Bible Explorer ಆ್ಯಪ್ ಪಡೆಯಿರಿ

ಮುಖಪುಟ › ದೈನಂದಿನ ಬೈಬಲ್ ವಾಚನಗಳು › ಸೆಪ್ಟೆಂಬರ್ 2027 › 15 ಸೆಪ್ಟೆಂಬರ್

ಆರ್ಥೊಡಾಕ್ಸ್ ಪಂಚಾಂಗ · ಸೆಪ್ಟೆಂಬರ್ 2 (ಹಳೆಯ ಪದ್ಧತಿ)

ಆರ್ಥೊಡಾಕ್ಸ್ ದೈನಂದಿನ ವಾಚನಗಳು — 15 ಸೆಪ್ಟೆಂಬರ್ 2027

ಬುಧವಾರ · ಪಂಚಾಶತ್ತಮದ ನಂತರದ 13ನೇ ವಾರ · ಸ್ವರ 3

ಹಬ್ಬಗಳು ಮತ್ತು ಸಂತರು

Martyr Mamas of Cæsarea in Cappadocia (3rd C) and his parents Theodotus and Rufina

ಉಪವಾಸದ ದಿನ

ಉಪವಾಸ: ಎಣ್ಣೆಯೊಂದಿಗೆ

ಇದು ಮಠದ ನಿಯಮವನ್ನು ಅನುಸರಿಸುತ್ತದೆ. ಸಭೆಯಲ್ಲಿ ಉಪವಾಸದ ಪ್ರಮಾಣವನ್ನು ಆರೋಗ್ಯ, ವಯಸ್ಸು ಮತ್ತು ಸಂದರ್ಭಗಳಿಗೆ ಅನುಗುಣವಾಗಿ ಪಾಪನಿವೇದನೆಯ ಗುರುವಿನೊಂದಿಗೆ ಸೇರಿ ನಿರ್ಧರಿಸಲಾಗುತ್ತದೆ.

ದಿನದ ವಾಚನಗಳು

ಪತ್ರಿಕೆ

2 ಕೊರಿ 9:12–10:7

12ಹೇಗೆಂದರೆ ನೀವು ಮಾಡುವ ಈ ಧರ್ಮಕಾರ್ಯವು ದೇವಜನರ ಕೊರತೆಗಳನ್ನು ನೀಗಿಸುವುದು ಮಾತ್ರವಲ್ಲದೆ ಅನೇಕ ರೀತಿಯಲ್ಲಿ ದೇವರಿಗೆ ಕೃತಜ್ಞತಾಸ್ತುತಿಯನ್ನುಂಟುಮಾಡಲು ಇದು ಕಾರಣವಾಗುತ್ತದೆ. 13ನೀವು ಮಾಡುವ ಈ ಸಹಾಯ ಹಾಗೂ ನಿಮ್ಮ ಯೋಗ್ಯ ಭಾವವನ್ನು ಅನೇಕರು ನೋಡುವಾಗ, ನೀವು ಮಾಡಿದ ಕ್ರಿಯೆಗೆ ಸರಿಯಾಗಿ, ಕ್ರಿಸ್ತನ ಸುವಾರ್ತೆಯನ್ನು ನೀವು ಅನುಸರಿಸುವುದರಿಂದಲೂ, ಅವರಿಗೂ ಮತ್ತು ಎಲ್ಲರಿಗೂ ನೀವು ಉದಾರವಾಗಿ ಸಹಾಯ ಮಾಡುವುದರಿಂದಲೂ ಅವರು ದೇವರನ್ನು ಕೊಂಡಾಡುವರು. 14ಇದಲ್ಲದೆ ನಿಮಗೋಸ್ಕರ ವಿಜ್ಞಾಪನೆ ಮಾಡಿ ದೇವರ ಅತಿಶಯವಾದ ಕೃಪೆಯು ನಿಮಗೆ ದೊರೆತಿರುವುದರಿಂದ ಅವರು ನಿಮ್ಮನ್ನು ನೋಡಲು ಬಯಸಿರುವರಲ್ಲದೆ ನಿಮಗಾಗಿ ಪ್ರಾರ್ಥಿಸುವರು. 15ವರ್ಣಿಸಲಸಾಧ್ಯವಾದ ದಾನಗಳ ನಿಮಿತ್ತ ದೇವರಿಗೆ ಸ್ತೋತ್ರವಾಗಲಿ. 10:1ಪೌಲನು ನಮ್ಮೆದುರಿನಲ್ಲಿರುವಾಗ ದೀನನಾಗಿ ನಡೆದುಕೊಳ್ಳುವನೂ ದೂರದಲ್ಲಿರುವಾಗ ನಮ್ಮನ್ನು ಕುರಿತು ದಿಟ್ಟತನ ತೋರಿಸುವವನೂ ಆಗಿದ್ದಾನೆ ಎಂದು ಹೇಳಲ್ಪಡುವ ಆ ಪೌಲನೆಂಬ ನಾನು ಕ್ರಿಸ್ತನ ಶಾಂತ ಮನಸ್ಸನ್ನೂ ಸಾತ್ವಿಕತ್ವವನ್ನೂ ನೆನಪಿಗೆ ತಂದುಕೊಂಡು ನಿಮಗೆ ಖಂಡಿತವಾಗಿ ಹೇಳುವುದೇನಂದರೆ, 2ಯಾರು ನಮ್ಮನ್ನು ಲೋಕ ರೀತಿಯಾಗಿ ಜೀವಿಸುವವರೆಂದು ಎಣಿಸುತ್ತಾರೋ ಅವರೊಂದಿಗೆ ದಿಟ್ಟತನದಿಂದಲೇ ಇರಬೇಕೆಂದು ಅಂದುಕೊಂಡಿದೇನೆ. ನಾವು ನಿಮ್ಮೊಂದಿಗಿರುವಾಗ ಅಂಥ ದಿಟ್ಟತನವನ್ನು ತೋರಿಸುವುದಕ್ಕೆ ಅವಕಾಶವುಂಟಾಗಬಾರದೆಂದು ನಿಮ್ಮನ್ನು ಬೇಡಿಕೊಳ್ಳುತ್ತೇನೆ. 3ನಾವು ಲೋಕದಲ್ಲಿದ್ದರೂ ಲೋಕಾನುಸಾರವಾಗಿ ಯುದ್ಧಮಾಡುವವರಲ್ಲ. 4ನಾವು ಉಪಯೋಗಿಸುವ ಆಯುಧಗಳು ಲೋಕದ ಆಯುಧಗಳಲ್ಲ. ಅವು ದೇವರ ಎಣಿಕೆಯಲ್ಲಿ ಬಲವಾಗಿದ್ದು ಕೋಟೆಗಳನ್ನು ಕೆಡವಿಹಾಕುವಂಥವುಗಳಾಗಿವೆ. 5ನಾವು ದೇವಜ್ಞಾನಕ್ಕೆ ವಿರೋಧವಾಗಿ ಏಳುವ ಅಹಂಭಾವಗಳನ್ನು ಧ್ವಂಸಮಾಡಿ, ಪ್ರತಿಯೊಂದು ಆಲೋಚನೆಗಳನ್ನೂ ಕ್ರಿಸ್ತನಿಗೆ ವಿಧೇಯರಾಗುವಂತೆ ಸೆರೆಹಿಡಿದು, 6ನಿಮ್ಮ ವಿಧೇಯತ್ವವು ಪರಿಪೂರ್ಣವಾದ ಮೇಲೆ ಎಲ್ಲಾ ಅವಿಧೇಯತ್ವಕ್ಕೆ ಪ್ರತಿಕಾರವನ್ನು ನೀಡುವುದಕ್ಕೆ ಸಿದ್ಧರಾಗಿದ್ದೇವೆ. 7ನೀವು ಬಾಹ್ಯವಾದುದ್ದುನ್ನು ಮಾತ್ರ ನೋಡುತ್ತೀರಿ. ಯಾವನಾದರೂ ತನ್ನನ್ನು ಕ್ರಿಸ್ತನವನೆಂದು ಒಪ್ಪಿಕೊಂಡರೆ ಅವನು ಆಲೋಚನೆಮಾಡಿಕೊಂಡು ತಾನು ಹೇಗೆ ಕ್ರಿಸ್ತನವನೋ ಹಾಗೆ ನಾವೂ ಕ್ರಿಸ್ತನವರೆಂದು ತಿಳಿದುಕೊಳ್ಳಲಿ.

ಪತ್ರಿಕೆ (ಕೀವ್ ಗುಹೆಗಳ ಸಂತರಾದ ಅಂತೋನಿ ಮತ್ತು ಥಿಯೊಡೋಸಿಯಸ್)

ರೋಮಾ 8:28–39

28ಇದಲ್ಲದೆ ದೇವರ ಸಂಕಲ್ಪದ ಮೇರೆಗೆ ಕರೆಯಲ್ಪಟ್ಟು ಆತನನ್ನು ಪ್ರೀತಿಸುವವರ ಹಿತಕ್ಕಾಗಿ ಎಲ್ಲಾ ಕಾರ್ಯಗಳು ಒಳ್ಳೆಯದಕ್ಕಾಗಿಯೇ ಆಗುವುದೆಂದು ನಮಗೆ ತಿಳಿದಿದೆ. 29ದೇವರು ಯಾರನ್ನು ತಮ್ಮವರೆಂದು ಮೊದಲೇ ಆರಿಸಿಕೊಂಡನೋ ಅವರನ್ನು ತನ್ನ ಮಗನ ಅನುರೂಪಿಗಳಾಗುವಂತೆ ಆಗಲೇ ನೇಮಿಸಿದನು. 30ಮತ್ತು ಯಾರನ್ನು ಮೊದಲು ನೇಮಿಸಿದನೋ ಅವರನ್ನು ಕರೆದನು. ಯಾರನ್ನು ಕರೆದನೋ ಅವರನ್ನು ನೀತಿವಂತರೆಂದು ನಿರ್ಣಯಿಸಿದನು. ಯಾರನ್ನು ನೀತಿವಂತರೆಂದು ನಿರ್ಣಯಿಸಿದನೋ ಅವರನ್ನು ಮಹಿಮಾಪದವಿಗೆ ಸೇರಿಸಿದನು. 31ಹಾಗಾದರೆ ಈ ವಿಷಯಗಳಲ್ಲಿ ನಾವು ಏನು ಹೇಳೋಣ? ದೇವರು ನಮ್ಮ ಜೊತೆಯಲ್ಲಿ ಇದ್ದರೆ ನಮ್ಮನ್ನು ಎದುರಿಸುವವರು ಯಾರು? 32ಸ್ವಂತ ಮಗನನ್ನು ಉಳಿಸಿಕೊಳ್ಳದೆ ಆತನನ್ನು ನಮ್ಮೆಲ್ಲರಿಗೋಸ್ಕರ ಒಪ್ಪಿಸಿಕೊಟ್ಟನಲ್ಲಾ, ಮಗನನ್ನು ಕೊಟ್ಟ ಮೇಲೆ ಸಮಸ್ತವನ್ನೂ ನಮಗೆ ದಯಪಾಲಿಸದೆ ಇರುವನೋ? 33ದೇವರು ಆದುಕೊಂಡವರ ಮೇಲೆ ಯಾರು ತಪ್ಪು ಹೊರಿಸುವವರು ಯಾರು? ದೇವರೇ ನಮ್ಮನ್ನು ನೀತಿವಂತರೆಂದು ನಿರ್ಣಯಿಸುವಾತನಾಗಿದ್ದಾನೆ. 34ಹಾಗಿದ್ದ ಮೇಲೆ ಅಪರಾಧಿಗಳೆಂದು ಖಂಡಿಸುವವರು ಯಾರು? ಮರಣವನ್ನು ಹೊಂದಿದ್ದಲ್ಲದೆ ಜೀವಿತನಾಗಿ ಎದ್ದು ದೇವರ ಬಲಗಡೆಯಲ್ಲಿದ್ದು ನಮಗೋಸ್ಕರ ಬೇಡುವವನಾಗಿರುವ ಕ್ರಿಸ್ತ ಯೇಸುವೋ? 35ಈ ಕ್ರಿಸ್ತನ ಪ್ರೀತಿಯಿಂದ ನಮ್ಮನ್ನು ಅಗಲಿಸುವವರು ಯಾರು? ಕಷ್ಟವೋ? ಸಂಕಟವೋ? ಹಿಂಸೆಯೋ? ಹಸಿವೋ? ವಸ್ತ್ರವಿಲ್ಲದಿರುವುದೋ? ಗಂಡಾಂತರವೋ? ಖಡ್ಗವೋ? 36“ದೇವರೇ ನಾವು ನಿನ್ನ ನಿಮಿತ್ತ ದಿನವೆಲ್ಲಾ ಕೊಲೆಗೆ ಗುರಿಯಾಗುತ್ತಿದ್ದೇವೆ. ವಧ್ಯಸ್ಥಾನಕ್ಕೆ ಒಯ್ದ ಕುರಿಗಳಂತೆ ಎಣಿಸಿದರು.” ಎಂಬುದಾಗಿ ಬರೆದಿರುವಂತೆ ಆಗುತ್ತದಲ್ಲಾ. 37ಆದರೆ ನಮ್ಮನ್ನು ಪ್ರೀತಿಸಿದಾತನ ಮೂಲಕವಾಗಿ ನಾವು ಎಲ್ಲಾ ವಿಷಯಗಳಲ್ಲಿಯೂ ಪೂರ್ಣ ಜಯಶಾಲಿಗಳಾಗಿದ್ದೇವೆ. 38ಹೇಗೆಂದರೆ ಮರಣವಾಗಲಿ, ಜೀವವಾಗಲಿ, ದೇವದೂತರಾಗಲಿ, ದುರಾತ್ಮಗಳಾಗಲಿ, ಈಗಿನ ಸಂಗತಿಗಳಾಗಲಿ, ಮುಂದಣ ಸಂಗತಿಗಳಾಗಲಿ, 39ಮಹತ್ವಗಳಾಗಲಿ, ಮೇಲಣ ಲೋಕವಾಗಲಿ, ಕೆಳಗಣ ಲೋಕವಾಗಲಿ, ಬೇರೆ ಯಾವ ಸೃಷ್ಟಿಯಾಗಲಿ ನಮ್ಮನ್ನು ನಮ್ಮ ಕರ್ತನಾದ ಯೇಸು ಕ್ರಿಸ್ತನಲ್ಲಿ ತೋರಿಬಂದ ದೇವರ ಪ್ರೀತಿಯಿಂದ ಅಗಲಿಸಲು ಸಾಧ್ಯವಿಲ್ಲವೆಂದು ನಾವು ಬಲ್ಲವರಾಗಿದ್ದೇವೆ.

ಸುವಾರ್ತೆ

ಮಾರ್ಕ 3:20–27

20ಆತನು ಮನೆಯೊಳಗೆ ಬಂದಾಗ ಅಲ್ಲಿ ಬಹಳ ಜನರು ಸೇರಿಬಂದದ್ದರಿಂದ ಊಟ ಮಾಡಲು ಕೂಡ ಆಗಲಿಲ್ಲ. 21ಇದನ್ನು ಕೇಳಿ ಆತನ ಬಂಧುಗಳು “ಅವನಿಗೆ ಹುಚ್ಚುಹಿಡಿದಿದೆ” ಎಂದು ಹೇಳಿ ಆತನನ್ನು ಹಿಡಿಯುವುದಕ್ಕೆ ಹೊರಟರು. 22ಇದಲ್ಲದೆ ಯೆರೂಸಲೇಮಿನಿಂದ ಬಂದಿದ್ದ ಶಾಸ್ತ್ರಿಗಳು, “ಇವನನ್ನು ಬೆಲ್ಜೆಬೂಲನು ಹಿಡಿದಿದ್ದಾನೆಂತಲೂ ಇವನು ದೆವ್ವಗಳ ಒಡೆಯನ ಸಹಾಯದಿಂದ ದೆವ್ವಗಳನ್ನು ಬಿಡಿಸುತ್ತಾನೆಂತಲೂ” ಹೇಳುತ್ತಿದ್ದರು. 23ಆತನು ಅವರನ್ನು ಹತ್ತಿರಕ್ಕೆ ಕರೆದು ಅವರಿಗೆ ಸಾಮ್ಯರೂಪವಾಗಿ ಹೇಳಿದ್ದೇನಂದರೆ, “ಸೈತಾನನು ಸೈತಾನನನ್ನು ಬಿಡಿಸುವುದುಂಟೇ? 24ಯಾವುದೇ ಒಂದು ರಾಜ್ಯವು ತನ್ನಲ್ಲಿಯೇ ವಿಭಾಗಿಸಲ್ಪಟ್ಟರೆ ಆ ರಾಜ್ಯವು ಉಳಿಯದು; 25ಹಾಗೆಯೇ ಒಂದು ಮನೆಯು ತನ್ನಲ್ಲಿಯೇ ವಿಭಾಗಿಸಲ್ಪಟ್ಟರೆ ಆ ಮನೆಯು ಉಳಿಯದು. 26ಅದರಂತೆ ಸೈತಾನನು ತನಗೆ ವಿರೋಧವಾಗಿ ಎದ್ದು ತನ್ನಲ್ಲಿ ವಿಭಾಗಿಸಲ್ಪಟ್ಟರೆ ಅವನು ಉಳಿಯದೆ ನಾಶವಾಗಿ ಹೋಗುವನು. 27ಅದಲ್ಲದೆ ಒಬ್ಬನು ಮೊದಲು ಬಲಿಷ್ಠನನ್ನು ಕಟ್ಟಿಹಾಕದೆ ಆ ಬಲಿಷ್ಠನ ಮನೆಯನ್ನು ನುಗ್ಗಿ ಅವನ ಆಸ್ತಿಯನ್ನು ಕದಿಯಲು ಸಾಧ್ಯವಿಲ್ಲ; ಕಟ್ಟಿಹಾಕಿದ ಮೇಲೆ ಅವನ ಮನೆಯನ್ನು ಕೊಳ್ಳೆಹೊಡೆಯಬಹುದು.

ದಿನಾಂಕಗಳು ರಷ್ಯನ್ ಸಭೆಯ ಜೂಲಿಯನ್ ಪಂಚಾಂಗದ ಪ್ರಕಾರ ಇವೆ (ಸರ್ಬಿಯನ್ ಮತ್ತು ಜಾರ್ಜಿಯನ್ ಸಭೆಗಳು ಮತ್ತು ಅಥೋಸ್ ಪರ್ವತದಂತೆ): ಸಭೆಯ ಪಂಚಾಂಗದ 2 ಸೆಪ್ಟೆಂಬರ್ ಎಂದರೆ ನಾಗರಿಕ ಪಂಚಾಂಗದ 15 ಸೆಪ್ಟೆಂಬರ್. ಹೊಸ ಪಂಚಾಂಗದ ಸಭೆಗಳು (ಗ್ರೀಸ್, ರೊಮೇನಿಯಾ, ಬಲ್ಗೇರಿಯಾ, ಉಕ್ರೇನ್…) ನಿಗದಿತ ದಿನಾಂಕದ ಹಬ್ಬಗಳನ್ನೂ ಸಂತರನ್ನೂ ಅದೇ ನಾಗರಿಕ ದಿನಾಂಕದಂದು, 13 ದಿನಗಳ ಮುಂಚೆ, ಆಚರಿಸುತ್ತವೆ, ಮತ್ತು ಅವುಗಳ ಕೆಲವು ವಾಚನಗಳು ಬೇರೆಯಾಗಿವೆ; ಈಸ್ಟರ್ ಮತ್ತು ಅದನ್ನು ಅವಲಂಬಿಸಿರುವ ದಿನಗಳು ಒಂದೇ ಆಗಿವೆ.

ಮೂಲಗಳು: ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ · © 2017, 2019 Bridge Connectivity Solutions, CC BY-SA 4.0; changed: footnotes, headings and the letters over Psalm 119 left out, verses in the app's numbering. · ಮೂಲಗಳು ಮತ್ತು ಹಕ್ಕುಗಳು