ಮುಖಪುಟ › ದೈನಂದಿನ ಬೈಬಲ್ ವಾಚನಗಳು › ಸೆಪ್ಟೆಂಬರ್ 2027 › 14 ಸೆಪ್ಟೆಂಬರ್
ಕ್ಯಾಥೊಲಿಕ್ ಪಂಚಾಂಗ
ದೈನಂದಿನ ಬೈಬಲ್ ವಾಚನಗಳು (ಕಥೋಲಿಕ) — 14 ಸೆಪ್ಟೆಂಬರ್ 2027
ಮಂಗಳವಾರ · ಸಾಮಾನ್ಯ ಕಾಲದ 24ನೇ ವಾರ
ಹಬ್ಬಗಳು ಮತ್ತು ಸಂತರು
ಪವಿತ್ರ ಶಿಲುಬೆಯ ಉನ್ನತೀಕರಣ
ಹಬ್ಬ · ಆರಾಧನಾ ಬಣ್ಣ: ಕೆಂಪು
ದಿನದ ವಾಚನಗಳು
ಮೊದಲನೆಯ ವಾಚನ
ಅಥವಾ: ಫಿಲಿಪ್ಪಿ 2:6–11
4ಇಸ್ರಾಯೇಲರು ಹೋರ್ ಬೆಟ್ಟದಿಂದ ಹೊರಟು ಎದೋಮ್ಯರ ದೇಶವನ್ನು ಸುತ್ತಿಕೊಂಡು ಹೋಗುವುದಕ್ಕೆ ಕೆಂಪು ಸಮುದ್ರದ ಮಾರ್ಗವಾಗಿ ಪ್ರಯಾಣಮಾಡುವಾಗ, ದಾರಿಯಲ್ಲಿ ಆಯಾಸದಿಂದ ಅವರಿಗೆ ಬೇಸರವಾಯಿತು. 5ಆಗ ಅವರು ದೇವರಿಗೂ ಮತ್ತು ಮೋಶೆಗೂ ವಿರುದ್ಧವಾಗಿ ಮಾತನಾಡಿ, “ನೀವು ನಮ್ಮನ್ನು ಈ ಮರಳುಗಾಡಿನಲ್ಲಿ ಕೊಲ್ಲಬೇಕೆಂದು ಐಗುಪ್ತ ದೇಶದಿಂದ ಕರೆದುಕೊಂಡು ಬಂದಿರೋ? ಇಲ್ಲಿ ಆಹಾರವೂ ಇಲ್ಲ, ನೀರೂ ಇಲ್ಲ. ಈ ರುಚಿ ಇಲ್ಲದ ಆಹಾರವನ್ನು ತಿಂದು ನಮಗೆ ಬೇಸರವಾಯಿತು” ಎಂದು ಹೇಳಿದರು. 6ಅದಕ್ಕೆ ಯೆಹೋವನು ವಿಷಸರ್ಪಗಳನ್ನು ಇಸ್ರಾಯೇಲ್ ಜನರೊಳಗೆ ಬರಮಾಡಿದನು. ಅವು ಜನರನ್ನು ಕಚ್ಚಿದ್ದರಿಂದ ಬಹಳಜನರು ಸತ್ತುಹೋದರು. 7ಆದುದರಿಂದ ಜನರು ಮೋಶೆಯ ಬಳಿಗೆ ಬಂದು, “ನಾವು ನಿನಗೂ ಮತ್ತು ಯೆಹೋವನಿಗೂ ವಿರುದ್ಧವಾಗಿ ಮಾತನಾಡಿ ದ್ರೋಹಿಗಳಾದೆವು. ಈ ಸರ್ಪಗಳು ನಮ್ಮ ಬಳಿಯಿಂದ ತೊಲಗಿಹೋಗುವಂತೆ ನೀನು ಯೆಹೋವನಿಗೆ ಪ್ರಾರ್ಥನೆಮಾಡಬೇಕು” ಎಂದು ಬೇಡಿಕೊಂಡರು. 8ಮೋಶೆ ಜನರಿಗೋಸ್ಕರ ಪ್ರಾರ್ಥಿಸಲಾಗಿ ಯೆಹೋವನು ಅವನಿಗೆ, “ನೀನು ತಾಮ್ರದಿಂದ ವಿಷಸರ್ಪದ ಆಕಾರವನ್ನು ಮಾಡಿಸಿ ಧ್ವಜಸ್ತಂಭದ ಮೇಲೆ ಎತ್ತಿ ನಿಲ್ಲಿಸಬೇಕು. ಸರ್ಪಗಳಿಂದ ಗಾಯಪಟ್ಟವರು ಅದನ್ನು ನೋಡಿ ಬದುಕಿಕೊಳ್ಳುವರು” ಎಂದು ಆಜ್ಞಾಪಿಸಿದನು. 9ಆದಕಾರಣ ಮೋಶೆ ತಾಮ್ರದಿಂದ ಸರ್ಪವನ್ನು ಮಾಡಿಸಿ ಧ್ವಜಸ್ತಂಭದ ಮೇಲೆ ಇಟ್ಟನು. ಸರ್ಪದಿಂದ ಗಾಯಪಟ್ಟವರಲ್ಲಿ ಯಾರು ಆ ತಾಮ್ರದ ಸರ್ಪವನ್ನು ಲಕ್ಷ್ಯವಿಟ್ಟು ನೋಡಿದರೋ ಅವರೆಲ್ಲರೂ ಬದುಕಿಕೊಂಡರು.
ಪ್ರತಿವಚನ ಕೀರ್ತನೆ
1ಆಸಾಫನ ಪದ್ಯ. ನನ್ನ ಜನರೇ, ನನ್ನ ಉಪದೇಶವನ್ನು ಕೇಳಿರಿ; ನನ್ನ ನುಡಿಗಳನ್ನು ಕಿವಿಗೊಟ್ಟು ಲಾಲಿಸಿರಿ. 2ನಾನು ಬಾಯ್ದೆರೆದು ಸಾಮ್ಯರೂಪವಾಗಿ ಉಪದೇಶಿಸುವೆನು. ಪೂರ್ವಕಾಲದ ಗೂಢಾರ್ಥಗಳನ್ನು ಬಹಿರಂಗಪಡಿಸುವೆನು. 34ಸಂಹಾರವಾಗುವಾಗೆಲ್ಲಾ ಅವರು ದೇವರನ್ನು ನೆನಸಿ, ಪುನಃ ಆತನ ಪ್ರಸನ್ನತೆಯನ್ನು ಬಯಸಿ, 35ದೇವರು ತಮ್ಮ ಬಂಡೆಯು, ಪರಾತ್ಪರನಾದ ದೇವರು, ತಮ್ಮ ವಿಮೋಚಕನು ಆಗಿದ್ದಾನೆ ಎಂಬುದನ್ನು ನೆನಪಿಗೆ ತಂದುಕೊಳ್ಳುವರು. 36ಆದರೆ ಅವರು ಆತನನ್ನು ತಮ್ಮ ಬಾಯಿಂದ ವಂಚಿಸಿ, ತಮ್ಮ ನಾಲಿಗೆಯಿಂದ ಸುಳ್ಳಾಡಿದರು. 37ಅವರ ಹೃದಯವು ಆತನಲ್ಲಿ ನೆಲೆಗೊಳ್ಳಲಿಲ್ಲ; ಅವರು ಆತನ ನಿಬಂಧನೆಯನ್ನು ನಿಷ್ಠೆಯಿಂದ ಕೈಗೊಳ್ಳಲಿಲ್ಲ. 38ಆದರೂ ಆತನು ಕರುಣಾಳುವೂ, ಅಪರಾಧಿಗಳನ್ನು ಸಂಹರಿಸದೆ ಕ್ಷಮಿಸುವವನೂ ಆಗಿ, ತನ್ನ ಸಿಟ್ಟನ್ನೆಲ್ಲಾ ಏರಗೊಡಿಸದೆ, ಅದನ್ನು ಹಲವು ಸಾರಿ ತಡೆಯುತ್ತಾ ಬಂದನು.
ಸುವಾರ್ತೆ
13ಪರಲೋಕದಿಂದ ಇಳಿದು ಬಂದವನೇ, ಅಂದರೆ, ಮನುಷ್ಯಕುಮಾರನೇ ಹೊರತು ಮತ್ತಾರು ಪರಲೋಕಕ್ಕೆ ಏರಿ ಹೋದವರಿಲ್ಲ. 14ಇದಲ್ಲದೆ ಮೋಶೆಯು ಅಡವಿಯಲ್ಲಿ ಕಂಚಿನ ಸರ್ಪವನ್ನು ಮೇಲೆ ಎತ್ತಿ ನಿಲ್ಲಿಸಿದ ಹಾಗೆಯೇ ಮನುಷ್ಯಕುಮಾರನು ಸಹ ಮೇಲಕ್ಕೆ ಎತ್ತಲ್ಪಡಬೇಕು. 15ಹೀಗೆ ಆತನನ್ನು ನಂಬುವವರೆಲ್ಲರೂ ನಿತ್ಯಜೀವವನ್ನು ಹೊಂದುವರು. 16“ದೇವರು ಲೋಕದ ಮೇಲೆ ಎಷ್ಟೋ ಪ್ರೀತಿಯನ್ನಿಟ್ಟು ತನ್ನ ಒಬ್ಬನೇ ಮಗನನ್ನು ಕೊಟ್ಟನು ಆತನನ್ನು ನಂಬುವ ಒಬ್ಬನಾದರೂ ನಾಶವಾಗದೆ ಎಲ್ಲರೂ ನಿತ್ಯಜೀವವನ್ನು ಪಡೆಯಬೇಕೆಂದು ಆತನನ್ನು ಕೊಟ್ಟನು. 17ದೇವರು ತನ್ನ ಮಗನ ಮುಖಾಂತರ ಲೋಕಕ್ಕೆ ರಕ್ಷಣೆಯಾಗಬೇಕೆಂದು ಆತನನ್ನು ಕಳುಹಿಸಿಕೊಟ್ಟನೇ ಹೊರತು ಅಪರಾಧಿಯೆಂದು ಖಂಡಿಸಲಿಕ್ಕೆ ಕಳುಹಿಸಲಿಲ್ಲ.
ಸಾಮಾನ್ಯ ರೋಮನ್ ಪಂಚಾಂಗ; ಬಿಷಪರ ಸಮ್ಮೇಳನವು ಕೆಲವು ಹಬ್ಬಗಳನ್ನು (ಪ್ರಭುವಿನ ಪ್ರಕಟನೆ, ಸ್ವರ್ಗಾರೋಹಣ, ಕ್ರಿಸ್ತನ ದೇಹ ಮತ್ತು ರಕ್ತ) ಭಾನುವಾರಕ್ಕೆ ಸರಿಸಬಹುದು ಅಥವಾ ತನ್ನದೇ ಹಬ್ಬಗಳನ್ನು ಸೇರಿಸಬಹುದು. ವಾಚನ ಸಂಗ್ರಹ: ಭಾನುವಾರದ ಚಕ್ರ B, ವಾರದ ದಿನಗಳ ವರ್ಷ I.
ಮೂಲಗಳು: ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ · © 2017, 2019 Bridge Connectivity Solutions, CC BY-SA 4.0; changed: footnotes, headings and the letters over Psalm 119 left out, verses in the app's numbering. · ಮೂಲಗಳು ಮತ್ತು ಹಕ್ಕುಗಳು