Bible Explorer ಆ್ಯಪ್ ಪಡೆಯಿರಿ

ಮುಖಪುಟ › ದೈನಂದಿನ ಬೈಬಲ್ ವಾಚನಗಳು › ಸೆಪ್ಟೆಂಬರ್ 2027 › 11 ಸೆಪ್ಟೆಂಬರ್

ಆರ್ಥೊಡಾಕ್ಸ್ ಪಂಚಾಂಗ · ಆಗಸ್ಟ್ 29 (ಹಳೆಯ ಪದ್ಧತಿ)

ಆರ್ಥೊಡಾಕ್ಸ್ ದೈನಂದಿನ ವಾಚನಗಳು — 11 ಸೆಪ್ಟೆಂಬರ್ 2027

ಶನಿವಾರ · ಪಂಚಾಶತ್ತಮದ ನಂತರದ 12ನೇ ವಾರ · ಸ್ವರ 2

ಹಬ್ಬಗಳು ಮತ್ತು ಸಂತರು

The Beheading of the Holy Glorious Prophet, Forerunner and Baptist of the Lord, John

ಒಂದು ದಿನದ ಉಪವಾಸ · ಕಟ್ಟುನಿಟ್ಟಿನ ಉಪವಾಸ

ಉಪವಾಸ: ಎಣ್ಣೆಯೊಂದಿಗೆ

ಇದು ಮಠದ ನಿಯಮವನ್ನು ಅನುಸರಿಸುತ್ತದೆ. ಸಭೆಯಲ್ಲಿ ಉಪವಾಸದ ಪ್ರಮಾಣವನ್ನು ಆರೋಗ್ಯ, ವಯಸ್ಸು ಮತ್ತು ಸಂದರ್ಭಗಳಿಗೆ ಅನುಗುಣವಾಗಿ ಪಾಪನಿವೇದನೆಯ ಗುರುವಿನೊಂದಿಗೆ ಸೇರಿ ನಿರ್ಧರಿಸಲಾಗುತ್ತದೆ.

ದಿನದ ವಾಚನಗಳು

ಸಂಧ್ಯಾ ಪ್ರಾರ್ಥನೆ: ವಾಚನ

ಯೆಶಾ 40; ಯೆಶಾ 41; ಯೆಶಾ 45; ಯೆಶಾ 48; ಯೆಶಾ 54 (ಆರಿಸಿದ ವಚನಗಳು)

ಸಂಧ್ಯಾ ಪ್ರಾರ್ಥನೆ: ವಾಚನ

ಮಲಾ 3; ಮಲಾ 4 (ಆರಿಸಿದ ವಚನಗಳು)

ಸಂಧ್ಯಾ ಪ್ರಾರ್ಥನೆ: ವಾಚನ

ಈ ಅನುವಾದದಲ್ಲಿ ಇಲ್ಲ

ಉದಯಕಾಲದ ಪ್ರಾರ್ಥನೆ: ಸುವಾರ್ತೆ

ಮತ್ತಾ 14:1–13

1ಆ ಕಾಲದಲ್ಲಿ ಉಪರಾಜನಾದ ಹೆರೋದನು ಯೇಸುವಿನ ಸುದ್ದಿಯನ್ನು ಕೇಳಿ, 2ತನ್ನ ಸೇವಕರಿಗೆ, “ಇವನು ಸ್ನಾನಿಕ ಯೋಹಾನನೇ; ಸತ್ತವರೊಳಗಿಂದ ಎದ್ದು ಬಂದಿದ್ದಾನೆ. ಆದಕಾರಣ ಮಹತ್ಕಾರ್ಯಗಳನ್ನು ನಡಿಸುವ ಶಕ್ತಿಗಳು ಅವನಲ್ಲಿ ಇದೆ” ಎಂದು ಹೇಳಿದನು. 3ಹೆರೋದನು ತನ್ನ ಅಣ್ಣನಾದ ಫಿಲಿಪ್ಪನ ಹೆಂಡತಿಯಾದ ಹೆರೋದ್ಯಳ ನಿಮಿತ್ತ ಯೋಹಾನನನ್ನು ಹಿಡಿದು ಕಟ್ಟಿಸಿ ಸೆರೆಮನೆಯಲ್ಲಿ ಹಾಕಿಸಿದ್ದನು. 4ಯೋಹಾನನು ಹೆರೋದನಿಗೆ “ನೀನು ಇವಳನ್ನು ಹೆಂಡತಿಯಾಗಿ ಇಟ್ಟುಕೊಂಡಿರುವುದು ನ್ಯಾಯವಲ್ಲವೆಂದು” ಹೇಳುತ್ತಿದ್ದನು. 5ಹೆರೋದನು ಅವನನ್ನು ಕೊಲ್ಲಿಸಬೇಕೆಂದಿದ್ದರೂ ಜನರಿಗೆ ಭಯಪಟ್ಟನು, ಏಕೆಂದರೆ ಅವರು ಅವನನ್ನು ಪ್ರವಾದಿಯೆಂದು ಎಣಿಸಿದ್ದರು. 6ಆದರೆ ಹೆರೋದನ ಹುಟ್ಟಿದ ದಿನದ ಹಬ್ಬವು ನಡೆಯುವಾಗ ಹೆರೋದ್ಯಳ ಮಗಳು ಬಂದಿದ್ದ ಅತಿಥಿಗಳ ಮುಂದೆ ನೃತ್ಯಮಾಡಿ ಹೆರೋದನನ್ನು ಮೆಚ್ಚಿಸಿದಳು. 7ಅವನು ಅವಳಿಗೆ, ನೀನು ಏನು ಕೇಳಿಕೊಂಡರೂ ಕೊಡುತ್ತೇನೆಂದು ಆಣೆಯಿಟ್ಟು ವಾಗ್ದಾನ ಮಾಡಿದನು. 8ಅವಳು ತನ್ನ ತಾಯಿಯ ಪ್ರೇರೇಪಣೆಗೆ ಒಳಗಾಗಿ, “ಸ್ನಾನಿಕ ಯೋಹಾನನ ತಲೆಯನ್ನು ಹರಿವಾಣದಲ್ಲಿ ನನಗೆ ತರಿಸಿಕೊಡು” ಅಂದಳು. 9ಆಕೆಯ ಕೋರಿಕೆಯಿಂದ ಅರಸನು ದುಃಖಪಟ್ಟರೂ ತಾನು ಮಾಡಿದ ಆಣೆಯ ನಿಮಿತ್ತವಾಗಿಯೂ, ತನ್ನ ಸಂಗಡ ಊಟಕ್ಕೆ ಕುಳಿತಿದ್ದವರ ನಿಮಿತ್ತವಾಗಿಯೂ ಅದನ್ನು ತಂದುಕೊಡುವುದಕ್ಕೆ ಅಪ್ಪಣೆ ಕೊಟ್ಟನು. 10ಅವನು ಆಳುಗಳನ್ನು ಕಳುಹಿಸಿ ಸೆರೆಮನೆಯಲ್ಲಿ ಯೋಹಾನನ ಶಿರಚ್ಛೇದನಮಾಡಿ, 11ಅವರು ಅವನ ತಲೆಯನ್ನು ಹರಿವಾಣದಲ್ಲಿ ತಂದು ಆ ಹುಡುಗಿಗೆ ಕೊಟ್ಟರು. ಅವಳು ಅದನ್ನು ತನ್ನ ತಾಯಿಯ ಬಳಿಗೆ ತೆಗೆದುಕೊಂಡು ಹೋದಳು. 12ಯೋಹಾನನ ಶಿಷ್ಯರು ಬಂದು ಅವನ ದೇಹವನ್ನು ಹೊತ್ತುಕೊಂಡು ಹೋಗಿ ಹೂಣಿಟ್ಟರು. ಅನಂತರ ಯೇಸುವಿನ ಬಳಿಗೆ ಬಂದು ತಿಳಿಸಿದರು. 13ಯೇಸು ಅದನ್ನು ಕೇಳಿ ದೋಣಿಯನ್ನು ಹತ್ತಿ ಆ ಸ್ಥಳವನ್ನು ಬಿಟ್ಟು ಅಡವಿಯ ಸ್ಥಳಕ್ಕೆ ಹೋದನು. ಇದನ್ನು ಕೇಳಿದ ಜನರು ಗುಂಪು ಗುಂಪಾಗಿ ತಮ್ಮ ತಮ್ಮ ಪಟ್ಟಣಗಳಿಂದ ಕಾಲುನಡಿಗೆಯಿಂದ ಆತನನ್ನು ಹಿಂಬಾಲಿಸಿದರು.

ಪತ್ರಿಕೆ (ಮುಂದೂತ)

ಅ. ಕೃ 13:25–32

25ಯೋಹಾನನು ತನ್ನ ಸೇವೆಯನ್ನು ಪೂರೈಸುತ್ತಿರುವಾಗ ಜನರಿಗೆ; ‘ನನ್ನನ್ನು ಯಾರೆಂದು ಯೋಚಿಸುತ್ತೀರಿ? ನಾನು ಆತನಲ್ಲ, ಆದರೆ ನನ್ನ ಹಿಂದೆ ಒಬ್ಬನು ಬರುತ್ತಾನೆ, ಆತನ ಪಾದರಕ್ಷೆಯನ್ನು ಬಿಚ್ಚುವುದಕ್ಕೆ ನಾನು ಯೋಗ್ಯನಲ್ಲ’ ಎಂದು ಹೇಳಿದನು. 26“ಸಹೋದರರೇ, ಅಬ್ರಹಾಮನ ವಂಶಸ್ಥರೇ, ಮತ್ತು ನಿಮ್ಮೊಂದಿಗಿರುವ ಯೆಹೂದ್ಯಮತಾವಲಂಬಿಗಳೇ, ನಮಗೆ ಈ ರಕ್ಷಣೆಯ ವಾಕ್ಯವು ಕಳುಹಿಸಲ್ಪಟ್ಟಿದೆ. 27ಯೆರೂಸಲೇಮಿನಲ್ಲಿ ವಾಸವಾಗಿರುವವರೂ, ಅವರ ಅಧಿಕಾರಿಗಳೂ, ಆತನನ್ನಾಗಲಿ, ಪ್ರತಿ ಸಬ್ಬತ್ ದಿನದಲ್ಲಿ ಪಾರಾಯಣವಾಗುವ ಪ್ರವಾದಿಗಳ ಮಾತುಗಳನ್ನಾಗಲಿ ಗ್ರಹಿಸದೆ, ಆತನನ್ನು ಅಪರಾಧಿಯೆಂದು ತೀರ್ಪುಮಾಡಿ ಆ ಮಾತುಗಳನ್ನೇ ನೆರವೇರಿಸಿದರು. 28ಮರಣದಂಡನೆಗೆ ಕಾರಣವೇನೂ ತಮಗೆ ಸಿಕ್ಕದಿದ್ದರೂ, ಆತನನ್ನು ಕೊಲ್ಲಿಸಬೇಕೆಂದು ಪಿಲಾತನನ್ನು ಕೇಳಿಕೊಂಡರು. 29ಆತನ ವಿಷಯವಾಗಿ ಶಾಸ್ತ್ರದಲ್ಲಿ ಬರೆದಿರುವುದೆಲ್ಲಾ ನೆರವೇರಿಸಿದ ಮೇಲೆ, ಆತನನ್ನು ಮರದ ಕಂಬದಿಂದ ಇಳಿಸಿ ಸಮಾಧಿಯಲ್ಲಿಟ್ಟರು. 30“ಆದರೆ ದೇವರು ಆತನನ್ನು ಸತ್ತವರೊಳಗಿಂದ ಎಬ್ಬಿಸಿದನು. 31ಮತ್ತು ಆತನು ಗಲಿಲಾಯದಿಂದ ಯೆರೂಸಲೇಮಿಗೆ ತನ್ನ ಜೊತೆಯಲ್ಲಿ ಬಂದವರಿಗೆ ಅನೇಕ ದಿನಗಳವರೆಗೂ ಕಾಣಿಸಿಕೊಂಡನು; ಈಗ ಅವರು ಜನರಿಗೆ ಆತನ ಸಾಕ್ಷಿಗಳಾಗಿದ್ದಾರೆ. 32“ದೇವರು ನಮ್ಮ ಪೂರ್ವಿಕರಿಗೆ ಮಾಡಿದ ವಾಗ್ದಾನವನ್ನು ನಮ್ಮ ಮಕ್ಕಳಿಗೋಸ್ಕರ ನೆರವೇರಿಸಿದ್ದಾನೆಂಬ ಶುಭಸಮಾಚಾರವನ್ನು ನಾವು ನಿಮಗೆ ಸಾರುವವರಾಗಿದ್ದೇವೆ. ಆತನು ಯೇಸುವನ್ನು ಮರಣದಿಂದ ಎಬ್ಬಿಸಿದ್ದರಲ್ಲಿ;

ಸುವಾರ್ತೆ (ಮುಂದೂತ)

ಮಾರ್ಕ 6:14–30

14ಅಷ್ಟರಲ್ಲಿ ಅರಸನಾದ ಹೆರೋದನು ಯೇಸುವಿನ ಹೆಸರು ಪ್ರಸಿದ್ಧಿಗೆ ಬಂದಿರುವ ವಿಷಯ ಕೇಳಿದನು ಮತ್ತು ಜನರು ಆತನ ವಿಷಯದಲ್ಲಿ, “ಸ್ನಾನಿಕನಾದ ಯೋಹಾನನೇ ತಿರುಗಿ ಬದುಕಿ ಬಂದಿದ್ದಾನೆ; ಆದುದರಿಂದ ಮಹತ್ಕಾರ್ಯಗಳನ್ನು ನಡಿಸುವ ಶಕ್ತಿ ಈತನಲ್ಲಿ ಇದೆ” ಎಂದು ಹೇಳುತ್ತಿದ್ದರು. 15ಕೆಲವರು, “ಇವನು ಎಲೀಯನೆಂತಲೂ” ಮತ್ತೆ ಕೆಲವರು, “ಇವನು ಪ್ರಾಚೀನ ಕಾಲದ ಪ್ರವಾದಿಗಳಂತಿರುವ ಒಬ್ಬ ಪ್ರವಾದಿಯೆಂತಲೂ” ಹೇಳಿದರು. 16ಆದರೆ ಹೆರೋದನು ಆತನ ಸುದ್ದಿಯನ್ನು ಕೇಳಿ, “ನಾನು ಶಿರಚ್ಛೇದನ ಮಾಡಿಸಿದ ಯೋಹಾನನೇ ತಿರುಗಿ ಬದುಕಿ ಬಂದಿದ್ದಾನೆ” ಎಂದು ಹೇಳಿದನು. 17ಹೆರೋದನು ತಾನೇ ಕಳುಹಿಸಿ ಯೋಹಾನನನ್ನು ಹಿಡಿದು ಬಂಧಿಸಿ ಸೆರೆಮನೆಯಲ್ಲಿ ಹಾಕಿಸಿದ್ದನು. ಹೆರೋದ್ಯಳ ನಿಮಿತ್ತ ಹಾಗೆ ಮಾಡಿದ್ದನು; ಏಕೆಂದರೆ ಅವನು ತನ್ನ ಅಣ್ಣನಾದ ಫಿಲಿಪ್ಪನ ಹೆಂಡತಿ ಹೆರೋದ್ಯಳನ್ನು ಮದುವೆಯಾಗಿದ್ದನು. 18ಇದರ ನಿಮಿತ್ತ ಯೋಹಾನನು ಹೆರೋದನಿಗೆ, “ನಿನ್ನ ಅಣ್ಣನ ಹೆಂಡತಿಯು ಆತನು ಬದುಕಿರುವಾಗಲೇ ನಿನ್ನವಳ್ಳಾಗಿರುವುದು ಅಧರ್ಮವಲ್ಲವೇ” ಎಂದು ಹೇಳುತ್ತಿದ್ದನು. 19ಇದರಿಂದ ಹೆರೋದ್ಯಳು ಸಹ ಯೋಹಾನನ ಮೇಲೆ ದ್ವೇಷವಿಟ್ಟುಕೊಂಡು ಅವನನ್ನು ಕೊಲ್ಲಿಸಬೇಕೆಂದಿದ್ದರೂ ಸಾಧ್ಯವಾಗಲಿಲ್ಲ. 20ಏಕೆಂದರೆ ಹೆರೋದನು ಯೋಹಾನನನ್ನು ನೀತಿವಂತನೆಂದೂ ಪರಿಶುದ್ಧನೆಂದೂ ತಿಳಿದು ಭಯಪಟ್ಟು ಅವನಿಗೆ ಯಾವ ಅಪಾಯವೂ ಬಾರದಂತೆ ಕಾಪಾಡಿದ್ದನು. ಇದಲ್ಲದೆ ಯೋಹಾನನು ಹೇಳುತ್ತಿದ್ದ ಸಂದೇಶವನ್ನು ಅವನು ಕೇಳಿದಾಗ ಮನಸ್ಸಿನಲ್ಲಿ ಅಸಮಾಧಾನ ಉಂಟಾದರೂ ಅವನ ಮಾತನ್ನು ಸಂತೋಷದಿಂದ ಕೇಳುತ್ತಿದ್ದನು. 21ಆದರೆ ಹೆರೋದ್ಯಳಿಗೆ ಅನುಕೂಲವಾದ ದಿನ ಬಂದಿತು; ಹೇಗೆಂದರೆ ಹೆರೋದನು ತನ್ನ ಜನ್ಮದಿನದಂದು ಪ್ರಭುಗಳಿಗೂ, ಸಹಸ್ರಾಧಿಪತಿಗಳಿಗೂ, ಗಲಿಲಾಯ ಸೀಮೆಯ ಮುಖ್ಯಸ್ಥರಿಗೂ ಔತಣವನ್ನು ಏರ್ಪಡಿಸಿದಾಗ, 22ಹೆರೋದ್ಯಳ ಮಗಳು ಒಳಕ್ಕೆ ಬಂದು ನಾಟ್ಯವಾಡಿ ಹೆರೋದನನ್ನೂ ಅವನ ಸಂಗಡ ಪಂಕ್ತಿಯಲ್ಲಿ ಊಟಕ್ಕೆ ಕುಳಿತಿದ್ದ ಅತಿಥಿಗಳನ್ನೂ ಮೆಚ್ಚಿಸಿದಳು. ಅರಸನು ಆ ಹುಡುಗಿಗೆ, “ನಿನಗೆ ಬೇಕಾದದ್ದನ್ನು ಕೇಳಿಕೋ, ಕೊಡುತ್ತೇನೆ. 23ನೀನು ಏನು ಕೇಳಿಕೊಂಡರೂ ಸರಿ, ನನ್ನ ರಾಜ್ಯದಲ್ಲಿ ಅರ್ಧವನ್ನು ಕೇಳಿದರೂ, ನಿನಗೆ ಕೊಡುತ್ತೇನೆ” ಎಂದು ಪ್ರಮಾಣಮಾಡಿದನು. 24ಆಗ ಅವಳು ಹೊರಕ್ಕೆ ಹೋಗಿ, “ನಾನು ಏನು ಕೇಳಿಕೊಳ್ಳಲಿ?” ಎಂದು ತನ್ನ ತಾಯಿಯನ್ನು ಕೇಳಲಾಗಿ ಅವಳು, “ಸ್ನಾನಿಕನಾದ ಯೋಹಾನನ ತಲೆಯನ್ನು ಕೇಳಿಕೋ” ಅಂದಳು. 25ಕೂಡಲೆ ಅವಳು ಅರಸನ ಬಳಿಗೆ ಅವಸರದಿಂದ ಬಂದು, “ಈ ಕ್ಷಣದಲ್ಲೇ ಸ್ನಾನಿಕನಾದ ಯೋಹಾನನ ತಲೆಯನ್ನು ಪರಾತಿನಲ್ಲಿ ನನಗೆ ತರಿಸಿಕೊಡಬೇಕು, ಇದೇ ನನ್ನ ಬೇಡಿಕೆ” ಎಂದು ಕೇಳಿಕೊಂಡಳು. 26ಅದಕ್ಕೆ ಅರಸನಿಗೆ ಬಹು ದುಃಖವಾಯಿತು. ಅದರೂ ಅತಿಥಿಗಳೆಲ್ಲರ ಮುಂದೆ ತಾನು ಮಾಡಿದ ಪ್ರಮಾಣದ ನಿಮಿತ್ತ ಅವಳ ಕೋರಿಕೆಯನ್ನು ನಿರಾಕರಿಸಲಾಗಲಿಲ್ಲ. 27ಕೂಡಲೆ ತನ್ನ ಮೈಗಾವಲಿನ ಸಿಪಾಯಿಗಳಲ್ಲಿ ಒಬ್ಬನಿಗೆ, ನೀನು ಹೋಗಿ ಯೋಹಾನನ ತಲೆಯನ್ನು ತಂದುಕೊಡು ಎಂದು ಅಪ್ಪಣೆಕೊಟ್ಟು ಕಳುಹಿಸಿದನು; 28ಅವನು ಹೋಗಿ ಸೆರೆಮನೆಯಲ್ಲಿ ಅವನ ತಲೆಯನ್ನು ಕಡಿದು ಒಂದು ಪರಾತಿನಲ್ಲಿ ತಂದು ಆ ಹುಡುಗಿಗೆ ಕೊಟ್ಟನು. ಆ ಹುಡುಗಿ ಅದನ್ನು ತನ್ನ ತಾಯಿಗೆ ಕೊಟ್ಟಳು. 29ಯೋಹಾನನ ಶಿಷ್ಯರು ಈ ಸಂಗತಿಗಳನ್ನು ಕೇಳಿ ಅವರು ಬಂದು ಅವನ ಶವವನ್ನು ತೆಗೆದುಕೊಂಡು ಹೋಗಿ ಸಮಾಧಿಯಲ್ಲಿ ಇಟ್ಟರು. 30ಅಪೊಸ್ತಲರು ಯೇಸುವಿನ ಬಳಿಗೆ ಕೂಡಿ ಬಂದು ತಾವು ಮಾಡಿದ್ದನ್ನೂ ಉಪದೇಶಿಸಿದ್ದನ್ನೂ ಆತನಿಗೆ ತಿಳಿಸಿದರು.

ದಿನಾಂಕಗಳು ರಷ್ಯನ್ ಸಭೆಯ ಜೂಲಿಯನ್ ಪಂಚಾಂಗದ ಪ್ರಕಾರ ಇವೆ (ಸರ್ಬಿಯನ್ ಮತ್ತು ಜಾರ್ಜಿಯನ್ ಸಭೆಗಳು ಮತ್ತು ಅಥೋಸ್ ಪರ್ವತದಂತೆ): ಸಭೆಯ ಪಂಚಾಂಗದ 29 ಆಗಸ್ಟ್ ಎಂದರೆ ನಾಗರಿಕ ಪಂಚಾಂಗದ 11 ಸೆಪ್ಟೆಂಬರ್. ಹೊಸ ಪಂಚಾಂಗದ ಸಭೆಗಳು (ಗ್ರೀಸ್, ರೊಮೇನಿಯಾ, ಬಲ್ಗೇರಿಯಾ, ಉಕ್ರೇನ್…) ನಿಗದಿತ ದಿನಾಂಕದ ಹಬ್ಬಗಳನ್ನೂ ಸಂತರನ್ನೂ ಅದೇ ನಾಗರಿಕ ದಿನಾಂಕದಂದು, 13 ದಿನಗಳ ಮುಂಚೆ, ಆಚರಿಸುತ್ತವೆ, ಮತ್ತು ಅವುಗಳ ಕೆಲವು ವಾಚನಗಳು ಬೇರೆಯಾಗಿವೆ; ಈಸ್ಟರ್ ಮತ್ತು ಅದನ್ನು ಅವಲಂಬಿಸಿರುವ ದಿನಗಳು ಒಂದೇ ಆಗಿವೆ.

ಮೂಲಗಳು: ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ · © 2017, 2019 Bridge Connectivity Solutions, CC BY-SA 4.0; changed: footnotes, headings and the letters over Psalm 119 left out, verses in the app's numbering. · ಮೂಲಗಳು ಮತ್ತು ಹಕ್ಕುಗಳು