ಮುಖಪುಟ › ದೈನಂದಿನ ಬೈಬಲ್ ವಾಚನಗಳು › ಸೆಪ್ಟೆಂಬರ್ 2027 › 16 ಸೆಪ್ಟೆಂಬರ್
ಆರ್ಥೊಡಾಕ್ಸ್ ಪಂಚಾಂಗ · ಸೆಪ್ಟೆಂಬರ್ 3 (ಹಳೆಯ ಪದ್ಧತಿ)
ಆರ್ಥೊಡಾಕ್ಸ್ ದೈನಂದಿನ ವಾಚನಗಳು — 16 ಸೆಪ್ಟೆಂಬರ್ 2027
ಗುರುವಾರ · ಪಂಚಾಶತ್ತಮದ ನಂತರದ 13ನೇ ವಾರ · ಸ್ವರ 3
ಹಬ್ಬಗಳು ಮತ್ತು ಸಂತರು
Hieromartyr Anthimus, Bishop of Nicomedia, and those with him: Theophilus the Deacon, Dorotheus, Mardonius, Migdonius, Peter, Indis, Gorgonius, Xeno, Domna the Virgin and Euthimius († 302)
ಉಪವಾಸ
ಉಪವಾಸವಿಲ್ಲ
ಇದು ಮಠದ ನಿಯಮವನ್ನು ಅನುಸರಿಸುತ್ತದೆ. ಸಭೆಯಲ್ಲಿ ಉಪವಾಸದ ಪ್ರಮಾಣವನ್ನು ಆರೋಗ್ಯ, ವಯಸ್ಸು ಮತ್ತು ಸಂದರ್ಭಗಳಿಗೆ ಅನುಗುಣವಾಗಿ ಪಾಪನಿವೇದನೆಯ ಗುರುವಿನೊಂದಿಗೆ ಸೇರಿ ನಿರ್ಧರಿಸಲಾಗುತ್ತದೆ.
ದಿನದ ವಾಚನಗಳು
ಪತ್ರಿಕೆ
7ನೀವು ಬಾಹ್ಯವಾದುದ್ದುನ್ನು ಮಾತ್ರ ನೋಡುತ್ತೀರಿ. ಯಾವನಾದರೂ ತನ್ನನ್ನು ಕ್ರಿಸ್ತನವನೆಂದು ಒಪ್ಪಿಕೊಂಡರೆ ಅವನು ಆಲೋಚನೆಮಾಡಿಕೊಂಡು ತಾನು ಹೇಗೆ ಕ್ರಿಸ್ತನವನೋ ಹಾಗೆ ನಾವೂ ಕ್ರಿಸ್ತನವರೆಂದು ತಿಳಿದುಕೊಳ್ಳಲಿ. 8ನಮಗಿರುವ ಅಧಿಕಾರವನ್ನು ಕುರಿತು ನಾವು ಒಂದು ವೇಳೆ ಹೆಚ್ಚಾಗಿ ಹೊಗಳಿಕೊಂಡರೂ ಹಾಗೆ ಹೊಗಳಿಕೊಳ್ಳುವುದರಲ್ಲಿ ನಾಚಿಕೆಪಡಬೇಕಾಗಿರುವುದಿಲ್ಲ. ಆದರೆ ನಿಮ್ಮನ್ನು ಕೆಡವಿಹಾಕುವುದಕ್ಕಲ್ಲ ಕಟ್ಟುವುದಕ್ಕಾಗಿಯೇ ಕರ್ತನು ಈ ಅಧಿಕಾರವನ್ನು ನಮಗೆ ಕೊಟ್ಟಿರುವವನು. 9ನಾನು ಪತ್ರಿಕೆಗಳಿಂದ ನಿಮ್ಮನ್ನು ಹೆದರಿಸುತ್ತಿದ್ದೆನೆಂದು ತಿಳಿದುಕೊಳ್ಳಬೇಡಿರಿ. 10“ಅವನಿಂದ ಬಂದ ಪತ್ರಿಕೆಗಳು ಕಠೋರವಾದವುಗಳೂ, ಪ್ರಬಲವಾದವುಗಳೂ ಆಗಿವೆ. ಆದರೆ ದೈಹಿಕವಾಗಿ ಅವನು ದುರ್ಬಲನು ಅವನ ಮಾತುಗಳು ನಿಂದಾತ್ಮಕವಾದವುಗಳೆಂದು ಕೆಲವರು ಹೇಳುತ್ತಾರಲ್ಲಾ.” 11ಅಂಥವರು, ನಾವು ದೂರದಲ್ಲಿರುವಾಗ ಪತ್ರಿಕೆಗಳ ಮೂಲಕ ಮಾತಿನಲ್ಲಿ ಎಂಥವರಾಗಿದ್ದೇವೋ ಹತ್ತಿರದಲ್ಲಿರುವಾಗ ಕಾರ್ಯದಲ್ಲಿಯೂ ಅಂಥವರಾಗಿಯೇ ಇದ್ದೇವೆಂದು ತಿಳಿದುಕೊಳ್ಳಲಿ. 12ತಮ್ಮನ್ನು ತಾವೇ ಹೊಗಳಿಕೊಳ್ಳುವ ಕೆಲವರಲ್ಲಿ ನಮ್ಮನ್ನು ಸೇರಿಸಿಕೊಳ್ಳುವುದಕ್ಕಾಗಲಿ ಅವರೊಂದಿಗೆ ಹೋಲಿಸುವುದಕ್ಕಾಗಲಿ ನಾನು ಇಷ್ಟಪಡುವುದಿಲ್ಲ. ಅವರಂತೂ ತಮ್ಮತಮ್ಮೊಳಗೆ ತಮ್ಮನ್ನು ಅಳತೆಮಾಡಿಕೊಂಡು ತಮ್ಮನ್ನು ತಮಗೇ ಹೋಲಿಸಿಕೊಂಡು ವಿವೇಕವಿಲ್ಲದವರಾಗಿದ್ದಾರೆ. 13ನಾವಾದರೋ ನಮ್ಮ ಯೋಗ್ಯತೆಗೆ ಮೀರಿ ಹೊಗಳಿಕೊಳ್ಳದೇ ದೇವರು ನಮಗೆ ನೇಮಿಸಿರುವಂಥ ಮೇರೆಯೊಳಗಿದ್ದು ಹೊಗಳಿಕೊಳ್ಳುತ್ತೇವೆ. ಈ ಮೇರೆಯೊಳಗಿದ್ದು ನಿಮ್ಮ ತನಕ ಬಂದಿದ್ದೇವೆ. 14ನಾವು ಕ್ರಿಸ್ತನ ಸುವಾರ್ತೆಯನ್ನು ಸಾರುತ್ತಾ ಇತರರಿಗಿಂತ ಮೊದಲು ನಿಮ್ಮ ಬಳಿಗೆ ಬಂದದ್ದರಿಂದ ನಿಮ್ಮ ಮೇಲೆ ಅಧಿಕಾರವಿಲ್ಲದವರಂತೆ ಮೇರೆಯನ್ನು ಅತಿಕ್ರಮಿಸಿಹೋಗುತ್ತಿಲ್ಲ. 15ನಾವು ಮಿತಿಗಳನ್ನು ಮೀರಿ ಮತ್ತೊಬ್ಬರ ಪ್ರಯಾಸದ ಫಲಗಳನ್ನು ತೆಗೆದುಕೊಂಡು, ಇವು ನಮ್ಮವು ಎಂದು ಹಿಗ್ಗುವವರಲ್ಲ. ಆದರೆ ನಿಮ್ಮ ನಂಬಿಕೆಯು ಹೆಚ್ಚಿದಾಗೆಲ್ಲಾ ನಿಮ್ಮ ಮೂಲಕ ನಮ್ಮ ಮಿತಿಯು ಇನ್ನೂ ವಿಸ್ತರಿಸಿತು. 16ನಿಮಗೆ ಆಚೆಯಿರುವ ಸೀಮೆಗಳಲ್ಲಿಯೂ ಸುವಾರ್ತೆಯನ್ನು ಸಾರುವೆವೆಂಬ ನಿರೀಕ್ಷೆಯನ್ನಿಟ್ಟುಕೊಂಡಿದ್ದೆವಷ್ಟೇ. ಮತ್ತೊಬ್ಬರ ಜಾಗದಲ್ಲಿ ಸಿದ್ಧವಾಗಿ ನಮಗೆ ಸಿಕ್ಕಿದ ಫಲವನ್ನು ಕುರಿತು ನಾವು ಹೆಚ್ಚಳಪಡುವುದಿಲ್ಲ. 17“ಹೆಚ್ಚಳಪಡುವವನು ಕರ್ತನಲ್ಲಿಯೇ ಹೆಚ್ಚಳಪಡಲಿ.” 18ತನ್ನನ್ನು ತಾನೇ ಹೊಗಳಿಕೊಳ್ಳುವವನು ಯೋಗ್ಯನಲ್ಲ. ಕರ್ತನು ಯಾರನ್ನು ಹೊಗಳುತ್ತಾನೋ ಅವನೇ ಯೋಗ್ಯನು.
ಸುವಾರ್ತೆ
28ನಾನು ನಿಮಗೆ ಸತ್ಯವಾಗಿ ಹೇಳುತ್ತೇನೆ, ಮನುಷ್ಯರು ಮಾಡುವ ಎಲ್ಲಾ ಪಾಪಗಳಿಗೂ ದೂಷಣೆಗಳಿಗೂ ಕ್ಷಮಾಪಣೆ ಸಿಕ್ಕುವುದು. 29ಆದರೆ ಪವಿತ್ರಾತ್ಮನನ್ನು ದೂಷಿಸಿದವನು ಎಂದಿಗೂ ಕ್ಷಮಾಪಣೆ ಹೊಂದಲಾರನು; ಅವನು ಶಾಶ್ವತವಾದ ಪಾಪದೊಳಗೆ ಸೇರಿದವನಾದನು” ಎಂದು ಹೇಳಿದನು. 30ಅವರು “ಈತನಲ್ಲಿ ಅಶುದ್ಧಾತ್ಮವಿದೆ” ಎಂದು ಹೇಳುತ್ತಿದ್ದರಿಂದ ಯೇಸು ಇದನ್ನು ಹೇಳಿದನು. 31ಜನರು ಯೇಸುವಿನ ಸುತ್ತಲು ಕುಳಿತುಕೊಂಡಿದ್ದಾಗ ಆತನ ತಾಯಿಯೂ, ತಮ್ಮಂದಿರೂ ಬಂದು ಹೊರಗೆ ನಿಂತುಕೊಂಡು ಆತನನ್ನು ಕರೆಕಳುಹಿಸಿದರು. 32ಆ ಜನರು ಆತನಿಗೆ, “ನಿನ್ನ ತಾಯಿಯೂ, ನಿನ್ನ ತಮ್ಮಂದಿರೂ ನಿನ್ನನ್ನು ಹುಡುಕಿಕೊಂಡು ಬಂದು ಹೊರಗೆ ನಿಂತಿದ್ದಾರೆ ನೋಡು” ಎಂದು ಹೇಳಿದರು. 33ಅದಕ್ಕೆ ಆತನು ಅವರಿಗೆ, “ನನಗೆ ತಾಯಿಯೂ, ತಮ್ಮಂದಿರೂ ಯಾರು?” ಎಂದು ಹೇಳಿ ತನ್ನ ಸುತ್ತಲು ಕುಳಿತಿದ್ದವರನ್ನು ನೋಡಿ, 34“ಇಗೋ, ನನ್ನ ತಾಯಿ, ನನ್ನ ತಮ್ಮಂದಿರು. 35ದೇವರ ಚಿತ್ತದಂತೆ ನಡೆಯುವವನೇ ನನಗೆ ತಮ್ಮನೂ, ತಂಗಿಯೂ, ತಾಯಿಯೂ ಆಗಿದ್ದಾರೆ” ಅಂದನು.
ದಿನಾಂಕಗಳು ರಷ್ಯನ್ ಸಭೆಯ ಜೂಲಿಯನ್ ಪಂಚಾಂಗದ ಪ್ರಕಾರ ಇವೆ (ಸರ್ಬಿಯನ್ ಮತ್ತು ಜಾರ್ಜಿಯನ್ ಸಭೆಗಳು ಮತ್ತು ಅಥೋಸ್ ಪರ್ವತದಂತೆ): ಸಭೆಯ ಪಂಚಾಂಗದ 3 ಸೆಪ್ಟೆಂಬರ್ ಎಂದರೆ ನಾಗರಿಕ ಪಂಚಾಂಗದ 16 ಸೆಪ್ಟೆಂಬರ್. ಹೊಸ ಪಂಚಾಂಗದ ಸಭೆಗಳು (ಗ್ರೀಸ್, ರೊಮೇನಿಯಾ, ಬಲ್ಗೇರಿಯಾ, ಉಕ್ರೇನ್…) ನಿಗದಿತ ದಿನಾಂಕದ ಹಬ್ಬಗಳನ್ನೂ ಸಂತರನ್ನೂ ಅದೇ ನಾಗರಿಕ ದಿನಾಂಕದಂದು, 13 ದಿನಗಳ ಮುಂಚೆ, ಆಚರಿಸುತ್ತವೆ, ಮತ್ತು ಅವುಗಳ ಕೆಲವು ವಾಚನಗಳು ಬೇರೆಯಾಗಿವೆ; ಈಸ್ಟರ್ ಮತ್ತು ಅದನ್ನು ಅವಲಂಬಿಸಿರುವ ದಿನಗಳು ಒಂದೇ ಆಗಿವೆ.
ಮೂಲಗಳು: ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ · © 2017, 2019 Bridge Connectivity Solutions, CC BY-SA 4.0; changed: footnotes, headings and the letters over Psalm 119 left out, verses in the app's numbering. · ಮೂಲಗಳು ಮತ್ತು ಹಕ್ಕುಗಳು