Bible Explorer ಆ್ಯಪ್ ಪಡೆಯಿರಿ

ಮುಖಪುಟ › ದೈನಂದಿನ ಬೈಬಲ್ ವಾಚನಗಳು › ಸೆಪ್ಟೆಂಬರ್ 2027 › 12 ಸೆಪ್ಟೆಂಬರ್

ಆರ್ಥೊಡಾಕ್ಸ್ ಪಂಚಾಂಗ · ಆಗಸ್ಟ್ 30 (ಹಳೆಯ ಪದ್ಧತಿ)

ಆರ್ಥೊಡಾಕ್ಸ್ ದೈನಂದಿನ ವಾಚನಗಳು — 12 ಸೆಪ್ಟೆಂಬರ್ 2027

ಭಾನುವಾರ · ಸ್ವರ 3

ಹಬ್ಬಗಳು ಮತ್ತು ಸಂತರು

ಪಂಚಾಶತ್ತಮದ ನಂತರದ 12ನೇ ಭಾನುವಾರ

ಉಪವಾಸ

ಉಪವಾಸವಿಲ್ಲ

ಇದು ಮಠದ ನಿಯಮವನ್ನು ಅನುಸರಿಸುತ್ತದೆ. ಸಭೆಯಲ್ಲಿ ಉಪವಾಸದ ಪ್ರಮಾಣವನ್ನು ಆರೋಗ್ಯ, ವಯಸ್ಸು ಮತ್ತು ಸಂದರ್ಭಗಳಿಗೆ ಅನುಗುಣವಾಗಿ ಪಾಪನಿವೇದನೆಯ ಗುರುವಿನೊಂದಿಗೆ ಸೇರಿ ನಿರ್ಧರಿಸಲಾಗುತ್ತದೆ.

ದಿನದ ವಾಚನಗಳು

ಉದಯಕಾಲದ ಮೊದಲನೆಯ ಸುವಾರ್ತೆ

ಮತ್ತಾ 28:16–20

16ಆದರೆ ಹನ್ನೊಂದು ಮಂದಿ ಶಿಷ್ಯರು ಗಲಿಲಾಯಕ್ಕೆ ಹೋಗಿ, ಯೇಸು ತಮಗೆ ಗೊತ್ತುಮಾಡಿದ್ದ ಬೆಟ್ಟಕ್ಕೆ ಹೋಗಿ ಸೇರಿದರು. 17ಅವರು ಅಲ್ಲಿ ಯೇಸುವನ್ನು ಕಂಡು ಆತನನ್ನು ಆರಾಧಿಸಿದರು; ಆದರೆ ಕೆಲವರು ಸಂದೇಹಪಟ್ಟರು. 18ಯೇಸು ಅವರ ಹತ್ತಿರಕ್ಕೆ ಬಂದು, “ಪರಲೋಕದಲ್ಲಿಯೂ, ಭೂಲೋಕದಲ್ಲಿಯೂ ಇರುವ ಎಲ್ಲಾ ಅಧಿಕಾರವು ನನಗೆ ಕೊಡಲ್ಪಟ್ಟಿದೆ. 19ಆದುದರಿಂದ ನೀವು ಹೊರಟುಹೋಗಿ ಎಲ್ಲಾ ಜನಾಂಗಗಳನ್ನು ಶಿಷ್ಯರನ್ನಾಗಿ ಮಾಡಿ; ಅವರಿಗೆ ತಂದೆ, ಮಗ, ಪವಿತ್ರಾತ್ಮನ ಹೆಸರಿನಲ್ಲಿ ದೀಕ್ಷಾಸ್ನಾನ ಮಾಡಿಸಿರಿ. 20ನಾನು ನಿಮಗೆ ಆಜ್ಞಾಪಿಸಿದ ಎಲ್ಲವನ್ನು ಅನುಸರಿಸುವುದಕ್ಕೆ ಅವರಿಗೆ ಉಪದೇಶ ಮಾಡಿರಿ. ಹಾಗು ಇಗೋ, ನಾನು ಯುಗದ ಸಮಾಪ್ತಿಯವರೆಗೂ ಎಲ್ಲಾ ದಿನವೂ ನಿಮ್ಮ ಸಂಗಡ ಇರುತ್ತೇನೆ” ಎಂದು ಹೇಳಿದನು.

ಪತ್ರಿಕೆ

1 ಕೊರಿ 15:1–11

1ಸಹೋದರರೇ, ನಾನು ನಿಮಗೆ ತಿಳಿಸಿದ ಸುವಾರ್ತೆಯನ್ನು ನಿಮ್ಮ ನೆನಪಿಗೆ ತರುತ್ತೇನೆ; ನೀವು ಅದನ್ನು ಸ್ವೀಕರಿಸಿ, ಅದರಲ್ಲಿ ನಿಂತಿದ್ದೀರಿ. 2ನಾನು ನಿಮಗೆ ಸಾರಿದ ಸುವಾರ್ತೆಯನ್ನು ನೀವು ದೃಢವಾಗಿ ಹಿಡಿದುಕೊಂಡರೆ ನಿಮಗೆ ರಕ್ಷಣೆಯಾಗುತ್ತದೆ. ಇಲ್ಲದಿದ್ದರೆ ನಿಮ್ಮ ನಂಬಿಕೆಯು ನಿರರ್ಥಕವಾಗುತ್ತದೆ. 3ನಾನು ಸಹ ಕಲಿತುಕೊಂಡ ಮೊದಲನೆಯ ಸಂಗತಿಗಳೊಳಗೆ ಪ್ರಮುಖವಾದ ಸಂಗತಿಯನ್ನೇ ನಿಮಗೆ ತಿಳಿಸಿದ್ದೇನೆ ಅದೇನೆಂದರೆ ಧರ್ಮಶಾಸ್ತ್ರದಲ್ಲಿ ತಿಳಿಸಿರುವ ಪ್ರಕಾರ ಕ್ರಿಸ್ತನು ನಮ್ಮ ಪಾಪಗಳ ನಿವಾರಣೆಗಾಗಿ ಸತ್ತನು; ಹೂಣಲ್ಪಟ್ಟನು; 4ಶಾಸ್ತ್ರದ ಪ್ರಕಾರವೇ ಮೂರನೆಯ ದಿನದಲ್ಲಿ ಎಬ್ಬಿಸಲ್ಪಟ್ಟನು. 5ಅನಂತರ ಕೇಫನಿಗೂ ತರುವಾಯ ಆತನು ಹನ್ನೆರಡು ಜನ ಅಪೊಸ್ತಲರಿಗೂ ಕಾಣಿಸಿಕೊಂಡನು. 6ತರುವಾಯ ಒಂದೇ ಸಮಯದಲ್ಲಿ ಐನೂರಕ್ಕಿಂತ ಹೆಚ್ಚು ಸಹೋದರರಿಗೆ ಕಾಣಿಸಿಕೊಂಡನು. ಇವರಲ್ಲಿ ಹೆಚ್ಚು ಜನರು ಇಂದಿನವರೆಗೂ ಜೀವಿಸುತ್ತಿದ್ದಾರೆ, ಆದರೆ ಕೆಲವರು ನಿದ್ರೆ ಹೋಗಿದ್ದಾರೆ. 7ತರುವಾಯ ಆತನು ಯಾಕೋಬನಿಗೂ ಅನಂತರ ಎಲ್ಲಾ ಅಪೊಸ್ತಲರಿಗೂ ಕಾಣಿಸಿಕೊಂಡನು. 8ಕಟ್ಟಕಡೆಗೆ, ದಿನತುಂಬದೆ ಹುಟ್ಟಿದವನಂತಿರುವ ನನಗೂ ಕಾಣಿಸಿಕೊಂಡನು. 9ನಾನಂತೂ ಅಪೊಸ್ತಲರಲ್ಲಿ ಕನಿಷ್ಠನು; ನಾನು ದೇವರ ಸಭೆಯನ್ನು ಹಿಂಸೆಪಡಿಸಿದ್ದರಿಂದ ಅಪೊಸ್ತಲೆನಿಸಿಕೊಳ್ಳುವುದಕ್ಕೆ ಯೋಗ್ಯನಲ್ಲ. 10ಆದರೆ ನಾನು ಈಗ ಎಂಥವನಾಗಿದ್ದೇನೊ ಅದು ದೇವರ ಕೃಪೆಯಿಂದಲೇ ಮತ್ತು ಆತನ ಕೃಪೆಯು ನನ್ನಲ್ಲಿ ನಿಷ್ಫಲವಾಗಲಿಲ್ಲ. ನಾನು ಅವರೆಲ್ಲರಿಗಿಂತಲೂ ಹೆಚ್ಚಾಗಿ ಪ್ರಯಾಸಪಟ್ಟೆನು. ಆದರೆ ಪ್ರಯಾಸಪಟ್ಟವನು ನಾನಲ್ಲ, ನನ್ನೊಂದಿಗಿರುವ ದೇವರ ಕೃಪೆಯೇ. 11ಆದ್ದರಿಂದ ನಾನಾದರೇನು ಅಥವಾ ಅವರಾದರೇನು, ಈ ರೀತಿಯಾಗಿ ನಾವೆಲ್ಲರೂ ಸುರ್ವಾತೆಯನ್ನು ಸಾರಿದ್ದೇವೆ; ಅದನ್ನು ನೀವು ನಂಬಿದಿರಿ.

ಸುವಾರ್ತೆ

ಮತ್ತಾ 19:16–26

16ಇಗೋ ಒಬ್ಬನು ಯೇಸುವಿನ ಬಳಿಗೆ ಬಂದು, “ಬೋಧಕನೇ ನಾನು ನಿತ್ಯಜೀವವನ್ನು ಹೊಂದುವುದಕ್ಕೆ ಯಾವ ಒಳ್ಳೆ ಕಾರ್ಯವನ್ನು ಮಾಡಬೇಕು?” ಎಂದು ಕೇಳಿದನು. 17ಆತನು ಅವನಿಗೆ, “ಒಳ್ಳೆಯದನ್ನು ಕುರಿತು ನನ್ನನ್ನು ಏಕೆ ಕೇಳುತ್ತೀಯಾ? ಒಳ್ಳೆಯವನು ಒಬ್ಬನೇ. ಆ ಜೀವಕ್ಕೆ ಸೇರಬೇಕೆಂದಿದ್ದರೆ ದೇವರಾಜ್ಞೆಗಳಿಗೆ ವಿಧೇಯನಾಗಿ ನಡೆದುಕೊ” ಎಂದು ಹೇಳಿದನು. 18ಅದಕ್ಕೆ ಅವನು, “ಅವು ಯಾವುವು?” ಎಂದು ಕೇಳಲು ಯೇಸು, “ನರಹತ್ಯ ಮಾಡಬಾರದು, ವ್ಯಭಿಚಾರ ಮಾಡಬಾರದು, ಕದಿಯಬಾರದು, ಸುಳ್ಳು ಸಾಕ್ಷಿ ಹೇಳಬಾರದು. 19ನಿನ್ನ ತಂದೆತಾಯಿಗಳನ್ನು ಸನ್ಮಾನಿಸಬೇಕು ಮತ್ತು ನಿನ್ನಂತೆಯೇ ನಿನ್ನ ನೆರೆಯವನನ್ನು ಪ್ರೀತಿಸಬೇಕು” ಇವುಗಳೇ ಅಂದನು. 20ಆ ಯೌವನಸ್ಥನು ಆತನಿಗೆ, “ಇವೆಲ್ಲಕ್ಕೂ ವಿಧೇಯನಾಗಿ ನಾನು ನಡೆದುಕೊಂಡಿದ್ದೇನೆ; ಇನ್ನೂ ನನಗೇನು ಕೊರತೆಯಾಗಿರಬಹುದು?” ಎಂದು ಕೇಳಿದನು. 21ಯೇಸು ಅವನಿಗೆ, “ನೀನು ಪೂರ್ಣನಾಗುವುದಕ್ಕೆ ಬಯಸುವುದಾದರೆ, ಹೋಗಿ ನಿನಗಿರುವುದನ್ನೆಲ್ಲಾ ಮಾರಿ, ಬಡವರಿಗೆ ಕೊಡು, ಆಗ ನಿನಗೆ ಪರಲೋಕದಲ್ಲಿ ಸಂಪತ್ತಿರುವುದು. ಅನಂತರ ನೀನು ಬಂದು ನನ್ನನ್ನು ಹಿಂಬಾಲಿಸು” ಎಂದು ಹೇಳಿದನು. 22ಆದರೆ ಆ ಯೌವನಸ್ಥನು ಬಹಳ ಆಸ್ತಿಯುಳ್ಳವನಾಗಿದ್ದುದರಿಂದ ಈ ಮಾತನ್ನು ಕೇಳಿ ದುಃಖದಿಂದ ಹೊರಟುಹೋದನು. 23ಆಗ ಯೇಸು ತನ್ನ ಶಿಷ್ಯರಿಗೆ, “ಐಶ್ವರ್ಯವಂತನು ಪರಲೋಕ ರಾಜ್ಯದಲ್ಲಿ ಸೇರುವುದು ಕಷ್ಟ” ಎಂದು ನಿಮಗೆ ಸತ್ಯವಾಗಿ ಹೇಳುತ್ತೇನೆ. 24“ಐಶ್ವರ್ಯವಂತನು ದೇವರ ರಾಜ್ಯದಲ್ಲಿ ಸೇರುವುದಕ್ಕಿಂತ ಒಂಟೆಯು ಸೂಜಿಯ ಕಣ್ಣಿನಲ್ಲಿ ನುಗ್ಗುವುದು ಸುಲಭ ಎಂದು ನಿಮಗೆ ತಿರುಗಿ ಹೇಳುತ್ತೇನೆ” ಅಂದನು. 25ಶಿಷ್ಯರು ಇದನ್ನು ಕೇಳಿ ಅತ್ಯಾಶ್ಚರ್ಯಪಟ್ಟು, “ಹೀಗಿದ್ದರೆ ರಕ್ಷಣೆ ಹೊಂದಲು ಯಾರಿಂದಾದೀತು?” ಎಂದು ಕೇಳಿದರು. 26ಯೇಸು ಅವರನ್ನು ದೃಷ್ಟಿಸಿ ನೋಡಿ “ಇದು ಮನುಷ್ಯರಿಂದ ಅಸಾಧ್ಯ. ಆದರೆ ದೇವರಿಗೆ ಎಲ್ಲವು ಸಾಧ್ಯವೇ” ಅಂದನು.

ದಿನಾಂಕಗಳು ರಷ್ಯನ್ ಸಭೆಯ ಜೂಲಿಯನ್ ಪಂಚಾಂಗದ ಪ್ರಕಾರ ಇವೆ (ಸರ್ಬಿಯನ್ ಮತ್ತು ಜಾರ್ಜಿಯನ್ ಸಭೆಗಳು ಮತ್ತು ಅಥೋಸ್ ಪರ್ವತದಂತೆ): ಸಭೆಯ ಪಂಚಾಂಗದ 30 ಆಗಸ್ಟ್ ಎಂದರೆ ನಾಗರಿಕ ಪಂಚಾಂಗದ 12 ಸೆಪ್ಟೆಂಬರ್. ಹೊಸ ಪಂಚಾಂಗದ ಸಭೆಗಳು (ಗ್ರೀಸ್, ರೊಮೇನಿಯಾ, ಬಲ್ಗೇರಿಯಾ, ಉಕ್ರೇನ್…) ನಿಗದಿತ ದಿನಾಂಕದ ಹಬ್ಬಗಳನ್ನೂ ಸಂತರನ್ನೂ ಅದೇ ನಾಗರಿಕ ದಿನಾಂಕದಂದು, 13 ದಿನಗಳ ಮುಂಚೆ, ಆಚರಿಸುತ್ತವೆ, ಮತ್ತು ಅವುಗಳ ಕೆಲವು ವಾಚನಗಳು ಬೇರೆಯಾಗಿವೆ; ಈಸ್ಟರ್ ಮತ್ತು ಅದನ್ನು ಅವಲಂಬಿಸಿರುವ ದಿನಗಳು ಒಂದೇ ಆಗಿವೆ.

ಮೂಲಗಳು: ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ · © 2017, 2019 Bridge Connectivity Solutions, CC BY-SA 4.0; changed: footnotes, headings and the letters over Psalm 119 left out, verses in the app's numbering. · ಮೂಲಗಳು ಮತ್ತು ಹಕ್ಕುಗಳು