ಮುಖಪುಟ › ದೈನಂದಿನ ಬೈಬಲ್ ವಾಚನಗಳು › ಸೆಪ್ಟೆಂಬರ್ 2027 › 15 ಸೆಪ್ಟೆಂಬರ್
ಕ್ಯಾಥೊಲಿಕ್ ಪಂಚಾಂಗ
ದೈನಂದಿನ ಬೈಬಲ್ ವಾಚನಗಳು (ಕಥೋಲಿಕ) — 15 ಸೆಪ್ಟೆಂಬರ್ 2027
ಬುಧವಾರ · ಸಾಮಾನ್ಯ ಕಾಲದ 24ನೇ ವಾರ
ಹಬ್ಬಗಳು ಮತ್ತು ಸಂತರು
ಸಾಮಾನ್ಯ ಕಾಲದ 24ನೇ ವಾರದ ಬುಧವಾರ
ಸ್ಮರಣೆ · ಆರಾಧನಾ ಬಣ್ಣ: ಬಿಳಿ
ವ್ಯಾಕುಲ ಮಾತೆ · ಸ್ಮರಣೆ
ದಿನದ ವಾಚನಗಳು
ಮೊದಲನೆಯ ವಾಚನ
14ಬೇಗನೆ ನಿನ್ನ ಬಳಿಗೆ ಬರುವೆನೆಂಬ ನಿರೀಕ್ಷೆಯಿಂದಲೇ ನಿನಗೆ ಈ ವಿಷಯಗಳನ್ನು ಬರೆದಿದ್ದೇನೆ. 15ಆದರೆ ಒಂದು ವೇಳೆ ನಾನು ತಡಮಾಡಿದರೂ, ದೇವರ ಮನೆಯಲ್ಲಿ ಅಂದರೆ ಜೀವಸ್ವರೂಪನಾದ ದೇವರ ಸಭೆಯಲ್ಲಿ ನಡೆದುಕೊಳ್ಳಬೇಕಾದ ರೀತಿಯು ನಿನಗೆ ತಿಳಿದಿರಬೇಕೆಂದು ಈ ಸಂಗತಿಗಳನ್ನು ಬರೆದಿದ್ದೇನೆ. ಯಾಕೆಂದರೆ ಸಭೆಯು ಸತ್ಯಕ್ಕೆ ಸ್ತಂಭವೂ ಆಧಾರವೂ ಆಗಿದೆ. 16ದೇವಭಕ್ತಿಗೆ ಆಧಾರವಾಗಿರುವ ಸತ್ಯಾರ್ಥದ ರಹಸ್ಯವು ಗಂಭೀರವಾದದ್ದೆಂಬುದನ್ನು ನಾವೆಲ್ಲರೂ ಒಪ್ಪಿಕೊಳ್ಳುತ್ತೇವೆ, ಅದೇನಂದರೆ, ಕ್ರಿಸ್ತನು ಶರೀರಧಾರಿಯಾಗಿ ಪ್ರತ್ಯಕ್ಷನಾದನು, ಆತ್ಮಸಂಬಂಧವಾಗಿ ಕ್ರಿಸ್ತನೇ ನೀತಿವಂತನೆಂದು ಪರಿಗಣಿಸಲ್ಪಟ್ಟನು, ದೇವದೂತರಿಗೆ ಕಾಣಿಸಿಕೊಂಡನು, ಅನ್ಯಜನರ ಮಧ್ಯದಲ್ಲಿ ಸಾರಲ್ಪಟ್ಟನು, ಲೋಕದಲ್ಲಿ ನಂಬಲ್ಪಟ್ಟನು, ಮಹಿಮೆಯೊಂದಿಗೆ ಪರಲೋಕಕ್ಕೆ ಎತ್ತಲ್ಪಟ್ಟನು.
ಪ್ರತಿವಚನ ಕೀರ್ತನೆ
1ಯೆಹೋವನಿಗೆ ಸ್ತೋತ್ರ! ನಾನು ಯೆಹೋವನನ್ನು ಕೊಂಡಾಡುವೆನು; ಯಥಾರ್ಥರ ಕೂಟದಲ್ಲಿಯೂ, ನೆರೆದ ಸಭೆಯಲ್ಲಿಯೂ, ಮನಃಪೂರ್ವಕವಾಗಿ ಕೀರ್ತಿಸುವೆನು. 2ಯೆಹೋವನ ಕೃತ್ಯಗಳು ಮಹತ್ತಾದವುಗಳು; ಅವುಗಳಲ್ಲಿ ಸಂತೋಷಿಸುವವರು ಅವುಗಳನ್ನೇ ಧ್ಯಾನಿಸುವರು. 3ಆತನ ಕಾರ್ಯವು ಘನ, ಮಾನಗಳುಳ್ಳದ್ದು; ಆತನ ನೀತಿಯು ಸದಾಕಾಲವೂ ಇರುವುದು. 4ಆತನು ತನ್ನ ಅದ್ಭುತಕೃತ್ಯಗಳ ಜ್ಞಾಪಕವನ್ನು ಉಳಿಯಮಾಡಿದ್ದಾನೆ. ಯೆಹೋವನು ಕೃಪೆಯೂ, ಕನಿಕರವೂ ಉಳ್ಳವನು. 5ತನ್ನಲ್ಲಿ ಭಯಭಕ್ತಿಯುಳ್ಳವರಿಗೆ ಆಹಾರವನ್ನು ಕೊಟ್ಟಿದ್ದಾನೆ; ತನ್ನ ಒಡಂಬಡಿಕೆಯನ್ನು ಯಾವಾಗಲೂ ನೆನಪಿನಲ್ಲಿಟ್ಟುಕೊಂಡಿದ್ದಾನೆ 6ಆತನು ಅನ್ಯಜನಗಳ ಸ್ವತ್ತನ್ನು ತನ್ನ ಪ್ರಜೆಗೆ ಕೊಡುವುದರ ಮೂಲಕ ಸ್ವಪ್ರತಾಪವನ್ನು ತೋರ್ಪಡಿಸಿದ್ದಾನೆ.
ಸುವಾರ್ತೆ
ಅಥವಾ: ಲೂಕ 2:33–35
25ಯೇಸುವಿನ ಶಿಲುಬೆಯ ಬಳಿಯಲ್ಲಿ ಆತನ ತಾಯಿಯೂ, ಆತನ ತಾಯಿಯ ತಂಗಿಯೂ, ಕ್ಲೋಪನ ಹೆಂಡತಿಯಾದ ಮರಿಯಳೂ, ಮಗ್ದಲದ ಮರಿಯಳೂ ನಿಂತಿದ್ದರು. 26ಯೇಸು ತನ್ನ ತಾಯಿಯನ್ನೂ ಹತ್ತಿರದಲ್ಲಿ ನಿಂತಿದ್ದ ತನ್ನ ಪ್ರೀತಿಯ ಶಿಷ್ಯನನ್ನೂ ನೋಡಿ ತನ್ನ ತಾಯಿಗೆ, “ಸ್ತ್ರೀಯೇ, ಇಗೋ, ನಿನ್ನ ಮಗನು” ಎಂದು ಹೇಳಿದನು. 27ತರುವಾಯ ಆ ಶಿಷ್ಯನಿಗೆ, “ಇಗೋ, ನಿನ್ನ ತಾಯಿ” ಎಂದು ಹೇಳಿದನು. ಆ ಗಳಿಗೆಯಿಂದ ಆ ಶಿಷ್ಯನು ಆಕೆಯನ್ನು ತನ್ನ ಸ್ವಂತ ಮನೆಯಲ್ಲೇ ಇರಿಸಿಕೊಂಡನು.
ಸಾಮಾನ್ಯ ರೋಮನ್ ಪಂಚಾಂಗ; ಬಿಷಪರ ಸಮ್ಮೇಳನವು ಕೆಲವು ಹಬ್ಬಗಳನ್ನು (ಪ್ರಭುವಿನ ಪ್ರಕಟನೆ, ಸ್ವರ್ಗಾರೋಹಣ, ಕ್ರಿಸ್ತನ ದೇಹ ಮತ್ತು ರಕ್ತ) ಭಾನುವಾರಕ್ಕೆ ಸರಿಸಬಹುದು ಅಥವಾ ತನ್ನದೇ ಹಬ್ಬಗಳನ್ನು ಸೇರಿಸಬಹುದು. ವಾಚನ ಸಂಗ್ರಹ: ಭಾನುವಾರದ ಚಕ್ರ B, ವಾರದ ದಿನಗಳ ವರ್ಷ I.
ಮೂಲಗಳು: ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ · © 2017, 2019 Bridge Connectivity Solutions, CC BY-SA 4.0; changed: footnotes, headings and the letters over Psalm 119 left out, verses in the app's numbering. · ಮೂಲಗಳು ಮತ್ತು ಹಕ್ಕುಗಳು