Bible Explorer ಆ್ಯಪ್ ಪಡೆಯಿರಿ

ಮುಖಪುಟ › ದೈನಂದಿನ ಬೈಬಲ್ ವಾಚನಗಳು › ಸೆಪ್ಟೆಂಬರ್ 2027 › 16 ಸೆಪ್ಟೆಂಬರ್

ಕ್ಯಾಥೊಲಿಕ್ ಪಂಚಾಂಗ

ದೈನಂದಿನ ಬೈಬಲ್ ವಾಚನಗಳು (ಕಥೋಲಿಕ) — 16 ಸೆಪ್ಟೆಂಬರ್ 2027

ಗುರುವಾರ · ಸಾಮಾನ್ಯ ಕಾಲದ 24ನೇ ವಾರ

ಹಬ್ಬಗಳು ಮತ್ತು ಸಂತರು

ಸಾಮಾನ್ಯ ಕಾಲದ 24ನೇ ವಾರದ ಗುರುವಾರ

ಸ್ಮರಣೆ · ಆರಾಧನಾ ಬಣ್ಣ: ಕೆಂಪು

ಸಂತರಾದ ಕೊರ್ನೇಲಿಯಸ್, ಪೋಪ್, ಮತ್ತು ಸಿಪ್ರಿಯನ್, ಧರ್ಮಾಧ್ಯಕ್ಷ, ಹುತಾತ್ಮರು · ಸ್ಮರಣೆ

ದಿನದ ವಾಚನಗಳು

ಮೊದಲನೆಯ ವಾಚನ

1 ತಿಮೊ 4:12–16

12ನಿನ್ನ ಯೌವನವನ್ನು ಅಸಡ್ಡೆಮಾಡುವುದಕ್ಕೆ ಯಾರಿಗೂ ಆಸ್ಪದಮಾಡಿಕೊಡದೆ, ನಂಬುವವರಿಗೆ ನಡೆ, ನುಡಿ, ಪ್ರೀತಿ, ನಂಬಿಕೆ, ಶುದ್ಧತ್ವ ಇವುಗಳ ವಿಷಯದಲ್ಲಿ ನೀನೇ ಮಾದರಿಯಾಗಿರು. 13ನಾನು ಬರುವ ತನಕ ವೇದವಾಕ್ಯವನ್ನು ಓದಿ ಹೇಳುವುದರಲ್ಲಿಯೂ, ಪ್ರಬೋಧಿಸುವುದರಲ್ಲಿಯೂ, ಉಪದೇಶಿಸುವುದರಲ್ಲಿಯೂ ಆಸಕ್ತನಾಗಿರು. 14ನಿನ್ನಲ್ಲಿರುವ ಕೃಪಾವರವನ್ನು ಅಲಕ್ಷ್ಯಮಾಡಬೇಡ, ಆ ವರವು ಸಭೆಯ ಹಿರಿಯರು ಪ್ರವಾದನೆಯ ಸಹಿತವಾಗಿ ನಿನ್ನ ಮೇಲೆ ಹಸ್ತಗಳನ್ನಿಟ್ಟಾಗ, ಅದು ನಿನಗೆ ಕೊಡಲ್ಪಟ್ಟಿತಲ್ಲಾ. 15ಈ ಕಾರ್ಯಗಳನ್ನು ಸಾಧಿಸುತ್ತಾ, ಅವುಗಳಲ್ಲಿ ಮಗ್ನನಾಗಿರು. ಇದರಿಂದ ನಿನ್ನ ಅಭಿವೃದ್ಧಿಯು ಎಲ್ಲರಿಗೂ ಪ್ರಸಿದ್ಧವಾಗುವುದು. 16ನಿನ್ನ ವಿಷಯದಲ್ಲಿಯೂ ನಿನ್ನ ಉಪದೇಶದ ವಿಷಯದಲ್ಲಿಯೂ ಎಚ್ಚರಿಕೆಯಾಗಿರು. ನೀನು ಈ ಕಾರ್ಯಗಳಲ್ಲಿ ನಿರತನಾಗಿರು, ಆಗ ನೀನು ನಿನ್ನನ್ನೂ ಮತ್ತು ನಿನ್ನ ಉಪದೇಶ ಕೇಳುವವರನ್ನೂ ರಕ್ಷಿಸುವಿ.

ಪ್ರತಿವಚನ ಕೀರ್ತನೆ

ಕೀರ್ತ 111:7–10

7ಆತನ ಕೈಕೆಲಸಗಳು ನೀತಿ, ಸತ್ಯತೆಗಳನ್ನು ಪ್ರಕಟಿಸುತ್ತವೆ; ಆತನ ನಿಯಮಗಳೆಲ್ಲಾ ಸ್ಥಿರವಾಗಿವೆ. 8ಅವು ದೃಢವಾದ ಆಧಾರವುಳ್ಳವುಗಳು; ಯುಗಯುಗಾಂತರಕ್ಕೂ ಇರುವವು. ಸತ್ಯ, ನೀತಿಗಳಿಗನುಸಾರವಾಗಿ ವಿಧಿಸಲ್ಪಟ್ಟಿವೆ. 9ಯೆಹೋವನು ತನ್ನ ಜನರಿಗೆ ವಿಮೋಚನೆಯನ್ನು ಉಂಟುಮಾಡಿದ್ದಾನೆ; ತನ್ನ ಒಡಂಬಡಿಕೆಯನ್ನು ನಿತ್ಯಕ್ಕೂ ಸ್ಥಾಪಿಸಿದ್ದಾನೆ; ಆತನ ನಾಮವು ಪರಿಶುದ್ಧವೂ, ಮಹೋನ್ನತವೂ ಆಗಿದೆ. 10ಯೆಹೋವನ ಭಯವೇ ಜ್ಞಾನಕ್ಕೆ ಮೂಲ; ಆತನ ಕಟ್ಟಳೆಗಳನ್ನು ಕೈಕೊಳ್ಳುವವರು ಪೂರ್ಣ ವಿವೇಕಿಗಳು. ಆತನ ಸ್ತುತಿಯು ನಿರಂತರವಾದದ್ದು.

ಸುವಾರ್ತೆ

ಲೂಕ 7:36–50

36ಫರಿಸಾಯರಲ್ಲಿ ಒಬ್ಬನು ಆತನನ್ನು ತನ್ನ ಜೊತೆಯಲ್ಲಿ ಊಟಮಾಡಬೇಕೆಂದು ಬೇಡಿಕೊಂಡಾಗ ಆತನು ಆ ಫರಿಸಾಯನ ಮನೆಗೆ ಹೋಗಿ ಆತನ ಸಂಗಡ ಊಟಕ್ಕೆ ಕುಳಿತುಕೊಂಡನು. 37ಆಗ ಆ ಊರಿನಲ್ಲಿದ್ದ ದುರಾಚಾರಿಯಾದ ಒಬ್ಬ ಹೆಂಗಸು ಫರಿಸಾಯನ ಮನೆಯಲ್ಲಿ ಆತನು ಊಟಕ್ಕೆ ಬಂದಿದ್ದಾನೆಂದು ತಿಳಿದು ಸುಗಂಧತೈಲದ ಭರಣಿಯನ್ನು ತೆಗೆದುಕೊಂಡು ಬಂದು, 38ಯೇಸುವಿನ ಹಿಂದೆ ಪಾದಗಳ ಬಳಿಯಲ್ಲಿ ನಿಂತುಕೊಂಡು ಅಳುತ್ತಾ ತನ್ನ ಕಣ್ಣೀರಿನಿಂದ ಆತನ ಪಾದಗಳನ್ನು ನೆನಸುತ್ತಾ ತನ್ನ ತಲೆ ಕೂದಲಿನಿಂದ ಒರಸಿ, ಪಾದಗಳಿಗೆ ಮುದ್ದಿಟ್ಟು ಆ ತೈಲವನ್ನು ಹಚ್ಚಿದಳು. 39ಆದರೆ ಆತನನ್ನು ಊಟಕ್ಕೆ ಕರೆದ ಫರಿಸಾಯನು ಇದನ್ನು ಕಂಡು, “ಇವಳು ದುರಾಚಾರಿ; ಈತನು ಪ್ರವಾದಿಯಾಗಿದ್ದರೆ ತನ್ನನ್ನು ಮುಟ್ಟಿದ ಈ ಹೆಂಗಸು ಇಂಥವಳೆಂದು ತಿಳಿದುಕೊಳ್ಳುತ್ತಿದ್ದನು” ಎಂದು ತನ್ನೊಳಗೇ ಅಂದುಕೊಂಡನು. 40ಅದಕ್ಕೆ ಯೇಸು, “ಸೀಮೋನನೇ, ನಾನು ನಿನಗೆ ಹೇಳಬೇಕಾದ ಒಂದು ಮಾತದೆ” ಅಂದಾಗ ಸೀಮೋನನು, “ಬೋಧಕನೇ, ಹೇಳು” ಅಂದನು. 41ಆಗ ಯೇಸು, “ಒಬ್ಬ ಸಾಹುಕಾರನಿಗೆ ಇಬ್ಬರು ಸಾಲಗಾರರಿದ್ದರು. ಒಬ್ಬನು ಐನೂರು ಬೆಳ್ಳಿ ನಾಣ್ಯಗಳನ್ನು ಕೊಡಬೇಕಾಗಿತ್ತು. ಮತ್ತೊಬ್ಬನು ಐವತ್ತು ಬೆಳ್ಳಿ ನಾಣ್ಯಗಳನ್ನು ಕೊಡಬೇಕಾಗಿತ್ತು. 42ತೀರಿಸುವುದಕ್ಕೆ ಅವರಿಗೆ ಗತಿಯಿಲ್ಲದ್ದರಿಂದ ಆ ಇಬ್ಬರಿಗೂ ಸಾಲವನ್ನು ಮನ್ನಾಮಾಡಿ ಬಿಟ್ಟನು. ಹಾಗಾದರೆ ಅವರಿಬ್ಬರಲ್ಲಿ ಯಾವನು ಆ ಸಾಹುಕಾರನನ್ನು ಹೆಚ್ಚಾಗಿ ಪ್ರೀತಿಸುವನು?” ಎಂದು ಕೇಳಿದ್ದಕ್ಕೆ, 43ಸೀಮೋನನು, “ಯಾವನಿಗೆ ಹೆಚ್ಚಾಗಿ ಬಿಟ್ಟನೋ ಅವನೇ ಎಂದು ಭಾವಿಸುತ್ತೇನೆ” ಅಂದನು. ಯೇಸು ಅವನಿಗೆ, “ನೀನು ಸರಿಯಾಗಿ ತೀರ್ಪುಮಾಡಿದಿ” ಎಂದು ಹೇಳಿ, 44ಆ ಹೆಂಗಸಿನ ಕಡೆಗೆ ತಿರುಗಿಕೊಂಡು ಸೀಮೋನನಿಗೆ ಹೇಳಿದ್ದೇನಂದರೆ, “ಈ ಹೆಂಗಸನ್ನು ನೋಡಿದ್ದಿಯಾ? ನಾನು ನಿನ್ನ ಮನೆಗೆ ಬಂದಾಗ ನೀನು ನನ್ನ ಕಾಲಿಗೆ ನೀರು ಕೊಡಲಿಲ್ಲ; ಇವಳಾದರೋ ನನ್ನ ಕಾಲುಗಳನ್ನು ಕಣ್ಣೀರಿನಿಂದ ನೆನಸಿ ತನ್ನ ತಲೆಯಕೂದಲಿನಿಂದ ಒರಸಿದಳು. 45ನೀನು ನನಗೆ ಮುದ್ದಿಡಲಿಲ್ಲ; ಇವಳಾದರೋ ನಾನು ಒಳಗೆ ಬಂದಾಗಿನಿಂದ ನನ್ನ ಕಾಲಿಗೆ ಮುದ್ದಿಡುವುದನ್ನು ಬಿಟ್ಟಿಲ್ಲ. 46ನೀನು ನನ್ನ ತಲೆಗೆ ಎಣ್ಣೆ ಹಚ್ಚಲಿಲ್ಲ; ಇವಳಾದರೋ ಸುಗಂಧ ತೈಲವನ್ನು ಕಾಲಿಗೆ ಹಚ್ಚಿದಳು. 47ಹೀಗಿರಲು ನಾನು ಹೇಳುವ ಮಾತೇನಂದರೆ, ಇವಳ ಪಾಪಗಳು ಬಹಳವಾಗಿದ್ದರೂ ಅವೆಲ್ಲಾವು ಕ್ಷಮಿಸಲ್ಪಟ್ಟಿವೆ. ಇದಕ್ಕೆ ಪ್ರಮಾಣವೇನಂದರೆ ಇವಳು ತೋರಿಸಿದ ಪ್ರೀತಿ ಬಹಳ. ಆದರೆ ಯಾವನಿಗೆ ಸ್ವಲ್ಪ ಮಾತ್ರ ಕ್ಷಮಿಸಲ್ಪಟ್ಟಿದೆಯೋ ಅವನು ತೋರಿಸುವ ಪ್ರೀತಿಯು ಸ್ವಲ್ಪವೇ” ಅಂದನು. 48ಆ ಮೇಲೆ ಆತನು ಅವಳಿಗೆ, “ನಿನ್ನ ಪಾಪಗಳು ಕ್ಷಮಿಸಲ್ಪಟ್ಟಿವೆ” ಎಂದು ಹೇಳಿದನು. 49ಆತನ ಸಂಗಡ ಊಟಕ್ಕೆ ಕುಳಿತಿದ್ದವರೆಲ್ಲರೂ, “ಪಾಪಗಳನ್ನು ಸಹ ಕ್ಷಮಿಸಲು ಇವನಾರು?” ಎಂದು ತಮ್ಮತಮ್ಮೊಳಗೆ ಅಂದುಕೊಂಡರು. 50ಆದರೆ ಆತನು ಆ ಹೆಂಗಸಿಗೆ, “ನಿನ್ನ ನಂಬಿಕೆಯೇ ನಿನ್ನನ್ನು ರಕ್ಷಿಸಿದೆ, ಸಮಾಧಾನದಿಂದ ಹೋಗು” ಎಂದು ಹೇಳಿದನು.

ಇಂದಿನ ಸಂತರು

ಸಾಮಾನ್ಯ ರೋಮನ್ ಪಂಚಾಂಗ; ಬಿಷಪರ ಸಮ್ಮೇಳನವು ಕೆಲವು ಹಬ್ಬಗಳನ್ನು (ಪ್ರಭುವಿನ ಪ್ರಕಟನೆ, ಸ್ವರ್ಗಾರೋಹಣ, ಕ್ರಿಸ್ತನ ದೇಹ ಮತ್ತು ರಕ್ತ) ಭಾನುವಾರಕ್ಕೆ ಸರಿಸಬಹುದು ಅಥವಾ ತನ್ನದೇ ಹಬ್ಬಗಳನ್ನು ಸೇರಿಸಬಹುದು. ವಾಚನ ಸಂಗ್ರಹ: ಭಾನುವಾರದ ಚಕ್ರ B, ವಾರದ ದಿನಗಳ ವರ್ಷ I.

ಮೂಲಗಳು: ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ · © 2017, 2019 Bridge Connectivity Solutions, CC BY-SA 4.0; changed: footnotes, headings and the letters over Psalm 119 left out, verses in the app's numbering. · ಮೂಲಗಳು ಮತ್ತು ಹಕ್ಕುಗಳು