ಮುಖಪುಟ › ದೈನಂದಿನ ಬೈಬಲ್ ವಾಚನಗಳು › ಸೆಪ್ಟೆಂಬರ್ 2027 › 10 ಸೆಪ್ಟೆಂಬರ್
ಆರ್ಥೊಡಾಕ್ಸ್ ಪಂಚಾಂಗ · ಆಗಸ್ಟ್ 28 (ಹಳೆಯ ಪದ್ಧತಿ)
ಆರ್ಥೊಡಾಕ್ಸ್ ದೈನಂದಿನ ವಾಚನಗಳು — 10 ಸೆಪ್ಟೆಂಬರ್ 2027
ಶುಕ್ರವಾರ · ಪಂಚಾಶತ್ತಮದ ನಂತರದ 12ನೇ ವಾರ · ಸ್ವರ 2
ಹಬ್ಬಗಳು ಮತ್ತು ಸಂತರು
Venerable Moses the Black of Scete († c. 400)
ಉಪವಾಸದ ದಿನ
ಉಪವಾಸ: ಎಣ್ಣೆಯೊಂದಿಗೆ
ಇದು ಮಠದ ನಿಯಮವನ್ನು ಅನುಸರಿಸುತ್ತದೆ. ಸಭೆಯಲ್ಲಿ ಉಪವಾಸದ ಪ್ರಮಾಣವನ್ನು ಆರೋಗ್ಯ, ವಯಸ್ಸು ಮತ್ತು ಸಂದರ್ಭಗಳಿಗೆ ಅನುಗುಣವಾಗಿ ಪಾಪನಿವೇದನೆಯ ಗುರುವಿನೊಂದಿಗೆ ಸೇರಿ ನಿರ್ಧರಿಸಲಾಗುತ್ತದೆ.
ದಿನದ ವಾಚನಗಳು
ಸಂಧ್ಯಾ ಪ್ರಾರ್ಥನೆ: ವಾಚನ
ಈ ಅನುವಾದದಲ್ಲಿ ಇಲ್ಲ
ಸಂಧ್ಯಾ ಪ್ರಾರ್ಥನೆ: ವಾಚನ
ಈ ಅನುವಾದದಲ್ಲಿ ಇಲ್ಲ
ಸಂಧ್ಯಾ ಪ್ರಾರ್ಥನೆ: ವಾಚನ
ಈ ಅನುವಾದದಲ್ಲಿ ಇಲ್ಲ
ಉದಯಕಾಲದ ಪ್ರಾರ್ಥನೆ: ಸುವಾರ್ತೆ
27ನನ್ನ ತಂದೆಯು ಎಲ್ಲವನ್ನು ನನಗೆ ಒಪ್ಪಿಸಿದ್ದಾನೆ. ತಂದೆಯ ಹೊರತು ಇನ್ನಾವನೂ ಮಗನನ್ನು ತಿಳಿದವನಲ್ಲ. ಮಗನ ಹೊರತು ಇನ್ನಾವನೂ ತಂದೆಯನ್ನು ತಿಳಿದವನಲ್ಲ. ಮತ್ತು ಮಗನು ತಂದೆಯನ್ನು ಯಾರಿಗೆ ಪ್ರಕಟಪಡಿಸುವುದಕ್ಕೆ ಇಚ್ಛಿಸುತ್ತಾನೋ ಅವನು ಆತನನ್ನು ತಿಳಿದವನಾಗಿದ್ದಾನೆ. 28“ಎಲೈ ಕಷ್ಟಪಡುವವರೇ, ಹೊರೆಹೊತ್ತವರೇ, ನೀವೆಲ್ಲರೂ ನನ್ನ ಬಳಿಗೆ ಬನ್ನಿರಿ ನಾನು ನಿಮಗೆ ವಿಶ್ರಾಂತಿ ಕೊಡುವೆನು. 29ನಾನು ಸಾತ್ವಿಕನೂ ದೀನಹೃದಯನೂ ಆಗಿರುವುದರಿಂದ ನನ್ನ ನೊಗವನ್ನು ನಿಮ್ಮ ಮೇಲೆ ತೆಗೆದುಕೊಂಡು ನನ್ನಿಂದ ಕಲಿತುಕೊಳ್ಳಿರಿ, ಆಗ ನಿಮ್ಮ ಆತ್ಮಗಳಿಗೆ ವಿಶ್ರಾಂತಿ ಸಿಕ್ಕುವುದು. 30ಏಕೆಂದರೆ ನನ್ನ ನೊಗವು ಮೃದುವಾದದ್ದು, ನನ್ನ ಹೊರೆಯು ಹಗುರವಾದದ್ದು ಆಗಿದೆ” ಅಂದನು.
ಪತ್ರಿಕೆ
10ದೇವರ ಚಿತ್ತಾನುಸಾರವಾಗಿರುವ ದುಃಖವು ರಕ್ಷಣೆಗೆ ಕಾರಣವಾಗುವ ಮಾನಸಾಂತರವನ್ನುಂಟು ಮಾಡುತ್ತದೆ, ಆ ಮಾನಸಾಂತರದಲ್ಲಿ ಪಶ್ಚಾತ್ತಾಪಕ್ಕೆ ಆಸ್ಪದವಿಲ್ಲ; ಆದರೆ ಲೋಕದವರಿಗಿರುವಂಥ ದುಃಖವು ಮರಣವನ್ನುಂಟುಮಾಡುತ್ತದೆ. 11ನೀವು ದೇವರ ಚಿತ್ತಾನುಸಾರವಾಗಿ ಪಟ್ಟ ದುಃಖವು ನಿಮ್ಮಲ್ಲಿ ಎಂಥ ಶ್ರದ್ದೆಯನ್ನು ಉಂಟುಮಾಡಿತು ನೋಡಿರಿ. ನೀವು ನಿರ್ದೋಷಿಗಳೆಂದು ಸಾಬೀತುಪಡಿಸುವುದಕ್ಕೆ ಎಂಥ ಪ್ರಯಾಸ, ಎಂಥ ರೋಷ; ಎಂಥ ಭಯ; ಎಂಥ ಹಂಬಲ; ಎಂಥ ಉತ್ಸಾಹ; ತಪ್ಪಿತಸ್ಥರನ್ನು ಶಿಕ್ಷಿಸಲು ಎಂಥ ಬಯಕೆ. ನೀವು ಆ ಕಾರ್ಯದಲ್ಲಿ ನಿರ್ದೋಷಿಗಳೆಂದು ಎಲ್ಲಾ ವಿಧದಲ್ಲಿಯೂ ತೋರಿಸಿದ್ದೀರಿ. 12ನಾನು ನಿಮಗೆ ಬರೆದದ್ದು ತಪ್ಪುಮಾಡಿದವನಿಗೆ ದಂಡನೆಯಾಗಲಿ ಎಂದಲ್ಲ, ಆ ತಪ್ಪಿನಿಂದ ನೊಂದವನಿಗೆ ನ್ಯಾಯ ದೊರಕಲೆಂದೂ ಅಲ್ಲ; ನಮ್ಮ ಬಗ್ಗೆ ನಿಮಗಿರುವ ಅಕ್ಕರೆ, ಆಸಕ್ತಿಗಳು ದೇವರ ಸನ್ನಿಧಿಯಲ್ಲಿ ನಿಮಗೆ ವ್ಯಕ್ತವಾಗಲೆಂದೇ ಬರೆದೆನು. ಆದ್ದರಿಂದಲೇ ನಮ್ಮ ಮನಸ್ಸಿಗೆ ನೆಮ್ಮದಿ ಉಂಟಾಗಿದೆ. 13ಅಷ್ಟೇ ಅಲ್ಲ, ನೀವೆಲ್ಲರೂ ತೀತನ ಮನಸ್ಸನ್ನು ತಣಿಸಿದ್ದರಿಂದ ಆತನ ಸಂತೋಷವನ್ನು ಕಂಡು ನಾವು ಮತ್ತಷ್ಟು ತೃಪ್ತರಾಗಿದ್ದೇವೆ. 14ಯಾಕೆಂದರೆ ನಾನು ಅವನ ಮುಂದೆ ನಿಮ್ಮನ್ನು ಹೊಗಳಿದ್ದಕ್ಕಾಗಿ ನಾನು ನಾಚಿಕೆಪಡಬೇಕಾಗಿ ಬರಲಿಲ್ಲ. ಬದಲಾಗಿ ನಾವು ನಿಮಗೆ ಹೇಳಿದ ಎಲ್ಲಾ ಮಾತುಗಳು ಹೇಗೆ ಸತ್ಯವಾಗಿದ್ದವೋ ಹಾಗೆಯೇ ನಾವು ತೀತನ ಮುಂದೆ ಆಡಿದ ಹೊಗಳಿಕೆಯ ಮಾತುಗಳೆಲ್ಲವೂ ಸತ್ಯವೆಂದು ಕಂಡುಬಂದವು. 15ನೀವು ವಿಧೇಯತೆಯಲ್ಲಿ ಭಯಭಕ್ತಿಯಿಂದ ಅವನನ್ನು ಸ್ವೀಕರಿಸಿಕೊಂಡಿದ್ದನ್ನು ಜ್ಞಾಪಕಮಾಡಿಕೊಳ್ಳುವಾಗ ನಿಮ್ಮ ಮೇಲೆ ಅವನಿಗಿರುವ ಪ್ರೀತಿ ಹೆಚ್ಚಾಗಿದೆ. 16ನಿಮ್ಮ ಮೇಲೆ ನನಗೆ ಎಲ್ಲಾ ವಿಧಗಳಲ್ಲಿಯೂ ಪೂರ್ಣ ಭರವಸೆ ಇರುವುದರಿಂದ ನಾನು ಸಂತೋಷಪಡುತ್ತೇನೆ.
ಪತ್ರಿಕೆ (ಶನಿವಾರಕ್ಕೆ)
26ಸಹೋದರರೇ, ದೇವರು ನಿಮ್ಮನ್ನು ಕರೆದಾಗ ನೀವು ಹೇಗಿದ್ದೀರೆಂದು ಆಲೋಚಿಸಿರಿ. ಮನುಷ್ಯರ ದೃಷ್ಟಿಯಲ್ಲಿ ನಿಮ್ಮೊಳಗೆ ಜ್ಞಾನಿಗಳೂ ಹೆಚ್ಚಿನ ಸಂಖ್ಯೆಯಲ್ಲಿಲ್ಲ, ಪ್ರಬಲರೂ ಅನೇಕರಿರಲಿಲ್ಲ, ಕುಲೀನರೂ ಅನೇಕರಿರಲಿಲ್ಲ. 27ದೇವರು ಜ್ಞಾನಿಗಳನ್ನು ನಾಚಿಕೆಪಡಿಸುವುದಕ್ಕಾಗಿ ಈ ಲೋಕದ ಬುದ್ಧಿಹೀನರನ್ನು ಆರಿಸಿಕೊಂಡನು; ದೇವರು ಬಲಿಷ್ಠರನ್ನು ನಾಚಿಕೆಪಡಿಸುವುದಕ್ಕಾಗಿ ಈ ಲೋಕದ ಅಶಕ್ತರನ್ನು, ಬಲಹೀನರನ್ನು ಆರಿಸಿಕೊಂಡನು. 28ದೇವರು ಈ ಲೋಕದಲ್ಲಿ ಕೀಳಾದವರನ್ನೂ ಹಾಗೂ ಅಸಡ್ಡೆಯಾದವರನ್ನೂ ಆರಿಸಿಕೊಂಡದ್ದಲ್ಲದೆ ಗಣ್ಯರನ್ನು ಇಲ್ಲದಂತೆ ಮಾಡುವುದಕ್ಕಾಗಿ ಗಣನೆಗೆ ಬಾರದವರನ್ನು, ನಿಂದಿಸಲ್ಪಟ್ಟವರನ್ನು ಆರಿಸಿಕೊಂಡಿದ್ದಾನೆ. 29ಹೀಗಿರಲು ದೇವರ ಮುಂದೆ ಹೊಗಳಿಕೊಳ್ಳುವುದಕ್ಕೆ ಯಾರಿಗೂ ಆಸ್ಪದವಿಲ್ಲ.
ಪತ್ರಿಕೆ (ಸಂತ ಯೋಬ)
22ಆದರೆ ದೇವರಾತ್ಮನಿಂದ ಉಂಟಾಗುವ ಫಲವೇನಂದರೆ, ಪ್ರೀತಿ, ಸಂತೋಷ, ಸಮಾಧಾನ, ದೀರ್ಘಶಾಂತಿ, ದಯೆ, ಪರೋಪಕಾರ, ನಂಬಿಕೆ, 23ಸಾಧುತ್ವ, ಶಮೆದಮೆ ಇಂಥವುಗಳೇ. ಇವುಗಳಿಗೆ ವಿರುದ್ಧವಾಗಿ ಯಾವ ಧರ್ಮಶಾಸ್ತ್ರವೂ ಇಲ್ಲ. 24ಕ್ರಿಸ್ತ ಯೇಸುವಿನಲ್ಲಿರುವವರು ತಮ್ಮ ಶರೀರಭಾವವನ್ನು ಅದರ ವಿಷಯಾಭಿಲಾಷೆ, ಸ್ವೇಚ್ಛಾಭಿಲಾಷೆಗಳ ಸಹಿತವಾಗಿ ಶಿಲುಬೆಗೆ ಹಾಕಿದವರಾಗಿದ್ದಾರೆ. 25ನಾವು ಆತ್ಮನಿಂದ ಜೀವಿಸುತ್ತಿರಲಾಗಿ ಆತ್ಮನನ್ನನುಸರಿಸಿ ನಡೆಯೋಣ. 26ಅಹಂಕಾರಿಗಳೂ, ಒಬ್ಬರನ್ನೊಬ್ಬರು ಕೆಣಕುವವರೂ, ಒಬ್ಬರ ಮೇಲೊಬ್ಬರು ಮತ್ಸರವುಳ್ಳವರೂ ಆಗದೆ ಇರೋಣ. 6:1ಸಹೋದರರೇ, ನಿಮ್ಮಲ್ಲಿ ಯಾರಾದರೂ ಯಾವುದಾದರೂ ಪಾಪದಲ್ಲಿ ಸಿಕ್ಕಿಹಾಕಿಕೊಂಡಿದ್ದರೆ ಅಂಥವರನ್ನು ಆತ್ಮಭರಿತರಾದ ನೀವು ಶಾಂತಭಾವದಿಂದ ತಿದ್ದಿ ಸರಿಮಾಡಿರಿ. ನೀವಾದರೂ ಶೋಧನೆಗೆ ಒಳಗಾಗದಂತೆ ನಿಮ್ಮ ವಿಷಯದಲ್ಲಿ ಎಚ್ಚರಿಕೆಯಾಗಿರಿ. 2ಒಬ್ಬರು ಮತ್ತೊಬ್ಬರ ಭಾರವನ್ನು ಹೊತ್ತುಕೊಳ್ಳಲಿ, ಹೀಗೆ ಕ್ರಿಸ್ತನ ನೀತಿನಿಯಮಗಳನ್ನು ನೆರವೇರಿಸಿರಿ.
ಸುವಾರ್ತೆ
18ಯೋಹಾನನ ಶಿಷ್ಯರೂ ಫರಿಸಾಯರೂ ಉಪವಾಸ ಮಾಡುತ್ತಿದ್ದರು. ಅವರು ಆತನ ಬಳಿಗೆ ಬಂದು ಯೋಹಾನನ ಶಿಷ್ಯರೂ ಫರಿಸಾಯರೂ ಉಪವಾಸಮಾಡುತ್ತಾರಲ್ಲಾ? “ನಿನ್ನ ಶಿಷ್ಯರು ಏಕೆ ಉಪವಾಸಮಾಡುವುದಿಲ್ಲ?” ಎಂದು ಕೇಳಿದರು. 19ಅದಕ್ಕೆ ಯೇಸು ಅವರಿಗೆ, “ಮದುವೆಯ ಜನರು ತಮ್ಮ ಸಂಗಡ ಮದಲಿಂಗನು ಇರುವಲ್ಲಿ ಉಪವಾಸಮಾಡುವುದುಂಟೇ? ಮದಲಿಂಗನು ತಮ್ಮ ಸಂಗಡ ಇರುವ ತನಕ ಅವರು ಉಪವಾಸ ಮಾಡಲಾರರು. 20ಆದರೆ ಮದಲಿಂಗನನ್ನು ಅವರ ಬಳಿಯಿಂದ ತೆಗೆದುಕೊಂಡು ಹೋಗುವ ಕಾಲ ಬರುತ್ತದೆ. ಆ ಕಾಲದಲ್ಲಿ ಅವರು ಉಪವಾಸ ಮಾಡುವರು. 21“ಯಾರೂ ಹೊಸ ಬಟ್ಟೆಯ ತುಂಡನ್ನು ಹಳೆಯ ವಸ್ತ್ರಕ್ಕೆ ತ್ಯಾಪೆ ಹಚ್ಚುವುದಿಲ್ಲ. ಹಚ್ಚಿದರೆ ಆ ಹೊಸ ತ್ಯಾಪೆಯು ಹಳೆಯ ವಸ್ತ್ರವನ್ನು ಹಿಂಜುವುದರಿಂದ ಹರಕು ಹೆಚ್ಚಾಗುತ್ತದೆ. 22ಮತ್ತು ಹಳೆಯ ಬುದ್ದಲಿಗಳಲ್ಲಿ ಹೊಸ ದ್ರಾಕ್ಷಾರಸವನ್ನು ಯಾರೂ ಹಾಕಿಡುವುದಿಲ್ಲ, ಹಾಕಿದರೆ ಆ ದ್ರಾಕ್ಷಾರಸವು ಬುದ್ದಲಿಗಳನ್ನು ಒಡೆದು ದ್ರಾಕ್ಷಾರಸವು ಮತ್ತು ಬುದ್ದಲಿಗಳು ಎರಡೂ ನಾಶವಾಗುವವು. ಆದುದರಿಂದ ಹೊಸ ದ್ರಾಕ್ಷಾರಸವನ್ನು ಹೊಸ ಬುದ್ದಲಿಗಳಲ್ಲಿ ಹಾಕಿಡತಕ್ಕದ್ದು” ಎಂದು ಹೇಳಿದನು.
ಸುವಾರ್ತೆ (ಶನಿವಾರಕ್ಕೆ)
29ಅವರು ಯೆರಿಕೋವಿನಿಂದ, ಹೊರಟುಹೋಗುತ್ತಿರುವಾಗ ಜನರ ದೊಡ್ಡ ಗುಂಪು ಆತನನ್ನು ಹಿಂಬಾಲಿಸಿತು. 30ಆಗ ದಾರಿಯ ಮಗ್ಗುಲಲ್ಲಿ ಕುಳಿತಿದ್ದ ಕುರುಡರಿಬ್ಬರು ಯೇಸು ಈ ಮಾರ್ಗವಾಗಿ ಹೋಗುತ್ತಿದ್ದಾನೆಂದು ಕೇಳಿ, “ಕರ್ತನೇ, ದಾವೀದ ಕುಮಾರನೇ ನಮ್ಮನ್ನು ಕರುಣಿಸು” ಎಂದು ಕೂಗಿಕೊಂಡರು. 31ಆದರೆ ಆ ಗುಂಪಿನವರು, ಸುಮ್ಮನಿರಿ ಎಂದು ಅವರನ್ನು ಗದರಿಸಿದರು. ಅವರಾದರೋ, “ಕರ್ತನೇ, ದಾವೀದ ಕುಮಾರನೇ, ನಮ್ಮನ್ನು ಕರುಣಿಸು” ಎಂದು ಗಟ್ಟಿಯಾಗಿ ಕೂಗಿಕೊಂಡರು. 32ಆಗ ಯೇಸು ನಿಂತು ಅವರನ್ನು ಕರೆದು, “ನಾನು ನಿಮಗೆ ಏನು ಮಾಡಬೇಕೆಂದು ಕೋರುತ್ತೀರಿ?” ಎಂದು ಕೇಳಿದನು. 33ಅವರು, “ಕರ್ತನೇ, ನಮ್ಮ ಕಣ್ಣುಗಳು ಕಾಣುವಂತೆ ಮಾಡು” ಅಂದರು. 34ಆಗ ಯೇಸು ಕನಿಕರಪಟ್ಟು, ಅವರ ಕಣ್ಣುಗಳನ್ನು ಮುಟ್ಟಿದನು. ಕೂಡಲೇ ಅವರು ದೃಷ್ಟಿಯನ್ನು ಹೊಂದಿಕೊಂಡು ಆತನನ್ನು ಹಿಂಬಾಲಿಸಿದರು.
ಸುವಾರ್ತೆ (ಸಂತ ಯೋಬ)
17ಆ ಮೇಲೆ ಯೇಸು ಅವರೊಂದಿಗೆ ಬೆಟ್ಟದಿಂದ ಇಳಿದು ಸಮಭೂಮಿಯಲ್ಲಿ ಬಂದು ನಿಂತನು. ಆತನ ಶಿಷ್ಯರ ದೊಡ್ಡಗುಂಪು ಮತ್ತು ಎಲ್ಲಾ ಯೂದಾಯದಿಂದಲೂ, ಯೆರೂಸಲೇಮಿನಿಂದಲೂ, ತೂರ್, ಸೀದೋನ್ ಪಟ್ಟಣಗಳ ಕರಾವಳಿತೀರದಿಂದಲೂ ಬಂದಿದ್ದ ಜನರ ಮಹಾಸಮೂಹವು ಆತನ ಸಂಗಡ ಇದ್ದಿತು. 18ಆ ಜನರು ಆತನ ಉಪದೇಶವನ್ನು ಕೇಳುವುದಕ್ಕೂ ತಮ್ಮ ರೋಗಗಳನ್ನು ವಾಡಿಸಿಮಾಡಿಸಿಕೊಳ್ಳುವುದಕ್ಕೂ ಬಂದಿದ್ದರು. ದೆವ್ವಪೀಡಿತರು ಸಹ ಬಂದು ಸ್ವಸ್ಥರಾದರು. 19ಮತ್ತು ಆತನಿಂದ ಶಕ್ತಿ ಹೊರಟು ಎಲ್ಲರನ್ನೂ ವಾಸಿಮಾಡುತ್ತಿದ್ದುದರಿಂದ, ಆ ಗುಂಪಿನ ಜನರೆಲ್ಲಾ ಆತನನ್ನು ಮುಟ್ಟುವುದಕ್ಕೆ ಪ್ರಯತ್ನಪಟ್ಟರು. 20ತರುವಾಯ ಆತನು ತನ್ನ ಶಿಷ್ಯರ ಕಡೆಗೆ ಕಣ್ಣೆತ್ತಿನೋಡಿ ಹೇಳಿದ್ದೇನಂದರೆ, “ಬಡವರಾದ ನೀವು ಧನ್ಯರು; ದೇವರ ರಾಜ್ಯವು ನಿಮ್ಮದೇ. 21ಈಗ ಹಸಿದಿರುವವರಾದ ನೀವು ಧನ್ಯರು; ನಿಮಗೆ ತೃಪ್ತಿಯಾಗುವುದು. ಈಗ ಅಳುವವರಾದ ನೀವು ಧನ್ಯರು; ನೀವು ನಗುವಿರಿ. 22“ಮನುಷ್ಯಕುಮಾರನ ನಿಮಿತ್ತವಾಗಿ ಜನರು ನಿಮ್ಮನ್ನು ಹಗೆಮಾಡಿ ನಿಮಗೆ ಬಹಿಷ್ಕಾರ ಹಾಕಿ ನಿಂದಿಸಿ ನಿಮ್ಮ ಹೆಸರನ್ನು ಕೆಟ್ಟದೆಂದು ತೆಗೆದುಹಾಕಿದರೆ ನೀವು ಧನ್ಯರು. 23ಆ ದಿನದಲ್ಲಿ ಸಂತೋಷಿಸಿ, ಕುಣಿದಾಡುವಿರಿ; ಪರಲೋಕದಲ್ಲಿ ನಿಮಗೆ ಬಹಳ ಫಲ ಸಿಕ್ಕುವುದು ಎಂದು ತಿಳಿದುಕೊಳ್ಳಿರಿ. ಈ ಜನರ ಪೂರ್ವಿಕರು ಪ್ರವಾದಿಗಳಿಗೂ ಹಾಗೆಯೇ ಮಾಡಿದರು.
ದಿನಾಂಕಗಳು ರಷ್ಯನ್ ಸಭೆಯ ಜೂಲಿಯನ್ ಪಂಚಾಂಗದ ಪ್ರಕಾರ ಇವೆ (ಸರ್ಬಿಯನ್ ಮತ್ತು ಜಾರ್ಜಿಯನ್ ಸಭೆಗಳು ಮತ್ತು ಅಥೋಸ್ ಪರ್ವತದಂತೆ): ಸಭೆಯ ಪಂಚಾಂಗದ 28 ಆಗಸ್ಟ್ ಎಂದರೆ ನಾಗರಿಕ ಪಂಚಾಂಗದ 10 ಸೆಪ್ಟೆಂಬರ್. ಹೊಸ ಪಂಚಾಂಗದ ಸಭೆಗಳು (ಗ್ರೀಸ್, ರೊಮೇನಿಯಾ, ಬಲ್ಗೇರಿಯಾ, ಉಕ್ರೇನ್…) ನಿಗದಿತ ದಿನಾಂಕದ ಹಬ್ಬಗಳನ್ನೂ ಸಂತರನ್ನೂ ಅದೇ ನಾಗರಿಕ ದಿನಾಂಕದಂದು, 13 ದಿನಗಳ ಮುಂಚೆ, ಆಚರಿಸುತ್ತವೆ, ಮತ್ತು ಅವುಗಳ ಕೆಲವು ವಾಚನಗಳು ಬೇರೆಯಾಗಿವೆ; ಈಸ್ಟರ್ ಮತ್ತು ಅದನ್ನು ಅವಲಂಬಿಸಿರುವ ದಿನಗಳು ಒಂದೇ ಆಗಿವೆ.
ಮೂಲಗಳು: ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ · © 2017, 2019 Bridge Connectivity Solutions, CC BY-SA 4.0; changed: footnotes, headings and the letters over Psalm 119 left out, verses in the app's numbering. · ಮೂಲಗಳು ಮತ್ತು ಹಕ್ಕುಗಳು