Bible Explorer ಆ್ಯಪ್ ಪಡೆಯಿರಿ

ಮುಖಪುಟ › ದೈನಂದಿನ ಬೈಬಲ್ ವಾಚನಗಳು › ಸೆಪ್ಟೆಂಬರ್ 2027 › 13 ಸೆಪ್ಟೆಂಬರ್

ಕ್ಯಾಥೊಲಿಕ್ ಪಂಚಾಂಗ

ದೈನಂದಿನ ಬೈಬಲ್ ವಾಚನಗಳು (ಕಥೋಲಿಕ) — 13 ಸೆಪ್ಟೆಂಬರ್ 2027

ಸೋಮವಾರ · ಸಾಮಾನ್ಯ ಕಾಲದ 24ನೇ ವಾರ

ಹಬ್ಬಗಳು ಮತ್ತು ಸಂತರು

ಸಾಮಾನ್ಯ ಕಾಲದ 24ನೇ ವಾರದ ಸೋಮವಾರ

ಸ್ಮರಣೆ · ಆರಾಧನಾ ಬಣ್ಣ: ಬಿಳಿ

ಸಂತ ಯೋಹಾನ ಕ್ರಿಸೊಸ್ತೊಮ್, ಧರ್ಮಾಧ್ಯಕ್ಷ ಮತ್ತು ಧರ್ಮಸಭೆಯ ಪಂಡಿತ · ಸ್ಮರಣೆ

ದಿನದ ವಾಚನಗಳು

ಮೊದಲನೆಯ ವಾಚನ

1 ತಿಮೊ 2:1–8

1ಎಲ್ಲಾದಕ್ಕಿಂತ ಮೊದಲು ಎಲ್ಲಾ ಜನರಿಗೋಸ್ಕರ ದೇವರಿಗೆ ವಿಜ್ಞಾಪನೆಗಳನ್ನೂ, ಪ್ರಾರ್ಥನೆಗಳನ್ನೂ, ಮನವಿಗಳನ್ನೂ, ಕೃತಜ್ಞತಾಸ್ತುತಿಗಳನ್ನೂ ಮಾಡಬೇಕೆಂದು ಕೇಳಿಕೊಳ್ಳುತ್ತೇನೆ. 2ನಮಗೆ ಸುಖಸಮಾಧಾನಗಳು ಉಂಟಾಗಿ ನಾವು ಪೂರ್ಣಭಕ್ತಿಯಿಂದಲೂ, ಗೌರವದಿಂದಲೂ ಜೀವಿಸುವಂತೆ, ಅರಸುಗಳಿಗಾಗಿಯೂ ಎಲ್ಲಾ ಅಧಿಕಾರಿಗಳಿಗಾಗಿಯೂ ವಿಜ್ಞಾಪನೆಗಳನ್ನು ಮಾಡಬೇಕು. 3ಹಾಗೆ ಮಾಡುವುದು ನಮ್ಮ ರಕ್ಷಕನಾದ ದೇವರ ಸನ್ನಿಧಿಯಲ್ಲಿ ಒಳ್ಳೆಯದು, ಮೆಚ್ಚಿಕೆಯಾಗಿಯೂ ಇದೆ. 4ಎಲ್ಲಾ ಜನರೂ ರಕ್ಷಣೆಯನ್ನು ಹೊಂದಿ ಸತ್ಯದ ಜ್ಞಾನಕ್ಕೆ ಸೇರಬೇಕೆಂಬುದೇ ಆತನ ಚಿತ್ತವಾಗಿದೆ. 5ಏಕೆಂದರೆ ದೇವರು ಒಬ್ಬನೇ, ದೇವರಿಗೂ ಮನುಷ್ಯರಿಗೂ ಮಧ್ಯಸ್ಥನು ಒಬ್ಬನೇ, ಆತನು ಮನುಷ್ಯನಾಗಿರುವ ಕ್ರಿಸ್ತ ಯೇಸುವೇ. 6ಆತನು ಎಲ್ಲರ ವಿಮೋಚನಾರ್ಥವಾಗಿ ತನ್ನನ್ನು ಒಪ್ಪಿಸಿಕೊಟ್ಟನು. ಇದೇ ತಕ್ಕ ಸಮಯಗಳಲ್ಲಿ ಹೇಳಬೇಕಾದ ಸಾಕ್ಷಿಯಾಗಿದೆ. 7ಆ ಸಾಕ್ಷಿಯನ್ನು ಪ್ರಸಿದ್ಧಿಪಡಿಸುವುದಕ್ಕಾಗಿಯೇ ನಾನು ಸಂದೇಶಕನಾಗಿಯೂ, ಅಪೊಸ್ತಲನಾಗಿಯೂ, ನಂಬಿಕೆಯಿಂದಲೂ ಸತ್ಯದಿಂದಲೂ ಅನ್ಯಜನರಿಗೆ ಬೋಧಿಸುವವನಾಗಿಯೂ ನೇಮಿಸಲ್ಪಟ್ಟಿದ್ದೇನೆ. ನಾನು ಸುಳ್ಳಾಡದೇ ಸತ್ಯವನ್ನೇ ಹೇಳುತ್ತೇನೆ. 8ಹೀಗಿರಲಾಗಿ ಪುರುಷರು ಎಲ್ಲಾ ಸ್ಥಳಗಳಲ್ಲಿ ಕೋಪವೂ ವಾಗ್ವಾದವೂ ಇಲ್ಲದವರಾಗಿ, ಭಕ್ತಿಪೂರ್ವಕವಾಗಿ ಪವಿತ್ರ ಕೈಗಳನ್ನೆತ್ತಿ ಪ್ರಾರ್ಥಿಸಬೇಕೆಂದು ಅಪೇಕ್ಷಿಸುತ್ತೇನೆ.

ಪ್ರತಿವಚನ ಕೀರ್ತನೆ

ಕೀರ್ತ 28:2, 7–9

2ನೀನು ವಾಸಿಸುವ ಮಹಾಪರಿಶುದ್ಧಸ್ಥಾನದ ಕಡೆಗೆ ನಾನು ಕೈಯೆತ್ತಿ ಮೊರೆಯಿಡುತ್ತೇನಲ್ಲಾ; ನನ್ನ ವಿಜ್ಞಾಪನೆಯನ್ನು ಲಾಲಿಸು. 7ಯೆಹೋವನು ನನಗೆ ಬಲವೂ, ಗುರಾಣಿಯೂ ಆಗಿದ್ದಾನೆ; ನಾನು ಆತನಲ್ಲಿ ಭರವಸವಿಟ್ಟೆನು, ನನಗೆ ಸಹಾಯವು ಉಂಟಾಯಿತು. ಆದಕಾರಣ ನನ್ನ ಹೃದಯವು ಹರ್ಷಿಸುವುದು; ಕೀರ್ತನಾರೂಪವಾಗಿ ಆತನನ್ನು ಸ್ತುತಿಸುವೆನು. 8ಯೆಹೋವನು ತನ್ನ ಜನರಿಗೆ ಬಲವೂ, ತಾನು ಅಭಿಷೇಕಿಸಿದವನಿಗೆ ಆಶ್ರಯದುರ್ಗವೂ ಆಗಿದ್ದಾನೆ. 9ಯೆಹೋವನೇ, ನಿನ್ನ ಜನರನ್ನು ರಕ್ಷಿಸು; ನಿನ್ನ ಸ್ವಕೀಯ ಪ್ರಜೆಯನ್ನು ಆಶೀರ್ವದಿಸು. ನೀನು ಅವರ ಕುರುಬನಾಗಿರು; ಅವರನ್ನು ಯಾವಾಗಲೂ ಪರಿಪಾಲಿಸುತ್ತಾ ಆಧಾರವಾಗಿರು.

ಸುವಾರ್ತೆ

ಲೂಕ 7:1–10

1ಆತನು ತನ್ನ ಮಾತುಗಳನ್ನೆಲ್ಲಾ ಜನರು ಕೇಳುವಂತೆ ಹೇಳಿ ಮುಗಿಸಿದ ಮೇಲೆ, ಕಪೆರ್ನೌಮಿಗೆ ಬಂದನು. 2ಅಲ್ಲಿ ದಂಡಿನ ಶತಾಧಿಪತಿಗೆ ಇಷ್ಟನಾದ ಒಬ್ಬ ಆಳು ಕ್ಷೇಮವಿಲ್ಲದೆ ಸಾಯುವ ಹಾಗಿದ್ದನು. 3ಅವನು ಯೇಸುವಿನ ಸುದ್ದಿಯನ್ನು ಕೇಳಿ ಆತನ ಬಳಿಗೆ ಬಂದು ನನ್ನ ಆಳನ್ನು ಸ್ವಸ್ಥಮಾಡಬೇಕೆಂದು ಆತನನ್ನು ಬೇಡಿಕೊಳ್ಳುವ ಹಾಗೆ ಯೆಹೂದ್ಯರ ಹಿರಿಯರನ್ನು ಕಳುಹಿಸಿದನು. 4ಅವರು ಯೇಸುವಿನ ಬಳಿಗೆ ಬಂದು, “ನಿನ್ನಿಂದ ಇಂಥ ಉಪಕಾರ ಹೊಂದುವುದಕ್ಕೆ ಅವನು ಯೋಗ್ಯನು, 5ಅವನು ನಮ್ಮ ದೇಶವನ್ನು ಪ್ರೀತಿಸಿ ಪ್ರಾರ್ಥನೆಗಾಗಿ ನಮಗೆ ಸಭಾಮಂದಿರವನ್ನು ಕಟ್ಟಿಸಿಕೊಟ್ಟಿರುವನು” ಎಂದು ಆತನನ್ನು ಬಹಳವಾಗಿ ಬೇಡಿಕೊಳ್ಳಲು, 6ಯೇಸು ಅವರ ಸಂಗಡ ಹೋದನು. ಆತನು ಇನ್ನೂ ಮನೆಗೆ ಮುಟ್ಟುವುದಕ್ಕೆ ಸ್ವಲ್ಪ ದೂರವಿರುವಾಗಲೇ ಶತಾಧಿಪತಿಯು ಅವನ ಸ್ನೇಹಿತರನ್ನು ಆತನ ಬಳಿಗೆ ಕಳುಹಿಸಿ, “ಕರ್ತನೇ, ತೊಂದರೆ ತೆಗೆದುಕೊಳ್ಳಬೇಡ. ನೀವು ನನ್ನ ಮನೆಗೆ ಬರತಕ್ಕಷ್ಟು ಯೋಗ್ಯತೆ ನನಗಿಲ್ಲ. 7ಈ ಕಾರಣದಿಂದ ನಾನು ನಿಮ್ಮ ಬಳಿಗೆ ಬರುವುದಕ್ಕೆ ನನ್ನನ್ನೇ ಯೋಗ್ಯನೆಂದು ಎಣಿಸಿಕೊಳ್ಳಲಿಲ್ಲ. ಆದರೆ ನೀವು ಒಂದು ಮಾತು ಹೇಳಿದರೆ ಸಾಕು, ನನ್ನ ಆಳಿಗೆ ಗುಣವಾಗುವುದು. 8ನಾನು ಸಹ ಮತ್ತೊಬ್ಬರ ಅಧಿಕಾರದ ಕೆಳಗಿರುವವನು; ನನ್ನ ಕೈ ಕೆಳಗೆ ಸಿಪಾಯಿಗಳಿದ್ದಾರೆ. ನಾನು ಅವರಲ್ಲಿ ಒಬ್ಬನಿಗೆ ‘ಹೋಗು’ ಎಂದು ಹೇಳಿದರೆ ಅವನು ಹೋಗುತ್ತಾನೆ. ಮತ್ತೊಬ್ಬನಿಗೆ ‘ಬಾ’ ಎಂದು ಹೇಳಿದರೆ ಅವನು ಬರುತ್ತಾನೆ; ನನ್ನ ಆಳಿಗೆ ‘ಇಂಥಿಂಥದನ್ನು ಮಾಡು’ ಎಂದು ಹೇಳಿದರೆ ಮಾಡುತ್ತಾನೆ” ಎಂಬುದಾಗಿ ಹೇಳಿಸಿದನು. 9ಯೇಸು ಈ ಮಾತನ್ನು ಕೇಳಿ ಅವನ ವಿಷಯದಲ್ಲಿ ಆಶ್ಚರ್ಯಪಟ್ಟು ತನ್ನ ಹಿಂದೆ ಬರುತ್ತಿರುವ ಗುಂಪನ್ನು ನೋಡಿ, “ನಾನು ಇಂಥ ದೊಡ್ಡ ನಂಬಿಕೆಯನ್ನು ಇಸ್ರಾಯೇಲ್ ಜನರಲ್ಲೂ ಕಾಣಲಿಲ್ಲವೆಂದು ನಿಮಗೆ ಹೇಳುತ್ತೇನೆ” ಅಂದನು. 10ತರುವಾಯ ಆ ಶತಾಧಿಪತಿಯ ಕಡೆಯಿಂದ ಬಂದವರು ತಿರುಗಿ ಮನೆಗೆ ಹೋಗಿ ಆಳು ಸ್ವಸ್ಥನಾಗಿರುವುದನ್ನು ಕಂಡರು.

ಇಂದಿನ ಸಂತರು

ಸಾಮಾನ್ಯ ರೋಮನ್ ಪಂಚಾಂಗ; ಬಿಷಪರ ಸಮ್ಮೇಳನವು ಕೆಲವು ಹಬ್ಬಗಳನ್ನು (ಪ್ರಭುವಿನ ಪ್ರಕಟನೆ, ಸ್ವರ್ಗಾರೋಹಣ, ಕ್ರಿಸ್ತನ ದೇಹ ಮತ್ತು ರಕ್ತ) ಭಾನುವಾರಕ್ಕೆ ಸರಿಸಬಹುದು ಅಥವಾ ತನ್ನದೇ ಹಬ್ಬಗಳನ್ನು ಸೇರಿಸಬಹುದು. ವಾಚನ ಸಂಗ್ರಹ: ಭಾನುವಾರದ ಚಕ್ರ B, ವಾರದ ದಿನಗಳ ವರ್ಷ I.

ಮೂಲಗಳು: ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ · © 2017, 2019 Bridge Connectivity Solutions, CC BY-SA 4.0; changed: footnotes, headings and the letters over Psalm 119 left out, verses in the app's numbering. · ಮೂಲಗಳು ಮತ್ತು ಹಕ್ಕುಗಳು