Bible Explorer ಆ್ಯಪ್ ಪಡೆಯಿರಿ

ಮುಖಪುಟ › ದೈನಂದಿನ ಬೈಬಲ್ ವಾಚನಗಳು › ಸೆಪ್ಟೆಂಬರ್ 2027 › 14 ಸೆಪ್ಟೆಂಬರ್

ಆರ್ಥೊಡಾಕ್ಸ್ ಪಂಚಾಂಗ · ಸೆಪ್ಟೆಂಬರ್ 1 (ಹಳೆಯ ಪದ್ಧತಿ)

ಆರ್ಥೊಡಾಕ್ಸ್ ದೈನಂದಿನ ವಾಚನಗಳು — 14 ಸೆಪ್ಟೆಂಬರ್ 2027

ಮಂಗಳವಾರ · ಪಂಚಾಶತ್ತಮದ ನಂತರದ 13ನೇ ವಾರ · ಸ್ವರ 3

ಹಬ್ಬಗಳು ಮತ್ತು ಸಂತರು

Beginning of the Indiction (that is, the New Year)

ಉಪವಾಸ

ಉಪವಾಸವಿಲ್ಲ

ಇದು ಮಠದ ನಿಯಮವನ್ನು ಅನುಸರಿಸುತ್ತದೆ. ಸಭೆಯಲ್ಲಿ ಉಪವಾಸದ ಪ್ರಮಾಣವನ್ನು ಆರೋಗ್ಯ, ವಯಸ್ಸು ಮತ್ತು ಸಂದರ್ಭಗಳಿಗೆ ಅನುಗುಣವಾಗಿ ಪಾಪನಿವೇದನೆಯ ಗುರುವಿನೊಂದಿಗೆ ಸೇರಿ ನಿರ್ಧರಿಸಲಾಗುತ್ತದೆ.

ದಿನದ ವಾಚನಗಳು

ಸಂಧ್ಯಾ ಪ್ರಾರ್ಥನೆ: ವಾಚನ

ಯೆಶಾ 61:1–9

1ಕರ್ತನಾದ ಯೆಹೋವನ ಆತ್ಮವು ನನ್ನ ಮೇಲೆ ಇದೆ, ಆತನು ನನ್ನನ್ನು ಬಡವರಿಗೆ ಶುಭವರ್ತಮಾನವನ್ನು ಸಾರುವುದಕ್ಕೆ ಅಭಿಷೇಕಿಸಿದನು; ಮನಮುರಿದವರನ್ನು ಕಟ್ಟಿ ವಾಸಿಮಾಡುವುದಕ್ಕೂ, ಸೆರೆಯವರಿಗೆ ಬಿಡುಗಡೆಯಾಗುವುದನ್ನು, ಬಂದಿಗಳಿಗೆ ಕದ ತೆರೆಯುವುದನ್ನು ಪ್ರಸಿದ್ಧಿಪಡಿಸುವುದಕ್ಕೂ, 2ಯೆಹೋವನು ನೇಮಿಸಿರುವ ಶುಭವರ್ಷ, ನಮ್ಮ ದೇವರು ಮುಯ್ಯಿತೀರಿಸುವ ದಿನ ಇವುಗಳನ್ನು ಪ್ರಚುರಗೊಳಿಸುವುದಕ್ಕೂ, 3ದುಃಖಿತರೆಲ್ಲರನ್ನು ಸಂತೈಸುವುದಕ್ಕೂ, ಚೀಯೋನಿನಲ್ಲಿ ಶೋಕಿಸುವವರಿಗೆ ಬೂದಿಗೆ ಬದಲಾಗಿ ಶಿರೋಭೂಷಣ, ದುಃಖವಿದ್ದಲ್ಲಿ ಆನಂದತೈಲ, ಕುಂದಿದ ಮನಕ್ಕೆ ಪ್ರತಿಯಾಗಿ ಉತ್ಸಾಹ ಸ್ತೋತ್ರದ ವಸ್ತ್ರ ಇವುಗಳನ್ನು ಒದಗಿಸಿಕೊಡುವುದಕ್ಕೂ ಆತನು ನನ್ನನ್ನು ಕಳುಹಿಸಿದ್ದಾನೆ. ಯೆಹೋವನು ತನ್ನ ಪ್ರಭಾವಕ್ಕೋಸ್ಕರ ಹಾಕಿದ ನೀತಿವೃಕ್ಷಗಳು ಎಂಬ ಬಿರುದು ಇವರಿಗಾಗುವುದು. 4ಪುರಾತನಕಾಲದಲ್ಲಿ ಹಾಳಾದ ನಿವೇಶನಗಳನ್ನು ತಿರುಗಿ ಕಟ್ಟುವರು, ಪೂರ್ವದಲ್ಲಿ ಹಾಳುಬಿದ್ದದ್ದನ್ನು ಪುನಃ ಎಬ್ಬಿಸುವರು, ತಲತಲಾಂತರಗಳಿಂದ ಹಾಳಾದ ಪಟ್ಟಣಗಳನ್ನು ಜೀರ್ಣೋದ್ಧಾರ ಮಾಡುವರು. 5ಆಗ ವಿದೇಶೀಯರು ನಿಂತುಕೊಂಡು ನಿಮ್ಮ ಮಂದೆಗಳನ್ನು ಮೇಯಿಸುವರು, ಅನ್ಯರು ನಿಮಗೆ ಉಳುವವರೂ ಮತ್ತು ತೋಟಗಾರರೂ ಆಗುವರು. 6ನೀವೋ ಯೆಹೋವನ ಯಾಜಕರೆಂಬ ಬಿರುದನ್ನು ಹೊಂದುವಿರಿ, ಜನರು ನಿಮ್ಮನ್ನು ನಮ್ಮ ದೇವರ ಸೇವಕರು ಎಂದು ಕರೆಯುವರು; ಜನಾಂಗಗಳ ಆಸ್ತಿಯನ್ನು ಅನುಭವಿಸುವಿರಿ, ಅವುಗಳ ವೈಭವವನ್ನು ಪಡೆದು ಹೊಗಳಿಕೊಳ್ಳುವಿರಿ. 7ನಿಮಗಾದ ಅವಮಾನಕ್ಕೆ ಬದಲಾಗಿ ಎರಡರಷ್ಟು ಮಾನವನ್ನು ಹೊಂದುವಿರಿ; ನಾಚಿಕೆಪಟ್ಟದ್ದಕ್ಕೆ ಪ್ರತಿಯಾಗಿ ಇವರು ತಮ್ಮ ಸ್ವತ್ತಿನಲ್ಲಿ ಹಿಗ್ಗುವರು; ಹೀಗೆ ತಮ್ಮ ದೇಶದಲ್ಲಿ ಎರಡರಷ್ಟನ್ನು ಅನುಭವಿಸುವರು; ಇವರಿಗೆ ಶಾಶ್ವತ ಸಂತೋಷವಾಗುವುದು. 8ಯೆಹೋವನೆಂಬ ನಾನು ನ್ಯಾಯವನ್ನು ಪ್ರೀತಿಸುತ್ತೇನೆ. ಕೊಳ್ಳೆಯನ್ನೂ, ಅನ್ಯಾಯವನ್ನೂ ದ್ವೇಷಿಸುತ್ತೇನೆ. ನಾನು ಇವರ ನಷ್ಟಕ್ಕೆ ಬದಲಾಗಿ ಪ್ರತಿಫಲವನ್ನು ಪ್ರಾಮಾಣಿಕವಾಗಿ ಕೊಟ್ಟು, ಇವರೊಂದಿಗೆ ನಿತ್ಯವಾದ ಒಡಂಬಡಿಕೆಯನ್ನು ಮಾಡಿಕೊಳ್ಳುವೆನು. 9ಇವರ ಸಂತಾನವು ಜನಾಂಗಗಳಲ್ಲಿ ಪ್ರಖ್ಯಾತವಾಗುವುದು, ಇವರ ಸಂತತಿಯು ಅನ್ಯದೇಶೀಯರಲ್ಲಿ ಹೆಸರುಗೊಳ್ಳುವುದು. ಇವರನ್ನು ನೋಡುವವರೆಲ್ಲರು ಯೆಹೋವನು ಆಶೀರ್ವದಿಸಿದ ವಂಶವು ಇದೇ ಎಂದು ಒಪ್ಪಿಕೊಳ್ಳುವರು.

ಸಂಧ್ಯಾ ಪ್ರಾರ್ಥನೆ: ವಾಚನ

ಯಾಜ 26:3–12, 14–17, 19–20, 22, 33, 23–25

3“ನೀವು ನನ್ನ ನಿಯಮಗಳನ್ನು ಕೈಕೊಂಡು, ನನ್ನ ಆಜ್ಞೆಗಳನ್ನು ಅನುಸರಿಸಿ ನಡೆದರೆ, 4ನಾನು ಮುಂಗಾರು ಮತ್ತು ಹಿಂಗಾರು ಮಳೆಗಳನ್ನು ಆಯಾ ಕಾಲದಲ್ಲಿಯೇ ಬರಮಾಡುವೆನು; ನಿಮ್ಮ ಹೊಲಗಳು ಒಳ್ಳೆಯ ಬೆಳೆಯನ್ನು ಕೊಡುವವು ಹಾಗು ತೋಟದ ಮರಗಳು ಹೇರಳವಾದ ಫಲಕೊಡುವವು. 5ಕಣತುಳಿಸುವ ಕೆಲಸವು ದ್ರಾಕ್ಷಿಯ ಬೆಳೆಯ ಕಾಲದ ತನಕ ಮತ್ತು ದ್ರಾಕ್ಷಿಯ ಬೆಳೆಯನ್ನು ಕೂಡಿಸುವ ಕೆಲಸವು ಬಿತ್ತನೆಯ ಕಾಲದ ವರೆಗೂ ನಡೆಯುವವು, ನೀವು ಸಮೃದ್ಧಿಯಾಗಿ ಊಟ ಮಾಡುವಿರಿ, ನಿಮ್ಮ ದೇಶದಲ್ಲಿ ಸುರಕ್ಷಿತವಾಗಿ ವಾಸಮಾಡುವಿರಿ. 6ನಿಮ್ಮ ದೇಶದಲ್ಲಿ ನಿಮಗೆ ಸಮಾಧಾನವನ್ನು ಅನುಗ್ರಹಿಸುವೆನು; ಯಾರ ಭಯವೂ ಇಲ್ಲದೆ ಮಲಗಿಕೊಳ್ಳುವಿರಿ; ದುಷ್ಟಮೃಗಗಳನ್ನು ದೇಶದಿಂದ ತೆಗೆದುಹಾಕುವೆನು; ನಿಮ್ಮ ದೇಶವು ಶತ್ರುಗಳ ಕತ್ತಿಯಿಂದ ಹಾಳಾಗುವುದಿಲ್ಲ. 7ನೀವು ನಿಮ್ಮ ವೈರಿಗಳನ್ನು ಓಡಿಸುವಿರಿ ಮತ್ತು ಅವರನ್ನು ಕತ್ತಿಯಿಂದ ಸಂಹರಿಸುವಿರಿ. 8ನಿಮ್ಮಲ್ಲಿ ಐದು ಜನರು ನೂರು ಜನರನ್ನೂ ಮತ್ತು ನೂರು ಜನರು ಹತ್ತು ಸಾವಿರ ಜನರನ್ನೂ ಓಡಿಸುವರು; ನಿಮ್ಮ ಶತ್ರುಗಳು ನಿಮ್ಮ ಕತ್ತಿಯಿಂದ ಹತರಾಗುವರು. 9ನಾನು ನಿಮ್ಮ ಮೇಲೆ ಕಟಾಕ್ಷವಿಟ್ಟು ಬಹುಸಂತಾನವನ್ನು ಕೊಟ್ಟು ಹೆಚ್ಚಿಸುವೆನು; ನಿಮ್ಮೊಂದಿಗೆ ನನ್ನ ಒಡಂಬಡಿಕೆಯನ್ನು ಸ್ಥಿರಪಡಿಸುವೆನು. 10ನೀವು ಬಹುದಿನದಿಂದ ಇಟ್ಟುಕೊಂಡಿರುವ ಹಳೆಯ ಧಾನ್ಯವನ್ನು ಊಟಮಾಡುವಿರಿ; ಹೊಸದಕ್ಕೆ ಸ್ಥಳ ಉಂಟಾಗುವಂತೆ ಹಳೆಯದನ್ನು ತೆಗೆಯುವಿರಿ. 11ನಾನು ನಿಮ್ಮ ನಡುವೆ ವಾಸಮಾಡುವೆನು; ನಿಮ್ಮನ್ನು ತಳ್ಳಿಬಿಡುವುದಿಲ್ಲ. 12ನಿಮ್ಮ ನಡುವೆ ತಿರುಗಾಡುತ್ತಾ ನಿಮಗೆ ದೇವರಾಗಿರುವೆನು, ನೀವು ನನಗೆ ಪ್ರಜೆಯಾಗಿರುವಿರಿ. 14“ಆದರೆ ನೀವು ನನ್ನ ಮಾತನ್ನು ಕೇಳದೆ ಈ ಆಜ್ಞೆಗಳನ್ನೆಲ್ಲಾ ಅನುಸರಿಸದೆ, 15ನನ್ನ ನಿಯಮಗಳನ್ನು ಬೇಡವೆಂದು ನನ್ನ ವಿಧಿಗಳನ್ನು ತಳ್ಳಿಬಿಟ್ಟರೆ ನೀವು ನನ್ನ ಆಜ್ಞೆಗಳನ್ನು ಅನುಸರಿಸದೆ ನನ್ನ ನಿಬಂಧನೆಯನ್ನು ಮೀರಿ ನಡೆದರೆ, 16ನಾನು ನಿಮಗೆ ಮಾಡುವುದೇನೆಂದರೆ, ಕ್ಷಯರೋಗ, ಚಳಿಜ್ವರ ಮುಂತಾದ ಭಯಂಕರ ವ್ಯಾಧಿಗಳನ್ನು ನಿಮ್ಮಲ್ಲಿ ಇರುವಂತೆ ಮಾಡುವೆನು; ಇವುಗಳ ದೆಸೆಯಿಂದ ನೀವು ಕಂಗೆಟ್ಟವರಾಗಿಯೂ, ಮನಗುಂದಿದವರಾಗಿಯೂ ಇರುವಿರಿ. ನೀವು ಬೀಜಬಿತ್ತಿದಾಗ ಅದರ ಫಲವು ನಿಮಗೆ ದೊರೆಯದೆ ಹೋಗುವುದು; ಶತ್ರುಗಳು ಬಂದು ಅದನ್ನು ತಿಂದುಬಿಡುವರು. 17ನಾನು ನಿಮ್ಮ ಮೇಲೆ ಉಗ್ರಕೋಪಗೊಳ್ಳುವುದರಿಂದ ನೀವು ನಿಮ್ಮ ಶತ್ರುಗಳ ಮುಂದೆ ಸೋತು ಹೋಗುವಿರಿ; ನಿಮ್ಮ ವೈರಿಗಳು ನಿಮ್ಮನ್ನು ಆಳುವರು; ಯಾರೂ ಬೆನ್ನಟ್ಟಿ ಬರದಿದ್ದರು ನೀವು ಹೆದರಿ ಓಡುವಿರಿ. 19ನಿಮ್ಮ ಗರ್ವಕ್ಕೆ ಕಾರಣವಾದ ಬಲವನ್ನು ಮುರಿಯುವೆನು. ನಿಮ್ಮ ಮೇಲಿರುವ ಆಕಾಶವನ್ನು ಕಬ್ಬಿಣದಂತೆಯೂ ಹಾಗು ನೀವು ಸಾಗುವಳಿಮಾಡುವ ಭೂಮಿಯನ್ನು ತಾಮ್ರದಂತೆಯೂ ಮಾಡುವೆನು. 20ನೀವು ದುಡಿದದ್ದೆಲ್ಲಾ ವ್ಯರ್ಥವಾಗುವುದು; ನಿಮ್ಮ ಭೂಮಿಯಲ್ಲಿ ಬೆಳೆಯಾಗುವುದಿಲ್ಲ, ತೋಟಗಳ ಮರಗಳು ಫಲ ಕೊಡುವುದಿಲ್ಲ. 22ನಿಮ್ಮ ಮೇಲೆ ಕಾಡುಮೃಗಗಳನ್ನು ಬರಮಾಡುವೆನು; ಅವು ನಿಮ್ಮ ಮಕ್ಕಳನ್ನು ಕದ್ದುಕೊಂಡು ಹೋಗುವವು, ನಿಮ್ಮ ಪಶುಗಳನ್ನು ಕೊಲ್ಲುವವು, ನಿಮ್ಮನ್ನು ಸ್ವಲ್ಪ ಜನರನ್ನಾಗಿ ಮಾಡುವವು; ನಿಮ್ಮ ದಾರಿಗಳು ಪಾಳು ಬೀಳುತ್ತದೆ. 33ನಿಮ್ಮನ್ನು ಅನ್ಯಜನಗಳಲ್ಲಿ ಚದುರಿಸಿ, ನಿಮ್ಮ ಹಿಂದೆ ಕತ್ತಿಯನ್ನು ಬೀಸುವೆನು. ನಿಮ್ಮ ದೇಶವು ಹಾಳಾಗುವುದು, ನಿಮ್ಮ ಪಟ್ಟಣಗಳು ನಾಶವಾಗುವವು. 23“ಇಷ್ಟು ಶಿಕ್ಷೆಗಳಿಂದಲೂ ನೀವು ನನ್ನ ಆಜ್ಞೆಗೆ ಒಳಗಾಗದೆ ನನಗೆ ವಿರೋಧವಾಗಿ ನಡೆದರೆ, 24ನಿಮ್ಮ ಪಾಪಗಳ ನಿಮಿತ್ತ ನಾನೇ ನಿಮ್ಮನ್ನು ಏಳರಷ್ಟಾಗಿ ಬಾಧಿಸುವೆನು. 25ಶತ್ರುಗಳ ಕತ್ತಿಯ ಮೂಲಕವಾಗಿ ನಿಮ್ಮನ್ನು ಸಂಹರಿಸುವೆನು; ನೀವು ನನ್ನ ನಿಬಂಧನೆಯನ್ನು ಮೀರಿದ್ದರಿಂದ ಆ ಕತ್ತಿಯು ಪ್ರತಿದಂಡನೆಮಾಡುವುದು. ನೀವು ನಿಮ್ಮ ಪಟ್ಟಣಗಳಲ್ಲಿ ಕೂಡಿರುವಾಗ ನಿಮ್ಮಲ್ಲಿ ಅಂಟುರೋಗ ಉಂಟಾಗುವಂತೆ ಮಾಡುವೆನು; ಹೀಗೆ ನೀವು ಶತ್ರುಗಳ ಕೈಗೆ ಬೀಳುವಿರಿ.

ಸಂಧ್ಯಾ ಪ್ರಾರ್ಥನೆ: ವಾಚನ

ಈ ಅನುವಾದದಲ್ಲಿ ಇಲ್ಲ

ಪತ್ರಿಕೆ (ಸಭೆಯ ಹೊಸ ವರ್ಷ)

1 ತಿಮೊ 2:1–7

1ಎಲ್ಲಾದಕ್ಕಿಂತ ಮೊದಲು ಎಲ್ಲಾ ಜನರಿಗೋಸ್ಕರ ದೇವರಿಗೆ ವಿಜ್ಞಾಪನೆಗಳನ್ನೂ, ಪ್ರಾರ್ಥನೆಗಳನ್ನೂ, ಮನವಿಗಳನ್ನೂ, ಕೃತಜ್ಞತಾಸ್ತುತಿಗಳನ್ನೂ ಮಾಡಬೇಕೆಂದು ಕೇಳಿಕೊಳ್ಳುತ್ತೇನೆ. 2ನಮಗೆ ಸುಖಸಮಾಧಾನಗಳು ಉಂಟಾಗಿ ನಾವು ಪೂರ್ಣಭಕ್ತಿಯಿಂದಲೂ, ಗೌರವದಿಂದಲೂ ಜೀವಿಸುವಂತೆ, ಅರಸುಗಳಿಗಾಗಿಯೂ ಎಲ್ಲಾ ಅಧಿಕಾರಿಗಳಿಗಾಗಿಯೂ ವಿಜ್ಞಾಪನೆಗಳನ್ನು ಮಾಡಬೇಕು. 3ಹಾಗೆ ಮಾಡುವುದು ನಮ್ಮ ರಕ್ಷಕನಾದ ದೇವರ ಸನ್ನಿಧಿಯಲ್ಲಿ ಒಳ್ಳೆಯದು, ಮೆಚ್ಚಿಕೆಯಾಗಿಯೂ ಇದೆ. 4ಎಲ್ಲಾ ಜನರೂ ರಕ್ಷಣೆಯನ್ನು ಹೊಂದಿ ಸತ್ಯದ ಜ್ಞಾನಕ್ಕೆ ಸೇರಬೇಕೆಂಬುದೇ ಆತನ ಚಿತ್ತವಾಗಿದೆ. 5ಏಕೆಂದರೆ ದೇವರು ಒಬ್ಬನೇ, ದೇವರಿಗೂ ಮನುಷ್ಯರಿಗೂ ಮಧ್ಯಸ್ಥನು ಒಬ್ಬನೇ, ಆತನು ಮನುಷ್ಯನಾಗಿರುವ ಕ್ರಿಸ್ತ ಯೇಸುವೇ. 6ಆತನು ಎಲ್ಲರ ವಿಮೋಚನಾರ್ಥವಾಗಿ ತನ್ನನ್ನು ಒಪ್ಪಿಸಿಕೊಟ್ಟನು. ಇದೇ ತಕ್ಕ ಸಮಯಗಳಲ್ಲಿ ಹೇಳಬೇಕಾದ ಸಾಕ್ಷಿಯಾಗಿದೆ. 7ಆ ಸಾಕ್ಷಿಯನ್ನು ಪ್ರಸಿದ್ಧಿಪಡಿಸುವುದಕ್ಕಾಗಿಯೇ ನಾನು ಸಂದೇಶಕನಾಗಿಯೂ, ಅಪೊಸ್ತಲನಾಗಿಯೂ, ನಂಬಿಕೆಯಿಂದಲೂ ಸತ್ಯದಿಂದಲೂ ಅನ್ಯಜನರಿಗೆ ಬೋಧಿಸುವವನಾಗಿಯೂ ನೇಮಿಸಲ್ಪಟ್ಟಿದ್ದೇನೆ. ನಾನು ಸುಳ್ಳಾಡದೇ ಸತ್ಯವನ್ನೇ ಹೇಳುತ್ತೇನೆ.

ಪತ್ರಿಕೆ (ಸಂತ ಸಿಮೆಯೋನ)

ಕೊಲೊ 3:12–16

12ಹೀಗಿರಲಾಗಿ ದೇವರಿಂದ ಆರಿಸಿಕೊಂಡವರಾಗಿ, ಪರಿಶುದ್ಧರೂ ಹಾಗೂ ಪ್ರಿಯರೂ ಆಗಿರುವುದರಿಂದ ಕನಿಕರ, ದಯೆ, ದೀನತೆ, ಸಾತ್ವಿಕತ್ವ ಮತ್ತು ಸಹನೆ ಎಂಬ ಸದ್ಗುಣಗಳನ್ನು ಧರಿಸಿಕೊಳ್ಳಿರಿ. 13ಒಬ್ಬರನ್ನೊಬ್ಬರು ಸೈರಿಸಿಕೊಂಡು ಯಾರಿಗಾದರೂ ಮತ್ತೊಬ್ಬನ ಮೇಲೆ ತಪ್ಪುಹೊರಿಸುವುದಕ್ಕೆ ಕಾರಣವಿದ್ದರೂ, ತಪ್ಪುಹೊರಿಸದೆ ಕ್ಷಮಿಸಿರಿ, ಕರ್ತನು ನಿಮ್ಮನ್ನು ಕ್ಷಮಿಸಿದಂತೆಯೇ ನೀವೂ ಕ್ಷಮಿಸಿರಿ. 14ಇವೆಲ್ಲಕ್ಕಿಂತ ಮಿಗಿಲಾಗಿ ಸಂಪೂರ್ಣತೆಯ ಬಂಧವಾಗಿರುವ ಪ್ರೀತಿಯನ್ನು ಧರಿಸಿಕೊಳ್ಳಿರಿ. 15ಕ್ರಿಸ್ತನ ಸಮಾಧಾನವು ನಿಮ್ಮ ಹೃದಯಗಳಲ್ಲಿ ಆಳಲಿ. ಇದೇ ಸಮಾಧಾನದಲ್ಲಿ ಏಕ ದೇಹವಾಗಿರುವಂತೆ ನೀವು ಕರೆಯಲ್ಪಟ್ಟಿರುವಿರಿ ಇದಲ್ಲದೆ ಕೃತಜ್ಞತೆಯುಳ್ಳವರಾಗಿರಿ. 16ಕ್ರಿಸ್ತನ ವಾಕ್ಯವು ನಿಮ್ಮಲ್ಲಿ ಸಮೃದ್ಧಿಯಾಗಿ ವಾಸಿಸಲಿ. ಸಕಲಜ್ಞಾನದಿಂದ ಒಬ್ಬರಿಗೊಬ್ಬರು ಉಪದೇಶಮಾಡಿಕೊಂಡು ಬುದ್ಧಿಹೇಳಿಕೊಳ್ಳಿರಿ. ಕೀರ್ತನೆಗಳಿಂದಲೂ, ಸ್ತುತಿಪದಗಳಿಂದಲೂ ಮತ್ತು ಆತ್ಮೀಕವಾದ ಗೀತೆಗಳಿಂದಲೂ ಹಾಗೂ ನಿಮ್ಮ ಹೃದಯಗಳಲ್ಲಿ ದೇವರಿಗೆ ಕೃತಜ್ಞತೆಯಿಂದಲೂ ಹಾಡಿರಿ.

ಸುವಾರ್ತೆ (ಸಭೆಯ ಹೊಸ ವರ್ಷ)

ಲೂಕ 4:16–22

16ಹೀಗಿರಲಾಗಿ ಆತನು ತಾನು ಬೆಳೆದುಬಂದ ಊರಾದ ನಜರೇತಿಗೆ ಬಂದು, ತನ್ನ ವಾಡಿಕೆಯ ಪ್ರಕಾರ ಸಬ್ಬತ್ ದಿನದಲ್ಲಿ ಸಭಾಮಂದಿರದೊಳಗೆ ಹೋಗಿ ಪವಿತ್ರಗ್ರಂಥವನ್ನು ಓದುವುದಕ್ಕಾಗಿ ಎದ್ದು ನಿಂತನು. 17ಆಗ ಯೆಶಾಯನೆಂಬ ಪ್ರವಾದಿಯು ಬರೆದ ಗ್ರಂಥದ ಸುರುಳಿಯನ್ನು ಆತನ ಕೈಗೆ ಕೊಡಲಾಗಿ ಆತನು ಆ ಸುರುಳಿಯನ್ನು ಬಿಚ್ಚಿದಾಗ ಬರೆದಿರುವ ಈ ಭಾಗವನ್ನು ಕಂಡು ಓದಿದನು; ಅಲ್ಲಿ ಹೀಗೆ ಬರೆದಿತ್ತು, 18“ಕರ್ತನ ಆತ್ಮವು ನನ್ನ ಮೇಲೆ ಅದೆ, ಆತನು ನನ್ನನ್ನು ಬಡವರಿಗೆ ಶುಭವಾರ್ತೆಯನ್ನು ಸಾರುವುದಕ್ಕಾಗಿ ಅಭಿಷೇಕಿಸಿರುವನು. ಸೆರೆಯಲ್ಲಿರುವವರನ್ನು ಬಿಡುಗಡೆಮಾಡುವುದಕ್ಕೂ, ಮತ್ತು ಕುರುಡರಿಗೆ ಕಣ್ಣು ಬರುವುದಕ್ಕೂ ಹಿಂಸಿಸಲ್ಪಟ್ಟವರನ್ನು ಬಿಡಿಸಿ ಕಳುಹಿಸುವುದಕ್ಕೂ 19ಕರ್ತನು ನೇಮಿಸಿರುವ ಶುಭವರ್ಷವನ್ನು ಪ್ರಚಾರಪಡಿಸುವುದಕ್ಕೂ ಆತನು ನನ್ನನ್ನು ಕಳುಹಿಸಿದ್ದಾನೆ.” 20ಅದನ್ನು ಓದಿದ ಮೇಲೆ ಆತನು ಆ ಸುರುಳಿಯನ್ನು ಸುತ್ತಿ ಸಭಾಮಂದಿರದ ಸೇವಕನ ಕೈಗೆ ಕೊಟ್ಟು ಕುಳಿತುಕೊಂಡನು. ಅಲ್ಲಿ ನೆರೆದ್ದಿದವರೆಲ್ಲರ ಕಣ್ಣುಗಳೂ ಆತನ ಮೇಲಿರಲಾಗಿ, 21ಆತನು ಅವರಿಗೆ, “ಈ ಹೊತ್ತು ನೀವು ನನ್ನ ಮಾತನ್ನು ಕೇಳುವಲ್ಲಿ ಈ ವೇದೋಕ್ತಿ ನೆರವೇರಿದೆ” ಎಂದು ಹೇಳುತ್ತಿರುವಾಗ, 22ಎಲ್ಲರು ಆತನನ್ನು ಹೊಗಳಿ ಆತನ ಬಾಯಿಂದ ಹೊರಡುವ ಇಂಪಾದ ಮಾತುಗಳಿಗೆ ಆಶ್ಚರ್ಯಪಟ್ಟು, “ಇವನು ಯೋಸೇಫನ ಮಗನಲ್ಲವೇ?” ಎಂದು ಮಾತನಾಡಿಕೊಂಡರು.

ಸುವಾರ್ತೆ (ಸಂತ ಸಿಮೆಯೋನ)

ಮತ್ತಾ 11:27–30

27ನನ್ನ ತಂದೆಯು ಎಲ್ಲವನ್ನು ನನಗೆ ಒಪ್ಪಿಸಿದ್ದಾನೆ. ತಂದೆಯ ಹೊರತು ಇನ್ನಾವನೂ ಮಗನನ್ನು ತಿಳಿದವನಲ್ಲ. ಮಗನ ಹೊರತು ಇನ್ನಾವನೂ ತಂದೆಯನ್ನು ತಿಳಿದವನಲ್ಲ. ಮತ್ತು ಮಗನು ತಂದೆಯನ್ನು ಯಾರಿಗೆ ಪ್ರಕಟಪಡಿಸುವುದಕ್ಕೆ ಇಚ್ಛಿಸುತ್ತಾನೋ ಅವನು ಆತನನ್ನು ತಿಳಿದವನಾಗಿದ್ದಾನೆ. 28“ಎಲೈ ಕಷ್ಟಪಡುವವರೇ, ಹೊರೆಹೊತ್ತವರೇ, ನೀವೆಲ್ಲರೂ ನನ್ನ ಬಳಿಗೆ ಬನ್ನಿರಿ ನಾನು ನಿಮಗೆ ವಿಶ್ರಾಂತಿ ಕೊಡುವೆನು. 29ನಾನು ಸಾತ್ವಿಕನೂ ದೀನಹೃದಯನೂ ಆಗಿರುವುದರಿಂದ ನನ್ನ ನೊಗವನ್ನು ನಿಮ್ಮ ಮೇಲೆ ತೆಗೆದುಕೊಂಡು ನನ್ನಿಂದ ಕಲಿತುಕೊಳ್ಳಿರಿ, ಆಗ ನಿಮ್ಮ ಆತ್ಮಗಳಿಗೆ ವಿಶ್ರಾಂತಿ ಸಿಕ್ಕುವುದು. 30ಏಕೆಂದರೆ ನನ್ನ ನೊಗವು ಮೃದುವಾದದ್ದು, ನನ್ನ ಹೊರೆಯು ಹಗುರವಾದದ್ದು ಆಗಿದೆ” ಅಂದನು.

ದಿನಾಂಕಗಳು ರಷ್ಯನ್ ಸಭೆಯ ಜೂಲಿಯನ್ ಪಂಚಾಂಗದ ಪ್ರಕಾರ ಇವೆ (ಸರ್ಬಿಯನ್ ಮತ್ತು ಜಾರ್ಜಿಯನ್ ಸಭೆಗಳು ಮತ್ತು ಅಥೋಸ್ ಪರ್ವತದಂತೆ): ಸಭೆಯ ಪಂಚಾಂಗದ 1 ಸೆಪ್ಟೆಂಬರ್ ಎಂದರೆ ನಾಗರಿಕ ಪಂಚಾಂಗದ 14 ಸೆಪ್ಟೆಂಬರ್. ಹೊಸ ಪಂಚಾಂಗದ ಸಭೆಗಳು (ಗ್ರೀಸ್, ರೊಮೇನಿಯಾ, ಬಲ್ಗೇರಿಯಾ, ಉಕ್ರೇನ್…) ನಿಗದಿತ ದಿನಾಂಕದ ಹಬ್ಬಗಳನ್ನೂ ಸಂತರನ್ನೂ ಅದೇ ನಾಗರಿಕ ದಿನಾಂಕದಂದು, 13 ದಿನಗಳ ಮುಂಚೆ, ಆಚರಿಸುತ್ತವೆ, ಮತ್ತು ಅವುಗಳ ಕೆಲವು ವಾಚನಗಳು ಬೇರೆಯಾಗಿವೆ; ಈಸ್ಟರ್ ಮತ್ತು ಅದನ್ನು ಅವಲಂಬಿಸಿರುವ ದಿನಗಳು ಒಂದೇ ಆಗಿವೆ.

ಮೂಲಗಳು: ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ · © 2017, 2019 Bridge Connectivity Solutions, CC BY-SA 4.0; changed: footnotes, headings and the letters over Psalm 119 left out, verses in the app's numbering. · ಮೂಲಗಳು ಮತ್ತು ಹಕ್ಕುಗಳು