ಮುಖಪುಟ › ದೈನಂದಿನ ಬೈಬಲ್ ವಾಚನಗಳು › ಸೆಪ್ಟೆಂಬರ್ 2027 › 11 ಸೆಪ್ಟೆಂಬರ್
ಕ್ಯಾಥೊಲಿಕ್ ಪಂಚಾಂಗ
ದೈನಂದಿನ ಬೈಬಲ್ ವಾಚನಗಳು (ಕಥೋಲಿಕ) — 11 ಸೆಪ್ಟೆಂಬರ್ 2027
ಶನಿವಾರ · ಸಾಮಾನ್ಯ ಕಾಲದ 23ನೇ ವಾರ
ಹಬ್ಬಗಳು ಮತ್ತು ಸಂತರು
ಸಾಮಾನ್ಯ ಕಾಲದ 23ನೇ ವಾರದ ಶನಿವಾರ
ಐಚ್ಛಿಕ ಸ್ಮರಣೆ · ಆರಾಧನಾ ಬಣ್ಣ: ಹಸಿರು
ಶನಿವಾರದ ಪೂಜ್ಯ ಕನ್ಯೆ ಮರಿಯಳ ಸ್ಮರಣೆ · ಐಚ್ಛಿಕ ಸ್ಮರಣೆ
ದಿನದ ವಾಚನಗಳು
ಮೊದಲನೆಯ ವಾಚನ
15ಕ್ರಿಸ್ತಯೇಸು ಪಾಪಿಗಳನ್ನು ರಕ್ಷಿಸುವುದಕ್ಕೋಸ್ಕರ ಈ ಲೋಕಕ್ಕೆ ಬಂದನು ಎಂಬ ವಾಕ್ಯವು ನಂಬತಕ್ಕದ್ದಾಗಿಯೂ ಸರ್ವಾಂಗೀಕಾರಕ್ಕೆ ಯೋಗ್ಯವಾದದ್ದಾಗಿಯೂ ಇದೆ, ಯಾಕೆಂದರೆ ಆ ಎಲ್ಲಾ ಪಾಪಿಗಳಲ್ಲಿ ನಾನೇ ಪ್ರಮುಖನು. 16ಆದರೆ ಇನ್ನು ಮುಂದೆ ನಿತ್ಯಜೀವಕ್ಕಾಗಿ ತನ್ನ ಮೇಲೆ ನಂಬಿಕೆಯಿಡುವವರಿಗೆ, ತನ್ನ ದೀರ್ಘಶಾಂತಿಯ ದೃಷ್ಟಾಂತವಿರಬೇಕೆಂದು ಕ್ರಿಸ್ತ ಯೇಸುವು ಪಾಪಿಗಳಲ್ಲಿ ಪ್ರಮುಖನಾಗಿದ್ದ ನನ್ನನ್ನು ಕರುಣಿಸಿ, ನನ್ನಲ್ಲಿ ತನ್ನ ಪೂರ್ಣ ದೀರ್ಘಶಾಂತಿಯನ್ನು ತೋರ್ಪಡಿಸಿದನು. 17ಸರ್ವಯುಗಗಳ ಅರಸನೂ, ಅಮರನೂ, ಅದೃಶ್ಯನೂ ಆಗಿರುವ ಏಕ ದೇವರಿಗೆ ಘನವೂ ಮಹಿಮೆಯೂ ಯುಗಯುಗಾಂತರಗಳಲ್ಲಿಯೂ ಇರಲಿ. ಆಮೆನ್.
ಪ್ರತಿವಚನ ಕೀರ್ತನೆ
1ಯೆಹೋವನಿಗೆ ಸ್ತೋತ್ರ! ಯೆಹೋವನ ಸೇವಕರೇ, ಸ್ತೋತ್ರಮಾಡಿರಿ; ಯೆಹೋವನ ನಾಮವನ್ನು ಸ್ತುತಿಸಿರಿ. 2ಈಗಿನಿಂದ ಯುಗಯುಗಕ್ಕೂ, ಯೆಹೋವನ ನಾಮವು ಕೀರ್ತಿಸಲ್ಪಡಲಿ. 3ಯೆಹೋವನ ನಾಮವು ಪೂರ್ವದಿಂದ, ಪಶ್ಚಿಮದವರೆಗೂ ಸ್ತುತಿಹೊಂದಲಿ. 4ಯೆಹೋವನು ಎಲ್ಲಾ ಜನಾಂಗಗಳಲ್ಲಿ ಮಹೋನ್ನತನು; ಆತನ ಪ್ರಭಾವವು ಮೇಲಣ ಲೋಕಕ್ಕಿಂತಲೂ ಉನ್ನತವಾಗಿದೆ. 5ನಮ್ಮ ಯೆಹೋವ ದೇವರಿಗೆ ಸಮಾನರು ಯಾರು? ಆತನು ಉನ್ನತಲೋಕದಲ್ಲಿ ಆಸನಾರೂಢನಾಗಿ, 6ಆಕಾಶವನ್ನೂ, ಭೂಮಿಯನ್ನೂ ನೋಡಲಿಕ್ಕೆ ಬಾಗುತ್ತಾನೆ. 7ಆತನು ದೀನರನ್ನು ಧೂಳಿನಿಂದ ಎಬ್ಬಿಸಿ, ಬಡವರನ್ನು ತಿಪ್ಪೆಯಿಂದ ಎತ್ತುತ್ತಾನೆ.
ಸುವಾರ್ತೆ
43ಒಳ್ಳೆಯ ಮರವು ಕೆಟ್ಟ ಫಲವನ್ನು ಕೊಡುವುದಿಲ್ಲ, ಹಾಗೆಯೇ ಕೆಟ್ಟ ಮರವು ಒಳ್ಳೆಯ ಫಲವನ್ನು ಕೊಡುವುದಿಲ್ಲ. 44ಪ್ರತಿಯೊಂದು ಮರದ ಗುಣವು ಅದರ ಫಲದಿಂದಲೇ ಗೊತ್ತಾಗುವುದು. ಮುಳ್ಳುಗಿಡಗಳಲ್ಲಿ ಅಂಜೂರದ ಹಣ್ಣುಗಳನ್ನು ಕೀಳುವುದಿಲ್ಲ, ಕಳ್ಳಿ ಗಿಡದಲ್ಲಿ ದ್ರಾಕ್ಷಿಹಣ್ಣುಗಳನ್ನು ಕೊಯ್ಯುಲು ಸಾಧ್ಯವಿಲ್ಲ. 45ಒಳ್ಳೆಯವನು ತನ್ನ ಹೃದಯವೆಂಬ ಒಳ್ಳೆಯ ಬೊಕ್ಕಸದೊಳಗಿನಿಂದ ಒಳ್ಳೆಯದನ್ನು ತರುತ್ತಾನೆ; ಕೆಟ್ಟವನು ಕೆಟ್ಟಬೊಕ್ಕಸದೊಳಗಿನಿಂದ ಕೆಟ್ಟದ್ದನ್ನು ತರುತ್ತಾನೆ; ಹೃದಯದಲ್ಲಿ ತುಂಬಿರುವುದೇ ಬಾಯಿಂದ ಹೊರಡುವುದು. 46“ಇದಲ್ಲದೆ ನೀವು ನನ್ನನ್ನು ‘ಕರ್ತನೇ, ಕರ್ತನೇ’ ಎಂದು ಕರೆದು ನಾನು ಹೇಳುವುದನ್ನು ಮಾಡದೆ ಇರುವುದೇಕೆ? 47ನನ್ನ ಬಳಿಗೆ ಬಂದು ನನ್ನ ಮಾತುಗಳನ್ನು ಕೇಳಿ ಅವುಗಳಂತೆ ನಡೆಯುವವನು ಅಂಥವನಿಗೆ ಸಮಾನನೆಂಬುದನ್ನು ನಿಮಗೆ ತೋರಿಸುತ್ತೇನೆ. 48ಅವನು ಆಳವಾಗಿ ಅಗೆದು, ಬಂಡೆಯ ಮೇಲೆ ಅಸ್ತಿವಾರವನ್ನು ಹಾಕಿ ಮನೇ ಕಟ್ಟಿದವನಿಗೆ ಸಮಾನನು. ಹೊಳೆಬಂದು ಪ್ರವಾಹವು ಆ ಮನೆಗೆ ಅಪ್ಪಳಿಸಿದರೂ ಅದು ಚೆನ್ನಾಗಿ ಕಟ್ಟಿರುವುದರಿಂದ ಆ ಪ್ರವಾಹವು ಅದನ್ನು ಅಲ್ಲಾಡಿಸಲಾರದೆ ಹೋಯಿತು. 49ಆದರೆ ನನ್ನ ಮಾತುಗಳನ್ನು ಕೇಳಿಯೂ ಅವುಗಳಂತೆ ನಡೆಯದಿರುವವನು ಅಸ್ತಿವಾರವಿಲ್ಲದೆ ಮರಳಿನ ಮೇಲೆ ಮನೇ ಕಟ್ಟಿದವನಿಗೆ ಸಮಾನನು. ಪ್ರವಾಹವು ಅದಕ್ಕೆ ಅಪ್ಪಳಿಸಿ ಬಡಿದ ಕೂಡಲೇ ಅದು ಕುಸಿದುಬಿತ್ತು ಮತ್ತು ಅದರ ನಾಶನವು ವಿಪರೀತವಾಗಿತ್ತು.”
ಸಾಮಾನ್ಯ ರೋಮನ್ ಪಂಚಾಂಗ; ಬಿಷಪರ ಸಮ್ಮೇಳನವು ಕೆಲವು ಹಬ್ಬಗಳನ್ನು (ಪ್ರಭುವಿನ ಪ್ರಕಟನೆ, ಸ್ವರ್ಗಾರೋಹಣ, ಕ್ರಿಸ್ತನ ದೇಹ ಮತ್ತು ರಕ್ತ) ಭಾನುವಾರಕ್ಕೆ ಸರಿಸಬಹುದು ಅಥವಾ ತನ್ನದೇ ಹಬ್ಬಗಳನ್ನು ಸೇರಿಸಬಹುದು. ವಾಚನ ಸಂಗ್ರಹ: ಭಾನುವಾರದ ಚಕ್ರ B, ವಾರದ ದಿನಗಳ ವರ್ಷ I.
ಮೂಲಗಳು: ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ · © 2017, 2019 Bridge Connectivity Solutions, CC BY-SA 4.0; changed: footnotes, headings and the letters over Psalm 119 left out, verses in the app's numbering. · ಮೂಲಗಳು ಮತ್ತು ಹಕ್ಕುಗಳು