Bible Explorer ಆ್ಯಪ್ ಪಡೆಯಿರಿ

ಮುಖಪುಟ › ದೈನಂದಿನ ಬೈಬಲ್ ವಾಚನಗಳು › ಸೆಪ್ಟೆಂಬರ್ 2027 › 13 ಸೆಪ್ಟೆಂಬರ್

ಆರ್ಥೊಡಾಕ್ಸ್ ಪಂಚಾಂಗ · ಆಗಸ್ಟ್ 31 (ಹಳೆಯ ಪದ್ಧತಿ)

ಆರ್ಥೊಡಾಕ್ಸ್ ದೈನಂದಿನ ವಾಚನಗಳು — 13 ಸೆಪ್ಟೆಂಬರ್ 2027

ಸೋಮವಾರ · ಪಂಚಾಶತ್ತಮದ ನಂತರದ 13ನೇ ವಾರ · ಸ್ವರ 3

ಹಬ್ಬಗಳು ಮತ್ತು ಸಂತರು

Placing of the Venerable Sash of the Most Holy Mother of God in Constantinople (c 395-408)

ಉಪವಾಸ

ಉಪವಾಸವಿಲ್ಲ

ಇದು ಮಠದ ನಿಯಮವನ್ನು ಅನುಸರಿಸುತ್ತದೆ. ಸಭೆಯಲ್ಲಿ ಉಪವಾಸದ ಪ್ರಮಾಣವನ್ನು ಆರೋಗ್ಯ, ವಯಸ್ಸು ಮತ್ತು ಸಂದರ್ಭಗಳಿಗೆ ಅನುಗುಣವಾಗಿ ಪಾಪನಿವೇದನೆಯ ಗುರುವಿನೊಂದಿಗೆ ಸೇರಿ ನಿರ್ಧರಿಸಲಾಗುತ್ತದೆ.

ದಿನದ ವಾಚನಗಳು

ಪತ್ರಿಕೆ

2 ಕೊರಿ 8:7–15

7ನೀವು ದೇವರ ಮೇಲಣ ನಂಬಿಕೆಯಲ್ಲಿ, ವಾಕ್ಚಾತುರ್ಯದಲ್ಲಿ, ಜ್ಞಾನದಲ್ಲಿ, ಸಕಲ ವಿಧವಾದ ಆಸಕ್ತಿಯಲ್ಲಿ ಮತ್ತು ನಮ್ಮ ಪ್ರೇರಣೆಯಿಂದ ನಿಮ್ಮಲ್ಲಿ ಹುಟ್ಟಿದ ಪ್ರೀತಿಯಲ್ಲಿ ಹೇಗೆ ಸಮೃದ್ಧರಾಗಿದ್ದೀರೋ ಹಾಗೆಯೇ ಈ ಧರ್ಮಕಾರ್ಯದಲ್ಲಿಯೂ ಸಮೃದ್ಧರಾಗಿ ಮುಂದುವರೆಯಿರಿ. 8ಇದನ್ನು ಆಜ್ಞಾರೂಪವಾಗಿ ಹೇಳುತ್ತಿಲ್ಲ ಆದರೆ ಇತರರ ಆಸಕ್ತಿಗೆ ಹೋಲಿಸಿ ನಿಮ್ಮ ಪ್ರೀತಿಯು ಎಷ್ಟು ಯಥಾರ್ಥವಾದದ್ದೆಂಬುದನ್ನು ಸಾಬೀತು ಮಾಡಬೇಕೆಂದು ಹೇಳುತ್ತೇನೆ. 9ನಮ್ಮ ಕರ್ತನಾದ ಯೇಸು ಕ್ರಿಸ್ತನ ಕೃಪೆಯು ನಿಮಗೆ ಗೊತ್ತಾಗಿದೆಯಲ್ಲಾ; ಆತನು ಐಶ್ವರ್ಯವಂತನಾಗಿದ್ದರೂ ತನ್ನ ಬಡತನದ ಮುಖಾಂತರ ನೀವು ಐಶ್ವರ್ಯವಂತರಾಗಬೇಕೆಂದು ನಿಮಗೋಸ್ಕರ ಆತನು ಬಡವನಾದನು. 10ಈ ಧರ್ಮಕಾರ್ಯವನ್ನು ಕುರಿತ ನನ್ನ ಸಲಹೆಯನ್ನು ತಿಳಿಸುತ್ತೇನೆ, ಇದು ನಿಮ್ಮ ಸಹಾಯಕ್ಕೆ; ಈ ಕಾರ್ಯವನ್ನು ಒಂದು ವರ್ಷದ ಹಿಂದೆ ನಡೆಸುವುದಕ್ಕೆ ಪ್ರಾರಂಭಿಸಿದ ನೀವು, ಮುಂದುವರಿಯಲು ಮನಸ್ಸು ಮಾಡಿದ ಹಾಗೆಯೇ ಅದನ್ನು ಕಾರ್ಯರೂಪಕ್ಕೆ ತರಲು ಪ್ರಯತ್ನಿಸಿರಿ. 11ಈ ಕಾರ್ಯವನ್ನು ಪ್ರಾರಂಭಿಸುವುದಕ್ಕೆ ನಿಮ್ಮಲ್ಲಿ ಸಿದ್ಧ ಮನಸ್ಸು ಇರುವ, ಹಾಗೆಯೇ ನಿಮ್ಮ ನಿಮ್ಮ ಶಕ್ತ್ಯನುಸಾರವಾಗಿ ಅದನ್ನು ನೆರವೇರಿಸಿರಿ. 12ಒಬ್ಬನು ಕೊಡುವಂತ ಮನಸ್ಸುಳ್ಳವನಾಗಿರುವಲ್ಲಿ ಅವನು ತನ್ನ ಯೋಗ್ಯತೆಗೆ ಅನುಸಾರವಾಗಿ ಕೊಟ್ಟರೆ ಅದು ಸಮರ್ಪಕವಾಗಿರುವುದು; ಅವನಿಗೆ ದೇವರಿಂದ ಮೆಚ್ಚಿಕೆ ದೊರೆಯುವುದು. 13ಇತರರಿಗೆ ಕಷ್ಟಪರಿಹಾರವೂ, ನಿಮಗೆ ಕಷ್ಟವೂ ಉಂಟಾಗಬೇಕೆಂದು ನನ್ನ ತಾತ್ಪರ್ಯವಲ್ಲ; 14ಸಮಾನತ್ವ ಇರಬೇಕೆಂಬುದೇ ನನ್ನ ತಾತ್ಪರ್ಯ. ಸದ್ಯಕ್ಕೆ ನಿಮ್ಮ ಸಮೃದ್ಧಿಯು ಅವರ ಕೊರತೆಯನ್ನು ನೀಗಿಸುತ್ತದೆ. ಮುಂದೆ ಅವರ ಸಮೃದ್ಧಿಯು ನಿಮ್ಮ ಕೊರತೆಯನ್ನು ನೀಗಿಸುವುದಕ್ಕೆ ಅನುಕೂಲವಾಗುವುದು. ಹೀಗೆ ಸಮಾನತ್ವವುಂಟಾಗುವುದು. 15ಧರ್ಮಶಾಸ್ತ್ರದಲ್ಲಿ ಬರೆದಿರುವ ಪ್ರಕಾರ “ಅತಿಯಾಗಿ ಶೇಖರಿಸಿದವನಿಗೆ ಅಧಿಕವಾಗಲಿಲ್ಲ ಮಿತಿಯಾಗಿ ಶೇಖರಿಸಿದವನಿಗೆ ಕೊರತೆಯಾಗಲಿಲ್ಲ.”

ಪತ್ರಿಕೆ (ಮಂಗಳವಾರಕ್ಕೆ)

2 ಕೊರಿ 8:16–9:5

16ನಿಮ್ಮ ವಿಷಯವಾಗಿ ನನಗಿರುವ ಹಿತ ಚಿಂತನೆಯನ್ನು ದೇವರು ತೀತನ ಹೃದಯದಲ್ಲಿಯೂ ಹುಟ್ಟಿಸಿದ್ದಕ್ಕಾಗಿ ಆತನಿಗೆ ಸ್ತೋತ್ರಮಾಡುತ್ತೇನೆ. 17ಅವನು ನಿಮ್ಮ ಬಳಿಗೆ ಹೋಗಬೇಕೆಂದು ನಾವು ಕೇಳಿಕೊಂಡಾಗ ಅವನು ಒಪ್ಪಿದ್ದನಲ್ಲದೆ ಅತ್ಯಾಸಕ್ತನಾಗಿದ್ದು, ತನ್ನ ಸ್ವಚಿತ್ತದಿಂದ ನಿಮ್ಮ ಬಳಿಗೆ ಬಂದನು. 18ಅವನ ಜೊತೆಯಲ್ಲಿ ಮತ್ತೊಬ್ಬ ಸಹೋದರನನ್ನು ಕಳುಹಿಸಿದ್ದೇವೆ. ಈ ಸಹೋದರನು ಸುವಾರ್ತಾ ಸೇವೆಯಲ್ಲಿ ಎಲ್ಲಾ ಸಭೆಗಳೊಳಗೆ ಕೀರ್ತಿ ಪಡೆದುಕೊಂಡವನಾಗಿದ್ದಾನೆ. 19ಇದು ಮಾತ್ರವಲ್ಲದೆ, ಕರ್ತನ ಮಹಿಮೆಗಾಗಿ ಮತ್ತು ನಮ್ಮ ಸಿದ್ಧ ಮನಸ್ಸನ್ನು ತೋರಿಸುವುದಕ್ಕಾಗಿ ನಾವು ನಡಿಸುವ ಧರ್ಮಕಾರ್ಯದ ಸಂಬಂಧವಾಗಿ ನಮ್ಮ ಸಂಗಡ ಪ್ರಯಾಣಮಾಡುವಂತೆ ಸಭೆಗಳಿಂದ ಇವನು ಆರಿಸಲ್ಪಟ್ಟಿದ್ದಾನೆ. 20ನಾವು ಸಂಗ್ರಹಿಸುತ್ತಿರುವಂತಹ ಈ ಉದಾರ ಕೊಡುಗೆಯ ವಿಷಯದಲ್ಲಿ ಒಬ್ಬರೂ ನಮ್ಮ ಮೇಲೆ ತಪ್ಪುಹೊರಿಸುವುದಕ್ಕೆ ಆಸ್ಪದಕೊಡಬಾರದು. 21ಯಾಕೆಂದರೆ ಕರ್ತನ ದೃಷ್ಟಿಯಲ್ಲಿ ಮಾತ್ರವಲ್ಲದೆ ಮನುಷ್ಯರ ದೃಷ್ಟಿಯಲ್ಲಿಯೂ ಯೋಗ್ಯವಾದದ್ದನ್ನು ಮಾಡುವುದು ನಮ್ಮ ಉದ್ದೇಶ. 22ಇವರಿಬ್ಬರ ಸಂಗಡ ನಮ್ಮ ಸಹೋದರರಲ್ಲಿ ಮತ್ತೊಬ್ಬನನ್ನು ಕಳುಹಿಸಿದ್ದೇವೆ; ನಾವು ಅನೇಕ ಸಮಯದಲ್ಲಿಯೂ, ಅನೇಕ ಕಾರ್ಯಗಳಲ್ಲಿಯೂ ಅವನನ್ನು ಪರೀಕ್ಷಿಸಿ ಆಸಕ್ತನೆಂದು ತಿಳಿದುಕೊಂಡಿದ್ದೇವೆ; ಈಗ ಅವನು ನಿಮ್ಮಲ್ಲಿಟ್ಟಿರುವ ವಿಶೇಷ ಭರವಸದಿಂದ ಇನ್ನೂ ಬಹು ಹೆಚ್ಚಾಗಿ ಆಸಕ್ತಿಯುಳ್ಳವನಾಗಿದ್ದಾನೆ. 23ತೀತನನ್ನು ಕುರಿತಾಗಿ ಹೇಳುವುದಾದರೆ, ಅವನು ನನ್ನ ಪಾಲುಗಾರನೂ ನಿಮ್ಮ ಪ್ರಯೋಜನಕ್ಕಾಗಿ ನನಗೆ ಸಹಕಾರಿಯೂ ಆಗಿದ್ದಾನೆ; ಆ ಸಹೋದರರನ್ನು ಕುರಿತಾಗಿ ಹೇಳುವುದಾದರೆ, ಅವರು ಸಭೆಗಳಿಂದ ಕಳುಹಿಸಲ್ಪಟ್ಟವರೂ ಮತ್ತು ಕ್ರಿಸ್ತನ ಮಹಿಮೆಯನ್ನು ಪ್ರಕಾಶಪಡಿಸುವವರೂ ಆಗಿದ್ದಾರೆ. 24ಆದಕಾರಣ ಇವರನ್ನು ಪ್ರೀತಿಯಿಂದ ನೋಡಿಕೊಳ್ಳಿ. ನಾವು ನಿಮ್ಮನ್ನು ಹೊಗಳಿದ್ದಕ್ಕೆ ತಕ್ಕಂತೆ ನಡೆದುಕೊಂಡು ಸಭೆಗಳಿಗೆ ನಿಮ್ಮ ಯೋಗ್ಯತೆಯನ್ನು ಮನದಟ್ಟು ಮಾಡಿಕೊಡಿರಿ. 9:1ದೇವಜನರಿಗೋಸ್ಕರ ನೀವು ಸಂಗ್ರಹಿಸುತ್ತಿರುವ ಹಣದ ಕುರಿತು ನಾನು ನಿಮಗೆ ಬರೆಯುವ ಅವಶ್ಯಕತೆಯಿಲ್ಲ. 2ನಿಮ್ಮ ಮನಸ್ಸಿನ ಬಯಕೆ ಏನೆಂಬುದು ನನಗೆ ಗೊತ್ತುಂಟು. ಕಳೆದ ವರ್ಷದಿಂದಲೂ ಅಖಾಯದವರು ಸಹಾಯಮಾಡುವುದಕ್ಕೆ ಸಿದ್ಧರಾಗಿದ್ದರೆಂದು ಮಕೆದೋನ್ಯದವರ ಮುಂದೆ ನಿಮ್ಮನ್ನು ಹೊಗಳುತ್ತಾ ಇದ್ದೇನೆ. ಮತ್ತು ನಿಮ್ಮ ಆಸಕ್ತಿಯು ಅವರಲ್ಲಿ ಬಹುಜನರನ್ನು ಪ್ರೇರೇಪಿಸಿತು. 3ಆದರೂ ನಾವು ನಿಮ್ಮನ್ನು ಹೊಗಳಿದ್ದು ಆಧಾರರಹಿತವಾಗದೆ ನಾನು ಹೇಳಿದ ಪ್ರಕಾರವೇ ನೀವು ಸಿದ್ಧರಾಗಿರಬಹುದೆಂದು ಆ ಸಹೋದರರನ್ನು ಕಳುಹಿಸಿದ್ದೇನೆ. 4ನೀವು ಸಿದ್ಧವಾಗದಿದ್ದರೆ ಒಂದು ವೇಳೆ ಮಕೆದೋನ್ಯದವರಲ್ಲಿ ಯಾರಾದರೂ ನನ್ನ ಸಂಗಡ ಬಂದು ನೀವು ಸಿದ್ಧವಾಗಲಿಲ್ಲವೆಂಬುದನ್ನು ಕಂಡು ನಮಗೆ ನಿಮ್ಮ ಮೇಲೆ ಇಂಥ ಭರವಸೆ ಇಟ್ಟಿದ್ದಕ್ಕೆ ನಾವು ನಾಚಿಕೆಪಡಬೇಕಾದೀತು; ನಿಮಗೂ ನಾಚಿಕೆಯಾಗುವುದೆಂದು ನಾನು ಹೀಗೆ ಹೇಳುತ್ತೇನೆ. 5ಹೀಗಿರಲಾಗಿ ಈ ಸಹೋದರರು ಮುಂಚಿತವಾಗಿ ನಿಮ್ಮ ಬಳಿಗೆ ಬಂದು ನೀವು ಮೊದಲೇ ವಾಗ್ದಾನಮಾಡಿದ ಕೊಡುಗೆಯನ್ನು ಸಿದ್ಧಪಡಿಸಲು ನಿಮಗೆ ಸಹಾಯಮಾಡುವಂತೆ ಇವರನ್ನು ಬೇಡಿಕೊಳ್ಳುವುದು ಅವಶ್ಯವೆಂದು ನನಗೆ ತೋಚಿತು. ಹೀಗೆ ಈ ದಾನ ಒತ್ತಾಯದ ವಸೂಲಿ ಆಗಿರದೆ ಮನಃಪೂರ್ವಕವಾಗಿ ಕೊಟ್ಟ ದಾನ ಆಗಿರುತ್ತದೆ.

ಪತ್ರಿಕೆ (ದೇವಮಾತೆಯ ನಡುಪಟ್ಟಿ)

ಇಬ್ರಿ 9:1–7

1ಹೀಗಿದ್ದರೂ ಮೊದಲನೆಯ ಒಡಂಬಡಿಕೆಗೂ ದೇವಾರಾಧನೆಯ ವಿಧಿವಿಧಾನಗಳಿದ್ದವು ಮತ್ತು ಇಹಲೋಕ ಸಂಬಂಧವಾದ ದೇವಾಲಯವಿತ್ತು. 2ಒಂದು ದೇವದರ್ಶನ ಗುಡಾರವು ಕಟ್ಟಲ್ಪಟ್ಟು, ಅದರ ಮೊದಲನೆಯ ಭಾಗದಲ್ಲಿ ದೀಪಸ್ತಂಭ, ಮೇಜು, ಮತ್ತು ಸಮರ್ಪಿಸಿದ ರೊಟ್ಟಿ ಇವುಗಳಿದ್ದವು. ಅದನ್ನು ಪವಿತ್ರಸ್ಥಳ ಎಂದು ಕರೆಯಲಾಗುತ್ತಿತು. 3ಮತ್ತು ಎರಡನೆಯ ಪರದೆಯ ಹಿಂದೆ ಇನ್ನೊಂದು ಕೋಣೆಗೆ, ಅತಿ ಪವಿತ್ರ ಸ್ಥಳ ಎಂದು ಕರೆಯಲಾಗುತ್ತಿತು. 4ಅದರಲ್ಲಿ ಚಿನ್ನದ ಧೂಪಾರತಿಯು ಮತ್ತು ಚಿನ್ನದ ತಗಡಿನಿಂದ ಹೊದಿಸಿದ ಒಡಂಬಡಿಕೆಯ ಮಂಜೂಷಗಳಿದ್ದವು. ಆ ಮಂಜೂಷದೊಳಗೆ ಮನ್ನ ಇಟ್ಟಿದ್ದ ಚಿನ್ನದ ಪಾತ್ರೆಯೂ, ಆರೋನನ ಚಿಗುರಿದ ಕೋಲೂ, ಒಡಂಬಡಿಕೆಯ ಕಲ್ಲಿನ ಹಲಿಗೆಗಳೂ ಇದ್ದವು. 5ಅದರ ಮೇಲೆ ಕೃಪಾಸನವನ್ನು ಮುಚ್ಚುವ ತೇಜಸ್ಸಿನ ಕೆರೂಬಿಗಳೂ ಇದ್ದವು. ಅದನ್ನು ಈಗ ಒಂದೊಂದಾಗಿ ವಿವರಿಸಲು ಸಾಧ್ಯವಿಲ್ಲ. 6ಹೀಗೆ ಇವುಗಳನ್ನು ಸಿದ್ಧಮಾಡಿದ ನಂತರ ಯಾಜಕರು ನಿತ್ಯವೂ ದೇವದರ್ಶನ ಗುಡಾರದ ಮೊದಲನೆಯ ಭಾಗದೊಳಗೆ ಮಾತ್ರ ಪ್ರವೇಶಿಸಿ, ಅಲ್ಲಿ ದೇವರ ಸೇವೆಯ ವಿಧಿಗಳನ್ನು ನಿರಂತರವಾಗಿ ಮಾಡುತ್ತಿದ್ದರು. 7ಆದರೆ ಎರಡನೆಯ ಕೋಣೆಯೊಳಗೆ ಮಹಾಯಾಜಕನೊಬ್ಬನೇ ವರ್ಷಕ್ಕೊಮ್ಮೆ ಪ್ರವೇಶಿಸುತ್ತಿದ್ದನು. ತನ್ನೊಡನೆ ಬಲಿರಕ್ತವನ್ನು ತೆಗೆದುಕೊಳ್ಳದೆ ಹೋಗುತ್ತಿರಲಿಲ್ಲ. ಆ ರಕ್ತವನ್ನು ತನ್ನಗಾಗಿಯೂ ಮತ್ತು ಜನರ ಉದ್ದೇಶಪೂರ್ವಕವಲ್ಲದ ಅಪರಾಧಗಳಿಗೋಸ್ಕರವೂ ಸಮರ್ಪಿಸಬೇಕಾಗಿತ್ತು.

ಸುವಾರ್ತೆ

ಮಾರ್ಕ 3:6–12

6ತಕ್ಷಣ ಫರಿಸಾಯರು ಹೊರಕ್ಕೆ ಹೋಗಿ ಹೆರೋದ್ಯರನ್ನು ಕೂಡಿಕೊಂಡು ಯಾವ ಉಪಾಯದಿಂದ ಯೇಸುವನ್ನು ಕೊಲ್ಲಬಹುದು ಎಂದು ಆತನಿಗೆ ವಿರೋಧವಾಗಿ ಒಳಸಂಚುಮಾಡಿದರು. 7ಆ ಮೇಲೆ ಯೇಸುವು ತನ್ನ ಶಿಷ್ಯರೊಂದಿಗೆ ಆ ಸ್ಥಳವನ್ನು ಬಿಟ್ಟು ಸಮುದ್ರದ ಬಳಿಗೆ ಹೋದನು. ಗಲಿಲಾಯದಿಂದ ಬಹು ಜನರ ಗುಂಪು ಆತನನ್ನು ಹಿಂಬಾಲಿಸಿತು. 8ಇದಲ್ಲದೆ ಆತನು ಇಂಥಿಂಥ ಕೆಲಸಗಳನ್ನು ಮಾಡುತ್ತಾನೆಂದು ಕೇಳಿ ಬಹುಜನರು ಯೂದಾಯದಿಂದಲೂ, ಯೆರೂಸಲೇಮಿನಿಂದಲೂ, ಇದೂಮಾಯದಿಂದಲೂ, ಯೊರ್ದನ್ ಹೊಳೆಯ ಆಚೆಯಿಂದಲೂ, ತೂರ್, ಸೀದೋನ್ ಪಟ್ಟಣಗಳ ಸುತ್ತಲಿನಿಂದಲೂ ಆತನ ಬಳಿಗೆ ಬಂದರು. 9ಜನರ ಗುಂಪು ಅಧಿಕವಾಗಿದ್ದುದರಿಂದ ಅವರು ತನ್ನ ಮೈಮೇಲೆ ಬಿದ್ದು ನೂಕದಂತೆ ಯೇಸು ತನಗೆ ಒಂದು ದೋಣಿಯನ್ನು ಸಿದ್ಧಮಾಡಲು ಶಿಷ್ಯರಿಗೆ ಹೇಳಿದನು. 10ಏಕೆಂದರೆ ಆತನು ಅನೇಕರನ್ನು ಸ್ವಸ್ಥಮಾಡಿದ್ದರಿಂದ ರೋಗಪೀಡಿತರಾಗಿದ್ದವರೆಲ್ಲರೂ ಯೇಸುವನ್ನು ಮುಟ್ಟಬೇಕೆಂದು ಮೇಲೆ ಬೀಳುತ್ತಿದ್ದರು. 11ಮತ್ತು ದೆವ್ವಗಳು ಆತನನ್ನು ಕಂಡಾಗಲ್ಲೆಲ್ಲಾ ಆತನ ಪಾದಕ್ಕೆ ಬಿದ್ದು “ನೀನು ದೇವಕುಮಾರನು” ಎಂದು ಕೂಗುತ್ತಿದ್ದವು. 12ಆದರೆ ಆತನು ತಾನು ಇಂಥವನೆಂಬುದಾಗಿ ಯಾರಿಗೂ ಪ್ರಕಟಿಸಬಾರದೆಂದು ಅವರಿಗೆ ಬಹು ಖಂಡಿತವಾಗಿ ಆಜ್ಞಾಪಿಸಿದನು.

ಸುವಾರ್ತೆ (ಮಂಗಳವಾರಕ್ಕೆ)

ಮಾರ್ಕ 3:13–19

13ಆ ಮೇಲೆ ಯೇಸು ಬೆಟ್ಟವನ್ನು ಹತ್ತಿ ತನಗೆ ಬೇಕಾದವರನ್ನು ಹತ್ತಿರಕ್ಕೆ ಕರೆಯಲು ಅವರು ಆತನ ಬಳಿಗೆ ಬಂದರು. 14ಆತನು ಅಪೊಸ್ತಲರೆಂದು ಹೆಸರಿಟ್ಟಂಥ ಹನ್ನೆರಡು ಮಂದಿಯನ್ನು ತನ್ನ ಸಂಗಡ ಇರಬೇಕೆಂತಲೂ, ಸುವಾರ್ತೆಯನ್ನು ಸಾರುವುದಕ್ಕೆ ಅವರನ್ನು ಕಳುಹಿಸಬೇಕೆಂತಲೂ, 15ದೆವ್ವಗಳನ್ನು ಬಿಡಿಸುವ ಅಧಿಕಾರ ಉಳ್ಳವರಾಗಿರಬೇಕೆಂತಲೂ ನೇಮಿಸಿದನು. 16ಯೇಸುವಿನಿಂದ ನೇಮಿಸಲ್ಪಟ್ಟ ಹನ್ನೆರಡು ಮಂದಿ ಇವರೇ: ಸೀಮೋನನೆಂಬವನಿಗೆ ಪೇತ್ರನೆಂದು ಹೆಸರಿಟ್ಟನು. 17ಜೆಬೆದಾಯನ ಮಗನಾದ ಯಾಕೋಬನಿಗೂ ಯಾಕೋಬನ ತಮ್ಮನಾದ ಯೋಹಾನನಿಗೂ ಬೊವನೆರ್ಗೆಸ್ ಅಂದರೆ ಸಿಡಿಲ ಮರಿಗಳು ಎಂದು ಹೆಸರಿಟ್ಟನು. 18ಅಂದ್ರೆಯ, ಫಿಲಿಪ್ಪ, ಬಾರ್ತೊಲೊಮಾಯ, ಮತ್ತಾಯ, ತೋಮ, ಅಲ್ಫಾಯನ ಮಗನಾದ ಯಾಕೋಬ, ತದ್ದಾಯ, ಮತಾಭಿಮಾನಿ ಎಂದು ಹೆಸರುಗೊಂಡ ಸೀಮೋನ, 19ಯೇಸುವನ್ನು ಹಿಡಿದುಕೊಟ್ಟ ಇಸ್ಕರಿಯೋತ ಯೂದ.

ಸುವಾರ್ತೆ (ದೇವಮಾತೆಯ ನಡುಪಟ್ಟಿ)

ಲೂಕ 10:38–42; 11:27–28

38ಅವರು ಸಂಚಾರಮಾಡುತ್ತಿರುವಾಗ ಆತನು ಒಂದು ಹಳ್ಳಿಗೆ ಬಂದನು. ಅಲ್ಲಿ ಮಾರ್ಥಳೆಂಬ ಒಬ್ಬ ಸ್ತ್ರೀಯು ಆತನನ್ನು ತನ್ನ ಮನೆಯಲ್ಲಿ ಉಳಿಸಿಕೊಂಡಳು. 39ಆಕೆಗೆ ಮರಿಯಳೆಂಬ ಒಬ್ಬ ತಂಗಿ ಇದ್ದಳು. ಈಕೆಯು ಯೇಸುವಿನ ಪಾದಗಳ ಬಳಿಯಲ್ಲಿ ಕುಳಿತುಕೊಂಡು ಆತನ ವಾಕ್ಯವನ್ನು ಕೇಳುತ್ತಿದ್ದಳು. 40ಆದರೆ ಮಾರ್ಥಳು ಉಪಚಾರ ಸೇವೆಯ ವಿಷಯವಾಗಿ ಬಹಳ ಬೇಸತ್ತು ಯೇಸುವಿನ ಬಳಿಗೆ ಬಂದು, “ಕರ್ತನೇ, ನನ್ನ ತಂಗಿಯು ಸೇವೆಗೆ ನನ್ನೊಬ್ಬಳನ್ನೇ ಬಿಟ್ಟಿದ್ದಾಳೆ, ಇದಕ್ಕೆ ನಿನಗೆ ಚಿಂತೆಯಿಲ್ಲವೋ? ನನಗೆ ನೆರವಾಗಬೇಕೆಂದು ಆಕೆಗೆ ಹೇಳು” ಅಂದಳು. 41ಆದರೆ, ಕರ್ತನು ಆಕೆಗೆ, “ಮಾರ್ಥಳೇ, ಮಾರ್ಥಳೇ, ನೀನು ಅನೇಕ ವಿಷಯಗಳಿಗಾಗಿ ಚಿಂತೆಯಲ್ಲಿಯೂ ಗಡಿಬಿಡಿಯಲ್ಲಿಯೂ ಸಿಕ್ಕಿಕೊಂಡಿದ್ದೀ. 42ಆದರೆ ಅಗತ್ಯವಾದದ್ದು ಒಂದೇ, ಮರಿಯಳು ಆ ಉತ್ತಮ ಭಾಗವನ್ನು ಆರಿಸಿಕೊಂಡಿದ್ದಾಳೆ, ಅದು ಆಕೆಯಿಂದ ತೆಗೆಯಲ್ಪಡುವುದಿಲ್ಲ” ಎಂದು ಉತ್ತರಕೊಟ್ಟನು. 11:27ಯೇಸು ಈ ಮಾತುಗಳನ್ನು ಹೇಳುತ್ತಿರುವಾಗ ಜನರಲ್ಲಿ ಒಬ್ಬ ಸ್ತ್ರೀಯು, “ನಿನ್ನನ್ನು ಹೊತ್ತ ಗರ್ಭವೂ, ನೀನು ಕುಡಿದ ಮೊಲೆಗಳೂ ಧನ್ಯವಾದವುಗಳು” ಎಂದು ಕೂಗಿದಳು. 28ಅದಕ್ಕೆ ಯೇಸು, “ಹಾಗನ್ನ ಬೇಡ, ದೇವರ ವಾಕ್ಯವನ್ನು ಕೇಳಿ ಅದನ್ನು ಅನುಸರಿಸುವವನು ಹೆಚ್ಚು ಧನ್ಯನು” ಅಂದನು.

ದಿನಾಂಕಗಳು ರಷ್ಯನ್ ಸಭೆಯ ಜೂಲಿಯನ್ ಪಂಚಾಂಗದ ಪ್ರಕಾರ ಇವೆ (ಸರ್ಬಿಯನ್ ಮತ್ತು ಜಾರ್ಜಿಯನ್ ಸಭೆಗಳು ಮತ್ತು ಅಥೋಸ್ ಪರ್ವತದಂತೆ): ಸಭೆಯ ಪಂಚಾಂಗದ 31 ಆಗಸ್ಟ್ ಎಂದರೆ ನಾಗರಿಕ ಪಂಚಾಂಗದ 13 ಸೆಪ್ಟೆಂಬರ್. ಹೊಸ ಪಂಚಾಂಗದ ಸಭೆಗಳು (ಗ್ರೀಸ್, ರೊಮೇನಿಯಾ, ಬಲ್ಗೇರಿಯಾ, ಉಕ್ರೇನ್…) ನಿಗದಿತ ದಿನಾಂಕದ ಹಬ್ಬಗಳನ್ನೂ ಸಂತರನ್ನೂ ಅದೇ ನಾಗರಿಕ ದಿನಾಂಕದಂದು, 13 ದಿನಗಳ ಮುಂಚೆ, ಆಚರಿಸುತ್ತವೆ, ಮತ್ತು ಅವುಗಳ ಕೆಲವು ವಾಚನಗಳು ಬೇರೆಯಾಗಿವೆ; ಈಸ್ಟರ್ ಮತ್ತು ಅದನ್ನು ಅವಲಂಬಿಸಿರುವ ದಿನಗಳು ಒಂದೇ ಆಗಿವೆ.

ಮೂಲಗಳು: ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ · © 2017, 2019 Bridge Connectivity Solutions, CC BY-SA 4.0; changed: footnotes, headings and the letters over Psalm 119 left out, verses in the app's numbering. · ಮೂಲಗಳು ಮತ್ತು ಹಕ್ಕುಗಳು