ಭಾನುವಾರಕ್ಕೆ ಸರಿಸಬಹುದು ಅಥವಾ ತನ್ನದೇ ಹಬ್ಬಗಳನ್ನು ಸೇರಿಸಬಹುದು. ವಾಚನ ಸಂಗ್ರಹ: ಭಾನುವಾರದ ಚಕ್ರ B, ವಾರದ ದಿನಗಳ ವರ್ಷ I.
ಮೂಲಗಳು: ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ · © 2017, 2019 Bridge Connectivity Solutions, CC BY-SA 4.0; changed: footnotes, headings and the letters over Psalm 119 left out, verses in the app's numbering. · ಮೂಲಗಳು ಮತ್ತು ಹಕ್ಕುಗಳು